bagalkote

ಎಗ್ ರೈಸ್ ಇಲ್ಲ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನೇ ಮುಗಿಸಿದ ಭೂಪ..!

(ನ್ಯೂಸ್ ಕಡಬ) newskadaba.com ಬಾಗಲಕೋಟೆ, ಸೆ. 18. ಎಗ್‌ರೈಸ್‌ ಹಾಗೂ ಚಿಕನ್ ಕಬಾಬ್ ಇಲ್ಲ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನೇ ಯುವಕನೋರ್ವ ಚಾಕುವಿನಿಂದ ಇರಿದು ಹತ್ಯೆಗೈದಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದಲ್ಲಿ ನಡೆದಿದೆ. ಹತ್ಯೆಯಾದವನನ್ನು ಗೈಬುಸಾಬ್ ಮುಲ್ಲಾ (34) ಎಂದು ಗುರುತಿಸಲಾಗಿದೆ. ಮುಸ್ತಾಕ್ ಜಂಗಿ  (20) ಕೊಲೆ ಆರೋಪಿ. ಕೃತ್ಯ ನಡೆಸಿ ನಾಪತ್ತೆಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಅಮೀನಗಡ ಬಸ್ ನಿಲ್ದಾಣದ ಬಳಿ ಎಗ್‌ರೈಸ್‌ ಅಂಗಡಿ ಇಟ್ಟುಕೊಂಡಿದ್ದ ಗೈಬುಸಾಬ್ […]

ಎಗ್ ರೈಸ್ ಇಲ್ಲ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನೇ ಮುಗಿಸಿದ ಭೂಪ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿದ ತಾಯಿ ➤ಮೂವರ ಮೃತದೇಹ ನದಿಯಲ್ಲಿ ಪತ್ತೆ..!

(ನ್ಯೂಸ್ ಕಡಬ)newskadab.com ಬಾಗಲಕೋಟೆ, ಜ.18. ವಯಸ್ಸಿಗೆ ಬಂದ ಹೆಣ್ಣುಮಕ್ಕಳಿಬ್ಬರ ಸಹಿತ ತಾಯಿಯೊಬ್ಬರು ನದಿಗೆ ಹಾರಿದ ಪ್ರಕರಣವೊಂದು ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮಲಪ್ರಭಾ ಸೇತುವೆ ಬಳಿ ಈ ಪ್ರಕರಣ ನಡೆದಿದ್ದು, ಡೆತ್​ನೋಟ್ ಕೂಡ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಉಮಾ ಸುರೇಶ ಮಾಸರೆಡ್ಡಿ (42) ಎಂಬಾಕೆ ತನ್ನ ಮಕ್ಕಳಾದ ಐಶ್ವರ್ಯ (23) ಹಾಗೂ ಸೌಂದರ್ಯ (19) ಅವರೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಮತಗಿ ಪಟ್ಟಣದ ಮಲಪ್ರಭಾ ಸೇತುವೆ ಬಳಿ ಇವರ ಶವ ಪತ್ತೆಯಾಗಿದೆ. ಪುತ್ರಿಯರಲ್ಲಿ ಐಶ್ವರ್ಯ ಬೆಂಗಳೂರಿನಲ್ಲಿ

ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿದ ತಾಯಿ ➤ಮೂವರ ಮೃತದೇಹ ನದಿಯಲ್ಲಿ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ತೂಫಾನ್- ಕೆಎಸ್ಆರ್ಟಿಸಿ ಬಸ್ ಢಿಕ್ಕಿ ► 6 ಮಂದಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬಾಗಲಕೋಟೆ,ಸೆ8, ತೂಫಾನ್ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕೊರ್ತಿ ಕ್ರಾಸ್ ನಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಬೀಳಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಾರಾಷ್ಟ್ರ ಪಾಸಿಂಗ್ ಇರುವ ತೂಫಾನ್ ಹಾಗೂ ವಿಜಯಪುರದಿಂದ ಹುಬ್ಬಳಿ ಮಾರ್ಗವಾಗಿ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತೂಫಾನ್- ಕೆಎಸ್ಆರ್ಟಿಸಿ ಬಸ್ ಢಿಕ್ಕಿ ► 6 ಮಂದಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ
Scroll to Top