Bangalore

ಮದುವೆಯಾದ ನಾಲ್ಕೇ ತಿಂಗಳಿಗೆ ಶಿಕ್ಷಕಿ ನೇಣಿಗೆ ಶರಣು ಡೆತ್ ನೋಟ್ ನಲ್ಲಿ ಪತಿಯ ಅಸಲಿ ಮುಖ ಬಯಲು!

(ನ್ಯೂಸ್ ಕಡಬ) newskadaba.com ಜು. 13. ಶಿಕ್ಷಕಿಯೊರ್ವರು ಪ್ರೀತಿಸಿ ಮದುವೆಯಾದ ನಾಲ್ಕೇ ತಿಂಗಳಿಗೆ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆ ಎಂಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿಯನ್ನು ಶ್ವೇತಾ(25) ಎಂದು ಗುರುತಿಸಲಾಗಿದೆ. ಮೂಲತಃ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯವರಾದ ಶ್ವೇತಾ, ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ನಾಲ್ಕು ತಿಂಗಳ ಹಿಂದೆ ಕುಣಿಗಲ್ ಮೂಲದ, ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮೂರ್ತಿ ಎಂಬಾತನನ್ನು ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು. […]

ಮದುವೆಯಾದ ನಾಲ್ಕೇ ತಿಂಗಳಿಗೆ ಶಿಕ್ಷಕಿ ನೇಣಿಗೆ ಶರಣು ಡೆತ್ ನೋಟ್ ನಲ್ಲಿ ಪತಿಯ ಅಸಲಿ ಮುಖ ಬಯಲು! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರೂಪಕಿ ಅನುಶ್ರೀ

(ನ್ಯೂಸ್‌ ಕಡಬ) newskadaba.com, ಆ.28:‌‌ ಕನ್ನಡದ ಸ್ಟಾರ್‌ ನಿರೂಪಕಿ ಅನುಶ್ರೀ ಹಾಗೂ ರೋಷನ್‌ ಅವರು ಇಂದು ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಹೊರವಲಯದ ಸಂಭ್ರಮ ಬೈ ಸ್ವಾಲೈನ್ಸ್‌ ಸ್ಟುಡಿಯೋದಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್‌ ಜೊತೆ ಅನುಶ್ರೀ ವಿವಾಹವಾಗಿದ್ದಾರೆ. ವಿವಾಹ ಕಾರ್ಯಕ್ರಮಕ್ಕೆ ಕಿರುತೆರೆ ಕಲಾವಿದರು, ಚಿತ್ರೋದ್ಯಮದ ಗಣ್ಯರು ನವಜೋಡಿಗೆ ಶುಭ ಹಾರೈಸಿದ್ದಾರೆ. ಮದುವೆಗೂ ಹಿಂದಿನ ದಿನ ಆ.27ರಂದು ನಡೆದ ಹಳದಿ ಶಾಸ್ತ್ರದ ಫೋಟೋಗಳು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರೂಪಕಿ ಅನುಶ್ರೀ Read More »

ಸಿನಿಮಾ

ಗಣೇಶ ಚತುರ್ಥಿ: ಬೆಂಗಳೂರಿನಲ್ಲಿ ಇಂದು ಮಾಂಸ ಮಾರಾಟ ನಿಷೇಧ

(ನ್ಯೂಸ್‌ ಕಡಬ) newskadaba.com, ಆ.26:‌‌ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಇಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ಬಿಬಿಎಂಪಿ ನಿಷೇಧಿಸಿದೆ. ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಈ ಆದೇಶ ಹೊರಡಿಸಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸಾಯಿಖಾನೆಗಳು ಹಾಗೂ ಮಾಂಸದ ಅಂಗಡಿಗಳು ಮುಚ್ಚಲ್ಪಟ್ಟಿರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇನ್ನು ಬೆಂಗಳೂರಿನಲ್ಲಿ ಗೌರಿ–ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಕೆಆರ್‌ ಮಾರುಕಟ್ಟೆಯಲ್ಲಿ ಹೂವು–ಹಣ್ಣು ಖರೀದಿ ಭರಾಟೆ ಜೋರಾಗಿದೆ. ಗಣೇಶ ಚತುರ್ಥಿ ಆಚರಣೆಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಈಗಾಗಲೇ ಮಾರ್ಗಸೂಚಿಯನ್ನು

ಗಣೇಶ ಚತುರ್ಥಿ: ಬೆಂಗಳೂರಿನಲ್ಲಿ ಇಂದು ಮಾಂಸ ಮಾರಾಟ ನಿಷೇಧ Read More »

ಕರ್ನಾಟಕ

ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟ: ಓರ್ವ ಸಾವು

(ನ್ಯೂಸ್‌ ಕಡಬ) newskadaba.com, ಆ.15: ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟಗೊಂಡು ಓರ್ವ ಬಾಲಕ ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಬೆಂಗಳೂರಿನ ವಿಲ್ಸನ್‌ ಗಾರ್ಡನ್‌ನ ಚಿನ್ನಯ್ಯಪಾಳ್ಯದಲ್ಲಿ ನಡೆದಿದೆ. ಸ್ಪೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆಯ ಛಾವಣಿ ಕುಸಿದು ಬಿದ್ದಿದೆ. 8ಕ್ಕೂ ಅಧಿಕ ಮನೆಗಳಿಗೆ ಹಾನಿಯುಂಟಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಸಂಜಯ್‌ ಗಾಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಆಡುಗೋಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟ: ಓರ್ವ ಸಾವು Read More »

ಕರ್ನಾಟಕ

ಪ್ರತಿಭಟನಾ ರ‍್ಯಾಲಿ ಆ.8ಕ್ಕೆ ಮುಂದೂಡಿಕೆ: ಡಿಕೆಶಿ

(ನ್ಯೂಸ್‌ ಕಡಬ) newskadaba.com, ಆ.04: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಿಗದಿಯಾಗಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ಪ್ರತಿಭಟನಾ ರ‍್ಯಾಲಿ ಆ.8ಕ್ಕೆ ಮುಂದೂಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಹುಲ್‌ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ದ ಮತಗಳ್ಳತನದ ಆರೋಪ ಮಾಡಿದ್ದರು. ಕೇಂದ್ರ ಸರ್ಕಾರದ ಈ ಕ್ರಮವನ್ನು ವಿರೋಧಿಸಿ ಫ್ರೀಡಂ ಪಾರ್ಕ್‌ನಲ್ಲಿ ಆ.8ರಂದು ಪ್ರತಿಭಟನೆ ನಡೆಸಲು ನಿಗದಿ ಮಾಡಲಾಗಿತ್ತು. ಆದರೆ, ಇದೇ ಸಮಯದಲ್ಲಿ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹಾಗಾಗಿ ಪ್ರತಿಭಟನಾ

ಪ್ರತಿಭಟನಾ ರ‍್ಯಾಲಿ ಆ.8ಕ್ಕೆ ಮುಂದೂಡಿಕೆ: ಡಿಕೆಶಿ Read More »

ಕರ್ನಾಟಕ

ʼಕಾರ್ಗಿಲ್ ವಿಜಯ್ ದಿವಸʼಕ್ಕೆ ಇಂದು 26ನೇ ವರ್ಷ

(ನ್ಯೂಸ್‌ ಕಡಬ)newskadaba.com ಜು.26: ಪ್ರತಿವರ್ಷ ಜುಲೈ 26ನ್ನು ಕಾರ್ಗಿಲ್‌ ವಿಜಯ್‌ ದಿವಸ್‌ ಎಂದು ಆಚರಿಸಲಾಗುತ್ತದೆ. ಸತತ ಮೂರು ತಿಂಗಳ ಸಮರದ ಬಳಿಕ ಭಾರತೀಯ ಸೇನೆ ಪಾಕಿಸ್ತಾನವನ್ನು ಸೆದೆಬಡಿದು, 1999 ರಲ್ಲಿ ಈ ದಿನದಂದು, ಭಾರತೀಯ ಸೇನೆಯು ಆಪರೇಷನ್ ವಿಜಯ್‌ನ ಯಶಸ್ಸನ್ನು ಘೋಷಿಸಿತು. ಪಾಕಿಸ್ತಾನಿ ಒಳನುಸುಳುಕೋರರು ಮತ್ತು ಸೈನಿಕರು ಕಾರ್ಗಿಲ್‌ನ ಎತ್ತರದ ಪರ್ವತ ಶಿಖರಗಳನ್ನು ಅಕ್ರಮವಾಗಿ ಆಕ್ರಮಿಸಿಕೊಂಡಾಗ ಪ್ರಾರಂಭವಾದ ಈ ಯುದ್ಧವು ಭಾರತೀಯ ಸೇನೆಯ ದೃಢ ಸಂಕಲ್ಪ ಮತ್ತು ಅಸಾಧಾರಣ ಧೈರ್ಯಕ್ಕೆ ಸಾಕ್ಷಿಯಾಯಿತು. 1998-99ರ ಚಳಿಗಾಲದಲ್ಲಿ ಕಾರ್ಗಿಲ್‌ನ ಕಣಿವೆಗಳಲ್ಲಿ

ʼಕಾರ್ಗಿಲ್ ವಿಜಯ್ ದಿವಸʼಕ್ಕೆ ಇಂದು 26ನೇ ವರ್ಷ Read More »

ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್

(ನ್ಯೂಸ್‌ ಕಡಬ)newskadaba.com ಜು.26: ‘ಡೆವಿಲ್’ ಸಿನಿಮಾ ಶೂಟಿಂಗ್ ಸಲುವಾಗಿ ಥೈಲ್ಯಾಂಡ್‌ಗೆ ತೆರಳಿದ್ದ ನಟ ದರ್ಶನ್ ಶುಕ್ರವಾರ ರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ರಾತ್ರಿ 11:45ರ ವಿಮಾನದಲ್ಲಿ ದೇವನಹಳ್ಳಿಯ ಬಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದಾರೆ. ಕಳೆದ 10 ದಿನಗಳ ಹಿಂದೆ ‘ಡೆವಿಲ್’ ಸಿನಿಮಾ ಶೂಟಿಂಗ್‌ಗೆಂದು ನಟ ದರ್ಶನ್, ಪತ್ನಿ ಹಾಗೂ ಮಗನೊಂದಿಗೆ ಥೈಲ್ಯಾಂಡ್‌ಗೆ ತೆರಳಿದ್ದರು. ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ಗೆ ರಾಜ್ಯ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು

ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್ Read More »

ಸಿನಿಮಾ

ರಾಜ್ಯಕ್ಕೆ ಕೊಡಬೇಕಾದ ಯೂರಿಯಾ ಕೂಡಲೇ ಬಿಡುಗಡೆ ಮಾಡಿ; ಕೇಂದ್ರ ಸಚಿವರಿಗೆ ಸಿಎಂ ಸಿದ್ದು ಪತ್ರ

(ನ್ಯೂಸ್‌ ಕಡಬ)newskadaba.com ಜು.25: ರಾಜ್ಯದಲ್ಲಿ ಉಂಟಾಗುತ್ತಿರುವ ಯೂರಿಯಾ ಕೊರತೆ ಹಿನ್ನಲೆಯಲ್ಲಿ ರಾಜ್ಯಕ್ಕೆ ಕೊಡಬೇಕಾದ ಯೂರಿಯಾವನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಆಗ್ರಹಿಸಿದ್ದಾರೆ. ಪತ್ರದಲ್ಲಿ, ರಾಜ್ಯಕ್ಕೆ ಒಟ್ಟು 11.17 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಕೊಡಬೇಕಿತ್ತು. ಇಲ್ಲಿಯವರೆಗೆ 5.16 ಲಕ್ಷ ಮೆಟ್ರಿಕ್ ಟನ್ ಮಾತ್ರ ಕೊಡಲಾಗಿದೆ. ರಾಜ್ಯಕ್ಕೆ ಇನ್ನೂ 6.80 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬರಬೇಕಿದೆ. ಆದರೆ ಕೆಲ ಫರ್ಟಿಲೈಸರ್ ಕಂಪನಿಗಳು ಕೊರತೆಯ ಕಾರಣ ಹೇಳಿ ಯೂರಿಯಾ ಒದಗಿಸುತ್ತಿಲ್ಲ.

ರಾಜ್ಯಕ್ಕೆ ಕೊಡಬೇಕಾದ ಯೂರಿಯಾ ಕೂಡಲೇ ಬಿಡುಗಡೆ ಮಾಡಿ; ಕೇಂದ್ರ ಸಚಿವರಿಗೆ ಸಿಎಂ ಸಿದ್ದು ಪತ್ರ Read More »

ಕರ್ನಾಟಕ

ವಿಮಾನ ಏರಿ ಜಪಾನ್‌ಗೆ ಹೊರಟ ಬನ್ನೇರುಘಟ್ಟದ ಆನೆಗಳು

(ನ್ಯೂಸ್‌ ಕಡಬ)newskadaba.com ಜು.25: ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಬನ್ನೇರುಘಟ್ಟ ಜೈವಿಕ ಉದ್ಯಾನದ ನಾಲ್ಕು ಆನೆಗಳನ್ನು ಗುರುವಾರ ವಿಮಾನದ ಮೂಲಕ ಜಪಾನ್‌ಗೆ ಕಳುಹಿಸಿಕೊಡಲಾಯಿತು. ‘ಬನ್ನೇರುಘಟ್ಟ ಉದ್ಯಾನವು ಜಪಾನ್‌ನ ಹಿಮೇಜಿ ಸೆಂಟ್ರಲ್‌ ಪಾರ್ಕ್ನೊಂದಿಗೆ ಪ್ರಾಣಿ ವಿನಿಮಯ ಒಪ್ಪಂದ ಮಾಡಿಕೊಂಡಿದೆ. ಸುರೇಶ್‌ (8 ವರ್ಷ), ಗೌರಿ (9 ವರ್ಷ), ಶ್ರುತಿ (7 ವರ್ಷ) ಮತ್ತು ತುಳಸಿ (5 ವರ್ಷ) ಎಂಬ ಆನೆಗಳನ್ನು ಜಪಾನ್‌ನ ಹಿಮೇಜಿ ಸೆಂಟ್ರಲ್‌ ಪಾರ್ಕ್ಗೆ ಕೊಡಲಾಗುತ್ತಿದೆ. ಇದಕ್ಕೆ ಪ್ರತಿಯಾಗಿ ಹಿಮೇಜಿ ಸೆಂಟ್ರಲ್‌ ಪಾರ್ಕ್ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ತಲಾ

ವಿಮಾನ ಏರಿ ಜಪಾನ್‌ಗೆ ಹೊರಟ ಬನ್ನೇರುಘಟ್ಟದ ಆನೆಗಳು Read More »

ಕರ್ನಾಟಕ

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಮತ್ತೆ ವಜಾ..!

(ನ್ಯೂಸ್‌ ಕಡಬ)newskadaba.com ಜು.25: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮತ್ತೆ ವಜಾಗೊಳಿಸಿದೆ. ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಮತ್ತೆ ವಜಾ..! Read More »

ಕರ್ನಾಟಕ
Scroll to Top