Bangalore

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤  ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

(ನ್ಯೂಸ್ ಕಡಬ)newskadaba.com  ಶಿವಮೊಗ್ಗ, ಜ.07. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ 19 ವರ್ಷದ ಯುವಕನಿಗೆ ಶಿವಮೊಗ್ಗ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದೆ. ಭದ್ರಾವತಿ ತಾಲೂಕಿನ 19 ವರ್ಷದ ಯುವಕನೊಬ್ಬ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಇನ್ಸ್‌ಪೆಕ್ಟರ್‌ ಲಕ್ಷ್ಮೀಪತಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಸಲ್ಲಿಸಿದ್ದರು ಎನ್ನಲಾಗಿದೆ. ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್‌ಟ್ರ್ಯಾಕ್‌ […]

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤  ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದ ನ್ಯಾಯಾಲಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾ ಸ್ಕೂಲ್‌ನಲ್ಲಿ ಶೇ.25ರಷ್ಟು ಮೀಸಲಾತಿ ಕಡ್ಡಾಯ ➤  ಸಚಿವ ಡಾ ಸಿ.ಎನ್‌.ಅಶ್ವತ್ಥ ನಾರಾಯಣ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.07. ವಿವಿಯ ಕ್ಯಾಂಪಸ್‌ನಲ್ಲಿರುವ ನ್ಯಾಷನಲ್‌ ಲಾ ಸ್ಕೂಲ್‌ ಆಫ್‌ ಇಂಡಿಯಾ ಯುನಿವರ್ಸಿಟಿಯಲ್ಲಿ ನಿಯಮಾನುಸಾರ ಕರ್ನಾಟಕದ ವಿದ್ಯಾರ್ಥಿಗಳಿಗೆ ಸ್ಥಳೀಯ ಮೀಸಲಾತಿಯಡಿ ಶೇ.25 ರಷ್ಟು ಸೀಟುಗಳನ್ನು ಕಡ್ಡಾಯವಾಗಿ ನೀಡುವಂತೆ ಉನ್ನತ ಶಿಕ್ಷಣ ಸಚಿವ ಡಾ ಸಿ.ಎನ್‌.ಅಶ್ವತ್ಥ ನಾರಾಯಣ ಅವರು ಕೂಡ ವಿವಿಯ ಕುಲಪತಿ ಅವರಿಗೆ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ. ಇತರೆ ರಾಜ್ಯಗಳ ರಾಷ್ಟ್ರೀಯ ಕಾನೂನು ವಿವಿಗಳಲ್ಲಿರುವಂತೆ ರಾಜ್ಯದ ಎನ್‌ಎಲ್‌ಎಸ್‌ಐಯು ನಲ್ಲಿ ಸ್ಥಳೀಯ ಮೀಸಲಾತಿ ನಿಯಮ ಜಾರಿಗೊಳಿಸಿ ಎರಡು ವರ್ಷ ಕಳೆದರೂ ಅದನ್ನು ಪಾಲಿಸದೆ ರಾಜ್ಯದ

ಲಾ ಸ್ಕೂಲ್‌ನಲ್ಲಿ ಶೇ.25ರಷ್ಟು ಮೀಸಲಾತಿ ಕಡ್ಡಾಯ ➤  ಸಚಿವ ಡಾ ಸಿ.ಎನ್‌.ಅಶ್ವತ್ಥ ನಾರಾಯಣ Read More »

ಕರ್ನಾಟಕ

ಕ್ಷುಲ್ಲಕ ಕಾರಣಕ್ಕೆ ನಾಯಿಯನ್ನು ಶೂಟ್ ಮಾಡಿ ಕೊಂದ ಪಾಪಿಗಳು ➤ಇಬ್ಬರು ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.07. ಮಾಗಡಿ ಮುಖ್ಯರಸ್ತೆಯಲ್ಲಿ ನಗರದ ಹೊರವಲಯದಲ್ಲಿ ತಮ್ಮ ನಾಯಿಯನ್ನು ಕಚ್ಚಿದ್ದಕ್ಕೆ ಇಬ್ಬರು ಸೇರಿ ಇನ್ನೊಂದು ನಾಯಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಈ ಸಂಬಂಧ ಇಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ. ದೂರುದಾರರ ನಾಯಿಯು ಆರೋಪಿಗಳಲ್ಲಿ ಒಬ್ಬನ ನಾಯಿಯನ್ನು ಕಚ್ಚಿದೆ ಎಂದು ಹೇಳಲಾಗಿದ್ದು, ಇದು ಇಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಆದರೆ, ಆರೋಪಿಗಳು ನಾಯಿಗೆ ತಕ್ಕ ಪಾಠ ಕಲಿಸಬೇಕೆಂದುಕೊಂಡಿದ್ದಾರೆ. ನಂತರ ಆರೋಪಿಗಳಿಬ್ಬರು ನಾಯಿಯನ್ನು ಗುಂಡಿಕ್ಕಿ ಕೊಂದಿದ್ದಾರೆ ಎನ್ನಲಾಗಿದೆ. ಆರೋಪಿಗಳಿಬ್ಬರ ವಿರುದ್ಧ ಶಸ್ತ್ರಾಸ್ತ್ರ

ಕ್ಷುಲ್ಲಕ ಕಾರಣಕ್ಕೆ ನಾಯಿಯನ್ನು ಶೂಟ್ ಮಾಡಿ ಕೊಂದ ಪಾಪಿಗಳು ➤ಇಬ್ಬರು ಆರೋಪಿಗಳು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

NPS ಶಾಲೆಯಲ್ಲಿ ಬಾಂಬ್ ಭೀತಿ  ➤ ಸ್ಥಳಕ್ಕೆ ದೌಡಾಯಿಸಿದ ಬಾಂಬ್ ಪತ್ತೆ, ಶ್ವಾನ ದಳ ಸಿಬ್ಬಂದಿಗಳು      

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ಇಲ್ಲಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್​ ಬಂದಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಬಾಂಬ್ ಪತ್ತೆ, ಶ್ವಾನ ದಳ ದೌಡಾಯಿಸಿದ್ದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಶಾಲೆಯಲ್ಲಿನ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿರುವುದಾಗಿ ತಿಳಿದುಬಂದಿದೆ. ಬೆಂಗಳೂರಿನ ರಾಜಾಜಿನಗರದ ಎನ್.​ಪಿ.ಎಸ್ ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು, ಇದರಿಂದ ಆತಂಕಗೊಂಡ ಶಾಲಾ ಆಡಳಿತ ಮಂಡಳಿ ಕೂಡಲೇ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶಾಲಾ ಆವರಣದಲ್ಲಿ

NPS ಶಾಲೆಯಲ್ಲಿ ಬಾಂಬ್ ಭೀತಿ  ➤ ಸ್ಥಳಕ್ಕೆ ದೌಡಾಯಿಸಿದ ಬಾಂಬ್ ಪತ್ತೆ, ಶ್ವಾನ ದಳ ಸಿಬ್ಬಂದಿಗಳು       Read More »

ಕರ್ನಾಟಕ, ಕ್ರೈಮ್ ನ್ಯೂಸ್

PSI ನೇಮಕಾತಿ ಹಗರಣ ಆರೋಪಿಗಳಿಗೆ ಜಾಮೀನು..!!    

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.06. ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ PSI ನೇಮಕಾತಿ ಹಗರಣದ ದಿವ್ಯ ಹಾಗರಗಿ, DYSP ಮಂಜುನಾಥ ಸಾಲಿ ಮತ್ತು ಕಾಶೀನಾಥ್ ಸೇರಿದಂತೆ ಎಲ್ಲಾ 26 ಆರೋಪಿಗಳಿಗೆ ನ್ಯಾಯಾಲಯ ಷರತ್ತು ಜಾಮೀನು ನೀಡಿದ್ದು, PSI ನೇಮಕಾತಿಗೆ ಆರೋಪಿಗಳಿಂದ ಹಣ ಪಡೆದು ಸಹಕಾರ ನೀಡಿದ್ದ ಆರೋಪ ಇವರ ಮೇಲಿದೆ. ಹಲವು ರಾಜಕೀಯ ನಾಯಕರು ಮತ್ತು ಅಧಿಕಾರಿಗಳ ಹೆಸರು ತನಿಖೆ ವೇಳೆ ಕೇಳಿ ಬಂದಿತ್ತು ಎಂದು ವರದಿ ತಿಳಿಸಿದೆ.  

PSI ನೇಮಕಾತಿ ಹಗರಣ ಆರೋಪಿಗಳಿಗೆ ಜಾಮೀನು..!!     Read More »

ಕರ್ನಾಟಕ

ಲವ್ ಜಿಹಾದ್ ನಿಷೇಧ ಕಾಯ್ದೆ ಸದ್ಯಕ್ಕಿಲ್ಲ..!!   ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ರಾಜ್ಯದಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿ ವಿಚಾರ ಸರಕಾರದ ಮುಂದಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಚರ್ಚೆ ಪಕ್ಷದ ಹಂತದಲ್ಲಿದೆ. ಈ ವಿಚಾರದಲ್ಲಿ  ನಳಿನ್ ಕುಮಾರ್ ಕಟೀಲ್ ಜೊತೆ ಮಾತನಾಡುತ್ತೇನೆ. ಸದ್ಯ ಸರ್ಕಾರದ ಮುಂದೆ ಈ ವಿಚಾರ ಇಲ್ಲ ಎಂದು ಸಿ.ಎಂ ಬೊಮ್ಮಾಯಿ ತಿಳಿಸಿದ್ದಾರೆ.  

ಲವ್ ಜಿಹಾದ್ ನಿಷೇಧ ಕಾಯ್ದೆ ಸದ್ಯಕ್ಕಿಲ್ಲ..!!   ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಮಾರ್ಚ್ 31 ರೊಳಗೆ ಆಧಾರ್ ಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ ➤ ಆದಾಯ ತೆರಿಗೆ ಇಲಾಖೆ ಎಚ್ಚರಿಕೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ಪ್ಯಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದ್ದು, ಇದರ ಪ್ರಕಾರ, ಮಾರ್ಚ್ 31 2023 ರೊಳಗೆ ಆಧಾರ್‌ನೊಂದಿಗೆ ಪ್ಯಾನ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ಜೊತೆ ಲಿಂಕ್ ಮಾಡದಿದ್ದರೆ, ಪ್ಯಾನ್ ಕಾರ್ಡ್ ಅಮಾನ್ಯವಾಗುತ್ತದೆ. ಅಲ್ಲದೇ ಪ್ಯಾನ್ ಕಾರ್ಡ್ ಬಳಕೆಯನ್ನು ನಿಷೇಧಿಸಲಾಗುವುದು. ಆದರೆ, ಈಗಾಗಲೇ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಿದ್ದರೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಆದಾಯ ತೆರಿಗೆ

ಮಾರ್ಚ್ 31 ರೊಳಗೆ ಆಧಾರ್ ಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ ➤ ಆದಾಯ ತೆರಿಗೆ ಇಲಾಖೆ ಎಚ್ಚರಿಕೆ..! Read More »

ಕರ್ನಾಟಕ

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ ವೇ ಕಾಮಗಾರಿಯನ್ನು ಫೆಬ್ರವರಿಯೊಳಗೆ ಪೂರ್ಣಗೊಳಿಸಿ ➤ ಸಚಿವ ನಿತಿನ್ ಗಡ್ಕರಿ

(ನ್ಯೂಸ್ ಕಡಬ) newskadaba.com ರಾಮನಗರ, ಜ. 06. ವಿಧಾನಸಭೆ ಚುನಾವಣೆಗೆ ಮುನ್ನ ಫೆಬ್ರವರಿಯೊಳಗೆ ಬೆಂಗಳೂರು-ಮೈಸೂರು 10 ಪಥದ ಎಕ್ಸ್‌ಪ್ರೆಸ್‌ ವೇ ಸಾರ್ವಜನಿಕರಿಗೆ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಮನಗರ ತಾಲೂಕು ಜಿಗೇನಹಳ್ಳಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಅವರು, ಹೆದ್ದಾರಿ ಕಾಮಗಾರಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ 170 ಕಿ.ಮೀ. ರಸ್ತೆಯ ವೈಮಾನಿಕ ಸಮೀಕ್ಷೆಯನ್ನು ಕೈಗೊಂಡ ನಂತರ ಗಡುವಿನೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರು ಮತ್ತು

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ ವೇ ಕಾಮಗಾರಿಯನ್ನು ಫೆಬ್ರವರಿಯೊಳಗೆ ಪೂರ್ಣಗೊಳಿಸಿ ➤ ಸಚಿವ ನಿತಿನ್ ಗಡ್ಕರಿ Read More »

ಕರ್ನಾಟಕ

ಪೊಲೀಸರ ವಶದಲ್ಲಿದ್ದ ಯುವಕ ಅನುಮಾನಾಸ್ಪದವಾಗಿ ಮೃತ್ಯು ➤ ಪೊಲೀಸರ ಹಲ್ಲೆಯಿಂದ ಮೃತಪಟ್ಟಿರುವ ಶಂಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ಕಾಟನ್ ಪೇಟೆ ಠಾಣೆಯಲ್ಲಿ ಬಂಧಿತನಾಗಿದ್ದ ಆರೋಪಿಯೋರ್ವ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ಪೊಲೀಸರ ಹಲ್ಲೆಯಿಂದ ಲಾಕಪ್‌ನಲ್ಲಿಯೇ ಯುವಕ ಮೃತಪಟ್ಟಿದ್ದಾನೆಂದು ಕುಟುಂಬ ಮೂಲಗಳು ಆರೋಪಿಸಿದೆ.   ಹಳೆಯ ದರೋಡೆ ಸಂಚು ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ಇದ್ದ ಕಾರಣಕ್ಕೆ ನ್ಯಾಯಾಲಯದ ವಾರೆಂಟ್‌ ಹಿನ್ನೆಲೆ ಬಂಧಿತನಾಗಿದ್ದ ಭಕ್ಷಿ ಗಾರ್ಡನ್‌ ನಿವಾಸಿ ವಿನೋದ್‌ (23) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಆರು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿ ಈತನಿಗೆ ಬಂಧಿಸಲಾಗಿತ್ತು. ಈತ ಸೆಲ್ ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ

ಪೊಲೀಸರ ವಶದಲ್ಲಿದ್ದ ಯುವಕ ಅನುಮಾನಾಸ್ಪದವಾಗಿ ಮೃತ್ಯು ➤ ಪೊಲೀಸರ ಹಲ್ಲೆಯಿಂದ ಮೃತಪಟ್ಟಿರುವ ಶಂಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಧಾನಸೌಧದಲ್ಲಿ ಅನಧಿಕೃತ ಹಣ ಸಾಗಾಟ  ➤ ಓರ್ವನ ಬಂಧನ..!!!                                  

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 05. ವಿಧಾನಸೌಧದಲ್ಲಿ ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಸುಮಾರು 10.50 ಲಕ್ಷ ರೂಪಾಯಿಗಳನ್ನು ವಶಕ್ಕೆ ಪಡೆದಿರುವ ಘಟನೆ  ಬೆಂಗಳೂರಿನಲ್ಲಿ ವರದಿಯಾಗಿದೆ. ವಿಧಾ‌ಸೌಧದ ಗೇಟ್‌ನಲ್ಲಿ ಪೊಲೀಸರು ಪರಿಶೀಲನೆ ಮಾಡುತ್ತಿದ್ದ ಸಂದರ್ಭ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಓರ್ವ ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದ. ಈತನ ಬಳಿ ಹಣದ ಮೂಲದ ಕುರಿತು ಪೊಲೀಸರು ಪ್ರಶ್ನಿಸಿದಾಗ ಯಾವುದೇ ಸ್ಪಷ್ಟವಾದ ಮಾಹಿತಿಯನ್ನು ನೀಡದೇ ಇದ್ದ ಹಿನ್ನೆಲೆ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು,

ವಿಧಾನಸೌಧದಲ್ಲಿ ಅನಧಿಕೃತ ಹಣ ಸಾಗಾಟ  ➤ ಓರ್ವನ ಬಂಧನ..!!!                                   Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top