Bangalore

ರಾಜ್ಯದಲ್ಲಿ ಭಾರೀ ಮಳೆ…! ಇಂಧನ ಇಲಾಖೆಗೆ 96.61 ಕೋಟಿ ರೂ. ನಷ್ಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಭಾರಿ ಮಳೆ ಹಾಗೂ ಬಿರುಗಾಳಿಯಿಂದಾಗಿ ರಾಜ್ಯದ ಹಲವೆಡೆ ಸಾವಿರಾರು ವಿದ್ಯುತ್ ಕಂಬಗಳು, ಪರಿವರ್ತಕಗಳು ಮತ್ತು ವಿದ್ಯುತ್‌ ಸರಬರಾಜು ಮಾರ್ಗಗಳಿಗೆ ಹಾನಿಯಾಗಿದ್ದು, ವಿದ್ಯುತ್‌ ಸರಬರಾಜು ಕಂಪನಿಗಳಿಗೆ (ಎಸ್ಕಾಂ) ಒಟ್ಟು 96.61 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಹೇಳಿದರು. ಅತಿವೃಷ್ಟಿಯಿಂದ ಇಲಾಖೆಗೆ ಆಗಿರುವ ನಷ್ಟ ಮತ್ತು ವಿದ್ಯುತ್‌ ಪೂರೈಕೆಯಲ್ಲಿನ ಸಮಸ್ಯೆಗಳ ಕುರಿತು ಇಲಾಖೆ ಹಾಗೂ ಎಲ್ಲಾ ಎಸ್ಕಾಂಗಳ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಅವರು […]

ರಾಜ್ಯದಲ್ಲಿ ಭಾರೀ ಮಳೆ…! ಇಂಧನ ಇಲಾಖೆಗೆ 96.61 ಕೋಟಿ ರೂ. ನಷ್ಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ ಅಗತ್ಯ ಎಲ್ಲಾ ಪೂರ್ವ ಸಿದ್ದತೆಗಳಿಗೆ ಕ್ರಮ…!     ಸಿಎಂ ಖಡಕ್ ಸೂಚನೆ 

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ರಾಜ್ಯದಲ್ಲಿಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತದ ಪ್ರಕರಣಗಳು ವರದಿಯಾಗುತ್ತಿದ್ದು ಈ ಕುರಿತು ಸಹ ಜಿಲ್ಲಾಧಿಕಾರಿಗಳು ಎಚ್ಚರವಹಿಸುವಂತೆ ತಿಳಿಸಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವರು ಸಹ ಪ್ರವಾಹ ಪರಿಸ್ಥಿತಿಯ ನಿರ್ವಹಣೆಯ

ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ ಅಗತ್ಯ ಎಲ್ಲಾ ಪೂರ್ವ ಸಿದ್ದತೆಗಳಿಗೆ ಕ್ರಮ…!     ಸಿಎಂ ಖಡಕ್ ಸೂಚನೆ  Read More »

ಕರ್ನಾಟಕ

ಅನಧಿಕೃತ ಫ್ಲೆಕ್ಸ್-ಬ್ಯಾನರ್ ಅಳವಡಿಕೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.30. ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಲ್ಲಾ ವಲಯ ಆಯುಕ್ತರಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೂಚನೆ ನೀಡಿದರು ಎಂದು ವರದಿ ತಿಳಿಸಿದೆ. ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಡೆದ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಗಳನ್ನು ಅಳವಡಿಸುತ್ತಿದ್ದು, ಅದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕಿದೆ. ಈ ನಿಟ್ಟಿನಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ

ಅನಧಿಕೃತ ಫ್ಲೆಕ್ಸ್-ಬ್ಯಾನರ್ ಅಳವಡಿಕೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ Read More »

ಕರ್ನಾಟಕ

ಪೆಡ್ಲರ್’ಗಳ ಪತ್ತೆಗೆ ಪೊಲೀಸರ ಮಾಸ್ಟರ್ ಪ್ಲಾನ್..!         ಮಾದಕವಸ್ತು ಬಳಕೆದಾರರನ್ನೇ ಮಾಹಿತಿದಾರರನ್ನಾಗಿ ಬಳಸಲು ಮುಂದು           

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ಮಾದಕ ವಸ್ತು ಜಾಲ ಪತ್ತೆ ಹಾಗೂ ಪೆಡ್ಲರ್ ಗಳ ಪತ್ತೆಗೆ ಖಾಕಿ ಪಡೆ ಮಾಸ್ಟರ್‌ ಪ್ಲಾನ್‌ ರೂಪಿಸಿದೆ. ಮಾದಕ ದ್ರವ್ಯ ಸೇವನೆ ಪ್ರಕರಣಗಳಲ್ಲಿ ಮೊದಲ ಬಾರಿಗೆ ಸಿಕ್ಕಿಬಿದ್ದವರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸುವುದನ್ನು ನಿಲ್ಲಿಸಿ, ಅವರನ್ನೇ ಮಾಹಿತಿದಾರರನ್ನಾಗಿ ಬಳಕೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಇದೇ ವ್ಯಕ್ತಿ ಮತ್ತೆ ಸಿಕ್ಕಿಬಿದ್ದಿದ್ದೇ ಆದರೆ, ಪ್ರಕರಣ ದಾಖಲಿಸಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.  ರಾಜ್ಯ ಪೊಲೀಸರು ಕಳೆದ 6 ತಿಂಗಳುಗಲ್ಲಿ 619 ಕೆಜಿ ಡ್ರಗ್ಸ್ ವಶಕ್ಕೆ

ಪೆಡ್ಲರ್’ಗಳ ಪತ್ತೆಗೆ ಪೊಲೀಸರ ಮಾಸ್ಟರ್ ಪ್ಲಾನ್..!         ಮಾದಕವಸ್ತು ಬಳಕೆದಾರರನ್ನೇ ಮಾಹಿತಿದಾರರನ್ನಾಗಿ ಬಳಸಲು ಮುಂದು            Read More »

ಕರ್ನಾಟಕ

ಗ್ಯಾಸ್ ಗೀಸರ್ ನ ರಾಸಾಯನಿಕ ಲೀಕ್ !! ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ಸ್ನಾನದ ಕೋಣೆಯ ಗ್ಯಾಸ್ ಗೀಸರ್ ನ ರಾಸಾಯನಿಕ ಲೀಕ್ ಆಗಿ ಯುವಕನೋರ್ವ ಉಸಿರುಗಟ್ಟಿ ಮೃತಪಟ್ಟ ಘಟನೆ ಮೂಡುಬಿದಿರೆಯ ಕೋಟೆಬಾಗಿಲಿನ ವಸತಿ ಸಂಕೀರ್ಣವೊಂದರಲ್ಲಿ ನಡೆದಿದೆ. ಮೃತಪಟ್ಟವರನ್ನು ಶಾರಿಕ್ (18) ಎಂದು ಗುರುತಿಸಲಾಗಿದೆ. ಶಾರಿಕ್ ಸ್ನಾನಕ್ಕೆಂದು ತೆರಳಿದಾತ ಬಹಳ ಹೊತ್ತಾದರೂ ಹೊರ ಬಂದಿರುವುದಿಲ್ಲ. ಇದನ್ನು ಗಮನಿಸಿದ ಆತನ ಸಹೋದರ ಹೋಗಿ ನೋಡಿದಾಗ ಶಾರಿಕ್ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಗೀಸರ್ ನ ರಾಸಾಯನಿಕ ಹರಡಿದಾಗ ಶಾರಿಕ್ ಗೆ ಹೊರಬರಲು ಸಾಧ್ಯವಾಗಲಿಲ್ಲ ಎಂದು ಹೇಳಲಾಗಿದೆ.

ಗ್ಯಾಸ್ ಗೀಸರ್ ನ ರಾಸಾಯನಿಕ ಲೀಕ್ !! ಯುವಕನೋರ್ವ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ವಾಹನಗಳ ‘ಮಾಲಿನ್ಯ ನಿಯಂತ್ರಣ’ ಪ್ರಮಾಣಪತ್ರ ಮತ್ತಷ್ಟು ದುಬಾರಿ ಸಾಧ್ಯತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ರಾಜ್ಯದಲ್ಲಿ ವಾಹನಗಳ ‘ಮಾಲಿನ್ಯ ನಿಯಂತ್ರಣ’ ಪ್ರಮಾಣ ಪತ್ರದ ದರ ಏರಿಕೆಯಾಗುವ ಸಾಧ್ಯತೆ ಇದೆ. ಕರ್ನಾಟಕ ಎಮಿಷನ್ ಪರೀಕ್ಷಾ ಕೇಂದ್ರಗಳ ಮಾಲೀಕರ ಸಂಘಗಳು ಇತ್ತೀಚೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿಯಾಗಿ ಬಾಡಿಗೆ ವೆಚ್ಚ, ಎಮಿಷನ್ ಚೆಕ್ ಉಪಕರಣಗಳು, ವೇತನ ಮತ್ತು ಓವರ್‌ ಹೆಡ್‌ ಗಳ ಹೆಚ್ಚಳದ ಬಗ್ಗೆ ತಿಳಿಸಿದ್ದು, ದರ ಪರಿಷ್ಕರಿಸಲು ಮನವಿ ಮಾಡಿದೆ. ಸುಮಾರು ಮೂರು ವರ್ಷಗಳ ಹಿಂದೆ ದರ ಹೆಚ್ಚಿಸಲಾಗಿದೆ ಎಂದು ಸಂಘದ ಸದಸ್ಯರು ತಿಳಿಸಿದ್ದು, ಸದ್ಯಕ್ಕೆ

ರಾಜ್ಯದಲ್ಲಿ ವಾಹನಗಳ ‘ಮಾಲಿನ್ಯ ನಿಯಂತ್ರಣ’ ಪ್ರಮಾಣಪತ್ರ ಮತ್ತಷ್ಟು ದುಬಾರಿ ಸಾಧ್ಯತೆ Read More »

ಕರ್ನಾಟಕ

ರಾಜ್ಯದಲ್ಲಿ 17 ಸಾವಿರ ಗಡಿ ದಾಟಿದ ಡೆಂಗ್ಯೂ ಕೇಸ್ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನತೆ ಕಿಡಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಸೋಂಕಿನ ಅಬ್ಬರ ಹೆಚ್ಚಾಗಿದ್ದು, 320 ಮಂದಿಗೆ ಸೋಂಕು ದೃಢಪಟ್ಟಿದ್ದು ಇದರೊಂದಿಗೆ ರಾಜ್ಯದ ಒಟ್ಟಾರೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ 17 ಸಾವಿರ ಗಡಿ ದಾಟಿದೆ ಎನ್ನಲಾಗಿದೆ. ನಿತ್ಯ ಸರಾಸರಿ 2,500 ಪರೀಕ್ಷೆ ನಡೆಸುತ್ತಿದ್ದ ಆರೋಗ್ಯ ಇಲಾಖೆಯು ಭಾನುವಾರ 1,630 ಮಂದಿಗೆ ಮಾತ್ರ ಪರೀಕ್ಷೆ ನಡೆಸಿದೆ. ಈ ಪೈಕಿ 320 ಮಂದಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 17,227ಕ್ಕೆ ಏರಿಕೆಯಾಗಿದೆ. 465 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಇದರಲ್ಲಿ 9

ರಾಜ್ಯದಲ್ಲಿ 17 ಸಾವಿರ ಗಡಿ ದಾಟಿದ ಡೆಂಗ್ಯೂ ಕೇಸ್ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನತೆ ಕಿಡಿ Read More »

ಕರ್ನಾಟಕ

ಬೈಕ್ ಗೆ ಕಸದ ಲಾರಿ ಡಿಕ್ಕಿ ಸವಾರರಿಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29.   ಬಿಬಿಎಂಪಿ ತ್ಯಾಜ್ಯ ವಿಲೇವಾರಿ ವಾಹನ ಹಾಗೂ ದ್ಬಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ, ವಾಹನ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಕೆ.ಆರ್ ಸರ್ಕಲ್ ಬಳಿ ನಡೆದಿದೆ. ಮೃತರನ್ನ ಪ್ರಶಾಂತ್‌ (25), ಬಯ್ಯಣ್ಣಗಿರಿ ಶಿಲ್ಪ ಎಂದು ಗುರುತಿಸಲಾಗಿದೆ. ಬೆಂಗಳೂರಿನ ನಿವಾಸಿಯಾಗಿರುವ ಪ್ರಶಾಂತ್‌, ಶಿಲ್ಪಾ ಇಬ್ಬರೂ ಸ್ನೇಹಿತರಾಗಿದ್ದು, ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಮೆಜೆಸ್ಟಿಕ್‌ನಿಂದ ಕೆ.ಆರ್‌ ಸರ್ಕಲ್‌ ಮಾರ್ಗವಾಗಿ ಬೈಕ್‌ ನಲ್ಲಿ ಬರುತ್ತಿದ್ದರು. ಇದೇ ವೇಳೆ ಸಿಐಡಿ ಸಿಗ್ನಲ್‌ ಮಾರ್ಗದಿಂದ ಕೆ.ಆರ್‌ ವೃತ್ತದ ಮಾರ್ಗವಾಗಿ

ಬೈಕ್ ಗೆ ಕಸದ ಲಾರಿ ಡಿಕ್ಕಿ ಸವಾರರಿಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಲಿತ ಯುವಕನ ಕೈ ಕತ್ತರಿಸಿದ್ದ ಇಬ್ಬರು ರೌಡಿಶೀಟರ್‌ಗಳ ಬಂಧನ    

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29.  ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಕೈ ಕತ್ತರಿಸಿದ ಆರೋಪದ ಮೇಲೆ ಕನಕಪುರದಲ್ಲಿ ಇಬ್ಬರು ರೌಡಿಶೀಟರ್‌ಗಳ ಕಾಲುಗಳಿಗೆ ಪೊಲೀಸರು ಗುಂಡು ಹಾರಿಸುವ ಮೂಲಕ ಅವರನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಆರೋಪಿಗಳನ್ನು ಹರ್ಷ ಅಲಿಯಾಸ್ ಕೈಮಾ ಮತ್ತು ಕರುಣೇಶ್ ಅಲಿಯಾಸ್ ಕಣ್ಣ ಎಂದು ಗುರುತಿಸಲಾಗಿದೆ. ಇಬ್ಬರು ರೌಡಿಶೀಟರ್‌ ಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಲಿತ ಯುವಕ ಅನೀಶ್‌ಕುಮಾರ್‌ ಕುಟುಂಬದ ಮೇಲೆ ದಾಳಿ ನಡೆಸಿದ ಒಕ್ಕಲಿಗ ಸಮುದಾಯದ ಏಳು ಮಂದಿ ಶಸ್ತ್ರಧಾರಿಗಳ

ದಲಿತ ಯುವಕನ ಕೈ ಕತ್ತರಿಸಿದ್ದ ಇಬ್ಬರು ರೌಡಿಶೀಟರ್‌ಗಳ ಬಂಧನ     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಯೂಟಕ್ಕೆ ಅನುಮತಿ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮನೆಯೂಟಕ್ಕೆ ಅನುಮತಿ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆಯು ಇಂದು ಹೈಕೋರ್ಟ್‌ ನಲ್ಲಿ ನಡೆಯಲಿದೆ. ಮನೆಯೂಟ, ಹಾಸಿಗೆ, ಪುಸ್ತಕಗಳಿಗೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿತ್ತು. ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ ಬೆನ್ನಲ್ಲೇ ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲರ ಅರ್ಜಿ ಸಲ್ಲಿಸಿದ್ದರು. ಮನೆಯೂಟಕ್ಕೆ ಅನುಮತಿ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ಕೋರ್ಟ್, ಕಾನೂನಿಗೆ ಎಲ್ಲರೂ ಒಂದೇ,

ಮನೆಯೂಟಕ್ಕೆ ಅನುಮತಿ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ Read More »

ಕರ್ನಾಟಕ
Scroll to Top