Bangalore

ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ

(ನ್ಯೂಸ್‌ ಕಡಬ)newskadaba.com ಜು.25: ಇತ್ತೀಚೆಗಷ್ಟೆ ನಿಧನರಾದ ಅಭಿನಯ ಸರಸ್ವತಿ ಬಿ ಸರೋಜಾ ದೇವಿ ಅವರ 11ನೇ ದಿನ ವೈಕುಂಠ ಸಮಾರಾಧನೆ ಕಾರ್ಯಕ್ರಮ ಇಂದು (ಜುಲೈ 25) ಬೆಂಗಳೂರಿನಲ್ಲಿ ನಡೆಯಿತು. ಚಿತ್ರರಂಗ ಹಾಗೂ ರಾಜಕೀಯ ರಂಗದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥನಾರಾಯಣ ಅವರು, ಮಲ್ಲೇಶ್ವರದ 11ನೇ ರಸ್ತೆಗೆ ಬಿ ಸರೋಜಾ ದೇವಿ ಅವರ ಹೆಸರು ಇಡುತ್ತೇವೆ’ ಎಂದು ಘೋಷಿಸಿದರು. ಪಂಚಭಾಷಾ ತಾರೆ ಬಿ ಸರೋಜಾದೇವಿಯವರು 87ನೇ […]

ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ Read More »

ಸಿನಿಮಾ

ಹೊಸ ಅತಿಥಿಯನ್ನು ಹಾಡಿನ ಮೂಲಕ ಸ್ವಾಗತಿಸಿದ ಸಂಸದ ತೇಜಸ್ವಿ ಸೂರ್ಯ ದಂಪತಿ

(ನ್ಯೂಸ್ ಕಡಬ) newskadaba.com ಜು.05. ಸಂಸದ ತೇಜಸ್ವಿ ಸೂರ್ಯ ಅವರ ಮನೆಗೆ ವಿಶೇಷ ಅತಿಥಿಯ ಆಗಮನವಾಗಿದೆ. ಅದನ್ನು ಅವರು ತಮ್ಮ ಪತ್ನಿ ಗಾಯಕಿ ಶಿವಶ್ರೀ ಸ್ಕಂದ ಜೊತೆ ಪ್ರೀತಿಯಿಂದ ಸ್ವಾಗತಿಸಿದ್ದಾರೆ ಎಂದು ತಿಳಿದು ಬಂದಿದೆ.   ಆಂಧ್ರಪ್ರದೇಶದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ಉಡುಗೊರೆಯಾಗಿ ಸಿಕ್ಕಿದ ಕರುವನ್ನು ದಂಪತಿ ಮನೆಗೆ ತಂದಿದ್ದಾರೆ. ಶಿವಶ್ರೀ ಸ್ಕಂದ ಅವರು ತಮ್ಮ ಗಾಯನ ಮೂಲಕ ಕರುವನ್ನು ಅಪ್ಪಿ ಮುದ್ದಾಡಿದ್ದಾರೆ. ಈ ವಿಡಿಯೊವನ್ನು ತೇಜಸ್ವಿ ಸೂರ್ಯ ಅವರು ಸೋಷಿಯಲ್ ಮೀಡಿಯಾದಲ್ಲಿ

ಹೊಸ ಅತಿಥಿಯನ್ನು ಹಾಡಿನ ಮೂಲಕ ಸ್ವಾಗತಿಸಿದ ಸಂಸದ ತೇಜಸ್ವಿ ಸೂರ್ಯ ದಂಪತಿ Read More »

ಕರ್ನಾಟಕ

ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ED ಜಪ್ತಿ

(ನ್ಯೂಸ್ ಕಡಬ) newskadaba.com ಜು. 05. ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರಿಗೆ ಸೇರಿದ ರೂ. 34.12 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. 2002ರ ಅಕ್ರಮ ಹಣ ವರ್ಗಾವಣೆ ತಡೆ (PMLA)ಕಾಯ್ದೆಯಡಿ ಕೇಸ್ ಮಾಡಿ ತನಿಖೆ ನಡೆಸಿದ್ದ ಇಡಿ, ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಆಸ್ತಿಗಳನ್ನು ಜಪ್ತಿ ಮಾಡಿದೆ.   ರನ್ಯಾ ರಾವ್‌ ಅವರನ್ನು ಮಾರ್ಚ್ 3ರಂದು ದುಬೈನಿಂದ ಬೆಂಗಳೂರಿಗೆ

ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ED ಜಪ್ತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಎಸ್‌ ಕುರಿತು ಅವಹೇಳನ; ಎಂಎಲ್‌ಸಿ ರವಿಕುಮಾರ್‌ ವಿರುದ್ಧ ಸಭಾಪತಿಗೆ ದೂರು

(ನ್ಯೂಸ್‌ ಕಡಬ) newskadaba.com ಜು.04:  ಕರ್ನಾಟಕದ ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂಸದೀಯ ಪದಗಳನ್ನು ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೌದು.. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂಸದೀಯ ಪದ ಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿ ಪರಿಷತ್ ಸದಸ್ಯ ಎನ್​. ರವಿಕುಮಾರ್ ವಿರುದ್ಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್​ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಲ್ಲದೆ ಎನ್​ ರವಿಕುಮಾರ್

ಸಿಎಸ್‌ ಕುರಿತು ಅವಹೇಳನ; ಎಂಎಲ್‌ಸಿ ರವಿಕುಮಾರ್‌ ವಿರುದ್ಧ ಸಭಾಪತಿಗೆ ದೂರು Read More »

ಕರ್ನಾಟಕ

ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಸಾರಿಗೆ ಇಲಾಖೆ; 260 ಕೇಸ್‌, 98 ಆಟೋಗಳು ಸೀಜ್‌ !

(ನ್ಯೂಸ್‌ ಕಡಬ) newskadaba.com ಜು.02: ರಾಜಧಾನಿ ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಆಟೋ ಚಾಲಕರು ಪ್ರಯಾಣಿಕರ ಮಧ್ಯೆ ಬಾಡಿಗೆ ಹೊಂದಿಸುವಲ್ಲಿ ಮಾತಿನ ಚಕಮಕಿ, ಜಗಳ ಘಟನೆಗಳು ಹೆಚ್ಚಾಗಿದ್ದು ಕಂಡು ಬಂದಿದೆ. ಕೆಲವು ಆಟೋ ಚಾಲಕರು ಸದ್ಯದ ಪರಿಸ್ಥಿತಿ ನೋಡಿಕೊಂಡು ದುಪಟ್ಟು ಹಣ ವಸೂಲಿಗೆ ಮುಂದಾಗುತ್ತಿರುವುದು ಇದಕ್ಕೆ ಕಾರಣವಾಗಿದೆ. ಕರ್ನಾಟಕ ಹೈಕೋರ್ಟ್‌ ಇತ್ತೀಚೆಗೆ ರಾಪಿಡೋ ಬೈಕ್ ಹಾಗೂ ಒಲಾ, ಊಬರ್ ಟ್ಯಾಕ್ಸಿ ಸೇವೆಗಳನ್ನು ರದ್ದು ಮಾಡಿ ಆದೇಶಿಸಿದೆ. ಈ ನಿಷೇಧ ಆದೇಶ ಬಳಿಕ ಸಾರ್ವಜನಿಕರು ಆಟೋ, ಬಸ್ ಇತರ ಸಾರಿಗೆ

ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಸಾರಿಗೆ ಇಲಾಖೆ; 260 ಕೇಸ್‌, 98 ಆಟೋಗಳು ಸೀಜ್‌ ! Read More »

ಕರಾವಳಿ

ಬೆಂಗಳೂರು ಗ್ರಾಮಾಂತರ ಇನ್ನು ಮುಂದೆ ಬೆಂಗಳೂರು ಉತ್ತರ ಜಿಲ್ಲೆ

(ನ್ಯೂಸ್‌ ಕಡಬ) newskadaba.com ಜು.02: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಿದ್ದ ಸರ್ಕಾರ ಈಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂಬುದಾಗಿ ಮರು ನಾಮಕರಣ ಮಾಡಿದೆ. ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ನಂದಿಗಿರಿಧಾಮದಲ್ಲಿ ನಡೆದ ಕ್ಯಾಬಿನೆಟ್‌ ಸಭೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ‘ಬೆಂಗಳೂರು ಉತ್ತರ’ ಜಿಲ್ಲೆಯನ್ನಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೆಸರನ್ನು ಭಾಗ್ಯನಗರ ಎಂದು ನಾಮಕರಣ ಮಾಡುವುದಕ್ಕೆ ಅನುಮೋದನೆ ನೀಡಿದೆ. 1986ರಲ್ಲಿ ಬೆಂಗಳೂರು ನಗರ ಜಿಲ್ಲೆಯಿಂದ ಪ್ರತ್ಯೇಕಿಸಿ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಇನ್ನು ಮುಂದೆ ಬೆಂಗಳೂರು ಉತ್ತರ ಜಿಲ್ಲೆ Read More »

ಕರ್ನಾಟಕ

ಮಹಿಳೆಯ ಕೊಂದು ಮೂಟೆ ಕಟ್ಟಿ ಕಸದ ಲಾರಿಗೆ ಎಸೆದ ದುಷ್ಕರ್ಮಿಗಳು !

(ನ್ಯೂಸ್‌ ಕಡಬ) newskadaba.com ಜು.29 : ಮಹಿಳೆಯೊಬ್ಬರನ್ನು ಭೀಕರವಾಗಿ ಕೊಂದು ಮೂಟೆಕಟ್ಟೆ ಬಿಬಿಎಂಪಿ ಕಸದ ಲಾರಿಗೆ ಎಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೆಂಗಳೂರಿನ ಚೆನ್ನಮನಕೆರೆ ಅಚ್ಚುಕಟ್ಟು ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಸ್ಕೇಟಿಂಗ್‌ ಮೈದಾನದ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿ ಇಂದು ಬೆಳಗ್ಗೆ ಮೂಟೆಯೊಂದು ಕಂಡು ಬಂದಿದ್ದು, ಪೌರಕಾರ್ಮಿಕರು ರಕ್ತದ ಕಲೆ ನೋಡಿ ಪರಿಶೀಲಿಸಿದಾಗ ಅದರೊಳಗೆ ಮಹಿಳೆ ಶವ ಪತ್ತೆಯಾಗಿದೆ. ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದಾಗ ಸುಮಾರು 30-35 ವರ್ಷದ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ

ಮಹಿಳೆಯ ಕೊಂದು ಮೂಟೆ ಕಟ್ಟಿ ಕಸದ ಲಾರಿಗೆ ಎಸೆದ ದುಷ್ಕರ್ಮಿಗಳು ! Read More »

ಕ್ರೈಮ್ ನ್ಯೂಸ್

‘5 ವರ್ಷದಿಂದ ಲೈಂಗಿಕವಾಗಿ ಬಳಕೆ’: RCB ಯಶ್ ವಿರುದ್ಧ ಮಹಿಳೆ ಗಂಭೀರ ಆರೋಪ!

(ನ್ಯೂಸ್‌ ಕಡಬ) newskadaba.com ಜು.29 : ಇಂಡಿಯನ್ ಪ್ರೀಮಿಯರ್ ಲೀಗ್‌ನಿಂದ ಪ್ರಸಿದ್ಧರಾದ ಭಾರತೀಯ ಕ್ರಿಕೆಟಿಗ ಯಶ್ ದಯಾಳ್ ದೊಡ್ಡ ವಿವಾದಕ್ಕೆ ಸಿಲುಕಿದ್ದಾರೆ. ಇತ್ತೀಚೆಗೆ ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯಶ್ ದಯಾಳ್ ಅವರ ಮೇಲೆ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ, ಹಿಂಸೆ ಮತ್ತು ವಂಚನೆ ಆರೋಪ ಹೊರಿಸಿದ್ದಾರೆ. ಯಶ್ ದಯಾಳ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ಸಂತ್ರಸ್ತ ಮಹಿಳೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ವಿಷಯದಲ್ಲಿ

‘5 ವರ್ಷದಿಂದ ಲೈಂಗಿಕವಾಗಿ ಬಳಕೆ’: RCB ಯಶ್ ವಿರುದ್ಧ ಮಹಿಳೆ ಗಂಭೀರ ಆರೋಪ! Read More »

ಕ್ರೀಡಾ ನ್ಯೂಸ್

ಚಿನ್ನ ಖರೀದಿ ಮಾಡುವವರಿಗೆ ಗುಡ್​​ನ್ಯೂಸ್

(ನ್ಯೂಸ್‌ ಕಡಬ) newskadaba.com ಜೂ.28: ಇತ್ತೀಚಿನ ದಿನಗಳಲ್ಲಿ ಬಂಗಾರದ ದರ ನೋಡಿದರೆ ಯಾರು ಖರೀದಿ ಮಾಡಲು ಮುಂದಾಗುವುದಿಲ್ಲ. ಆದರೆ ಮದುವೆಯಂತಹ ಕೆಲ ಅವಶ್ಯಕತೆ ಬಂದರೆ ಚಿನ್ನವನ್ನು ಖರೀದಿ ಮಾಡಲೇ ಬೇಕಾಗುತ್ತದೆ. ಎಲ್ಲರನ್ನು ಬಂಗಾರ, ಬೆಳ್ಳಿ ಆಕರ್ಷಣೆ ಮಾಡಿದರೂ ಅವುಗಳ ಬೆಲೆಗಳಿಂದ ಗ್ರಾಹಕರು ದಂಗಾಗುತ್ತಿದ್ದಾರೆ. ಸದ್ಯ ಸಿಲಿಕಾನ್​ ಸಿಟಿಯಲ್ಲಿ ಚಿನ್ನ, ಬೆಳ್ಳಿಯ ಬೆಲೆ ಎಷ್ಟು ಇಳಿಕೆ ಆಗಿದೆ?. ದಿನದಿಂದ ದಿನಕ್ಕೆ ಚಿನ್ನದ ದರದಲ್ಲಿ ಏರಿಕೆ ಕಾಣುತ್ತಿತ್ತು. ಆದರೆ ಇಂದು ಬಂಗಾರ ದರದಲ್ಲಿ ಇಳಿಕೆ ಕಂಡಿದ್ದು ಗ್ರಾಹಕರು ಸಂತಸ ವ್ಯಕ್ತಪಡಿಸಿದ್ದಾರೆ.

ಚಿನ್ನ ಖರೀದಿ ಮಾಡುವವರಿಗೆ ಗುಡ್​​ನ್ಯೂಸ್ Read More »

ಕರ್ನಾಟಕ

ರಾಜ್ಯದಲ್ಲಿ ಜು.3ರವರೆಗೂ ಮಳೆ; 6 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್ ಘೋಷಣೆ !

(ನ್ಯೂಸ್‌ ಕಡಬ) newskadaba.com ಜೂ.28: ರಾಜ್ಯಾದ್ಯಂತ ಮಳೆ ಮುಂದುವರೆದಿದ್ದು, ಜುಲೈ 3ರ ವರೆಗೂ ವರುಣನ ಆರ್ಭಟ ಮುಂದುವರೆಯಲಿದೆ. ರಾಜ್ಯ ಹವಾಮಾನ ಇಲಾಖೆಯು ಕೊಡಗು ಜಿಲ್ಲೆಗೆ ರೆಡ್ ಅಲರ್ಟ್​ ಘೋಷಣೆ ಮಾಡಿದೆ. ಇನ್ನುಳಿದಂತೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಮತ್ತು ಬೆಳಗಾವಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,

ರಾಜ್ಯದಲ್ಲಿ ಜು.3ರವರೆಗೂ ಮಳೆ; 6 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್ ಘೋಷಣೆ ! Read More »

ಕರಾವಳಿ, ಕರ್ನಾಟಕ
Scroll to Top