Bangalore

ನಾಳೆ (ಸೆ. 20) ಮೆಟ್ರೋ ರೈಲು ಸಂಚಾರದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಮಾರ್ಗ ಸುರಕ್ಷತಾ ಪರಿಶೀಲನೆ ಹಿನ್ನೆಲೆ ನಾಳೆ (ಸೆ. 21) ಕೆ.ಆರ್ ಪುರದಿಂದ ಗರುಡಾಚಾರ್ ಪಾಳ್ಯ ಹಾಗೂ ಬೈಯಪ್ಪನಹಳ್ಳಿಯಿಂದ ಇಂದಿರಾನಗರ ನಿಲ್ದಾಣದವರೆಗೆ ಮೆಟ್ರೋ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ನಾಳೆ ದಿನವಿಡೀ ಕೆ.ಆರ್ ಪುರ ಹಾಗೂ ಗರುಡಾಚಾರ್ ಪಾಳ್ಯ ನಿಲ್ದಾಣದವರೆಗೆ ರೈಲು ಸೇವೆ ಲಭ್ಯವಿರುವುದಿಲ್ಲ. ಬೈಯಪ್ಪನಹಳ್ಳಿಯಿಂದ ಇಂದಿರಾನಗರ ಮೆಟ್ರೋ ನಿಲ್ದಾಣದವರೆಗೆ ಮಧ್ಯಾಹ್ನ 1.30 ರಿಂದ ಸಂಜೆ 4.30 ರವರೆಗೆ ಮೆಟ್ರೋ ರೈಲು ಸೇವೆ ಇರುವುದಿಲ್ಲ. ವೈಟ್ ಫೀಲ್ಡ್ ಗರುಡಾಚಾರ್ ಪಾಳ್ಯದ ನಡುವೆ […]

ನಾಳೆ (ಸೆ. 20) ಮೆಟ್ರೋ ರೈಲು ಸಂಚಾರದಲ್ಲಿ ಬದಲಾವಣೆ Read More »

ಕರ್ನಾಟಕ

ವಿದೇಶದಿಂದ ಅಕ್ರಮವಾಗಿ ಇ-ಸಿಗರೇಟ್ ಸಾಗಾಟ – ಇಬ್ಬರನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ದೇವನಹಳ್ಳಿ, ಸೆ. 18. ವಿದೇಶದಿಂದ ಅಕ್ರಮವಾಗಿ ಇ-ಸಿಗರೇಟ್​ ಸಾಗಣೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್​ ಅಧಿಕಾರಿಗಳು, ಪ್ರಯಾಣಿಕರಿಂದ ಇ-ಸಿಗರೇಟ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆ ನಡೆಸಿದ ಏರ್​ಪೋರ್ಟ್​ನ ಕಸ್ಟಮ್ಸ್ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮಲೇಶಿಯಾದ ಕೌಲಾಂಪುರದಿಂದ ಎಂಎಚ್ 192ನ ಮಲೇಶಿಯಾ ಏರ್​ಲೈನ್ಸ್​ನಲ್ಲಿ ಆಗಮಿಸಿದ್ದ ಇಬ್ಬರು ಪ್ರಯಾಣಿಕರಿಂದ ಬರೋಬ್ಬರಿ 15.9 ಲಕ್ಷ ರೂ. ಮೌಲ್ಯದ 1,590 ಸಿಗರೇಟ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿರುವ ಅಧಿಕಾರಿಗಳು, ಹೆಚ್ಚಿನ ತನಿಖೆ

ವಿದೇಶದಿಂದ ಅಕ್ರಮವಾಗಿ ಇ-ಸಿಗರೇಟ್ ಸಾಗಾಟ – ಇಬ್ಬರನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ದೃಶ್ಯ ಸೆರೆ ಹಿಡಿದು ವೈರಲ್ ಮಾಡೋದಾಗಿ ಬೆದರಿಕೆ- ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 16. ಹೋಟೆಲ್‌ ರೂಮ್‌ ಒಂದರಲ್ಲಿ ಖಾಸಗಿ ವಿಡಿಯೋ ಸೆರೆಹಿಡಿದು 1 ಲಕ್ಷ ರೂ. ನೀಡುವಂತೆ ಎಂಬಿಎ ವಿದ್ಯಾರ್ಥಿನಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಮಹಿಳೆ ಸೇರಿ ಇಬ್ಬರನ್ನು ಚಂದ್ರಾ ಲೇಔಟ್‌ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನ ನಯನಾ ಹಾಗೂ ಕಿರಣ್‌ ಎಂದು ಗುರುತಿಸಲಾಗಿದೆ. ಇವರಿಬ್ಬರು ಸೇರಿಕೊಂಡು ಹೋಟೆಲ್‌ ಪ್ರಾರಂಭಿಸಿದ್ದರು. ಈ ಹೋಟೆಲ್ ಎಂಬಿಎ ವಿದ್ಯಾರ್ಥಿನಿಯೋರ್ವಳು ತನ್ನ ಪ್ರಿಯಕರನ ಜತೆಗೆ ಆಗಾಗ ಬಂದು ರೂಮ್‌ ಪಡೆಯುತ್ತಿದ್ದಳು. ಇದನ್ನೇ ಉಪಯೋಗಿಸಿಕೊಂಡ ನಯನಾ ಹಾಗೂ

ಖಾಸಗಿ ದೃಶ್ಯ ಸೆರೆ ಹಿಡಿದು ವೈರಲ್ ಮಾಡೋದಾಗಿ ಬೆದರಿಕೆ- ಇಬ್ಬರು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

70 ಲಕ್ಷ ಖಾತೆಗಳಿಗೆ ಇನ್ನೂ ಜಮೆಯಾಗದ ‘ಗೃಹಲಕ್ಷ್ಮೀ’ ಹಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 07. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದ 70 ಲಕ್ಷ ಮಹಿಳೆಯರ ಖಾತೆಗೆ ಇನ್ನೂ ಹಣ ಜಮೆ ಆಗಿಲ್ಲ ಎನ್ನಲಾಗಿದೆ. ಆಗಸ್ಟ್ 30 ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗೃಹಲಕ್ಷ್ಮೀ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದರು. ಈವರೆಗೆ 44.52 ಲಕ್ಷ ಫಲಾನುಭವಿಗಳ ಖಾತೆಗೆ ಮಾತ್ರ 2,000 ರೂ.ಹಣ ಜಮಾ ಆಗಿದ್ದು, 69.05 ಲಕ್ಷ ಫಲಾನುಭವಿಗಳ ಖಾತೆಗೆ

70 ಲಕ್ಷ ಖಾತೆಗಳಿಗೆ ಇನ್ನೂ ಜಮೆಯಾಗದ ‘ಗೃಹಲಕ್ಷ್ಮೀ’ ಹಣ Read More »

ಕರ್ನಾಟಕ

ಆನ್ ಲೈನ್ ಗೇಮ್ ಗೆ ಕಡಿವಾಣ ಹಾಕಲು ಮುಂದಾದ ರಾಜ್ಯ ಸರ್ಕಾರ

(ನ್ಯೂಸ್ ಕಡಬ)newskadaba. com ಬೆಂಗಳೂರು, ಆ.30. ಆನ್ ಲೈನ್ ಗೇಮಿಂಗ್ ಆ್ಯಪ್ ಮೂಲಕ ಮಕ್ಕಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಇವುಗಳ ಬಗ್ಗೆ ತನಿಖೆ ಕೈಗೊಂಡು, ಇಂತಹ ಚಟುವಟಿಕೆಗಳನ್ನು ರದ್ದು ಪಡಿಸುವಂತೆ ಕೋರಿ ವಿಧಾನ‌ ಪರಿಷತ್ ಸದಸ್ಯರಾದ ಅರುಣ್ ಡಿ.ಎಸ್ ಸರ್ಕಾರದ ಗಮನ ಸೆಳೆದರು ಎಂದು ವರದಿಯಾಗಿದೆ. ಗೃಹ ಸಚಿವರ ಪರವಾಗಿ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಆನ್ ಲೈನ್ ಗೇಮ್ ಗಳಾದ ಡ್ರೀಮ್ 11, ಮೈ ಸರ್ಕಲ್ ಮುಂತಾದ ಆ್ಯಪ್

ಆನ್ ಲೈನ್ ಗೇಮ್ ಗೆ ಕಡಿವಾಣ ಹಾಕಲು ಮುಂದಾದ ರಾಜ್ಯ ಸರ್ಕಾರ Read More »

ಕರ್ನಾಟಕ

ಗಂಧದ ಮರ ಕಳ್ಳತನಕ್ಕೆ ಯತ್ನ- ಗುಂಡೇಟು; ಓರ್ವ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಆನೇಕಲ್, ಆ. 30. ಗಂಧದ ಮರ ಕಳ್ಳತನಕ್ಕೆಂದು ಬಂದಿದ್ದವರಿಗೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದು, ಪರಿಣಾಮ ಓರ್ವ ಸ್ಥಳದಲ್ಲೇ ಪ್ರಾಣ ಬಿಟ್ಟರೆ, ಮತ್ತೋರ್ವ ಪರಾರಿಯಾಗಿರುವ ಕುರಿತು ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಅರಣ್ಯ ಪ್ರದೇಶದ ಕಲ್ಕೆರೆ ಎಂಬಲ್ಲಿ ನಡೆದಿದೆ. ಬೀಟ್ ಫಾರೆಸ್ಟ್ ಗಾರ್ಡ್ ವಿನಯ್ ಎಂಬವರು ಫೈರಿಂಗ್ ಮಾಡಿದ್ದಾರೆ ಎನ್ನಲಾಗಿದೆ. ಕಳೆದ ಕೆಲ ದಿನಗಳಿಂದ ಇಲ್ಲಿ ಗಂಧದ ಮರಗಳ ಕಳ್ಳತನವಾಗುತ್ತಿದ್ದ ಹಿನ್ನೆಲೆ ಇದನ್ನು ತಡೆಯಲು ಫಾರೆಸ್ಟ್ ಬೀಟ್ ಸಿಬ್ಬಂದಿಯನ್ನ ನಿಯೋಜಿಸಲಾಗಿತ್ತು. ಕಳ್ಳರು ರಾತ್ರಿ

ಗಂಧದ ಮರ ಕಳ್ಳತನಕ್ಕೆ ಯತ್ನ- ಗುಂಡೇಟು; ಓರ್ವ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಸ್ರೋ ವಿಜ್ಞಾನಿಯ ಕಾರನ್ನು ಹಿಂಬಾಲಿಸಿ ಕಲ್ಲೆಸೆತ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಇಸ್ರೋದ ವಿಜ್ಞಾನಿಯೊಬ್ಬರ ಕಾರನ್ನು ಹಿಂಬಾಲಿಸಿ ಕಲ್ಲೆಸೆದ ಘಟನೆ ಬೆಂಗಳೂರಿನ ರತನಹಳ್ಳಿ ಮುಖ್ಯ ರಸ್ತೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಆಗಸ್ಟ್‌ 24ರ ರಾತ್ರಿ ಮನೆಗೆ ತೆರಳುತ್ತಿದ್ದಾಗ ಗೂಂಡಾಗಳು ವಿಜ್ಞಾನಿ ಅಶುತೋಷ್ ಸಿಂಗ್ ಅವರ ಕಾರನ್ನು ಹಿಂಬಾಲಿಸಿ ಕಾರನ್ನು ತಡೆದು ನಿಲ್ಲಿಸಿ ಹಿಂಭಾಗದ ಗಾಜನ್ನು ಒಡೆದು ಹಾಕಿದ್ದಾರೆ. ಈ ಕುರಿತು ದೂರು ನೀಡಲು ಮುಂದಾದಾಗ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಎಕ್ಸ್‌ ಮೂಲಕ ಘಟನೆ ಹಂಚಿಕೊಂಡ ಬಳಿಕ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ

ಇಸ್ರೋ ವಿಜ್ಞಾನಿಯ ಕಾರನ್ನು ಹಿಂಬಾಲಿಸಿ ಕಲ್ಲೆಸೆತ- ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಶಂಕಿತ ಉಗ್ರನ ಸಹಚರನ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಬೆಂಗಳೂರಿನ ಶಂಕಿತ ಉಗ್ರನ ಮನೆಯಲ್ಲಿ ಗ್ರೆನೇಡ್‌ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪ್ರಮುಖ ಆರೋಪಿ ಜುನೈದ್ ನ , ಸಹಚರನೋರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್‌ ಅರ್ಷದ್‌ ಎಂದು ಗುರುತಿಸಲಾಗಿದೆ. ರಾಜ್ಯ ರಾಜಧಾನಿಯಲ್ಲಿ ಇತ್ತೀಚೆಗೆ ಬಾಂಬ್‌ ಸ್ಫೋಟಕ್ಕೆ ಸಂಚು ರೂಪಿಸಿದ್ದ ಆರೋಪದಡಿ ಐವರು ಶಂಕಿತ ಉಗ್ರರನ್ನು ಬಂಧಿಸಲಾಗಿತ್ತು. ಈ ವೇಳೆ ಜುನೈದ್‌ ಸಹಚರ ಅರ್ಷದ್‌ ಎಂಬಾತ ನಾಪತ್ತೆಯಾಗಿದ್ದ. ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿರುವ ಅರ್ಷದ್‌ ವಿರುದ್ಧ 17 ಪ್ರಕರಣಗಳು ದಾಖಲಾಗಿದ್ದವು. ಇನ್ನು

ಶಂಕಿತ ಉಗ್ರನ ಸಹಚರನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ- 6 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ರಾಮನಗರ, ಆ. 28. ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕ್ವಾಲಿಸ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರ ಜಿಲ್ಲೆಯ ಕನಕಪುರದಲ್ಲಿ ಸೋಮವಾರದಂದು ನಡೆದಿದೆ. ಅಪಘಾತದ ರಭಸಕ್ಕೆ ಕ್ವಾಲಿಸ್ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ ನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ.

ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ- 6 ಮಂದಿ ದುರ್ಮರಣ Read More »

ಕರ್ನಾಟಕ

ಆ.30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.24. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಆ.30ರಂದು ಮೈಸೂರಿನಲ್ಲಿ ಚಾಲನೆ ದೊರೆಯಲಿದ್ದು, ಭರ್ಜರಿ ಸಿದ್ಧತೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ. ಪ್ರತಿ ತಿಂಗಳು ಮಹಿಳೆಯರ ಖಾತೆಗೆ 2000 ರೂ. ಜಮೆ ಮಾಡಲಾಗುತ್ತಿದ್ದು, ಯೋಜನೆಗಾಗಿ ಅರ್ಜಿ ಸಲ್ಲಿಸಿದವರು ಮಾತ್ರ ಯೋಜನೆಯ ಫಲ ಪಡೆಯಬಹುದು. ಸಿಎಂ ಸಿದ್ದರಾಮಯ್ಯ ಕೂಡ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ಸಾಧ್ಯತೆಯಿದ್ದು, ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳಾ ಫಲಾನುಭವಿಗಳನ್ನು ಗುರುತಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ

ಆ.30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ Read More »

ಕರ್ನಾಟಕ
Scroll to Top