Bangalore

ಇಂಜೆಕ್ಷನ್ ಅಡ್ಡ ಪರಿಣಾಮ- ಚಿಕಿತ್ಸೆ ಫಲಿಸದೇ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 20. ಜ್ವರಕ್ಕೆಂದು ವೈದ್ಯರು ನೀಡಿದ ಇಂಜೆಕ್ಷನ್ ನಿಂದ ಅಡ್ಡ ಪರಿಣಾಮ ಉಂಟಾಗಿ ಕುಂದಾಪುರ ಮೂಲದ ಯುವಕನೊಬ್ಬ ಬೆಂಗಳೂರಿನ ಕೆ.ಪಿ. ಅಗ್ರಹಾರದಲ್ಲಿ ಮೃತಪಟ್ಟ ಘಟನೆ ಶುಕ್ರವಾರದಂದು ನಡೆದಿದೆ. ಮೃತ ಯುವಕನನ್ನು ಕುಂದಾಪುರ ತಾಲೂಕಿನ ಹೊಸಂಗಡಿ ಗ್ರಾಮದ ಬೆದ್ರಳ್ಳಿಯ ದಿ. ಚಂದ್ರಶೆಟ್ಟಿ ಎಂಬವರ ಮಗ ಅಮರ್ ಶೆಟ್ಟಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಹೋಟೆಲ್ ವ್ಯವಹಾರ ಮಾಡಿಕೊಂಡಿದ್ದ ಅಮರ್ ಶೆಟ್ಟಿ, ಆಗಸ್ಟ್ 13ರಂದು ಕೆ.ಪಿ. ಅಗ್ರಹಾರದ ಸಂಬಂಧಿಕರ ಮನೆಗೆ ಹೋಗಿದ್ದ ಸಂದರ್ಭ ಮೈಬಿಸಿ ಇರುವುದನ್ನು […]

ಇಂಜೆಕ್ಷನ್ ಅಡ್ಡ ಪರಿಣಾಮ- ಚಿಕಿತ್ಸೆ ಫಲಿಸದೇ ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉದ್ಯಾನ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ನಿಲ್ಲಿಸಿದ್ದ ಉದ್ಯಾನ್ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಶನಿವಾರದಂದು ಬೆಳಗ್ಗೆ ಸಂಭವಿಸಿದೆ. ಮುಂಬೈಯಿಂದ ಬಂದಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲು ಇಂದು ಬೆಳಗ್ಗೆ 6 ಗಂಟೆಗೆ ಕೆಎಸ್ಆರ್ ರೈಲು ನಿಲ್ದಾಣಕ್ಕೆ ಆಗಮಿಸಿದ್ದು, ಪ್ಲಾಟ್ ಫಾರ್ಮ್ 4ರಲ್ಲಿ ನಿಂತಿತ್ತು. 7:30ರ ಸುಮಾರಿಗೆ ತಾಂತ್ರಿಕ ಸಮಸ್ಯೆಯಿಂದಾಗಿ ರೈಲ್ವೇ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೆಂಕಿ ರೈಲಿನ ಎರಡು ಕೋಚ್

ಉದ್ಯಾನ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ BMTC ಬಸ್ – ಬಾಲಕಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.17. BMTC ಬಸ್ ಹರಿದು 4ರ ಹರೆಯದ ಬಾಲಕಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತ ಬಾಲಕಿಯನ್ನು ಪೂರ್ವಿ ರಾವ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗಳನ್ನು ಶಾಲೆಗೆ ಬಿಡಲೆಂದು ತಂದೆ ಪ್ರಸನ್ನ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದಾಗ ಮುಖ್ಯರಸ್ತೆಯ ಬಳಿ ವೇಗವಾಗಿ ಬಂದ ಬಿಎಂಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ಈ ವೇಳೆ ಪ್ರಸನ್ನ ಅವರು ಎಡಬದಿಗೆ

ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ BMTC ಬಸ್ – ಬಾಲಕಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರ್ನಾಟಕದಲ್ಲಿ ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.15. ಕರ್ನಾಟಕದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನುಷ್ಠಾನವನ್ನು ರದ್ದು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ. ಕೆಪಿಸಿಸಿ ಸರ್ವಸದಸ್ಯರ ಸಭೆಯಲ್ಲಿ ಮಾತನಾಡಿದ ಹಿರಿಯ ನಾಯಕ ರೆಹಮಾನ್ ಖಾನ್, ಆರ್‌ಎಸ್‍ಎಸ್ ಕಾರ್ಯಸೂಚಿಯ ಭಾಗವಾಗಿರುವ ಎನ್‍ಇಪಿಯನ್ನು ರಾಜ್ಯದಲ್ಲಿ ಕೈಬಿಡಬೇಕು ಎಂದು ಆಗ್ರಹಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಮುಂದಿನ ವರ್ಷದಿಂದ ಎನ್‍ಇಪಿ ರದ್ದು ಮಾಡುತ್ತೇವೆ. ಸಂವಿಧಾನಕ್ಕೆ ಪೂರಕವಾದ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತೇವೆ ಎಂದರು ಎನ್ನಲಾಗಿದೆ. ಎನ್‍ಇಪಿ ಗೆ

ಕರ್ನಾಟಕದಲ್ಲಿ ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು – ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ – ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಲು ಅನುಮೋದನೆ ನೀಡಿದೆ. ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರವು, ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿಯ ತಿದ್ದುಪಡಿ ಹಾಗೂ ಹೆಚ್ಚುವರಿಗೆ ಫಲಾನುಭವಿಗಳ ಹೆಸರನ್ನು ಸೇರ್ಪಡೆ ಮಾಡಲು ಅನುಮೋದನೆಯನ್ನು ನೀಡಲಾಗಿದೆ. ಮುಂದುವರೆದು ಮುಂದಿನ ಆದೇಶದವರೆಗೆ ಯಾವುದೇ ಹೊಸ ಪಡಿತರ ಚೀಟಿಯನ್ನು ಮಂಜೂರು ಮಾಡದಂತೆ ನಿರ್ದೇಶಿಸಿದೆ.

ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ – ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ Read More »

ಕರ್ನಾಟಕ

‘ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೂ ತಿಂಗಳಿಗೆ 5 ಸಾವಿರ ರೂ.ಸೌಲಭ್ಯ’ – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಅಥಣಿ, ಆ.12. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿ ಕುಟುಂಬಕ್ಕೆ ಮಾಸಿಕ ಐದು ಸಾವಿರ ರೂ. ಲಭಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಶಕ್ತಿ ಯೋಜನೆಯಡಿ ಇದುವರೆಗೆ 35 ಕೋಟಿ ಮಹಿಳೆಯರು ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರಿಂದ ಸರ್ಕಾರದ ಆದಾಯ ಕೂಡ ಹೆಚ್ಚಾಗಲಿದೆ ಎಂದರು. ಇನ್ನು ರಾಜ್ಯದ 1.30 ಕೋಟಿಗೂ ಅಧಿಕ ಕುಟುಂಬಗಳಿಗೆ

‘ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೂ ತಿಂಗಳಿಗೆ 5 ಸಾವಿರ ರೂ.ಸೌಲಭ್ಯ’ – ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ನಾಪತ್ತೆಯಾಗಿದ್ದ ಯುವತಿಯೊಬ್ಬಳು ಮನೆಯ ಹೊರ ಆವರಣದಲ್ಲೇ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ಮಹಾನಂದಾ (21) ಎಂದು ಗುರುತಿಸಲಾಗಿದೆ. ಮೃತ ಯುವತಿ ಹಾಗೂ ಆಕೆಯ ಅಕ್ಕ ಕಳೆದ 3 ಮೂರು ವರ್ಷಗಳಿಂದ ಮಹದೇವಪುರದ ಮಹೇಶ್ವರಿ ನಗರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಇಲ್ಲಿನ ಖಾಸಗಿ ಪೆಟ್ರೋಲ್ ಬಂಕ್ ನಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದರು. ಈ ಕುರಿತು ಯುವತಿಯ ಸಹೋದರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮನೆಯ ಹೊರ ಆವರಣದಲ್ಲಿ ಮಹಾನಂದಾ ಮೃತದೇಹ ಪತ್ತೆಯಾಗಿದೆ.

ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನೆ ದಂತ ಮಾರಾಟಕ್ಕೆ ಯತ್ನ – ಓರ್ವನ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. 7.42 ಕೆ.ಜಿ ತೂಕದ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನ ನಡೆಸಿದ್ದ ಆರೋಪಿಯನ್ನು ಆರ್‌ಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಜೆಸಿ ನಗರದ ಶ್ರೀಶೈಲ (25) ಬಂಧಿತ ಆರೋಪಿಯಾಗಿದ್ದಾನೆ. 7.42 ಕೆಜಿ ತೂಕದ ಐದು ಆನೆ ದಂತದ ತುಂಡುಗಳನ್ನು ಜಪ್ತಿ ಮಾಡಲಾಗಿದೆ. ಯಶವಂತಪುರ ಕೈಗಾರಿಕಾ ಪ್ರದೇಶದ ಉಲ್ಲಾಸ್ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನ ನಡೆಸುತ್ತಿದ್ದಾನೆಂಬ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಈ

ಆನೆ ದಂತ ಮಾರಾಟಕ್ಕೆ ಯತ್ನ – ಓರ್ವನ ಬಂಧನ Read More »

ಕರ್ನಾಟಕ

ರಾಜ್ಯದ 1,695 ಅನಧಿಕೃತ ಶಾಲೆಗಳನ್ನು ಬಂದ್ ಮಾಡಲಾಗುವುದು – ಶಿಕ್ಷಣ ಸಚಿವ ಮಧು ಬಂಗಾರಪ್ಪ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ರಾಜ್ಯಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿದ್ದು, ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವನ್ನು ನೀಡಬೇಕಿದೆ. ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚಲಾಗುತ್ತದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಧಿಕೃತ ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ. ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರಕಾರದ

ರಾಜ್ಯದ 1,695 ಅನಧಿಕೃತ ಶಾಲೆಗಳನ್ನು ಬಂದ್ ಮಾಡಲಾಗುವುದು – ಶಿಕ್ಷಣ ಸಚಿವ ಮಧು ಬಂಗಾರಪ್ಪ Read More »

ಕರ್ನಾಟಕ

ಶ್ರೀಗಂಧ ಕದಿಯಲು ಬಂದ ಕಳ್ಳರ ಯತ್ನ ವಿಫಲ – ಇಬ್ಬರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ರಾಜಾಜಿನಗರ 1ನೇ ಎನ್ ಬ್ಲಾಕ್‌ ನಲ್ಲಿರುವ ಬಿಡಬ್ಲ್ಯೂ ಎಸ್‌ಎಸ್‌ಬಿ ಕ್ವಾರ್ಟರ್ಸ್‌ ನ ಆವರಣದಿಂದ ಬೆಲೆ ಬಾಳುವ ಶ್ರೀಗಂಧದ ಮರ ಕದಿಯಲು ಕೆಲವು ಕಳ್ಳರು ಮಾಡಿದ ಪ್ರಯತ್ನವನ್ನು ಬೀದಿ ನಾಯಿಗಳು ವಿಫಲಗೊಳಿಸಿವೆ. ನಾಯಿಗಳು ನಿರಂತರವಾಗಿ ಬೊಗಳುತ್ತಿದ್ದರಿಂದ ನಿವಾಸಿಗಳು ಎಚ್ಚೆತ್ತಿದ್ದಾರೆ. ಬೊಗಳುವ ಸದ್ದು ಕೇಳಿದ ನಿವಾಸಿಗಳು ಮರಗಳತ್ತ ತೆರಳಿ ಐವರಲ್ಲಿ ಇಬ್ಬರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ BWSSB ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದೂರು ದಾಖಲಿಸಿದ್ದಾರೆ. ಪೊಲೀಸರು ಕರ್ನಾಟಕ ಅರಣ್ಯ ಕಾಯ್ದೆಯಡಿ ಐಪಿಸಿಯ ಇತರ

ಶ್ರೀಗಂಧ ಕದಿಯಲು ಬಂದ ಕಳ್ಳರ ಯತ್ನ ವಿಫಲ – ಇಬ್ಬರ ಬಂಧನ Read More »

ಕರ್ನಾಟಕ
Scroll to Top