Bangalore

ರೈತರಿಗೆ ಸಹಾಯವಾಗಲು ಹಾಲಿನ ದರ ಏರಿಕೆ ಮಾಡಿದ್ದೇವೆ – ಡಿ.ಕೆ ಶಿವಕುಮಾರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ರೈತರ ಕಷ್ಟ ಕಾರ್ಪಣ್ಯಗಳನ್ನು ಮನಗಂಡು ಆ ದೃಷ್ಟಿಯಿಂದ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಂದಿನಿ ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ನಾನು ಮೂಲತಃ ಒಬ್ಬ ರೈತನಾಗಿ ನನಗೆ ಹೈನುಗಾರಿಕೆ ರೈತರ ಕಷ್ಟಗಳು ಅರ್ಥವಾಗುತ್ತಿದೆ. ಹಾಲಿನ ಬೆಲೆಯನ್ನು ಲೀಟರ್ ಗೆ 5ರೂ ಏರಿಕೆ ಮಾಡಬೇಕು ಎಂಬುದು ಬೇಡಿಕೆ ಬಂದಿತ್ತು. ಕೊನೆಗೆ ಮುಖ್ಯಮಂತ್ರಿಗಳು ಮಾತುಕತೆ ನಡೆಸಿ 3 ರೂಪಾಯಿ ಏರಿಕೆ ಮಾಡಲು ನಿರ್ಧಾರ ಕೈಗೊಂಡರು ಎನ್ನಲಾಗಿದೆ.

ರೈತರಿಗೆ ಸಹಾಯವಾಗಲು ಹಾಲಿನ ದರ ಏರಿಕೆ ಮಾಡಿದ್ದೇವೆ – ಡಿ.ಕೆ ಶಿವಕುಮಾರ್ Read More »

ಕರ್ನಾಟಕ

ಬೆಂಗಳೂರು, ಮಂಗಳೂರಲ್ಲಿ ಸ್ಫೋಟಕ್ಕೆ ಸಂಚು – ಉಗ್ರರಿಗೆ ₹15 ಲಕ್ಷ ಕೊಟ್ಟ ವಿದೇಶಿಯರು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ಬೆಂಗಳೂರು, ಮಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಬಾಂಬ್ ಸ್ಫೋಟಿಸಿ ಜನರನ್ನು ಕೊಲ್ಲಲು ಸಂಚು ರೂಪಿಸಿದ ಆರೋಪ ಹೊತ್ತಿರುವ ಶಂಕಿತ ಉಗ್ರರಿಗೆ ಕೆಲ ವಿದೇಶಿಯರು ₹ 15 ಲಕ್ಷ ನೀಡಿರುವ ಮಾಹಿತಿಯನ್ನು ಸಿಸಿಬಿ ಪೊಲೀಸರು ಪುರಾವೆ ಸಮೇತ ಪತ್ತೆ ಮಾಡಿದ್ದಾರೆ. ದುಬೈ ಹಾಗೂ ಇತರೆ ದೇಶಗಳಲ್ಲಿರುವ ವಿದೇಶಿಯರು, ಪ್ರಕರಣದ ಪ್ರಮುಖ ಆರೋಪಿ ಜುನೇದ್ ಅಹಮ್ಮದ್ ಮೂಲಕ ಶಂಕಿತರ ಖಾತೆಗಳಿಗೆ ಹಣ ಜಮೆ ಮಾಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ಬ್ಯಾಂಕ್‌ ಖಾತೆಗಳ ವಿವರ ಸಂಗ್ರಹಿಸಿರುವ ಸಿಸಿಬಿ

ಬೆಂಗಳೂರು, ಮಂಗಳೂರಲ್ಲಿ ಸ್ಫೋಟಕ್ಕೆ ಸಂಚು – ಉಗ್ರರಿಗೆ ₹15 ಲಕ್ಷ ಕೊಟ್ಟ ವಿದೇಶಿಯರು Read More »

ಕರ್ನಾಟಕ

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ – ಆ.17ಕ್ಕೆ ‘ಗೃಹ ಲಕ್ಷ್ಮಿ’ ಯೋಜನೆಯ 2000ರೂ ಜಮಾ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹ ಲಕ್ಷ್ಮಿ ಯೋಜನೆ ಕೂಡ ಒಂದಾಗಿದ್ದು, ಈ ಯೋಜನೆಯ ಅಡಿಯಲ್ಲಿ ರಾಜ್ಯದ ಪ್ರತಿ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2000ರೂ ಅನ್ನು ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಹಿಸಲಿದೆ ಎಂದು ವರದಿ ತಿಳಿಸಿದೆ. ಯೋಜನೆಯ ಉದ್ಘಾಟನೆಯನ್ನು ಆಗಸ್ಟ್ 17ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೆರವೇರಿಸಲಿದ್ದಾರೆ. ರಾಜ್ಯದ ಯಜಮಾನಿ ಮಹಿಳೆಯರು ಬಹು ನಿರೀಕ್ಷೆಯಿಂದ ನೋಡುತ್ತಿರುವಂತ ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮಾ ಆಗಲಿದೆ ಎನ್ನಲಾಗಿದೆ. ಮುಖ್ಯ ಮಂತ್ರಿ

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ – ಆ.17ಕ್ಕೆ ‘ಗೃಹ ಲಕ್ಷ್ಮಿ’ ಯೋಜನೆಯ 2000ರೂ ಜಮಾ Read More »

ಕರ್ನಾಟಕ

ರಾಜ್ಯದ ಜನತೆಗೆ ಗುಡ್ ನ್ಯೂಸ್..! – ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಮುಹೂರ್ತ ಫಿಕ್ಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ರಾಜ್ಯದ ಜನರು ಬಹು ನಿರೀಕ್ಷೆಯಿಂದ ನೋಡುತ್ತಿರುವಂತ ಗೃಹ ಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗೆ ಉದ್ಘಾಟನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್ 5ರಂದು ಗೃಹ ಜ್ಯೋತಿ ಹಾಗೂ ಆಗಸ್ಟ್ 17ರಂದು ಗೃಹಲಕ್ಷ್ಮಿ ಯೋಜನೆಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದು ವರದಿಯಾಗಿದೆ. ರಾಜ್ಯ ಸರ್ಕಾರದಿಂದ ಅಧಿಕೃತ ಮಾಹಿತಿ ಹೊರಬಿದ್ದಿದ್ದು, ಜುಲೈ.18ರಿಂದ ಅರ್ಜಿ ಸಲ್ಲಿಕೆ ಆರಂಭಗೊಂಡ ಗೃಹ ಜ್ಯೋತಿ ಹಾಗೂ ಜುಲೈ.21ರಿಂದ ನೋಂದಣಿ ಆರಂಭಗೊಂಡು ಗೃಹ ಲಕ್ಷ್ಮಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆಯನ್ನು

ರಾಜ್ಯದ ಜನತೆಗೆ ಗುಡ್ ನ್ಯೂಸ್..! – ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಮುಹೂರ್ತ ಫಿಕ್ಸ್ Read More »

ಕರ್ನಾಟಕ

ಸಿಬ್ಬಂದಿಯ ನಿರ್ಲಕ್ಯದಿಂದ ವಿಮಾನ ಮಿಸ್ ಮಾಡಿಕೊಂಡ ರಾಜ್ಯಪಾಲ ಗೆಹ್ಲೋಟೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟೆ ಅವರನ್ನೇ ಬಿಟ್ಟು ವಿಮಾನ ಹಾರಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳಬೇಕಿದ್ದ ರಾಜ್ಯಪಾಲರು, ಸಿಬ್ಬಂದಿಯ ನಿರ್ಲಕ್ಯದಿಂದ ವಿಮಾನವನ್ನು ಮಿಸ್ ಮಾಡಿಕೊಂಡಿದ್ದಾರೆ. ಥಾವರ್ ಚಂದ್ ಗೆಹ್ಲೋಟ್ ಅವರು ಹೈದರಾಬಾದ್ ಗೆ ತೆರಳಲು ಕೇಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿದ್ದು, ಇನ್ನೂ ಏರ್ ಏಷ್ಯಾ ವಿಮಾನ ಹೊರಡಲು ಸಮಯ ಇದೆ ಎಂದು ಸಿಬ್ಬಂದಿ ರಾಜ್ಯಪಾಲರನ್ನು ಕರೆದುಕೊಂಡು ಹೋಗಿ ವಿಐಪಿ ಲಾಂಜ್ ನಲ್ಲಿ ಕೂರಿಸಿದ್ದು, ಟೈಮ್ ಆಗಿರುವುದು

ಸಿಬ್ಬಂದಿಯ ನಿರ್ಲಕ್ಯದಿಂದ ವಿಮಾನ ಮಿಸ್ ಮಾಡಿಕೊಂಡ ರಾಜ್ಯಪಾಲ ಗೆಹ್ಲೋಟೆ Read More »

ಕರ್ನಾಟಕ

ಉಡಾವಣೆಗೆ ಸಿದ್ಧವಾದ ವಿಶ್ವದ ಅತಿ ದೊಡ್ಡ ಖಾಸಗಿ ಉಪಗ್ರಹ ಜುಪಿಟರ್-3

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ವಿಶ್ವದ ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ದೊಡ್ಡ ಬೆಳವಣಿಗೆಯಾಗಿದೆ. ಪ್ರಪಂಚದ ಅತಿ ದೊಡ್ಡ ಖಾಸಗಿ ಸಂವಹನ ಉಪಗ್ರಹ ಜುಪಿಟರ್ 3 ಇಂದು ಹಾರಾಟ ನಡೆಸಲಿದೆ. ಬಿಲಿಯನೇರ್ ಎಲಾನ್ ಮಸ್ಕ್ ಅವರ ಬಾಹ್ಯಾಕಾಶ ವಿಭಾಗದ ಕಂಪನಿ SpaceX ಮಾಡಲಿದೆ. Space.com ಪ್ರಕಾರ , ಫಾಲ್ಕನ್ ಹೆವಿ ರಾಕೆಟ್ ಮ್ಯಾಕ್ಸರ್ ಟೆಕ್ನಾಲಜೀಸ್‌ನ ಅತಿದೊಡ್ಡ ಉಪಗ್ರಹವಾದ ಜುಪಿಟರ್ 3 ಅನ್ನು ಉಡಾವಣೆ ಮಾಡಲಾಗುತ್ತದೆ. ಜುಪಿಟರ್ 3 ಉಪಗ್ರಹವನ್ನು ಉತ್ತರ ಮತ್ತು ದಕ್ಷಿಣ ಅಮೆರಿಕಾದಲ್ಲಿನ ಗ್ರಾಹಕರಿಗೆ ಇಂಟರ್ನೆಟ್ ಸೇವೆಗಳನ್ನು

ಉಡಾವಣೆಗೆ ಸಿದ್ಧವಾದ ವಿಶ್ವದ ಅತಿ ದೊಡ್ಡ ಖಾಸಗಿ ಉಪಗ್ರಹ ಜುಪಿಟರ್-3 Read More »

ಕರ್ನಾಟಕ

ಮಠ, ದೇವಸ್ಥಾನಗಳಿಗೆ ಸಿಎಂ ಸಿದ್ದರಾಮಯ್ಯ 20 ಕೋಟಿ ರೂ. ಅನುದಾನ ಘೋಷಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. 2023-24 ನೇ ಸಾಲಿನ ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ ಮಠ, ದೇವಸ್ಥಾನಗಳಿಗೆ 20 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ದೇವಸ್ಥಾನಗಳ ಜೊತೆಗೆ ಮಠಗಳಿಗೂ ಅನುದಾನ ನೀಡಲು ಮುಂದಾಗಿದ್ದಾರೆ. ತಮ್ಮ ಹಿಂದಿನ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಮಠಗಳಿಗೆ ಅನುದಾನ ನೀಡುತ್ತಿರಲಿಲ್ಲ. ಈ ಬಾರಿ ಮಠಗಳಿಗೂ ಅನುದಾನ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ರಾಜ್ಯದ ಪ್ರಮುಖ ಮಠಗಳಾದ ಆದಿಚುಂಚನಗಿರಿ, ಸಿದ್ದಗಂಗಾ ಹಾಗೂ ಕಾಗಿನೆಲೆ ಕನಕ

ಮಠ, ದೇವಸ್ಥಾನಗಳಿಗೆ ಸಿಎಂ ಸಿದ್ದರಾಮಯ್ಯ 20 ಕೋಟಿ ರೂ. ಅನುದಾನ ಘೋಷಣೆ Read More »

ಕರ್ನಾಟಕ

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ವಿವಾಹಿತ ಮಹಿಳೆಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಐಶ್ವರ್ಯ ಎಂದು ಗುರುತಿಸಲಾಗಿದೆ. ಕಬ್ಬನ್ ಪೇಟೆಯ 2ನೇ ಮುಖ್ಯರಸ್ತೆಯಲ್ಲಿರುವ ಮನೆಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಐಡಿ ಕೇಳಿದ್ದಕ್ಕೆ ಕಂಡಕ್ಟರ್ ಗೆ ಅವಾಚ್ಯ ಶಬ್ದಗಳಿಂದ ದಬಾಯಿಸಿದ ಯುವತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ಬನಶಂಕರಿ ಡಿಪೋಗೆ ಸೇರಿದ ಬಿಎಂಟಿಸಿ ಬಸ್ ನಲ್ಲಿ ಟಿಕೇಟ್ ತೆಗೆದುಕೊಳ್ಳಿ ಎಂದಿದ್ದಕ್ಕೆ ಯುವತಿ ಕಂಡಕ್ಟರ್ ಜೊತೆ ಜಗಳಕ್ಕಿಳಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಯುವತಿ ತಾನು ಸರ್ಕಾರಿ ಉದ್ಯೋಗಿ ಎಂದು ಹೇಳಿಕೊಂಡಿದ್ದು, ಟಿಕೆಟ್ ತೆಗೆದುಕೊಳ್ಳಲು ನಿರಾಕರಿಸಿ ಕಂಡಕ್ಷರ್ ಬಳಿ ಜಗಳವಾಡಿದ್ದಾಳೆ ಎಂದು ತಿಳಿದುಬಂದಿದೆ. ತನ್ ಬಳಿ ಸರ್ಕಾರದ ಐಡಿ ಕಾರ್ಡ್ ಇದ್ದು, ಏನ್ ಮಾಡ್ತಿಯಾ ಮಾಡ್ಕೋ ಎಂದು ದಬಾಯಿಸಿದ್ದಾಳೆ ಎನ್ನಲಾಗಿದೆ. ಗುರುತಿನ ಚೀಟಿ ತೋರಿಸಿ ಎಂದಿದ್ದಕ್ಕೆ ಅವ್ಯಾಚ ಶಬ್ದಗಳಿಂದ ನಿಂದಿಸಿದ್ದಾಳೆ.  

ಐಡಿ ಕೇಳಿದ್ದಕ್ಕೆ ಕಂಡಕ್ಟರ್ ಗೆ ಅವಾಚ್ಯ ಶಬ್ದಗಳಿಂದ ದಬಾಯಿಸಿದ ಯುವತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ – ಐವರು ಐಎಎಸ್, 25ಕೆಎಎಸ್ ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ರಾಜ್ಯ ಸರ್ಕಾರದಿಂದ ಆಡಳಿತ ಕೇಂದ್ರಕ್ಕೆ ಚುರುಕು ಮುಟ್ಟಿಸೋ ಕುರಿತಾಗಿ, ಐವರು ಐಎಎಸ್ ಹಾಗೂ 25 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ ಎನ್ನಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ದಾವಣಗೆರೆ ಜಿಲ್ಲಾಧಿಕಾರಿಯಾಗಿ ಡಾ.ಎಂ.ವಿ. ವೆಂಕಟೇಶ್, ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಗಂಗೂಭಾಯಿ ರಮೇಶ್ ಮಾನಕರ್, ಕೃಷಿ ಮಾರುಕಟ್ಟೆ ಇಲಾಖೆಯ ನಿರ್ದೇಶಕರಾಗಿ ಜಿ.ಎಂ ಗಂಗಾಧರ ಸ್ವಾಮಿ, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೆಶಕರನ್ನಾಗಿ ಕೆ.ನಾಗೇಂದ್ರ ಪ್ರಸಾದ್ ಹಾಗೂ

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ – ಐವರು ಐಎಎಸ್, 25ಕೆಎಎಸ್ ಅಧಿಕಾರಿಗಳ ವರ್ಗಾವಣೆ Read More »

ಕರ್ನಾಟಕ
Scroll to Top