Bangalore

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ವಿರುದ್ದ ಕೋರ್ಟ್ ಮೆಟ್ಟಿಲೇರಿದ ಬಿಜೆಪಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 08. ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಷರತ್ತು ಹಾಕಿ ಜನರಿಗೆ ಮೋಸ ಮಾಡಿದೆ ಎಂದು ಆರೋಪಿಸಿದ ಬಿಜೆಪಿಯು ಇದೀಗ ಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದೆ. ಕಾಂಗ್ರೆಸ್ ಸರಕಾರವು ಜನತೆಗೆ ಉಚಿತ ಆಮಿಷ ಕೊಟ್ಟು ಅಧಿಕಾರಕ್ಕೆ ಬಂದಿದೆ. ತೆರಿಗೆ ಹಣ ಖರ್ಚು ಮಾಡಿ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಸರಿಯಾಗಿ ತಲುಪಿಸದ ಕಾರಣ ಅವುಗಳನ್ನು ರದ್ದುಗೊಳಿಸಬೇಕು. ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಕಾಂಗ್ರೆಸ್‌ ನಾಯಕರ ವಿರುದ್ಧ […]

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ವಿರುದ್ದ ಕೋರ್ಟ್ ಮೆಟ್ಟಿಲೇರಿದ ಬಿಜೆಪಿ Read More »

ಕರ್ನಾಟಕ

‘ಬಾಡಿಗೆದಾರರಿಗೂ ಉಚಿತ ವಿದ್ಯುತ್‌’ ➤ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba@gmail.comಬೆಂಗಳೂರು ,( ಜೂ 06) ರಾಜ್ಯದಲ್ಲಿ ಬಾಡಿಗೆದಾರರು ಸೇರಿದಂತೆ ಎಲ್ಲರಿಗೂ 200 ಯೂನಿಟ್ವರೆಗೆ ಉಚಿತ  ವಿದ್ಯುತ್ ನೀಡುತ್ತಿರುವುದಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ, ಕೆಲವರು50, ಇನ್ನು ಕೆಲವರು 70, 150, 200ಯೂನಿಟ್‌ ವಿದ್ಯುತ್‌ ಬಳಕೆ ಮಾಡುತ್ತಿರಬಹುದು. ಇದರ ವ್ಯಾಪ್ತಿಯಲ್ಲಿ ಬರುವ ಯಾವುದೇ ಗ್ರಾಹಕರು ವಿದ್ಯುತ್‌ ದರವನ್ನು ಪಾವತಿಸುವ ಅಗತ್ಯವಿಲ್ಲ. ಆದರೆ, ಈ ಉಚಿತ ವಿದ್ಯುತ್‌ ಯೋಜನೆ ವಾಣಿಜ್ಯ ಬಳಕೆದಾರರಿಗೆ ಅನ್ವಯವಾಗುವುದಿಲ್ಲ. ಹೀಗಾಗಿ, ಬಾಡಿಗೆದಾರರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ. ಇಷ್ಟೆಲ್ಲಾ ಆದರೂ ಒಂದೇ ಮಾಲೀಕರ ಹೆಸರಿನಲ್ಲಿ

‘ಬಾಡಿಗೆದಾರರಿಗೂ ಉಚಿತ ವಿದ್ಯುತ್‌’ ➤ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಬಾಡಿಗೆ ದಾರರಿಗೂ ವಿದ್ಯುತ್ ಉಚಿತ ➤ಇಂಧನ ಸಚಿವರಿಂದ ಸ್ಪಷ್ಟನೆ

(ನ್ಯೂಸ್ ಕಡಬ)newskadaba@gmail.com ಬೆಂಗಳೂರು:(ಜೂ.06) ಇಂಧನ ಸಚಿವರಿಂದ ಸ್ಪಷ್ಟನೆ ಬಾಡಿಗೆ ದಾರರಿಗು 200ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಬಾಡಿಗೆದಾರರು ಅರ್ಜಿ ಸಲ್ಲಿಸುವಾಗ ಎಷ್ಟು ವರ್ಷದಿಂದ ಬಾಡಿಗೆ ಮನೆಯಲ್ಲಿ ಇದ್ದೇವೆ ಎಂಬ ದಾಖಲೆಗಳು ಇರಬೇಕು. ಮನೆ ಮಾಲೀಕ ತೆರಿಗೆ ಕಟ್ಟಿರಬೇಕು ಹಾಗೂ ಕರೆಂಟ್‌ ಬಿಲ್‌ ಮತ್ತು ಅಗ್ರಿಮೆಂಟ್‌ ಇರಬೇಕು.ಈ ಎಲ್ಲ ಷರತ್ತುಗಳು ಅನ್ವಯ ವಾಗುತ್ತದೆ. ಪ್ರಯೋಜನವನ್ನು  ಪಡೆಯಲು ಇಚ್ಚಿಸುವ ಗ್ರಾಹಕರು ‘ಸೇವಾ ಸಿಂಧು’ ಮೂಲಕ ಅರ್ಜಿ ಸಲ್ಲಿಸಬೇಕು. 2022-2023ರ ಹಣಕಾಸು

ಬಾಡಿಗೆ ದಾರರಿಗೂ ವಿದ್ಯುತ್ ಉಚಿತ ➤ಇಂಧನ ಸಚಿವರಿಂದ ಸ್ಪಷ್ಟನೆ Read More »

ಕರ್ನಾಟಕ

ಒಂದೇ ವರ್ಷದಲ್ಲಿ 2ನೇ ಬಾರಿ ಕುಸಿದುಬಿದ್ದ ಬೈಯ್ಯಪ್ಪನಹಳ್ಳಿ ರೈಲ್ವೇ ಟರ್ಮಿನಲ್ ಮೇಲ್ಛಾವಣಿ!

(ನ್ಯೂಸ್ ಕಡಬ)newskadaba @gmail.com , ಬೆಂಗಳೂರು: ಜೂನ್ 1, ಲೋಕಾರ್ಪಣೆಯಾದ ಒಂದೇ ವರ್ಷದೊಳಗೆ ಎರಡನೇ ಬಾರಿ ಬೈಯ್ಯಪ್ಪನಹಳ್ಳಿ ರೈಲ್ವೇ ಟರ್ಮಿನಲ್ ಮೇಲ್ಛಾವಣಿ ಕುಸಿದಿದೆ. ಅತ್ಯಾಧುನಿಕ ವ್ಯವಸ್ಥೆಗಳೊಂದಿಗೆ ಉದ್ಘಾಟನೆಯಾದ ಬೈಯಪ್ಪನಹಳ್ಳಿಯ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ನ ಛಾವಣಿ ಒಂದೇ ವರ್ಷಕ್ಕೆ ಕುಸಿದು ಬಿದ್ದಿದ್ದು, ಭಾರಿ ಅಪಘಾತ ತಪ್ಪಿದೆ.ಟರ್ಮಿನಲ್​ನಲ್ಲಿ ಮಂಗಳವಾರ ಮಧ್ಯಾಹ್ನ ಗಾಳಿ, ಮಳೆಯಿಂದಾಗಿ ಈ ಘಟನೆ ನಡೆದಿದೆ. ಛಾವಣಿ ಕೆಳಗಿದ್ದ ಪ್ರಯಾಣಿಕರು ಪಾರಾಗಿದ್ದಾರೆ ಎಂದು ವರದಿಯಾಗಿದೆ.    

ಒಂದೇ ವರ್ಷದಲ್ಲಿ 2ನೇ ಬಾರಿ ಕುಸಿದುಬಿದ್ದ ಬೈಯ್ಯಪ್ಪನಹಳ್ಳಿ ರೈಲ್ವೇ ಟರ್ಮಿನಲ್ ಮೇಲ್ಛಾವಣಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ! ➤ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಘೋಷಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.31. ಸರ್ಕಾರಿ ಬಸ್ ​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್​ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ನಾಲ್ಕು ನಿಗಮಗಳ ವ್ಯವಸ್ಥಾಪಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.  

ಸರಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ! ➤ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಘೋಷಣೆ Read More »

ಕರಾವಳಿ

ಹಾಲು ಉತ್ಪಾದಕರಿಗೆ ಶಾಕ್➤ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿನ ದರ ಕಡಿತ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.31 ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿನ ದರ ಕಡಿತ ಮಾಡಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಹಾಲು ಖರೀದಿ ದರದಲ್ಲಿ ಲೀಟರ್ ಗೆ 1.50 ರೂ. ಕಡಿತಗೊಳಿಸಿ ಆದೇಶ ಹೊರಡಿಸಿದ್ದು, ಜೂ. 1 ರಿಂದ ಪರಿಷ್ಕೃತ ಆದೇಶ ಜಾರಿಗೆ ಬರುತ್ತದೆ.      

ಹಾಲು ಉತ್ಪಾದಕರಿಗೆ ಶಾಕ್➤ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿನ ದರ ಕಡಿತ.! Read More »

ಕರ್ನಾಟಕ

‘ಕರ್ನಾಟಕದಲ್ಲಿ ಎನ್‌ಇಪಿ ಜಾರಿಗೆ ತರುವುದಿಲ್ಲ’ ➤ ಸತೀಶ್ ಜಾರಕಿಹೊಳಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.31. ಕರ್ನಾಟಕವು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಜಾರಿಗೆ ತರುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಾವು ಯಾವಾಗಲೂ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸುತ್ತೇವೆ. ಇದು ಸಾಮಾನ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಹಾನಿಕಾರಕವಾಗಿದೆ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ ಎಂದರು.  

‘ಕರ್ನಾಟಕದಲ್ಲಿ ಎನ್‌ಇಪಿ ಜಾರಿಗೆ ತರುವುದಿಲ್ಲ’ ➤ ಸತೀಶ್ ಜಾರಕಿಹೊಳಿ Read More »

ಕರ್ನಾಟಕ

ಬೇಸಿಗೆ ರಜೆ ಮುಕ್ತಾಯ➤ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಇಂದಿನಿಂದ ಆರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.31 ಬೇಸಿಗೆ ರಜೆ ಮುಕ್ತಾಯವಾಗಿದ್ದು, ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಆರಂಭವಾಗಲಿವೆ.2023 -24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ಇಂದಿನಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿರಲಿದ್ದು, ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಮೊದಲ ದಿನ ಬಿಸಿಯೂಟದಲ್ಲಿ ಸಿಹಿ ವಿತರಿಸಬೇಕು. ಒಂದೆರಡು ಗಂಟೆ ನಂತರ ಶೈಕ್ಷಣಿಕ ತರಗತಿ ಚಟುವಟಿಕೆ ಆರಂಭಿಸಬೇಕೆಂದು ತಿಳಿಸಲಾಗಿದೆ. ಮಳೆಯಿಂದಾಗಿ ಮಕ್ಕಳು ಶಾಲೆಗೆ ಬರಲಾಗದಿದ್ದರೆ ರಜೆ ಘೋಷಿಸಲು

ಬೇಸಿಗೆ ರಜೆ ಮುಕ್ತಾಯ➤ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಇಂದಿನಿಂದ ಆರಂಭ Read More »

ಕರ್ನಾಟಕ

ವ್ಯಾಗನ್ ಗೆ ತಲೆಕೊಟ್ಟು ಗುತ್ತಿಗೆ ಕಾರ್ಮಿಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.30 ಆರ್ ಪಿಪಿಎಸ್ ವಿದ್ಯುತ್ ಘಟಕಗಳಿಗೆ ಪೂರೈಕೆ ಮಾಡುವ ಕಲ್ಲಿದ್ದಲು ರೇಕ್ ಪೂರೈಕೆ ಮಾಡುವ ವ್ಯಾಗನ್ ಗೆ ತಲೆಕೊಟ್ಟು ಗುತ್ತಿಗೆ ಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಾಗರಾಜ (28) ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆ ಕಾರ್ಮಿಕ ಎಂದು ಗುರುತಿಸಲಾಗಿದೆ.ಕಲ್ಲಿದ್ದಲು ವಿಭಾಗದ ವ್ಯಾಗನ್ 7ರಲ್ಲಿ ಕಲ್ಲಿದ್ದಲು ಸ್ಯಾಂಪಲ್ ತೆಗೆಯುವ ಕೆಲಸ ಮಾಡುತ್ತಿದ್ದರು. ಕೆಲಸಕ್ಕೆ ಬಂದು ಕಲ್ಲಿದ್ದಲು ರೇರ್‌ಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಶಕ್ತಿ ನಗರ ಪೊಲೀಸರು ತಿಳಿಸಿದ್ದಾರೆ.    

ವ್ಯಾಗನ್ ಗೆ ತಲೆಕೊಟ್ಟು ಗುತ್ತಿಗೆ ಕಾರ್ಮಿಕ ಆತ್ಮಹತ್ಯೆ Read More »

ಕರ್ನಾಟಕ

ಪಠ್ಯಪುಸ್ತಕಗಳ ವಿಚಾರದಲ್ಲಿ ಮಾಡಿರುವ ಎಡವಟ್ಟುಗಳನ್ನು ತಿದ್ದುತ್ತೇವೆ➤ಡಾ.ಎಚ್.ಸಿ.ಮಹದೇವಪ್ಪ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.30  ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕಗಳ ವಿಚಾರದಲ್ಲಿ ಮಾಡಿರುವ ಎಡವಟ್ಟುಗಳನ್ನು ನಾವು ತಿದ್ದುತ್ತೇವೆ’ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇತಿಹಾಸ ಪುರುಷರನ್ನೇ ಅವರು ಇತಿಹಾಸ ಪುರುಷರಲ್ಲ ಎಂದು ಹೇಳಿದ್ದಾರೆ. ‘ಅವರು ಬರೆದಿದ್ದೇ ಇತಿಹಾಸವಲ್ಲ. ವಾಸ್ತವವನ್ನು ಪಠ್ಯದಲ್ಲಿ ಸೇರಿಸಲಿದ್ದೇವೆ. ಸತ್ಯ ಅಲ್ಲದ್ದನ್ನು ತೆಗೆದು ಹಾಕುತ್ತೇವೆ’ ಎಂದು ಪ್ರತಿಕ್ರಿಯಿಸಿದರು.    

ಪಠ್ಯಪುಸ್ತಕಗಳ ವಿಚಾರದಲ್ಲಿ ಮಾಡಿರುವ ಎಡವಟ್ಟುಗಳನ್ನು ತಿದ್ದುತ್ತೇವೆ➤ಡಾ.ಎಚ್.ಸಿ.ಮಹದೇವಪ್ಪ Read More »

ಕರ್ನಾಟಕ
Scroll to Top