Bangalore

ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.30 ಬ್ಯಾಟರಾಯನಪುರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ಪಿ. ವೆಂಕಟೇಶ್ (62) ಎಂಬುವವರು ಮೃತಪಟ್ಟಿದ್ದಾರೆ. ದೀಪಾಂಜಲಿನಗರ ಮೆಟ್ರೊ ನಿಲ್ದಾಣ ಬಳಿ ಇರುವ ಮೇಲ್ಸೇತುವೆಯಲ್ಲಿ ಎದುರಿಗೆ ಹೊರಟಿದ್ದ ದ್ವಿಚಕ್ರ ವಾಹನಕ್ಕೆ ವೆಂಕಟೇಶ್ ಅವರ ವಾಹನ ಡಿಕ್ಕಿ ಹೊಡೆದಿತ್ತು. ವಾಹನ ಸಮೇತ ಉರುಳಿಬಿದ್ದಿದ್ದ ವೆಂಕಟೇಶ್ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಚಿಕಿತ್ಸೆಗಾಗಿ ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದರು.ಅಪಘಾತ ಸಂಬಂಧ ಪ್ರಕರಣ […]

ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ➤ ಸವಾರ ಮೃತ್ಯು Read More »

ಕರ್ನಾಟಕ

ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣ➤7 ಆರೋಪಿಗಳ ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.30 ಕಾಂಗ್ರೆಸ್ ಕಾರ್ಯಕರ್ತ ರವಿ ಹತ್ಯೆ ಪ್ರಕರಣ ಸಂಬಂಧ 7 ಮಂದಿ ಆರೋಪಿಗಳನ್ನು ನಂದಿನಿಲೇಔಟ್ ಠಾಣಾ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಲಗ್ಗೆರೆಯ ಪ್ರೇಮನಗರದ ಮಂಜುನಾಥ್ (42), ನ್ಯೂ ರಿಂಗ್ ರಸ್ತೆಯ ನಾಗರಾಜ್(38), ಗೋಪಾಲ್ (35), ಕಿರಣ್ ಕುಮಾರ್ (29), ಚೌಡೇಶ್ವರಿ ನಗರದ ಮಣಿಕಂಠನ್(23), ಕಾರ್ತಿಕ್ (34) ಹಾಗೂ ಬಾಬು (35) ಎಂದು ಗುರ್ತಿಸಲಾಗಿದೆ.    

ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣ➤7 ಆರೋಪಿಗಳ ಅರೆಸ್ಟ್ Read More »

ಕರ್ನಾಟಕ

ಬೆಂಗಳೂರಿನ ನೂತನ ಪೊಲೀಸ್‌ ಆಯುಕ್ತರಾಗಿ ಬಿ.ದಯಾನಂದ್‌ ನೇಮಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.30. ಸರ್ಕಾರ ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಹಿರಿಯ ಪೊಲೀಸ್ ಅಧಿಕಾರಿ ಬಿ ದಯಾನಂದ ಅವರನ್ನು ನೇಮಕ ಮಾಡಿದೆ. ಇಂದು ರಾಜ್ಯ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಬೆಂಗಳೂರು ನಗರದ ಪೊಲೀಸ್ ಕಮಿಷನರ್ ಆಗಿ ಪ್ರತಾಪ ರೆಡ್ಡಿ ಕಾರ್ಯನಿರ್ವಾಹಣೆ ಮಾಡಿದ್ದರು. ಇದೀಗ ಅವರನ್ನು ಡಿಜಿಪಿ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.    

ಬೆಂಗಳೂರಿನ ನೂತನ ಪೊಲೀಸ್‌ ಆಯುಕ್ತರಾಗಿ ಬಿ.ದಯಾನಂದ್‌ ನೇಮಕ Read More »

ಕರ್ನಾಟಕ

ಶಿಕ್ಷಣ ಕ್ಷೇತ್ರ ಹಾಳುಗೆಡವಲು ಅವಕಾಶ ನೀಡುವುದಿಲ್ಲ.!➤ಎನ್‌ಇಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.30 ನೂತನ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರ ಹಾಳುಗೆಡವಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತಿಗಳು ಹಾಗೂ ವಿವಿಧ ಜನಪರ ಸಂಘಟನೆಗಳ ಮುಖಂಡರು ಈ ಕುರಿತಾಗಿ ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಸೌಹಾರ್ದ ಮತ್ತು ಜಾತ್ಯತೀತ ಪರಂಪರೆ ರಕ್ಷಣೆ ವಿಚಾರದಲ್ಲಿ ಯಾವುದೇ ರಾಜೀ ಇಲ್ಲ.ಹೊಸ ಶಿಕ್ಷಣ ನೀತಿಯ ಹೆಸರಲ್ಲಿ ಶಿಕ್ಷಣ ಕ್ಷೇತ್ರವನ್ನು ಹಾಳುಗೆಡವಲು ಅವಕಾಶ ಕೊಡುವುದಿಲ್ಲ ಎಂದಿದ್ದಾರೆ.      

ಶಿಕ್ಷಣ ಕ್ಷೇತ್ರ ಹಾಳುಗೆಡವಲು ಅವಕಾಶ ನೀಡುವುದಿಲ್ಲ.!➤ಎನ್‌ಇಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ Read More »

ಕರ್ನಾಟಕ

ಮುಂಗಾರಿಗೂ ಮುನ್ನವೇ ರಾಜ್ಯದಲ್ಲಿ ವರುಣನ ಅಬ್ಬರ ➤`ಯೆಲ್ಲೋ ಅಲರ್ಟ್’; ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮೇ ,30. ರಾಜ್ಯದಲ್ಲಿ ಮುಂಗಾರಿಗೂ ಮುನ್ನವೇ ವರುಣನ ಅಬ್ಬರ ಜೋರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಇನ್ನೂ 3 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ ಎನ್ನಲಾಗಿದೆ.    

ಮುಂಗಾರಿಗೂ ಮುನ್ನವೇ ರಾಜ್ಯದಲ್ಲಿ ವರುಣನ ಅಬ್ಬರ ➤`ಯೆಲ್ಲೋ ಅಲರ್ಟ್’; ಹವಾಮಾನ ಇಲಾಖೆ ಮುನ್ಸೂಚನೆ Read More »

ಕರ್ನಾಟಕ

ರಾಜ್ಯದ ಜನತೆಗೆ ಶಾಕ್ ನೀಡಿದ ಇಂಧನ ಇಲಾಖೆ ➤ಕರೆಂಟ್ ಬಿಲ್ ಕಟ್ಟದಿದ್ದರೆ ಕನೆಕ್ಷನ್ ಕಟ್.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.30 ಕರೆಂಟ್ ಬಿಲ್ ಕಟ್ಟದ ಜನತೆಗೆ ಇಂಧನ ಇಲಾಖೆ ಶಾಕ್ ನೀಡಿದ್ದು, ಕರೆಂಟ್ ಬಿಲ್ ಕಟ್ಟದಿದ್ದರೆ ಕನೆಕ್ಷನ್ ಕಟ್ ಮಾಡುವಂತೆ ಎಲ್ಲಾ ಎಸ್ಕಾಂಗಳಿಗೆ ಖಡಕ್ ಸೂಚನೆ ನೀಡಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಗೃಹಜ್ಯೋತಿ ಯೋಜನೆ ಇನ್ನೂ ಜಾರಿಯಾಗಿಲ್ಲ.ಆದರೆ ಜನರು ಕರೆಂಟ್ ಬಿಲ್ ಕಟ್ಟಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂಧನ ಇಲಾಖೆ ಕರೆಂಟ್ ಬಿಲ್ ಕಟ್ಟದಿದ್ದರೆ ಕನೆಕ್ಷನ್ ಕಟ್ ಮಾಡುವಂತೆ ರಾಜ್ಯದ ಎಲ್ಲಾ ಎಸ್ಕಾಂಗಳಿಗೆ ಸೂಚನೆ ನೀಡಿದೆ.      

ರಾಜ್ಯದ ಜನತೆಗೆ ಶಾಕ್ ನೀಡಿದ ಇಂಧನ ಇಲಾಖೆ ➤ಕರೆಂಟ್ ಬಿಲ್ ಕಟ್ಟದಿದ್ದರೆ ಕನೆಕ್ಷನ್ ಕಟ್.! Read More »

ಕರ್ನಾಟಕ

FIR ರದ್ದುಪಡಿಸಲು ಹೈಕೋರ್ಟ್ ಮೆಟ್ಟಿಲೇರಿದ ಅಶ್ವತ್ಥ ನಾರಾಯಣ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.30 “ಉರಿಗೌಡ-ನಂಜೇಗೌಡರು ಟಿಪ್ಪುವನ್ನು ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನು ಮುಗಿಸಬೇಕು” ಎಂಬ ಬಿಜೆಪಿ ನಾಯಕ, ಮಾಜಿ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಹೇಳಿಕೆ ದಿನದಿಂದ ದಿನಕ್ಕೆ ಹೊಸ ರೂಪ ಪಡೆಯುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಇದೀಗ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ಕೋರಿ ಮಾಜಿ ಸಚಿವ ಹಾಗೂ ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಶಾಸಕ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

FIR ರದ್ದುಪಡಿಸಲು ಹೈಕೋರ್ಟ್ ಮೆಟ್ಟಿಲೇರಿದ ಅಶ್ವತ್ಥ ನಾರಾಯಣ Read More »

ಕರ್ನಾಟಕ

‘ಕೊಟ್ಟ ಮಾತಿನಂತೆ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸುತ್ತೇವೆ’ ➤ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.29. ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ನಡೆಸುತ್ತೇವೆ. ನಮ್ಮದು ಜವಾಬ್ದಾರಿಯುತ ಸರ್ಕಾರ, ನಾವು ಈ ಯೋಜನೆಯನ್ನು ಕ್ರಮಬದ್ಧವಾಗಿ ಜಾರಿ ಮಾಡುತ್ತೇವೆ ಎಂದರು.  

‘ಕೊಟ್ಟ ಮಾತಿನಂತೆ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸುತ್ತೇವೆ’ ➤ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ Read More »

ಕರ್ನಾಟಕ

ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣ➤6 ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.29 ನಗರದ ಚೌಡೇಶ್ವರಿನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತ ರವಿ ಅಲಿಯಾಸ್ ಮತ್ತಿ ರವಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಲಗ್ಗೆರೆ ಸಮೀಪದ ಚೌಡೇಶ್ವರಿ ನಗರದ ಹಳ್ಳಿ ರುಚಿ ಹೋಟೆಲ್ ಮುಂಭಾಗ ರವಿ ಅಲಿಯಾಸ್ ಮತ್ತಿ ರವಿಯನ್ನು ದುರ್ಷರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದರು.ಈ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ನಂದಿನಿ ಲೇಔಟ್ ಠಾಣೆ ಪೊಲೀಸರು, ಮಂಜ, ಸ್ಪಾಟ್ ನಾಗ, ಗೋಪಿ ಸೇರಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ.  

ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣ➤6 ಆರೋಪಿಗಳು ಅರೆಸ್ಟ್ Read More »

ಕರ್ನಾಟಕ

ದೇವಸ್ಥಾನದಲ್ಲಿ ಭಕ್ತರ ತಲೆ ಮೇಲೆ ಕಾಲಿಟ್ಟ ಪುಡಿ ರೌಡಿ!

(ನ್ಯೂಸ್ ಕಡಬ)newskadaba.com ಬೆಂಗಳೂರು ,ಮೇ.29  ಗಾಣಗಾಪುರದ ದತ್ತಾತ್ರೇಯನ ಸನ್ನಿಧಿಯಲ್ಲಿ ಪುಡಿ ರೌಡಿಯಿಂದ ಭಕ್ತರಿಗೆ ದೌರ್ಜನ್ಯ ನಡೆದಿದ್ದು, ಈತ ಭಕ್ತರ ತಲೆ ಮೇಲೆ ಕಾಲಿಟ್ಟಿದ್ದಾನೆ ಎಂಬ ಆರೋಪ ಕೇಳಿಬರುತ್ತಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ಗಾಣಗಾಪುರದಲ್ಲಿ ಪುಡಿ ರೌಡಿ ಉದ್ಧಟತನ ಮೆರೆದಿದ್ದು, ಈತನನ್ನು ಯಲ್ಲಪ್ಪ ಕಲ್ಲೂರ್ ಎಂದು ಗುರುತಿಸಲಾಗಿದೆ.  

ದೇವಸ್ಥಾನದಲ್ಲಿ ಭಕ್ತರ ತಲೆ ಮೇಲೆ ಕಾಲಿಟ್ಟ ಪುಡಿ ರೌಡಿ! Read More »

ಕರ್ನಾಟಕ
Scroll to Top