Bangalore

ಮಳೆ ನೀರು ನುಗ್ಗಿದ ಮನೆಗಳಿಗೆ 10,000 ರೂ. ಪರಿಹಾರ ನೀಡುತ್ತೇವೆ.!➤ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.25  ಮಳೆ ನೀರು ನುಗ್ಗಿದ ಮನೆಗಳಿಗೆ 10,000 ರೂ. ನೀಡಲು ಬಿಬಿಎಂಪಿ ಮುಂದಾಗಿದೆ. ಅಧಿಕಾರಿಗಳಿಂದ ಮಹಜರು ಪ್ರಕ್ರಿಯೆ ನಡೆಸಲಾಗುತ್ತಿದ್ದು, ಸಂತ್ರಸ್ತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ. ಬೆಂಗಳೂರು ಮಹಾನಗರದಲ್ಲಿ ಕಳೆದ ನಾಲ್ಕು ದಿನ ಸುರಿದ ಭಾರಿ ಮಳೆಯಿಂದ ಮನೆಗೆ ನೀರು ನುಗ್ಗಿ ತೊಂದರೆಗೆ ಒಳಗಾದ ಪ್ರತಿ ಕುಟುಂಬಗಳಿಗೆ 10000 ರೂ.ಪರಿಹಾರ ನೀಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.        

ಮಳೆ ನೀರು ನುಗ್ಗಿದ ಮನೆಗಳಿಗೆ 10,000 ರೂ. ಪರಿಹಾರ ನೀಡುತ್ತೇವೆ.!➤ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ Read More »

ಕರ್ನಾಟಕ

4ನೇ ಮಹಡಿಯಿಂದ ಜಿಗಿದು ವ್ಯಕ್ತಿ ಮೃತ್ಯು.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.25  ಪೊಲೀಸರು ವಶಕ್ಕೆ ಪಡೆಯಲು ತೆರಳಿದ್ದ ವೇಳೆ ವ್ಯಕ್ತಿಯೊಬ್ಬ ಮಹಡಿ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 4ನೇ ಮಹಡಿಯಿಂದ ಜಿಗಿದು 31 ವರ್ಷದ ಮೊಹಮ್ಮದ್ ಹುಸೇನ್ ಮೃತಪಟ್ಟಿದ್ದಾನೆ. ಬೊಮ್ಮನಹಳ್ಳಿ ಬೇಗೂರು ರಸ್ತೆಯಲ್ಲಿ ನಡೆದಿದೆ. ಮಹಮ್ಮದ್ ಹುಸೇನ್​ನನ್ನು ವಶಕ್ಕೆ ಪಡೆಯಲು ನಾಲ್ವರು ಪೊಲೀಸರ ತಂಡ ತೆರಳಿತ್ತು. ನಾಲ್ಕನೇ ಮಹಡಿಯ ಟೆರೇಸ್ ಮೇಲಿಂದ ವಶಕ್ಕೆ ಪಡೆಯುತ್ತಿದ್ದ ವೇಳೆ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾನೆ. ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

4ನೇ ಮಹಡಿಯಿಂದ ಜಿಗಿದು ವ್ಯಕ್ತಿ ಮೃತ್ಯು.! Read More »

ಕರ್ನಾಟಕ

ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.25 ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ವಿಧಾಣಸಭೆ ಚುನಾವಣೆಯಲ್ಲಿ ಸೋಲಿನ ಹೊಣೆ ಹೊತ್ತು ಜೆಡಿಎಸ್ ಯುವಕ ಘಟಕ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.  

ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ.! Read More »

ಕರ್ನಾಟಕ

ವಿಧಾನಸಭೆಯ ಸ್ಪೀಕರ್ ಆಗಿ ಯುಟಿ ಖಾದರ್ ಅವಿರೋಧವಾಗಿ ಆಯ್ಕೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮೇ.24. ವಿಧಾನಸಭೆ ನೂತನ ಸ್ಪೀಕರ್‌ ಆಗಿ ಯುಟಿ ಖಾದರ್‌ ಅವಿರೋಧ ಆಯ್ಕೆಯಾಗಿದ್ದಾರೆ. ಸ್ಪೀಕರ್‌ ಸ್ಥಾನಕ್ಕೆ ಯುಟಿ ಖಾದರ್‌ ಹೈಕಮಾಂಡ್ ಸೂಚನೆ ಮೇರೆಗೆ ನಾಮಪತ್ರವನ್ನು ಸಲ್ಲಿಸಿದ್ದರು. ಬೇರೆ ಯಾರೂ ಕೂಡ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿಲ್ಲ. ಇದರಿಂದಾಗಿ ಖಾದರ್ ಇಂದು ಅಧಿಕೃತವಾಗಿ ಸ್ಪೀಕರ್‌ ಆಗಿ ಅಧಿಕಾರ ಹಂಗಾಮಿ ಸ್ಪೀಕರ್‌ ಆರ್.ವಿ ದೇಶಪಾಂಡೆ ಅವರಿಂದ ಸ್ವೀಕಾರ ಮಾಡಿದರು. ನೂತನ ಸ್ಪೀಕರ್‌ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಅಭಿನಂದನೆ ಸಲ್ಲಿಸಿದರು. ಸಚಿವ ಸ್ಥಾನದ

ವಿಧಾನಸಭೆಯ ಸ್ಪೀಕರ್ ಆಗಿ ಯುಟಿ ಖಾದರ್ ಅವಿರೋಧವಾಗಿ ಆಯ್ಕೆ Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಫ್ರೀ ಬಸ್ ಸ್ಕೀಂ ಜಾರಿಗೆ ದಿನಗಣನೆ ಶುರು.!

(ನ್ಯೂಸ್ ಕಡಬ)newskadaba.comಬೆಂಗಳೂರು,ಮೇ.24 ರಾಜ್ಯದಲ್ಲಿ ಫ್ರೀ ಬಸ್ ಸ್ಕೀಂ ಜಾರಿಗೆ ದಿನಗಣನೆ ಶುರುವಾಗಿದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣದ ಯೋಜನೆ ಜಾರಿಗೆ ಸಾರಿಗೆ ಇಲಾಖೆ ಸಿದ್ಧತೆ ನಡೆಸುತ್ತಿದೆ. ರಾಜ್ಯದಲ್ಲಿ ಫ್ರೀ ಬಸ್ ಸ್ಕೀಂ ಕಲ್ಪಿಸಲು ಸರ್ಕಾರ ಸಿದ್ದತೆ ನಡೆಸಿದ್ದು, ಫ್ರೀ ಬಸ್ ಭಾಗ್ಯಕ್ಕೆ ಕಂಡೀಷನ್ ಹಾಕಿಯೇ ಫ್ರೀ ಬಸ್ ಸೇವೆ ನೀಡಲು ಪ್ಲಾನ್ ಮಾಡಿದೆ.ಶೀಘ್ರದಲ್ಲೇ ಷರತ್ತು ಮತ್ತು ನಿರ್ಬಂಧ ಗಳಿಗ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಆಗಲಿದ್ದು, ಒಂದೆರಡು

ರಾಜ್ಯದಲ್ಲಿ ಫ್ರೀ ಬಸ್ ಸ್ಕೀಂ ಜಾರಿಗೆ ದಿನಗಣನೆ ಶುರು.! Read More »

ಕರ್ನಾಟಕ

‘ಪಠ್ಯ ಪರಿಷ್ಕರಣೆ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ’  ➤ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.24. ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿರುವ ಪಠ್ಯ ಪುಸ್ತಕವನ್ನು ಪರಿಷ್ಕರಣೆ ಮಾಡುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹಕಚೇರಿ ಕೃಷ್ಣಾದಲ್ಲಿ ಮಾತನಾಡಿ, ಬಿಜೆಪಿ ಅಧಿಕಾರದ ಅವಧಿಯಲ್ಲಿ ಆಗಿರುವ ಪಠ್ಯ ಪುಸ್ತಕ ಪರಿಷ್ಕರಣೆ ಮಾಡುವ ಕುರಿತಂತೆ ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗುವುದು. ಅಲ್ಲಿ ಸಚಿವ ಅಭಿಪ್ರಾಯ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

‘ಪಠ್ಯ ಪರಿಷ್ಕರಣೆ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ’  ➤ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ದೇಶದ ಹಲವೆಡೆ ಮಳೆ ಅರ್ಭಟ ಹೆಚ್ಚಾಗಳಿದೆ.!➤ಹವಾಮಾನ ಇಲಾಖೆ ಸೂಚನೆ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.24 ಕಳೆದು ಮೂರು ದಿನಗಳಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಸಂಜೆಯಾಗುತ್ತಿದ್ದಂತೆ ಸುರಿಯುವ ಮಳೆಯಿಂದಾಗಿ ವಾಹನ ಸವಾರರು ಹೈರಾಣಾಗಿದ್ದಾರೆ. ಅಂಡರ್‌ಪಾಸ್‌, ರಸ್ತೆಗಳಲ್ಲಿ ನೀರು ತುಂಬಿಕೊಳ್ಳುತ್ತಿರುವುದರಿಂದ ರಸ್ತೆ ಸಂಚಾರ ಸುಗಮವಾಗಿರದೆ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ದಕ್ಷಿಣ ತಮಿಳುನಾಡಿನಲ್ಲಿ ಸಮುದ್ರಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಮುಂದಿನ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.    

ದೇಶದ ಹಲವೆಡೆ ಮಳೆ ಅರ್ಭಟ ಹೆಚ್ಚಾಗಳಿದೆ.!➤ಹವಾಮಾನ ಇಲಾಖೆ ಸೂಚನೆ Read More »

ಕರ್ನಾಟಕ

ಜೆಡಿಎಸ್‌ನ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡುವ ಸಾಧ್ಯತೆ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.24 ಚುನಾವಣೆಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ನಿಖಿಲ್​ ಕುಮಾರಸ್ವಾಮಿ ಅವರು ಮಹತ್ವದ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಸತತ ಎರಡು ಸೋಲುಗಳಿಂದ ಕಂಗಾಲಾಗಿರುವ ನಿಖಿಲ್​ ಕುಮಾರಸ್ವಾಮಿ ಇದೀಗ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಳ್ಳುವ ಚಿಂತನೆಯಲ್ಲಿದ್ದಾರೆ. ಜೆಡಿಎಸ್‌ನ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ರಾಜಕೀಯ ಚಟುವಟಿಕೆಗಳಿಂದ ದೂರವಿದ್ದು, ಸಿನಿಮಾದಲ್ಲಿ ತೊಡಗಿಸಿಕೊಳ್ಳಲು ಗಂಭೀರ ಚಿಂತನೆ ನಡೆಸಿದ್ದಾರೆ. ಇದಕ್ಕೆ ಎಚ್.ಡಿ.ಕುಮಾರಸ್ವಾಮಿ ಸಹ ಸಮ್ಮತಿ ಸೂಚಿಸುವ ಸಾಧ್ಯತೆ ಇದೆ.  

ಜೆಡಿಎಸ್‌ನ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡುವ ಸಾಧ್ಯತೆ.! Read More »

ಕರ್ನಾಟಕ

ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಸಿಎಂ, ಡಿಸಿಎಂ ದೆಹಲಿಗೆ ಪ್ರಯಾಣ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.24 ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ 8 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಇಂದು ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಪುಟ ವಿಸ್ತರಣೆಯ ಸಂಬಂಧ ಹೈಕಮಾಂಡ್ ನಾಯಕರ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಸಂಪುಟ ವಿಸ್ತರಣೆ ಕುರಿತಾಗಿ ಒಪ್ಪಿಗೆ ಪಡೆದುಕೊಳ್ಳಲಿದ್ದಾರೆ.    

ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಸಿಎಂ, ಡಿಸಿಎಂ ದೆಹಲಿಗೆ ಪ್ರಯಾಣ.! Read More »

ಕರ್ನಾಟಕ

ಪರಪ್ಪನ ಅಗ್ರಹಾರದ ಕಾರಾಗೃಹ ಸೇರಿದ್ದ 81 ಕೈದಿಗಳಿಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ .!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.24 ಜೀವಾವಧಿ ಶಿಕ್ಷೆಗೆ ಒಳಗಾಗಿ ಪರಪ್ಪನ ಅಗ್ರಹಾರದ ಕಾರಾಗೃಹ ಸೇರಿದ್ದ 81 ಕೈದಿಗಳಿಗೆ  ಬಿಡುಗಡೆಯ ಭಾಗ್ಯ ಸಿಕ್ಕಿತು.ಸನ್ನಡತೆ ಆಧಾರದಲ್ಲಿ ರಾಜ್ಯದ ವಿವಿಧ ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿದ್ದ 214 ಕೈದಿಗಳ ಬಿಡುಗಡೆಗೆ ರಾಜ್ಯ ಸರ್ಕಾರವು ಆದೇಶಿಸಿತ್ತು.  ಪರಪ್ಪನ ಅಗ್ರಹಾರ ಜೈಲಿನಿಂದಲೂ ಕೈದಿಗಳು ಬಂಧಮುಕ್ತರಾದರು. ಪರಪ್ಪನ ಅಗ್ರಹಾರದಲ್ಲಿದ್ದ ಇಬ್ಬರು ಮಹಿಳಾ ಕೈದಿಗಳು ಸೇರಿದಂತೆ ಒಟ್ಟು 79 ಮಂದಿಗೆ ಬಿಡುಗಡೆ ಮಾಡಲಾಯಿತು. ಅನಾರೋಗ್ಯದ ಚಿಕಿತ್ಸೆಗೆಂದು ಮೈಸೂರು ಹಾಗೂ ವಿಜಯಪುರದ ತಲಾ ಒಬ್ಬರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆ ತರಲಾಗಿತ್ತು.

ಪರಪ್ಪನ ಅಗ್ರಹಾರದ ಕಾರಾಗೃಹ ಸೇರಿದ್ದ 81 ಕೈದಿಗಳಿಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ .! Read More »

ಕರ್ನಾಟಕ
Scroll to Top