Bangalore

ರಾಜ್ಯದಲ್ಲಿ ಮೇ.29 ರಿಂದ ಶಾಲೆಗಳು ಆರಂಭ..!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.24 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಅದರಂತೆ ಈ ಬಾರಿ ಬೇಸಿಗೆ ರಜೆಯ ಮುಕ್ತಾಯದ ನಂತ್ರ ಮೇ.29ರಿಂದಲೇ ಶಾಲೆಗಳು ಆರಂಭಗೊಳ್ಳಲಿವೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗುತ್ತಿದ್ದು, ರಾಜ್ಯಾಧ್ಯಂತ ಏಕರೂಪದ ಯಶಸ್ವಿ ಅನುಷ್ಠಆನಕ್ಕಾಗಿ ವಾರ್ಷಿಕ ಶಿಕ್ಷಣಿಕ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಮೇ.29 ರಿಂದ ಶಾಲೆಗಳು ಆರಂಭ..! Read More »

ಕರ್ನಾಟಕ

ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಶುಭ ಹಾರೈಸಿದ ಸಾಲು ಮರದ ತಿಮ್ಮಕ್ಕ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.23 ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಶುಭ ಹಾರೈಸಿದರು.‌ ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಲಿ. ಉತ್ತಮ ಆಡಳಿತ ನಡೆಸುವಂತಾಗಲಿ ಎಂದು ತಿಮ್ಮಕ್ಕ ಶುಭ ಹಾರೈಸಿದರು.ನಿಮ್ಮ ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ, ಸರ್ಕಾರ ನಿಮ್ಮ ಬಗ್ಗೆ ಕಾಳಜಿ ವಹಿಸುತ್ತದೆ ಎಂದು ಸಿದ್ದರಾಮಯ್ಯ ಅವರು ತಿಮ್ಮಕ್ಕರವರಿಗೆ ತಿಳಿಸಿದರು.      

ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಶುಭ ಹಾರೈಸಿದ ಸಾಲು ಮರದ ತಿಮ್ಮಕ್ಕ Read More »

ಕರ್ನಾಟಕ

ಶೂ ಲೇಸ್ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.23. ಜೈಲಿನ ಶೌಚಾಲಯದಲ್ಲಿ ಶೂ ಲೇಸ್ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಸಾವನ್ನಪ್ಪಿರುವ ರೀತಿ ಪತ್ತೆಯಾಗಿದ್ದಾರೆ. ಸುನೀಲ್ ಮೃತ ರೌಡಿ ಶೀಟರ್ ಎಂದು ಗುರುತಿಸಲಾಗಿದೆ. ಸುನಿಲ್ ಮೃತದೇಹ ಶೂ ಲೇಸ್ನಿಂದ ನೇಣು ಬಿಗಿದುಕೊಂಡು ಸಾವನಪ್ಪಿದ ರೀತಿಯಲ್ಲಿ ಪತ್ತೆಯಾಗಿದೆ.

ಶೂ ಲೇಸ್ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಆತ್ಮಹತ್ಯೆ Read More »

ಕರ್ನಾಟಕ

ಯುಟಿ ಖಾದರ್ ಗೆ ಸ್ಪೀಕರ್ ಹುದ್ದೆ    ➤ ಖಾದರ್ ಗೆ ಇಲ್ಲ ಸಚಿವ ಸ್ಥಾನ ?

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.23. ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಮಾಜಿ ಸಚಿವ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಫೈನಲ್ ಮಾಡಿದೆ ಎನ್ನಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ಕೆ ಸಿ ವೇಣುಗೋಪಾಲ್ ಅವರು ಖಾದರ್ ಅವರನ್ನು ಕರೆದು ಮಾತನಾಡಿದ್ದು ಸ್ಪೀಕರ್ ಹುದ್ದೆಯನ್ನು ಒಪ್ಪಿಕೊಳ್ಳುವಂತೆ ಹೇಳಿದ್ದಾರೆ ಎನ್ನಲಾಗಿದೆ.  

ಯುಟಿ ಖಾದರ್ ಗೆ ಸ್ಪೀಕರ್ ಹುದ್ದೆ    ➤ ಖಾದರ್ ಗೆ ಇಲ್ಲ ಸಚಿವ ಸ್ಥಾನ ? Read More »

ಕರ್ನಾಟಕ

ಡಿಜಿ-ಐಜಿಪಿಯಾಗಿ  ಹಿರಿಯ ಐಪಿಎಸ್‌ ಅಧಿಕಾರಿ ಆಲೋಕ್‌ ಮೋಹನ್‌ ಅಧಿಕಾರ ಸ್ವೀಕಾರ 

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.23 ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್‌ ಅಧಿಕಾರಿ ಆಲೋಕ್‌ ಮೋಹನ್‌ ಅಧಿಕಾರ ಸ್ವೀಕರಿಸಿದರು.ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಪ್ರವೀಣ್‌ ಸೂದ್‌ ಅವರು ಆಲೋಕ್‌ ಮೋಹನ್‌ ಅವರಿಗೆ ಬ್ಯಾಟನ್‌ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಡಿಜಿ- ಐಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಕೇಂದ್ರೀಯ ತನಿಖಾ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ನೇಮಕಗೊಂಡಿದ್ದು, ಅವರಿಗೆ ಇಲಾಖೆಯಿಂದ ಬೀಳ್ಕೊಡುಗೆ ಪಥಸಂಚಲನ ಮೂಲಕ ಗೌರವಿಸಿ ಅವರನ್ನು ಈ ಹುದ್ದೆಯಿಂದ ಬಿಡುಗಡೆ ಮಾಡಲಾಯಿತು.ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಜಿಪಿ ಆಲೋಕ್‌ ಮೋಹನ್‌

ಡಿಜಿ-ಐಜಿಪಿಯಾಗಿ  ಹಿರಿಯ ಐಪಿಎಸ್‌ ಅಧಿಕಾರಿ ಆಲೋಕ್‌ ಮೋಹನ್‌ ಅಧಿಕಾರ ಸ್ವೀಕಾರ  Read More »

ಕರ್ನಾಟಕ

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್ ಟೇಬಲ್

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.23 7 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಕಲಬುರ್ಗಿ ಸೆನ್ ಪೊಲೀಸ್ ಠಾಣೆ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮುಕ್ಕಲಪ್ಪ ನೀಲಜೇರಿ ಬಂಧಿತ ಪಿಸಿ. ಸಂಜನಾ ಬೀರಪ್ಪ ಎಂಬುವವರ ಬಳಿ 7 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕಾನ್ಸ್ ಟೇಬಲ್ ರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ದೂರುದಾರರ ಹೆಸರು ಕೈಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಸಿ ಮಕ್ಕಲಪ್ಪ ನೀಲಜೇರಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.    

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್ ಟೇಬಲ್ Read More »

ಕರ್ನಾಟಕ

ಇಂದು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಸಿಎಂ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.23. ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯಿಂದ ಹಲವು ಕಡೆ ಸಾವು-ನೋವು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಇಂದು ಆಯಾ ಜಿಲ್ಲಾಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳ ಜೊತೆ ವಿವಿಧ ಭಾಗಗಳಲ್ಲಿ ಮಳೆಯಿಂದ ಆದ ಅನಾಹುತಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಆ ಬಳಿಕ, ಮಳೆ ಜೋರಾಗಿರುವ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ-ಸೂಚನೆಗಳನ್ನು ನೀಡಲಿದ್ದಾರೆ ಎಂದು ಮೂಲಗಳು

ಇಂದು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಸಿಎಂ Read More »

ಕರ್ನಾಟಕ

ವಿದ್ಯಾರ್ಥಿಯನ್ನು ಸಕಾಲಕ್ಕೆ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ ಪೊಲೀಸ್ ಸಿಬ್ಬಂದಿ ➤ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.23 ವಿದ್ಯಾರ್ಥಿಯೊಬ್ಬ ಸಿಇಟಿ ಪರೀಕ್ಷೆ ಬರೆಯಲು ಹೋಗಬೇಕಿತ್ತು. ಆದರೆ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಇದ್ದಿದ್ದರಿಂದ ನಗರದಲ್ಲಿ ಟ್ರಾಫಿಕ್​ ಜಾಮ್​ ಆಗಿತ್ತು. ಇದರಿಂದ ವಿದ್ಯಾರ್ಥಿ ಮನನೊಂದಿದ್ದ. ಈ ವಿಧ್ಯಾರ್ಥಿಯನ್ನು ನಗರದ ಪೊಲೀಸ್​ ಸಿಬ್ಬಂದಿ  ಹೊಯ್ಸಳ ವಾಹನದಲ್ಲಿ  ಸೈರನ್ ಹಾಕಿಕೊಂಡು ಸಕಾಲಕ್ಕೆ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ತಲುಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.ಕೊತ್ತನೂರಿನ ಹೊಯ್ಸಳ ಸಿಬ್ಬಂದಿ ಗೌರಿಶ್ ಹಾಗೂ ಸೋಮಶೇಖರ್ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.  

ವಿದ್ಯಾರ್ಥಿಯನ್ನು ಸಕಾಲಕ್ಕೆ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ ಪೊಲೀಸ್ ಸಿಬ್ಬಂದಿ ➤ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ Read More »

ಕರ್ನಾಟಕ

ಮೇ.23 ರಿಂದ ದ್ವಿತೀಯ ಪಿಯುಸಿ `ಪೂರಕ ಪರೀಕ್ಷೆ’ ಆರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.23 ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಲಾಗಿದೆ.ವಿದ್ಯಾರ್ಥಿಗಳು ಪರೀಕ್ಷಾ ವಲಯಗಳಲ್ಲಿ ನಿಯಮ ಪಾಲನೆ ಮಾಡುವುದು ಕಡ್ಡಾಯವಾವಾಗಿದೆ.  ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು/ ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಕಂಪ್ಯೂಟರ್ ಮತ್ತು ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ.

ಮೇ.23 ರಿಂದ ದ್ವಿತೀಯ ಪಿಯುಸಿ `ಪೂರಕ ಪರೀಕ್ಷೆ’ ಆರಂಭ Read More »

ಕರ್ನಾಟಕ

ಮಳೆ ನೀರಿಗೆ ಯುವತಿ ಮೃತ್ಯು    ➤ BBMP ಅಧಿಕಾರಿಗಳ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.22. ಕೆ.ಆರ್​.ಸರ್ಕಲ್ ಅಂಡರ್ ಪಾಸ್​​ ನಲ್ಲಿ ಮಳೆ ನೀರಿಗೆ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಂಡರ್​ಪಾಸ್​ನಲ್ಲಿ ನೀರು ತುಂಬಿದೆ. ನೀರು ಹೊರ ಹೋಗಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲವೆಂದು ಯುವತಿ ಸಹೋದರ ಸಂದೀಪ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆ ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಅಸಹಜ ಸಾವು ಎಂದು ಎಫ್​​ಐಆರ್​​ ದಾಖಲಾಗಿದ್ದು,

ಮಳೆ ನೀರಿಗೆ ಯುವತಿ ಮೃತ್ಯು    ➤ BBMP ಅಧಿಕಾರಿಗಳ ವಿರುದ್ಧ ದೂರು ದಾಖಲು Read More »

ಕರ್ನಾಟಕ
Scroll to Top