Bangalore

ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಅಲೋಕ್ ಮೋಹನ್ ನೇಮಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.22. ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಅಲೋಕ್ ಮೋಹನ್ ಅವರು ನೇಮಕಗೊಂಡಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರಿಂದ ತೆರವಾಗುವ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಅಲೋಕ್ ಮೋಹನ್ ಅವರನ್ನು ಆಯ್ಕೆ ಮಾಡಲಾಗಿದೆ. ಬಿಹಾರ ಮೂಲದ ಡಾ.ಅಲೋಕ್ ಮೋಹನ್ ಅವರು 1987 ರ ಬ್ಯಾಚ್ ನ ಹಿರಿಯ IPS ಅಧಿಕಾರಿಯಾಗಿದ್ದಾರೆ. ಅವರು 36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ.  

ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಅಲೋಕ್ ಮೋಹನ್ ನೇಮಕ Read More »

ಕರ್ನಾಟಕ

ಗುಡುಗು, ಮಿಂಚಿನಿಂದಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಹಾನಿ.!➤ರೈಲು ಸಂಚಾರ ರದ್ದು

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.22 ಗುಡುಗು ಮತ್ತು ಮಿಂಚಿನಿಂದಾಗಿ ಪುರಿ-ಹೌರಾ ವಂದೇ ಭಾರತ್ ಎಕ್ಸ್‌ಪ್ರೆಸ್ಗೆ ಹಾನಿಯಾಗಿದ್ದು ರೈಲು ಸಂಚಾರ ರದ್ದುಗೊಂಡಿದೆ. ಇದರಿಂದಾಗಿ ಹೌರಾ-ಪುರಿ-ಹೌರಾ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ರದ್ದುಗೊಳಿಸಲಾಗಿದೆ. ಗುಡುಗು ಮತ್ತು ಮಿಂಚಿನಿಂದಾಗಿ ಓವರ್ಹೆಡ್ ತಂತಿಗಳು ಹಾನಿಗೊಳಗಾಗಿದ್ದು ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಭಾರೀ ಮಳೆ ಗಾಳಿಗೆ ಒಂದೇ ಭಾರತ ರೈಲಿಗೆ ಹಾನಿಯುಂಟಾಗಿದೆ. ರೈಲಿನ ಮೇಲೆ ಮರಗಳು ಬಿದ್ದಿವೆ. ತಂತಿ ತುಂಡಾಗಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಇದುವರೆಗೂ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಮಾಹಿತಿ ಇಲ್ಲ.  

ಗುಡುಗು, ಮಿಂಚಿನಿಂದಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಹಾನಿ.!➤ರೈಲು ಸಂಚಾರ ರದ್ದು Read More »

ಕರ್ನಾಟಕ

ವರುಣಾರ್ಭಟಕ್ಕೆ ನಟ ಜಗ್ಗೇಶ್ ಕಾರು ಮುಳುಗಡೆ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.22  ರಾಜಧಾನಿ ಬೆಂಗಳೂರಿನಲ್ಲಿ ಸುರಿದ ರಣಮಳೆಗೆ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದ್ದು, ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಕಾರು ಕೂಡ ನೀರಿನಲ್ಲಿ ಮುಳುಗಡೆಯಾಗಿದೆ.ಜಗ್ಗೇಶ್ ಅವರ ಬಿಎಂಡಬ್ಲ್ಯೂ ಕಾರು ನೀರಿನಲ್ಲಿ ಮುಳುಗಿದೆ. ರಿಪೇರಿ ಕಾರ್ಯ ಹಿನ್ನೆಲೆಯಲ್ಲಿ ಸ್ನೇಹಿತನ ಮನೆಯಲ್ಲಿ ಕಾರನ್ನು ನಿಲ್ಲಿಸಿದ್ದರು. ಸ್ನೇಹಿತ ಮುರುಳಿಯವರ ಮಲ್ಲೇಶ್ವರಂ ಮನೆಯ ಸೆಲ್ ನಲ್ಲಿ ಕಾರನ್ನು ನಿಲ್ಲಿಸಲಾಗಿತ್ತು. ಆದರೆ ಭಾರಿ ಮಳೆಯಿಂದಾಗಿ ಕಾರು ಮುಳುಗಡೆಯಾಗಿದೆ.    

ವರುಣಾರ್ಭಟಕ್ಕೆ ನಟ ಜಗ್ಗೇಶ್ ಕಾರು ಮುಳುಗಡೆ.! Read More »

ಕರ್ನಾಟಕ

ಕೆ.ಆರ್.ಸರ್ಕಲ್‌ನ ಅಂಡರ್ ಪಾಸ್‌ ನೀರಿನಲ್ಲಿ ಸಿಲುಕಿ ಯುವತಿ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.22. ಭಾರಿ ಮಳೆ ಸುರಿದಿದ್ದರಿಂದ ಕೆ.ಆರ್.ಸರ್ಕಲ್ ನ ಅಂಡರ್ ಪಾಸ್ ನಲ್ಲಿ ನೀರಿನಲ್ಲಿ ಸಿಲುಕಿ ಕಾರಿನಲ್ಲಿದ್ದ ಯುವತಿಯೊಬ್ಬಳು ದಾರುಣವಾಗಿ ಸಾವ್ನಪ್ಪಿದ್ದಾಳೆ. ಆಂಧ್ರದ ವಿಜಯವಾಡದ ಮೂಲದ ಭಾನುರೇಖಾ(22)  ಮೃತಪಟ್ಟವರು. ಇವರು ಇನ್ಫೋಸಿಸ್ ಉದ್ಯೋಗಿಯಾಗಿದ್ದರು. ಕಾರಿನಲ್ಲಿ ಚಾಲಕ ಸೇರಿ ಒಟ್ಟು ಏಳು ಮಂದಿ ಪ್ರಯಾಣಿಸುತ್ತಿದ್ದು, ಅಂಡರ್ ಪಾಸ್ ನಲ್ಲಿ ಏಕಾಏಕಿ  ಭಾರಿ ಮಳೆಯ ಪ್ರಮಾಣದಲ್ಲಿ  ನೀರು ಸಂಗ್ರಹವಾಗಿತ್ತು. ಈ ವೇಳೆಯಲ್ಲಿ ಕಾರು ಮುಳುಗಡೆಯಾಗಿದ್ದು ಸ್ಥಳೀಯರು ಸೇರಿ ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಕಾರು ಮುಳುಗಡೆಯಾಗಿದ್ದ ವೇಳೆಯಲ್ಲಿ  ಭಾನುರೇಖಾ ಹೆಚ್ಚಿನ ಪ್ರಮಾಣದಲ್ಲಿ ನೀರುಕುಡಿದರಿಂದ ಅಸ್ವಸ್ಥಗೊಂಡ

ಕೆ.ಆರ್.ಸರ್ಕಲ್‌ನ ಅಂಡರ್ ಪಾಸ್‌ ನೀರಿನಲ್ಲಿ ಸಿಲುಕಿ ಯುವತಿ ಮೃತ್ಯು Read More »

ಕರ್ನಾಟಕ

ಮೇ.22-05-2023 ರಿಂದ 24-05-2023ರವರೆಗೆ ವಿಧಾನಸೌಧದಲ್ಲಿ ವಿಶೇಷ ಅಧಿವೇಷನ➤144 ಸೆಕ್ಷನ್ ಜಾರಿ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.22 ದಿನಾಂಕ 22-05-2023 ರಿಂದ 24-05-2023ರವರೆಗೆ ವಿಧಾನಸೌಧದಲ್ಲಿ ವಿಶೇಷ ಅಧಿವೇಷನ ನಡೆಯಲಿದೆ. ಈ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಾಮುತ್ತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದು, ಇಂದಿನಿಂದ ಮೇ.24ರವರೆಗೆ ವಿಧಾನಸೌಧದಲ್ಲಿ ವಿಶೇಷ ಅಧಿವೇಶನ ನಡೆಯಲಿದೆ. ಈ ಸಮಯದ್ಲಲಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ, ಸತ್ಯಾಗ್ರಹ, ವಿಧಾನಸೌಧಕ್ಕೆ ಮುತ್ತಿಗೆ ಸೇರಿದಂತೆ ವಿವಿಧ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ

ಮೇ.22-05-2023 ರಿಂದ 24-05-2023ರವರೆಗೆ ವಿಧಾನಸೌಧದಲ್ಲಿ ವಿಶೇಷ ಅಧಿವೇಷನ➤144 ಸೆಕ್ಷನ್ ಜಾರಿ.! Read More »

ಕರ್ನಾಟಕ

4 ರಾಜ್ಯಗಳ ಚುನಾವಣೆ; ಕಾಂಗ್ರೆಸ್‌ ಮಹತ್ವದ ಸಭೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ಕರ್ನಾಟಕವನ್ನು ಗೆದ್ದ ಜೋಶ್‌ ನಲ್ಲಿರುವ ಕಾಂಗ್ರೆಸ್‌ ಇದೀಗ ಮಧ್ಯಪ್ರವೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆಯತ್ತ ಗಮನಹರಿಸಿದೆ. ಈ ನಾಲ್ಕು ರಾಜ್ಯಗಳಲ್ಲಿ ಪ್ರಾಬಲ್ಯ ಮೆರೆದರೆ ಆ ಬಳಿಕ ಎದುರಾಗುವ ಲೋಕಸಭಾ ಚುನಾವಣೆಗೆ ಪ್ರಬಲ ವೇದಿಕೆ ಈ ಮೂಲಕ ಸಜ್ಜಗೊಳಿಸಲು ಕಾಂಗ್ರೆಸ್ ಮುಂದಾಗಿದೆ. ಈ ರಾಜ್ಯಗಳ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಮೇ 24ರಂದು ಈ ರಾಜ್ಯದ ನಾಯಕರ ಸಭೆ ಕರೆದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ

4 ರಾಜ್ಯಗಳ ಚುನಾವಣೆ; ಕಾಂಗ್ರೆಸ್‌ ಮಹತ್ವದ ಸಭೆ Read More »

ಕರ್ನಾಟಕ

ಹೊಸ ಸರ್ಕಾರ ಸ್ವಾಗತಿಸಲು ಶಕ್ತಿ ಕೇಂದ್ರ ವಿಧಾನಸೌಧ ಸಜ್ಜು.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.20 ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಹೊಸ ಸರ್ಕಾರ ಸ್ವಾಗತಿಸಲು ಶಕ್ತಿ ಕೇಂದ್ರ ವಿಧಾನಸೌಧ ಸಜ್ಜಾಗುತ್ತಿದೆ. ಮುಖ್ಯಮಂತ್ರಿ-ಉಪ ಮುಖ್ಯಮಂತ್ರಿ ಸಹಿತ ಹಲವು ಸಚಿವರು ಪ್ರಮಾಣ ಸ್ವೀಕರಿಸುತ್ತಿದ್ದು, ವಿಧಾನಸೌಧದ ಸಂಪುಟ ಸಭೆ ಸಭಾಂಗಣ, ಮುಖ್ಯಮಂತ್ರಿ ಕಚೇರಿ, ಸಮ್ಮೇಳನ ಸಭಾಂಗಣ ಸ್ವತ್ಛಗೊಳಿಸಿ ಹೂವುಗಳಿಂದ ಆಲಂಕಾರ ಮಾಡಲಾಗಿದೆ. ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿ ನಂತರ ಸಂಪುಟ ಸಭಾಂಗಣ, ಮುಖ್ಯಮಂತ್ರಿ ಹಾಗೂ ಸಚಿವರ ಕೊಠಡಿಗಳಿಗೆ ಬೀಗ ಹಾಕಲಾಗಿತ್ತು. ಇದೀಗ ಬೀಗ ತೆರೆದು ಸ್ವತ್ಛಗೊಳಿಸಲಾಗಿದೆ.    

ಹೊಸ ಸರ್ಕಾರ ಸ್ವಾಗತಿಸಲು ಶಕ್ತಿ ಕೇಂದ್ರ ವಿಧಾನಸೌಧ ಸಜ್ಜು.! Read More »

ಕರ್ನಾಟಕ

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಾರಾ ಮೆರುಗು ನೀಡಿದ ಗಣ್ಯರು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಚಿತ್ರರಂಗದ ಅನೇಕ ಗಣ್ಯರು ಭಾಗವಹಿಸುವ ಮೂಲಕ ತಾರಾ ಮೆರುಗು ನೀಡಿದರು. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ತಾರೆಯರು ಪಾಲ್ಗೊಂಡಿದ್ದರು. ನಟ ಶಿವರಾಜ್ ಕುಮಾರ್, ತಮಿಳಿನ ಖ್ಯಾತ ನಟ ಕಮಲ್ ಹಾಸನ್, ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ನಟಿ ನಿಶ್ವಿಕಾ ನಾಯ್ಡು, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ನಟರಾದ ಸಾಧು ಕೋಕಿಲಾ, ದುನಿಯಾ ವಿಜಯ್, ಹಿರಿಯ ನಟಿ ಉಮಾಶ್ರೀ ಸೇರಿದಂತೆ ಹಲವರು

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಾರಾ ಮೆರುಗು ನೀಡಿದ ಗಣ್ಯರು Read More »

ಕರ್ನಾಟಕ

ಎಂಟು ಮಂದಿ ಶಾಸಕರಿಂದ ಸಚಿವರಾಗಿ ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20.ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು  ಪ್ರಮಾಣವಚನ ಸ್ವೀಕರಿಸಿದರು. ಅದಲ್ಲದೇ ಇಂದು ಎಂಟು ಜನರು ಸಚಿವರೂ ಪ್ರಮಾಣವಚನ ಸ್ವೀಕರಿಸಿದ್ದಾರೆ. ಡಾ. ಜಿ. ಪರಮೇಶ್ವರ್, ಎಂ. ಬಿ. ಪಾಟೀಲ್, ಪ್ರಿಯಾಂಕ ಖರ್ಗೆ, ಕೆ.ಎಚ್. ಮುನಿಯಪ್ಪ, ಕೆ.ಎಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ಖಾನ್, ರಾಮಲಿಂಗಾ ರೆಡ್ಡಿಈ ಎಂಟು ಜನ ಶಾಸಕರು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧನೆ ಮಾಡಿದರು.

ಎಂಟು ಮಂದಿ ಶಾಸಕರಿಂದ ಸಚಿವರಾಗಿ ಪ್ರಮಾಣವಚನ ಸ್ವೀಕಾರ Read More »

ಕರ್ನಾಟಕ

ಡಿ.ಕೆ ಶಿವಕುಮಾರ್‌ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.20 ಕರ್ನಾಟಕದ ಉಪಮುಖ್ಯ ಮಂತ್ರಿಯಾಗಿ ಡಿಕೆ ಶಿವಕುಮಾರ್‌ ಅವರು ಇಂದು ಪ್ರಮಾಣ ವಚನ ಸ್ವೀಕರ ಮಾಡಿದರು. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಭೋದಿಸಿದರು. ಇದೇ ವೇಳೆ ಡಿಕೆ ಶಿವಕುಮಾರ್‌ ಅವರು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಸಿಎಂ ಮಾಜಿ ಸಂಸದೆ ರಮ್ಯ, ಸೇರಿದಂತೆ ಕಾಂಗ್ರೆಸ್‌ ಶಾಸಕರು, ಸಾವಿರಾರು ಜನತೆ ಆಗಮಿಸಿದ್ದರು. ಸಮಾರಂಭ

ಡಿ.ಕೆ ಶಿವಕುಮಾರ್‌ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ.! Read More »

ಕರ್ನಾಟಕ
Scroll to Top