Bangalore

‘ಇಂದೇ 5 ಗ್ಯಾರಂಟಿ ಜಾರಿ’ ➤ ನೂತನ ಸಿಎಂ ಘೋಷಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭದಲ್ಲಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಘೋಷಿಸಿದ್ದಾರೆ. ಕರ್ನಾಟಕದ ಜನರ ಆಶೀರ್ವಾದಿಂದ ನಮ್ಮ ಸರ್ಕಾರ ಬಂದಿದೆ. ರಾಹುಲ್, ಖರ್ಗೆ, ಪ್ರಿಯಾಂಕಾ ಸೇರಿ ಅನೇಕರು ಪ್ರಚಾರ ಮಾಡಿದ್ದರು. ಸಾಹಿತಿಗಳು, ಚಿಂತಕರು, ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.

‘ಇಂದೇ 5 ಗ್ಯಾರಂಟಿ ಜಾರಿ’ ➤ ನೂತನ ಸಿಎಂ ಘೋಷಣೆ Read More »

ಕರ್ನಾಟಕ

ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ರಾಜ್ಯದ 24ನೇ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ನಗರದ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಮುಖ್ಯಮಂತ್ರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್, ಪ್ರಿಯಾಂಕಾ ಗಾಂಧಿ, ರಣದೀಪ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ನಟ ಕಮಲ್ ಹಾಸನ್, ನಟಿ ರಮ್ಯಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದಾರೆ. ಕಾರ್ಯಕ್ರಮಕ್ಕೆ 1,800 ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ Read More »

ಕರ್ನಾಟಕ

ಪ್ರಮಾಣ ವಚನ ಸಮಾರಂಭ..! ➤ ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿ ಗಣ್ಯರ ಆಗಮನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ಇಂದು ಮಧ್ಯಾಹ್ನ ಸರಿಯಾಗಿ 12:30ಕ್ಕೆ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಅಗಮಿಸಿದ್ದು ಇವರೆಲ್ಲಾ ಹೊಟೇಲ್ ಶಂಗ್ರಿಲಾದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಕೆಲವೇ ಕ್ಷಣದಲ್ಲಿ ಕಂಠೀರವ ಕ್ರೀಡಾಂಗಣದತ್ತ ಆಗಮಿಸಲಿದ್ದಾರೆ.

ಪ್ರಮಾಣ ವಚನ ಸಮಾರಂಭ..! ➤ ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿ ಗಣ್ಯರ ಆಗಮನ Read More »

ಕರ್ನಾಟಕ

ಸಿದ್ದು ಹೈಕಮಾಂಡ್ ಕೈಗೊಂಬೆ, ರಬ್ಬರ್ ಸ್ಟ್ಯಾಂಪ್ ಸಿಎಂ ಎನ್ನಲು ಈ ಪತ್ರ ಸಾಕ್ಷಿ ➤ ರಾಜ್ಯಾಧ್ಯಕ್ಷ ನಳಿನ್ ಕುಮಾರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ನೂತನ ಸಿಎಂ ಆಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಕೈಗೊಂಬೆ, ರಬ್ಬರ್ ಸ್ಟ್ಯಾಂಪ್ ಸಿಎಂ ಎನ್ನಲು ಈ ಪತ್ರವೇ ಸಾಕ್ಷಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಇಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ , 8 ಮಂದಿ ಶಾಸಕರು ಸಚಿವರಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ

ಸಿದ್ದು ಹೈಕಮಾಂಡ್ ಕೈಗೊಂಬೆ, ರಬ್ಬರ್ ಸ್ಟ್ಯಾಂಪ್ ಸಿಎಂ ಎನ್ನಲು ಈ ಪತ್ರ ಸಾಕ್ಷಿ ➤ ರಾಜ್ಯಾಧ್ಯಕ್ಷ ನಳಿನ್ ಕುಮಾರ್ Read More »

ಕರ್ನಾಟಕ

ನಿಯೋಜಿತ ಸಿಎಂ ಸಿದ್ದರಾಮಯ್ಯಗೆ 1 ಕೋ.ರೂ.ಬೆಲೆಯ ನೂತನ ಕಾರು ಖರೀದಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ಕಾಂಗ್ರೆಸ್‌ ನಿಂದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಘೋಷಣೆ ಆಗುತ್ತಿದ್ದಂತೆ, ಸರ್ಕಾರದಿಂದ ಹೊಸ ಕಾರು ಖರೀದಿ ಮಾಡಲಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಪಟ್ಟ ಒಲಿಯುತ್ತಿದ್ದಂತೆಯೇ ಸಿದ್ದರಾಮಯ್ಯ ಅವರಿಗಾಗಿ ಸರ್ಕಾರದಿಂದ ಹೊಸ ಕಾರು ಖರೀದಿ ಮಾಡಲಾಗಿದೆ. ಬರೋಬ್ಬರಿ ಒಂದು ಕೋಟಿ ರೂಪಾಯಿ ಮೌಲ್ಯದ ಟೊಯೋಟೊ ವೆಲ್ಫೇರ್‌ ಕಾರನ್ನು ಸಿಎಂಗಾಗಿ ಖರೀದಿ ಮಾಡಲಾಗಿದೆ.  

ನಿಯೋಜಿತ ಸಿಎಂ ಸಿದ್ದರಾಮಯ್ಯಗೆ 1 ಕೋ.ರೂ.ಬೆಲೆಯ ನೂತನ ಕಾರು ಖರೀದಿ Read More »

ಕರ್ನಾಟಕ

ಸಚಿವ ಸ್ಥಾನ ಸಿಗದ ಕಾರಣಕ್ಕೆ ಫುಲ್ ಗರಂ ಆದ ಕಾಂಗ್ರೆಸ್ ನಾಯಕ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.20 ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ 10 ಮಂದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಚಿವ ಸ್ಥಾನ ನೀಡದಿರುವುದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ. ದೇಶಪಾಂಡೆ ಗರಂ ಆಗಿದ್ದಾರೆ. ಮೊದಲ ಲಿಸ್ಟ್ ನಲ್ಲಿ ಮಂತ್ರಿಗಿರಿ ಸಿಗದಿರುವುದಕ್ಕೆ ಆರ್.ವಿ. ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದ್ದು, ನಾನು 224 ಶಾಸಕರಲ್ಲೇ ಅತ್ಯಂತ ಹಿರಿಯ ಶಾಸಕನಾಗಿದ್ದೇನೆ. ಅತಿ ಹೆಚ್ಚು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ನನ್ನನ್ನೇ ಹೊರಗಿಟ್ಟು ಪ್ರಮಾಣವಚನ ಮಾಡ್ತಾ ಇದ್ದಾರೆ. ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.ಇದು

ಸಚಿವ ಸ್ಥಾನ ಸಿಗದ ಕಾರಣಕ್ಕೆ ಫುಲ್ ಗರಂ ಆದ ಕಾಂಗ್ರೆಸ್ ನಾಯಕ Read More »

ಕರ್ನಾಟಕ

ಪಿಯುಸಿ ಮರು ಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿಶೇಷ ಚೇತನ ವಿದ್ಯಾರ್ಥಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ಪಿಯುಸಿ ಮರು ಮೌಲ್ಯಮಾಪನದಲ್ಲಿ ಕಲಾ ವಿಭಾಗದಲ್ಲಿ ವಿದ್ಯಾರ್ಥಿ ಕುಶ್ ನಾಯ್ಕ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಬೆಂಗಳೂರಿನ ಜಯನಗರ ಕಾಲೇಜಿನ ವಿದ್ಯಾರ್ಥಿ 593 ಅಂಕ ಪಡೆದು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರು. ಆದರೆ ಮರು ಮೌಲ್ಯಮಾಪನದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನ ವಿಶೇಷ ಚೇತನ ವಿದ್ಯಾರ್ಥಿ ಕುಶ್ ನಾಯ್ಕ್ ದ್ವಿತೀಯ ಪಿಯುಸಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಪಿಯುಸಿ ಮರು ಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿಶೇಷ ಚೇತನ ವಿದ್ಯಾರ್ಥಿ Read More »

ಕರ್ನಾಟಕ

ಕಂಠೀರವ ಸ್ಟೇಡಿಯಂ ಬಳಿ ನೂಕುನುಗ್ಗಲು, ಲಘು ಲಾಠಿ ಚಾರ್ಚ್​​

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ , 8 ಮಂದಿ ಶಾಸಕರು ಸಚಿವರಾಗಿ ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಸಮಾರಂಭಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸುತ್ತಿದ್ದು, ಕಂಠೀರವ ಕ್ರೀಡಾಂಗಣದ ಪ್ರವೇಶ ದ್ವಾರದ ಬೆಳಗ್ಗೆಯೇ ನೂಕುನುಗ್ಗಲು

ಕಂಠೀರವ ಸ್ಟೇಡಿಯಂ ಬಳಿ ನೂಕುನುಗ್ಗಲು, ಲಘು ಲಾಠಿ ಚಾರ್ಚ್​​ Read More »

ಕರ್ನಾಟಕ

ಕಂಠೀರವ ಕ್ರೀಡಾಂಗಣದ ಬಳಿ ಜನಸಂದಣಿಯಿಂದ ನೂಕು ನುಗ್ಗಲು➤ ಪೊಲೀಸರಿಂದ ಲಾಠಿ ಚಾರ್ಜ್!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.20 ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಪ್ರಮಾಣ ವಚನ ಮಾಡಲಿದ್ದಾರೆ. ಇದಕ್ಕಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಕಲ ವ್ಯವಸ್ಥೆ ಮಾಡಿದ್ದು, ಕಾರ್ಯಕ್ರಮಕ್ಕೆ ಜನರೇ ದಂಡೇ ಆಗಮಿಸುತ್ತಿದೆ.ಈ ನಡುವೆ ಕ್ರೀಡಾಂಗಣದ ಪ್ರವೇಶ ದ್ವಾರದಲ್ಲಿ ಹೆಚ್ಚಿನ ಜನಸಂದಣಿಯಿಂದ ಗಲಾಟೆ ಶುರುವಾಗಿದ್ದು, ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಕ್ರೀಡಾಂಗಣದತ್ತ ಹೆಜ್ಜೆ ಹಾಕಿದ್ದಾರೆ. ಈ ವೇಲೆ ಪ್ರವೇಶ ದ್ವಾರದಲ್ಲಿ ಹೆಚ್ಚಿನ ಜನರಿಂದಾಗು ನೂಕು ನುಗ್ಗಲು ಉಂಟಾಗಿದೆ. ಜನರನ್ನು ನಿಯಂತ್ರಿಸಲು ಸಾಧ್ಯವಾಗದ ಕಾರಣ ಪೊಲೀಸರು

ಕಂಠೀರವ ಕ್ರೀಡಾಂಗಣದ ಬಳಿ ಜನಸಂದಣಿಯಿಂದ ನೂಕು ನುಗ್ಗಲು➤ ಪೊಲೀಸರಿಂದ ಲಾಠಿ ಚಾರ್ಜ್! Read More »

ಕರ್ನಾಟಕ

‘ಬ್ಯಾನ್‌ ಮಾಡುವುದಿದ್ದರೆ 2000 ರೂ. ನೋಟನ್ನು ಏಕೆ ಪರಿಚಯಿಸಿದ್ದೀರಿ’ ?       ➤ ಸಿದ್ದರಾಮಯ್ಯ ವಾಗ್ದಾಳಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. 2000 ರೂಪಾಯಿ ಮುಖಬೆಲೆ ನೋಟನ್ನು ಹಿಂಪಡೆಯುವುದರ ಬಗ್ಗೆ ಕರ್ನಾಟಕದ ನಿಯೋಜಿತ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಈಗ ರೂ.2000 ಮೌಲ್ಯದ ನೋಟು ನಿಷೇಧಿಸುವುದಿದ್ದರೆ 2016ರಲ್ಲಿ ಅದನ್ನು ಚಲಾವಣೆಗೆ ತಂದದ್ದು ಯಾಕೆ ? ಯಾವ ಕಾರಣಕ್ಕಾಗಿ ಈಗ ಇದನ್ನು ನಿಷೇಧಿಸಲಾಗಿದೆ? ಕಪ್ಪು ಹಣವನ್ನು ನಿಯಂತ್ರಿಸುವ ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನು ಪ್ರಧಾನಿ ಮೋದಿ ಅವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದರು.

‘ಬ್ಯಾನ್‌ ಮಾಡುವುದಿದ್ದರೆ 2000 ರೂ. ನೋಟನ್ನು ಏಕೆ ಪರಿಚಯಿಸಿದ್ದೀರಿ’ ?       ➤ ಸಿದ್ದರಾಮಯ್ಯ ವಾಗ್ದಾಳಿ Read More »

ಕರ್ನಾಟಕ
Scroll to Top