Bangalore

ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗಶೆಟ್ಟಿ ವಿಧಿವಶ..!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.20  ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗಶೆಟ್ಟಿ (69) ಅವರು ಯಶವಂತಪುರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಆಸ್ಪತ್ರೆಯಲ್ಲಿ ಕರ್ತವ್ಯ ಮುಗಿಸಿ ಮನೆಗೆ ಮರಳಿದ ನಂತರ ಅವರಿಗೆ ತೀವ್ರ ಹೃದಯಾಘಾತವಾಗಿತ್ತು. ತಕ್ಷಣವೇ ಕುಟುಂಬ ಸದಸ್ಯರು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನು ಡಾ. ಕೆ. ಭುಜಂಗ ಶೆಟ್ಟಿ ಅವರ ನಿಧನಕ್ಕೆ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. “ಭುಜಂಗ ಶೆಟ್ಟಿ ಅವರು ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ […]

ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗಶೆಟ್ಟಿ ವಿಧಿವಶ..! Read More »

ಕರ್ನಾಟಕ

ಪ್ರಿಯಕರನ ಸಹಾಯದಿಂದ ಪತಿಯನ್ನು ಉಸಿಗಟ್ಟಿಸಿ ಕೊಂದ ಪತ್ನಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.19 ಪ್ರಿಯಕರನೊಂದಿಗೆ ಸಂಚು ರೂಪಿಸಿ ಗಂಡನನ್ನು ಉಸಿಗಟ್ಟಿಸಿ ಕೊಂದು ಆತ್ಮಹತ್ಯೆಯ ಕಥೆ ಕಟ್ಟಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕಾಡುಗೋಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ‌.ಅನಿತಾ ಹಾಗೂ ಹರೀಶ್ ಬಂಧಿತ ಆರೋಪಿಗಳು. ಆನಂದ್​ ಕೊಲೆಯಾದವರು.ಮರಣೋತ್ತರ ಪರೀಕ್ಷೆಯಲ್ಲಿ ಸತ್ಯ ಬಯಲು. ಎರಡು ತಿಂಗಳ ಹಿಂದೆ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರ ಬಾತ್ ರೂಮಿನಲ್ಲಿ ಚಾಕುವಿನಿಂದ ಕೈ ಕೊಯ್ದುಕೊಂಡ ಸ್ಥಿತಿಯಲ್ಲಿ ಆನಂದ್ ಅವರ ಶವ ಪತ್ತೆಯಾಗಿತ್ತು. ಶವವನ್ನ ಪರಿಶೀಲಿಸಿದ್ದ ಕಾಡುಗೋಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮರಣೋತ್ತರ

ಪ್ರಿಯಕರನ ಸಹಾಯದಿಂದ ಪತಿಯನ್ನು ಉಸಿಗಟ್ಟಿಸಿ ಕೊಂದ ಪತ್ನಿ..! Read More »

ಕರ್ನಾಟಕ

ಹೆಲ್ಮೆಟ್​ ಧರಿಸದೆ ಮಹಿಳಾ ಪಿಎಸ್​ಐ ಸಂಚಾರ..! ➤ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.19 ಸಾರ್ವಜನಿಕರು ಸಂಚಾರ ನಿಯಮ ಉಲ್ಲಂಘಿಸಿದರೆ ವಾಹನಗಳನ್ನು ತಡೆದು ಕೇಸ್ ದಾಖಲಿಸಿ ದಂಡ ವಿಧಿಸುತ್ತಾರೆ. ಆದರೆ ಪೊಲೀಸರೇ ಸಂಚಾರ ನಿಯಮ ಉಲ್ಲಂಘಿಸಿದರೆ ಹೇಗೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದರೆ. ಮಹಿಳಾ ಸಬ್​ ಇನ್​ಸ್ಟೆಕ್ಟರ್ ಒಬ್ಬರು ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಾಗಿ ಸಂಚರಿಸುತ್ತಿದ್ದು ಹೆಲ್ಮೆಟ್ ಧರಿಸದೇ ಹೋಗುತ್ತಿದ್ದಾರೆ. ಇದನ್ನು ಗಮನಿಸಿದ ವ್ಯಕ್ತಿಯೊಬ್ಬರು ಅವರ ಫೋಟೋ ಹಾಗೂ ವಿಡಿಯೋ ಸಮೇತ ಟ್ವೀಟ್ ಮಾಡಿದ್ದರು. ಡಿಜಿಪಿ, ಬೆಂಗಳೂರು ಟ್ರಾಫಿಕ್ ಪೊಲೀಸ್ ಹಾಗೂ ಕಬ್ಬನ್​ಪಾರ್ಕ್ ಸಂಚಾರ ಪೊಲೀಸರನ್ನು ಮೆನ್ಷನ್ ಮಾಡಿದ್ದ

ಹೆಲ್ಮೆಟ್​ ಧರಿಸದೆ ಮಹಿಳಾ ಪಿಎಸ್​ಐ ಸಂಚಾರ..! ➤ ಪ್ರಕರಣ ದಾಖಲು Read More »

ಕರ್ನಾಟಕ

ಅತಿ ಕಡಿಮೆ ಅಂತರದಲ್ಲಿ ವಿಮಾನ ಹಾರಾಟ..!➤ ಬೆಚ್ಚಿಬಿದ್ದ ಗ್ರಾಮಸ್ಥರು

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.19 ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತುಂಗಭದ್ರಾ ನದಿಯ ಪಾತ್ರದಲ್ಲಿ ವಿಮಾನವೊಂದು ಅತಿ ಕಡಿಮೆ ಅಂತರದಲ್ಲಿ ಹಾರಾಡುತ್ತಿದ್ದು, ಆತಂಕ ಸೃಷ್ಟಿಸಿದೆ. ಕಳೆದ 2-3 ದಿನಗಳಿಂದ ವಿಮಾನ ಹಾರಾಟ ನಡೆಸಿದೆ ಎಂದು ತಿಳಿದುಬಂದಿದೆ.ಇದರಿಂದಾಗಿ ಮುಂಡರಗಿ ತಾಲೂಕಿನ ಶೀರನಹಳ್ಳಿ, ಗುಮ್ಮಗೋಳ ಹಲವು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಅತಿ ಕಡಿಮೆ ಅಂತರದಿಂದ ವಿಮಾನ ಹಾರಾಟದಿಂದ ರೈತರು ಜಮೀನಿನಲ್ಲಿ ಕೆಲಸ ಮಾಡಲು ಭಯ ಪಡುತ್ತಿದ್ದಾರೆ ಎಂದು ತಿಳಿದುಬಂದಿದೆ.ಇನ್ನು ವಿಮಾನ ಯಾಕೆ ಕಡಿಮೆ ಅಂತರದಲ್ಲಿ ನಮ್ಮ ಗ್ರಾಮಗಳ ಮೇಲೆ ಹಾರಾಟ ಮಾಡುತ್ತಿದೆ ಎಂದು

ಅತಿ ಕಡಿಮೆ ಅಂತರದಲ್ಲಿ ವಿಮಾನ ಹಾರಾಟ..!➤ ಬೆಚ್ಚಿಬಿದ್ದ ಗ್ರಾಮಸ್ಥರು Read More »

ಕರ್ನಾಟಕ

ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ.!➤ಮೂವರು ಅಧಿಕಾರಿಗಳ ವಿರುದ್ಧ FIR  ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.19 ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿರುವ ಆರೋಪ ವ್ಯಕ್ತವಾಗಿದ್ದು, ನಿಗಮದ ಮೂವರು ಅಧಿಕಾರಿಗಳ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಗಮದ ವ್ಯವಸ್ಥಾಪಕ ನಿರ್ದೇಶಕ ಪಿ.ನಾಗೇಶ್ ಅವರು ಅಕ್ರಮದ ಬಗ್ಗೆ ದೂರು ನೀಡಿದ್ದಾರೆ. ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಸುರೇಶ್, ಹಿಂದಿನ ಮುಖ್ಯ ಪ್ರಧಾನ ವ್ಯವಸ್ಥಾಪಕ ಪ್ರಕಾಶ್ ಎಂ. ಹರಗಾಪುರೆ ಹಾಗೂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆರ್‌.ಟಿ. ಸೀತಾರಾಮ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು

ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ.!➤ಮೂವರು ಅಧಿಕಾರಿಗಳ ವಿರುದ್ಧ FIR  ದಾಖಲು Read More »

ಕರ್ನಾಟಕ

ಸಿದ್ದರಾಮಯ್ಯ ನೂತನ ಮುಖ್ಯಮಂತ್ರಿ ➤ ಕೆ.ಸಿ ವೇಣುಗೋಪಾಲ್ ಅಧಿಕೃತ ಘೋಷಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.18. ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯ ಹಾಗೂ ಏಕೈಕ ಉಪ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣು ಗೋಪಾಲ್, ಮೇ 20ರಂದು (ಶನಿವಾರ) ಮಧ್ಯಾಹ್ನ 12:30ಕ್ಕೆ ನೂತನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಜೊತೆಗೆ ಕೆಲವು ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.

ಸಿದ್ದರಾಮಯ್ಯ ನೂತನ ಮುಖ್ಯಮಂತ್ರಿ ➤ ಕೆ.ಸಿ ವೇಣುಗೋಪಾಲ್ ಅಧಿಕೃತ ಘೋಷಣೆ Read More »

ಕರ್ನಾಟಕ

ಅಧಿಕಾರ ಹಂಚಿಕೆ ಸೂತ್ರಕ್ಕೆ ಒಪ್ಪಿದ ಸಿದ್ಧು, ಡಿಕೆಶಿ ➤ 30-30 ತಿಂಗಳು ಸಿಎಂ ಪಟ್ಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.18. ಕರ್ನಾಟಕ ಸಿಎಂ ಆಯ್ಕೆ ಅಂತಿಮ ಹಂತಕ್ಕೆ ಬಂದು ನಿಂತಿದೆ. ಕರ್ನಾಟಕದ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ಧರಾಮಯ್ಯ ಆಯ್ಕೆಯಾಗಿದ್ದರೆ, ಡಿಕೆ ಶಿವಕುಮಾರ್ ಗೆ ಉಪ ಮುಖ್ಯಮಂತ್ರಿ ಪಟ್ಟ ದೊರೆತಿದೆ. ಈ ಆಯ್ಕೆ ನಡೆದಿರೋದು ಅಧಿಕಾರ ಹಂಚಿಕೆ ಸೂತ್ರದಿಂದ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಪಕ್ಷದಕ್ಕೆ ಸ್ಪಷ್ಟ ಬಹುಮತ ವಿಧಾನಸಭಾ ಚುನಾವಣೆಯಲ್ಲಿ ಬಂದು ಐದು ದಿನಗಳ ನಂತ್ರ, ಇಂದು ಕರ್ನಾಟಕ ಸಿಎಂ ಆಯ್ಕೆ ಫೈನಲ್ ಆಗಿದೆ ಎಂದು ಹೇಳಲಾಗುತ್ತಿದೆ. ಕೆಲ ದಿನಗಳಿಂದ ಸಿಎಂ ಹುದ್ದೆಗಾಗಿ ನಡೆಯುತ್ತಿದ್ದಂತ

ಅಧಿಕಾರ ಹಂಚಿಕೆ ಸೂತ್ರಕ್ಕೆ ಒಪ್ಪಿದ ಸಿದ್ಧು, ಡಿಕೆಶಿ ➤ 30-30 ತಿಂಗಳು ಸಿಎಂ ಪಟ್ಟ Read More »

ಕರ್ನಾಟಕ

91ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಮಂತ್ರಿ ಹೆಚ್​.ಡಿ ದೇವೇಗೌಡ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.18 ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್​ನ ರಾಷ್ಟ್ರೀಯ ಅಧ್ಯಕ್ಷರಾಗಿರುವ ಹೆಚ್​.ಡಿ ದೇವೇಗೌಡ ಅವರು 91ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ‘ದೇಶಕ್ಕೆ ನಿಮ್ಮ ಕೊಡುಗೆ ಅಪಾರ, ಆರೋಗ್ಯದಿಂದ ಇನ್ನು ಹೆಚ್ಚು ಕಾಲ ಬದುಕಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ, ‘ಹಿರಿಯ ಮುತ್ಸದ್ಧಿ

91ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಮಂತ್ರಿ ಹೆಚ್​.ಡಿ ದೇವೇಗೌಡ Read More »

ಕರ್ನಾಟಕ

ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಕರೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ.!➤ನಳಿನ್ ಕುಮಾರ್ ಕಟೀಲ್ 

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.18 ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಜನ ವಿದ್ಯುತ್ ಬಿಲ್ ಕಟ್ಟಬಾರದು. ತಮ್ಮ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದರು. ತಮಗೂ ಸೇರಿಸಿ ಎಲ್ಲರಿಗೂ ವಿದ್ಯುತ್ ಉಚಿತ ಎಂದು ತಿಳಿಸಿದ್ದರು. ಹೀಗಾಗಿ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಹೇಳಿದ್ದಾರೆ.ಸಿದ್ಧರಾಮಯ್ಯನವರೇ ಹೇಳಿರುವಾಗ ಜನ ಏಕೆ ವಿದ್ಯುತ್ ಬಿಲ್ ಕಟ್ಟುತ್ತಾರೆ? ನನ್ನ ಪ್ರಕಾರ ಯಾರೂ ಬಿಲ್ ಕಟ್ಟುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.    

ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಕರೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ.!➤ನಳಿನ್ ಕುಮಾರ್ ಕಟೀಲ್  Read More »

ಕರ್ನಾಟಕ

ವಿಧಾನಸಭೆ ಚುನಾವಣೆ ಸೋಲಿಗೆ ಎದೆಗುಂದಬೇಡಿ..!➤ಎಚ್‌.ಡಿ.ದೇವೇಗೌಡ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.18 ವಿಧಾನಸಭೆ ಚುನಾವಣೆ ಸೋಲಿನ ಬಗ್ಗೆ ಎದೆಗುಂದದೆ ಎಲ್ಲರೂ ಸೇರಿ ಪಕ್ಷ ಸಂಘಟನೆ ಮಾಡಿ ಬಲ ತುಂಬುವ ಕೆಲಸ ಮಾಡೋಣ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ. ಈ ಕುರಿತು ಭಾವನಾತ್ಮಕವಾಗಿ ಪಕ್ಷದ ಮುಖಂಡರಿಗೆ ಪತ್ರ ಬರೆದಿರುವ ಅವರು, ಪ್ರಜಾಪ್ರಭುತ್ವದ ಚುನಾವಣೆ ವ್ಯವಸ್ಥೆಯಲ್ಲಿ ಏಳು-ಬೀಳು ಸಹಜ. ಆದರೆ, ಪಕ್ಷಕ್ಕೆ ದೊರೆತಿರುವ ಫ‌ಲಿತಾಂಶದಿಂದ ಯಾರೂ ಎದೆಗುಂದಬಾರದು ಎಂದು ಮನವಿ ಮಾಡಿದ್ದಾರೆ.    

ವಿಧಾನಸಭೆ ಚುನಾವಣೆ ಸೋಲಿಗೆ ಎದೆಗುಂದಬೇಡಿ..!➤ಎಚ್‌.ಡಿ.ದೇವೇಗೌಡ Read More »

ಕರ್ನಾಟಕ
Scroll to Top