Bangalore

ಮೊಬೈಲ್ ಫೋನ್ ಬಳಸುತ್ತಿರುವ ವೇಳೆ ಸ್ಟೋಟಗೊಂಡು ಎಂಟು ವರ್ಷದ ಬಾಲಕಿ ಮೃತ್ಯು.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25 ಮೊಬೈಲ್‌ ಫೋನ್ ಬಳಸುತ್ತಿರುವ ವೇಳೆ ಮೊಬೈಲ್‌ ಸ್ಟೋಟಗೊಂಡು ಎಂಟು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಕೇರಳದ ತ್ರಿಶೂರ್‌ನಲ್ಲಿ ನಡೆದಿದೆ. ಆದಿತ್ಯಶ್ರೀ ಮೊಬೈಲ್‌ ಸ್ಟೋಟಕ್ಕೆ ಮೃತಳಾದ ಬಾಲಕಿ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಸಾವಿನ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.        

ಮೊಬೈಲ್ ಫೋನ್ ಬಳಸುತ್ತಿರುವ ವೇಳೆ ಸ್ಟೋಟಗೊಂಡು ಎಂಟು ವರ್ಷದ ಬಾಲಕಿ ಮೃತ್ಯು.! Read More »

ಕರ್ನಾಟಕ

ಮುಸ್ಲಿಮರ 2b ಮೀಸಲಾತಿ ರದ್ಧತಿಗೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂಕೋರ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.25. ರಾಜ್ಯ ಸರ್ಕಾರದ 2ಬಿ ಮೀಸಲಾತಿ ರದ್ದತಿ ಕುರಿತ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್ ಮೀಸಲಾತಿ ರದ್ಧತಿಗೆ ತಾತ್ಕಾಲಿಕ ತಡೆ‌ ನೀಡಿದೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಕೆ ಎಂ ಜೋಸೆಫ್‌ ಅವರ ನೇತೃತ್ವದ ಪೀಠ ಈ ಕುರಿತ ವಿಚಾರಣೆಯನ್ನು ಮೇ.9ರವರೆಗೆ ಮುಂದೂಡಿದ್ದು, ಆವರೆಗೆ ಆದೇಶದ ಅನ್ವಯ ಮೀಸಲಾತಿ ಮೊಟಕುಗೊಳಿಸಿ ಯಾವುದೇ ನೇಮಕಾತಿ, ದಾಖಲಾತಿ ಮಾಡಬಾರದು ಎಂದು ತಿಳಿಸಿದೆ.

ಮುಸ್ಲಿಮರ 2b ಮೀಸಲಾತಿ ರದ್ಧತಿಗೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂಕೋರ್ಟ್ Read More »

ಕರ್ನಾಟಕ

ಹಿರಿಯ ಕಾಂಗ್ರೆಸ್ ನಾಯಕ ಡಿ. ಬಿ. ಇನಾಮಾದಾರ್ ನಿಧನ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25 ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಡಿ. ಬಿ. ಇನಾಮಾದಾರ್ ನಿಧನ ಹೊಂದಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ದಾನಪ್ಪಗೌಡ ಬಸವನಗೌಡ ಇನಾಮಾದಾರ್ (73) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶ್ವಾಸಕೋಶ ಮತ್ತು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.    

ಹಿರಿಯ ಕಾಂಗ್ರೆಸ್ ನಾಯಕ ಡಿ. ಬಿ. ಇನಾಮಾದಾರ್ ನಿಧನ.! Read More »

ಕರ್ನಾಟಕ

ಮಗುವನ್ನು ಬಿಸಿ ನೀರಿನಲ್ಲಿ ಮುಳುಗಿಸಿ ಕೊಲೆಗೈದ ಪಾಪಿ!   ➤ಆರೋಪಿಯನ್ನು ಬಂಧಿಸಿದ ಪೋಲೀಸರು..!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25, ಕೊಲೆಗಾರ ವಿಕ್ರಮ್ ಮತ್ತು ಮಗುವಿನ ತಾಯಿ ಕಿರಣಾ ನಡುವೆ ಅಕ್ರಮ ಸಂಬಂಧವಿತ್ತು. ಕಿರಣಾಳನ್ನು ಮದುವೆಯಾಗಲು ವಿಕ್ರಮ್ ಬಯಸಿದ್ದು, ತನ್ನನ್ನು ಮದುವೆಯಾಗುವಂತೆ ಕಿರಣಾ ಬಳಿ ಕೇಳಿದ್ದಾನೆ. ಕಿರಣಾ ಮದುವೆಯಾಗಲು ನಿರಾಕರಿಸಿದಳು ಎಂಬ ಕಾರಣಕ್ಕೆ ಅವಳ ಒಂದೂವರೆ ವರ್ಷದ ಮಗುವನ್ನು ಬಿಸಿ ನೀರಿನ ಬಕೆಟ್‌ನಲ್ಲಿ ಮುಳುಗಿಸಿ ಕೊಂದ ಘಟನೆ ಮಹಾರಾಷ್ಟ್ರದ ಪುಣೆಯ ಪಿಂಪ್ರಿ ಚಿಂಚ್‌ವಾಡ್‌ನಲ್ಲಿ ನಡೆದಿದೆ. ಕೊಲೆಗಾರ ವಿಕ್ರಮ್ನನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗಲು ಕಿರಣಾ ನಿರಾಕರಿಸಿದ್ದು, ಇದೇ ಕೋಪಕ್ಕೆ ಮಗುವನ್ನು ಕೊಂದಿದ್ದಾನೆ’ ಎಂದು ಹಿರಿಯ ಇನ್ಸ್‌ಪೆಕ್ಟರ್

ಮಗುವನ್ನು ಬಿಸಿ ನೀರಿನಲ್ಲಿ ಮುಳುಗಿಸಿ ಕೊಲೆಗೈದ ಪಾಪಿ!   ➤ಆರೋಪಿಯನ್ನು ಬಂಧಿಸಿದ ಪೋಲೀಸರು..!   Read More »

ಕರ್ನಾಟಕ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25,ಕಾಯಮಾತಿ ನಿರೀಕ್ಷೆಯಲ್ಲಿದ್ದ ಪೌರ ಕಾರ್ಮಿಕರಿಗೆ ಬಿಗ್ ಶಾಕ್ ಎದುರಾಗಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಪೌರಕಾರ್ಮಿಕರ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ. ಬಿಬಿಎಂಪಿ ಸೇರಿದಂತೆ ರಾಜ್ಯದ 102 ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ನೇರ ವೇತನ ಪಾವತಿಯಡಿ ಕಾರ್ಯನಿರ್ವಹಿಸುತ್ತಿರುವ 40 ಸಾವಿರಕ್ಕೂ ಹೆಚ್ಚು ಪೌರ ಕಾರ್ಮಿಕರನ್ನು ಹಂತ ಹಂತವಾಗಿ ಕಾಯಂಗೊಳಿಸುವುದಕ್ಕೆ ಸರ್ಕಾರ ನಿರ್ಧರಿಸಿ, ಈ ಸಂಬಂಧ ಆದೇಶವನ್ನೂ ಹೊರಡಿಸಿತ್ತು. ಈ ಪೈಕಿ ಬಿಬಿಎಂಪಿಯ 14,980 ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸಬೇಕಿದೆ. ರಾಜ್ಯದ

Read More »

ಕರ್ನಾಟಕ

ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಸಿದ್ಧರಾಮಯ್ಯ!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25 ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಹೈಕಮಾಂಡ್‌ ನಾಯಕರ ಅಬ್ಬರದ ಪ್ರಚಾರದ ನಡುವೆ ರೈತರ ಜೀವನಾಡಿ ನಂದಿನಿ ಹಾಗೂ ಅಮುಲ್‌ ವಿವಾದ ಜೋರಾಗಿ ಸದ್ದು ಮಾಡುತ್ತಿದೆ. ಈ ಕುರಿತು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನಲ್ಲಿ ಸಭೆಯೊಂದನ್ನು ನಡೆಸಿದ್ದಾರೆ. ಆ

ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಸಿದ್ಧರಾಮಯ್ಯ! Read More »

ಕರ್ನಾಟಕ

ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಸುಳ್ಯದ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com  ಬೆಂಗಳೂರು, ಏ.25. ಬೆಂಗಳೂರಿನಲ್ಲಿ ನಡೆದ ಕಾರು ಹಾಗೂ ಬೈಕ್‌ ಅಪಘಾತದಲ್ಲಿ ಸುಳ್ಯ ತಾಲೂಕಿನ ಕೊಲ್ಲಮೊಗ್ರುವಿನ ಯುವಕ ಮೃತಪಟ್ಟ ಘಟನೆ ನಡೆದಿದೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರು ಧರ್ಮಪಾಲ ಗೌಡ ಬಾಳೆಬೈಲು ಮತ್ತು ಕಮಲಾಕ್ಷಿ ದಂಪತಿ ಪುತ್ರ ಯತೀಶ್‌ ಬಾಳೆಬೈಲು (30) ಮೃತ ಯುವಕ ಎಂದು ಗುರುತಿಸಲಾಗಿದೆ. ಯತೀಶ್‌ ಅವರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.  

ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಸುಳ್ಯದ ಯುವಕ ಮೃತ್ಯು Read More »

ಕರ್ನಾಟಕ

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ.!   ➤ ನೀತಿ ಸಂಹಿತೆ ಅಂತ್ಯಗೊಂಡ ಬಳಿಕ ಡಿಎ ಹೆಚ್ಚಳ!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25 ರಾಜ್ಯ ಸರ್ಕಾರಿ ನೌಕರರಿಗೆ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದು ಅಂತ್ಯಗೊಂಡ ಬಳಿಕ ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಶೇಕಡ 4 ತುಟ್ಟಿಭತ್ಯೆ ಹೆಚ್ಚಳ ಮಂಜೂರು ಆದೇಶ ಹೊರಬೀಳಲಿದೆ ಎಂದು ತಿಳಿಸಿದ್ದಾರೆ. ಮೇ 13 ರಂದು ಚುನಾವಣಾ ನೀತಿ ಸಂಹಿತೆ ಅಂತ್ಯಗೊಳ್ಳಲಿದ್ದು, ಇದಾದ ಬಳಿಕ ತುಟ್ಟಿಭತ್ಯೆ ಮಂಜೂರು ಆದೇಶ ಹೊರಬೀಳಲಿದೆ.ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಈ ಕುರಿತಂತೆ ರಾಜ್ಯ

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ.!   ➤ ನೀತಿ ಸಂಹಿತೆ ಅಂತ್ಯಗೊಂಡ ಬಳಿಕ ಡಿಎ ಹೆಚ್ಚಳ! Read More »

ಕರ್ನಾಟಕ

SSLC ಮೌಲ್ಯಮಾಪನ ಆರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.24. ಎಸ್.ಎಸ್.ಎಲ್.ಸಿ ಪರೀಕ್ಷೆಯ ಮೌಲ್ಯಮಾಪನ ಎ.24ರಿಂದ ಆರಂಭವಾಗಲಿದ್ದು, ಮೇ 2 ನೇ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿದೆ. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗಿದ್ದು, ಮೇ ಎರಡನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗುವ ಸಾಧ್ಯತೆ ಇದೆ.ಈ ಬಾರಿ ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆಗೆ 8.60 ಲಕ್ಷವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 10 ನೇ ತರಗತಿ ಮಕ್ಕಳು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಮೇ

SSLC ಮೌಲ್ಯಮಾಪನ ಆರಂಭ Read More »

ಕರ್ನಾಟಕ

 ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ಆಸ್ಪತ್ರೆಯ ವೈದ್ಯ.!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.24 ಬೆಂಗಳೂರಿನಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳ ತಜ್ಞರಾಗಿದ್ದ ಡಾ.ಎಸ್. ರೇಣುಕಾನಂದ(43) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಅವರು ಮಕ್ಕಳ ತಜ್ಞರಾಗಿದ್ದರು.ಅನಾರೋಗ್ಯದಿಂದ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಸೀರೆಯಲ್ಲಿ ರೇಣುಕಾನಂದ ನೇಣು ಹಾಕಿಕೊಂಡಿದ್ದಾರೆ.      

 ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ಆಸ್ಪತ್ರೆಯ ವೈದ್ಯ.!   Read More »

ಕರ್ನಾಟಕ
Scroll to Top