Bangalore

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲಿಯೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.04. ಮಗಳನ್ನು ಶಾಲೆಗೆ ಬಿಡಲು ಬೈಕ್’ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದು ತಂದೆ- ಮಗಳು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಾಗಡಿಯ ಸಾಬರಪಾಳ್ಯದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಾಗಡಿಯ ಕಲ್ಯಾ ಗ್ರಾಮದ ಯೋಗೇಶ್ (47) ಮಗಳು ಹರ್ಷಿತಾ(14) ಮೃತಪಟ್ಟವರು. ಪ್ರತಿನಿತ್ಯ ಶಾಲೆಗೆ ಬಿಡುತ್ತಿದ್ದಂತೆ ಮಗಳನ್ನು ಬೈಕ್’ನಲ್ಲಿ ಕೂರಿಸಿಕೊಂಡು ತಂದೆ ಶಾಲೆಯತ್ತ ಸಾಬರಪಾಳ್ಯದ ಮಾರ್ಗವಾಗಿ ಹೋಗುತ್ತಿದ್ದಾಗ ಜವರಾಯನಾಗಿ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.  

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲಿಯೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇನ್ಮುಂದೆ ಕಾರಿನಲ್ಲಿ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ➤ ಸಚಿವ ನಿತಿನ್ ಗಡ್ಕರಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.04. ಕಾರಿನ ಸೀಟ್ ಬೆಲ್ಟ್ ಗಳ ಮಹತ್ವವನ್ನು ಎತ್ತಿ ತೋರಿಸಿದ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ಕಾರಿನಲ್ಲಿ ಪ್ರಯಾಣಿಸುವ ಎಲ್ಲರೂ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ಎಂದು ಹೇಳಿದ್ದಾರೆ. ಕಾರ್ಯಕ್ರಮವೊಂದರ ವಿಡಿಯೋವನ್ನು ಹಂಚಿಕೊಂಡ ಕೇಂದ್ರ ಸಚಿವರು, ಸೀಟ್ ಬೆಲ್ಟ್ ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದ್ದಾರೆ. “ಕಾರಿನಲ್ಲಿ ಕುಳಿತುಕೊಳ್ಳುವ ಎಲ್ಲರೂ ಸೀಟ್ ಬೆಲ್ಟ್ ಧರಿಸುವುದನ್ನು ಈಗ ಕಡ್ಡಾಯಗೊಳಿಸಲಾಗುವುದು” ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಟ್ವೀಟ್ ಮಾಡಿದ್ದಾರೆ.  

ಇನ್ಮುಂದೆ ಕಾರಿನಲ್ಲಿ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ➤ ಸಚಿವ ನಿತಿನ್ ಗಡ್ಕರಿ Read More »

ಕರ್ನಾಟಕ

ಮಹಿಳೆಯ ಖಾಸಗಿ ಫೋಟೊ ತೆಗೆದ ಪ್ರಕರಣ ➤ ಆರೋಪಿಯ ವಿರುದ್ಧ ಎಫ್‌ಐಆರ್‌ ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.04. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಮಹಿಳೆಯೊಬ್ಬರ ಖಾಸಗಿ ಫೋಟೊಗಳನ್ನು ಕ್ಲಿಕ್ಕಿಸಿದ್ದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ‘ಆಂಧ್ರಪ್ರದೇಶದ 40 ವರ್ಷ ವಯಸ್ಸಿನ ಮಹಿಳೆ ದೂರು ನೀಡಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು. ಶಾರ್ಟ್‌ ಧರಿಸಿದ್ದ ಅವರ ಫೋಟೊವನ್ನು ಆರೋಪಿ ತನ್ನ ಮೊಬೈಲ್‌ ನಲ್ಲಿ ಕ್ಲಿಕ್ಕಿಸಿದ್ದ. ಅದನ್ನು ನೋಡಿದ್ದ ಮಹಿಳೆ, ಆತನನ್ನು ಪ್ರಶ್ನಿಸಿದ್ದರು. ಇಬ್ಬರ ನಡುವೆ ವಾಗ್ವಾದ ನಡೆದಿತ್ತು.’  

ಮಹಿಳೆಯ ಖಾಸಗಿ ಫೋಟೊ ತೆಗೆದ ಪ್ರಕರಣ ➤ ಆರೋಪಿಯ ವಿರುದ್ಧ ಎಫ್‌ಐಆರ್‌ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭೀಕರ ಅಗ್ನಿ ದುರಂತ ➤ 8 ಮಂದಿ ಮೃತ್ಯು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.04. ಹೊಸಪೇಟೆ ತಾಲೂಕಿನ ಮೇಡಿಹಳ್ಳಿಯಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ 8 ಮಂದಿ ಮೃತಪಟ್ಟಿದ್ದಾರೆ. ಇವರೆಲ್ಲ ತಮ್ಮ ಊರಿನಿಂದ ಬೆಂಗಳೂರಿಗೆ ಬಂದು ಕೂಲಿ ಕೆಲಸ ಮಾಡಿ ಜೀವನ ಕಟ್ಟಿಕೊಂಡಿದ್ದರು. ಒಂದೇ ಸಣ್ಣ ರೂಮಿನಲ್ಲಿ ವಾಸವಾಗಿದ್ದರು. ಮಧ್ಯರಾತ್ರಿ ಮಲಗಿದ್ದ ಒಬ್ಬ ಸಿಗರೇಟ್ ಸೇದಲು ಕಿಡಿ ಹೊತ್ತಿಸಿದ್ದು ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಇಡಿ ರೂಮಿಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಬಿಹಾರ್ ಮೂಲದ ಸುಮಯ್ ಗುಪ್ತಾ, ತಿಲಕ್ ರಾಮ, ಸನೋಜ್ ಶರ್ಮಾ, ನೀರಜ್ ಭಾರತಿ, ಚಂದ್ರಪಾಲ್, ಲಕ್ಷಣ, ನಿಕೋನ್

ಭೀಕರ ಅಗ್ನಿ ದುರಂತ ➤ 8 ಮಂದಿ ಮೃತ್ಯು..! Read More »

ಕರ್ನಾಟಕ

ಏ. 8ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮ ➤ ಸಿಎಂ ಬೊಮ್ಮಾಯಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.04. ಏಪ್ರಿಲ್ 8 ರಂದು ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಳ್ಳಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ಪಟ್ಟಿಪಕ್ಷದ ಮೊದಲ ಪಟ್ಟಿಯ ಬಗ್ಗೆ ಕ್ಷೇತ್ರದಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಜಿಲ್ಲಾವಾರು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗಿದ್ದು ನಾಳೆ ಮತ್ತು ನಾಡಿದ್ದು ರಾಜ್ಯಮಟ್ಟದ ಕೋರ್ ಕಮಿಟಿ ಸಭೆ ನಡೆಯಲಿದೆ. ಬಳಿಕ

ಏ. 8ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮ ➤ ಸಿಎಂ ಬೊಮ್ಮಾಯಿ..! Read More »

ಕರ್ನಾಟಕ

ಇನ್ನೂ 2 ದಿನ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ➤ ಹವಾಮಾನ ಇಲಾಖೆ ಮುನ್ಸೂಚನೆ.!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ. 04. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಮುಂದಿನ 48 ಗಂಟೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ಅಥವಾ ರಾತ್ರಿ ಹಗುರದಿಂದ ಸಾಧಾರಣದ ಮಳೆಯಾಗುವ ಸಾಧ್ಯತೆ ಇದೆ

ಇನ್ನೂ 2 ದಿನ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ➤ ಹವಾಮಾನ ಇಲಾಖೆ ಮುನ್ಸೂಚನೆ.!! Read More »

ಕರ್ನಾಟಕ

ಚುನಾವಣಾ ಆಯೋಗದಿಂದ ಭರ್ಜರಿ ಭೇಟೆ  ➤ ರಾಜ್ಯಾದ್ಯಂತ ಆರೇ ದಿನಗಳಲ್ಲಿ 47 ಕೋಟಿ ರೂ.ಜಪ್ತಿ..!  

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ. 04. ಕರ್ನಾಟಕ ವಿಧಾನಸಭೆ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಚುನಾವಣಾ ಆಯೋಗವು ರಾಜ್ಯಾದ್ಯಂತ ನಗದು, ಮದ್ಯ, ಉಡುಗೊರೆ, ಮಾದಕವಸ್ತುಗಳು ಸೇರಿದಂತೆ ಒಟ್ಟು 47.43 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದೆ. ಚುನಾವಣಾ ದಿನಾಂಕ ಘೋಷಣೆಗೂ ಮೊದಲು 80 ಕೋಟಿ ರೂ. ನಗದು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದೀಗ ಅಬಕಾರಿ ಇಲಾಖೆಯು 450 ಗಂಭೀರ ಪ್ರಕರಣಗಳು, ಮದ್ಯದ ಪರವಾನಗಿ ನಿಯಮ ಉಲ್ಲಂಘನೆ ಅಡಿ

ಚುನಾವಣಾ ಆಯೋಗದಿಂದ ಭರ್ಜರಿ ಭೇಟೆ  ➤ ರಾಜ್ಯಾದ್ಯಂತ ಆರೇ ದಿನಗಳಲ್ಲಿ 47 ಕೋಟಿ ರೂ.ಜಪ್ತಿ..!   Read More »

ಕರ್ನಾಟಕ

ಭ್ರಷ್ಟಾಚಾರದ ವಿರುದ್ಧ ಹೋರಾಡಲು ಯಾರನ್ನೂ ಬಿಡಬೇಡಿ ➤ ಸಿಬಿಐಗೆ ಪ್ರಧಾನಿ ಮೋದಿ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ. 04. ಭ್ರಷ್ಟಾಚಾರದ ವಿರುದ್ಧ ಹೋರಾಡಲು ಯಾರನ್ನೂ ಬಿಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಮನವಿ ಮಾಡಿದ್ದಾರೆ. ಕೇಂದ್ರ ಏಜೆನ್ಸಿಯ ವಜ್ರಮಹೋತ್ಸವದ ಸಂದರ್ಭದಲ್ಲಿ ದೆಹಲಿಯಲ್ಲಿ ಸಿಬಿಐ ಅಧಿಕಾರಿಗಳಿಗೆ ʻದೇಶವು ನಿಮ್ಮೊಂದಿಗಿದೆ, ನಿಮ್ಮ ಕೆಲಸದತ್ತ ಗಮನ ಹರಿಸಿʼ ಎಂದು ಪ್ರಧಾನಿ ಮೋದಿ ಹೇಳಿದರು.

ಭ್ರಷ್ಟಾಚಾರದ ವಿರುದ್ಧ ಹೋರಾಡಲು ಯಾರನ್ನೂ ಬಿಡಬೇಡಿ ➤ ಸಿಬಿಐಗೆ ಪ್ರಧಾನಿ ಮೋದಿ ಮನವಿ Read More »

ರಾಷ್ಟ್ರೀಯ ನ್ಯೂಸ್

ಡಿ.ಕೆ.ಶಿವಕುಮಾರ್ ‘ಮುಖ್ಯಮಂತ್ರಿ’ಯಾಗಲು ಹೈಕಮಾಂಡ್ ಒಪ್ಪಲ್ಲ  – ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ.!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ. 04. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಆಗಲು ಹೈಕಮಾಂಡ್ ಒಪ್ಪುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯರ ಈ ಹೇಳಿಕೆಯು ರಾಜ್ಯ ಕಾಂಗ್ರೆಸ್ ನಲ್ಲಿ ಕೋಲಾಹಲ ಸೃಷ್ಟಿಸಿದೆ. ಈ ಕುರಿತು ಖಾಸಗಿ ಸುದ್ದಿವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಡಿಕೆಶಿ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಹೈಕಮಾಂಡ್ ಒಪ್ಪುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ನಾನು ಡಿ.ಕೆ. ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು. ಇದು ನನ್ನ ಸಾರ್ವಜನಿಕ

ಡಿ.ಕೆ.ಶಿವಕುಮಾರ್ ‘ಮುಖ್ಯಮಂತ್ರಿ’ಯಾಗಲು ಹೈಕಮಾಂಡ್ ಒಪ್ಪಲ್ಲ  – ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ.!! Read More »

ಕರ್ನಾಟಕ

ಪಡಿತರ ವಿತರಣೆ ವೇಳೆ ತಳ್ಳಾಟ,ನೂಕಾಟ   ➤ಕಾಲ್ತುಳಿತದಿಂದ 11  ಮಂದಿ ಮೃತ್ಯು…!

(ನ್ಯೂಸ್ ಕಡಬ)Newskadaba.com ಬೆಂಗಳೂರು, ಏ.01 ಪಾಕಿಸ್ಥಾನದ ಬಂದರು ನಗರಿ ಕರಾಚಿಯಲ್ಲಿ ರಮ್ಜಾನ್‌ ಆಹಾರ ವಿತರಣ ಕೇಂದ್ರದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಮಹಿಳೆಯರು ಮತ್ತು ಮಕ್ಕಳು ಸಹಿತ 11 ಮಂದಿ ಬಲಿಯಾಗಿದ್ದಾರೆ. ಆಹಾರ ವಿತರಣೆ ನಡೆಯುತ್ತಿದ್ದ ಪ್ರದೇಶದಲ್ಲಿ ವಿದ್ಯುತ್‌ಪ್ರವಾಹವಿದ್ದ ತಂತಿಯೊಂದು ಬಿದ್ದಿತ್ತು.ಕೆಲವರು ಗೊತ್ತಿಲ್ಲದೇ ಅದರ ಮೇಲೆ ಕಾಲಿಟ್ಟಿದ್ದಾರೆ.ಅದು ಶಾಕ್‌ ಹೊಡೆದಾಗ ಭಯದಿಂದ ಒಬ್ಬರನ್ನೊಬ್ಬರು ನೂಕಿ ಮುಂದೆ ಓಡಲು ಆರಂಭಿಸಿದ್ದಾರೆ. ಈ ವೇಳೆ ಉಂಟಾದ ತಳ್ಳಾಟದಿಂದ ಈ ದುರಂತ ಸಂಭವಿಸಿದೆ.                

ಪಡಿತರ ವಿತರಣೆ ವೇಳೆ ತಳ್ಳಾಟ,ನೂಕಾಟ   ➤ಕಾಲ್ತುಳಿತದಿಂದ 11  ಮಂದಿ ಮೃತ್ಯು…! Read More »

ಕರ್ನಾಟಕ
Scroll to Top