Bangalore

ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ ➤ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.30. ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ನಾಳೆಯಿಂದ ಪ್ರಾರಂಭವಾಗಲಿದ್ದು, ಏ.15ರವರೆಗೆ ನಡೆಯಲಿದೆ. ಈ ಬಾರಿಯ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವುದಕ್ಕೆ ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ. ರಾಜ್ಯದಲ್ಲಿ ಈ ಸಲ ಒಟ್ಟು 15,498 ಶಾಲೆಗಳಿಂದ 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಸಿಕೊಂಡಿದ್ದಾರೆ. ಇನ್ನು ಪಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮ ತಡೆಯಲು ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಎಸ್.ಎಸ್.ಎಲ್‍ಸಿ. ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ:  […]

ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ ➤ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ Read More »

ಕರ್ನಾಟಕ

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುವ ವದಂತಿ..!! ➤ ಹೆಬ್ಬಾರ್, ಎಸ್‌ಟಿಎಸ್‌ ಜತೆ ಸಿಎಂ ಚರ್ಚೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.  ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರಲಿದ್ದಾರೆ ಎಂಬ ವದಂತಿ ಹಿನ್ನೆಲೆಯಲ್ಲಿ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹಾಗೂ ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ನಿವಾಸಕ್ಕೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ.ವಿಧಾನಸಭೆಗೆ ಚುನಾವಣೆಗೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಕೊಪ್ಪಳ, ಹಾವೇರಿ, ಧಾರವಾಡ ಜಿಲ್ಲೆಗಳ ಪ್ರವಾಸ ರದ್ದುಗೊಳಿಸಿ ರೇಸ್‌ಕೋರ್ಸ್‌ ನಿವಾಸದಲ್ಲಿದ್ದರು. ಅಲ್ಲಿಗೆ ಸಚಿವರನ್ನು ಕರೆಸಿಕೊಂಡು ಪಕ್ಷ ತ್ಯಜಿಸದಂತೆ ಕಿವಿ ಮಾತು ಹೇಳಿದರೆಂದು ತಿಳಿದು ಬಂದಿದೆ. ಈ ಮಧ್ಯೆ ಸಚಿವ

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುವ ವದಂತಿ..!! ➤ ಹೆಬ್ಬಾರ್, ಎಸ್‌ಟಿಎಸ್‌ ಜತೆ ಸಿಎಂ ಚರ್ಚೆ Read More »

ಕರ್ನಾಟಕ

ರಾಜ್ಯದಲ್ಲಿ 5 ದಿನ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆ.!! ➤ಹವಾಮಾನ ಇಲಾಖೆ ಮುನ್ಸೂಚನೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.30 ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮೈಸೂರು, ಮಂಡ್ಯ, ಕೋಲಾರ, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಾರ್ಚ್ 30 ರಿಂದ ಏಪ್ರಿಲ್ 4ರವರೆಗೆ ಮಳೆಯಾಗಲಿದೆ. ಮೋಡ ಕವಿದ ವಾತಾವರಣದೊಂದಿಗೆ ಗಾಳಿಯ ಪ್ರಮಾಣ ಇರಲಿದೆ.ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ

ರಾಜ್ಯದಲ್ಲಿ 5 ದಿನ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆ.!! ➤ಹವಾಮಾನ ಇಲಾಖೆ ಮುನ್ಸೂಚನೆ..! Read More »

ಕರ್ನಾಟಕ

ಬಿ.ಎಸ್ ಯಡಿಯೂರಪ್ಪ ತುರ್ತು ಪತ್ರಿಕಾಗೋಷ್ಠಿ ➤ಎಲೆಕ್ಷನ್ ಹೊತ್ತಲ್ಲೇ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ..!!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮಾ.30 ಬೆಂಗಳೂರಿನಲ್ಲಿ ಮಾ.30(ಇಂದು)  ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ.ಬೆಂಗಳೂರು ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ತುರ್ತು ಸುದ್ದಿಗೋಷ್ಠಿ ಕರೆಯಲಾಗಿದ್ದು, ಯಡಿಯೂರಪ್ಪ ಪ್ರಮುಖ ಮಾಹಿತಿ ಹಂಚಿಕೊಳ್ಳುವ ಸಾಧ್ಯತೆ ಇದೆ.   ಈಗಾಗಲೇ ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ, ಚುನಾವಣೆ ಕಾರ್ಯತಂತ್ರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಇಂದಿನ ಪತ್ರಿಕಾಗೋಷ್ಠಿಯಲ್ಲಿ ಯಡಿಯೂರಪ್ಪ ಮಹತ್ವದ ಮಾಹಿತಿ ಹಂಚಿಕೊಳ್ಳುವ ಸಾಧ್ಯತೆ ಇದೆ. ಅವರ ತುರ್ತು ಪತ್ರಿಕಾಗೋಷ್ಠಿ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.    

ಬಿ.ಎಸ್ ಯಡಿಯೂರಪ್ಪ ತುರ್ತು ಪತ್ರಿಕಾಗೋಷ್ಠಿ ➤ಎಲೆಕ್ಷನ್ ಹೊತ್ತಲ್ಲೇ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ..!! Read More »

ಕರ್ನಾಟಕ

`SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್                       ➤ ಈ ಬಾರಿಯೂ ಸಿಗಲಿದೆ ಶೇ.10 ರಷ್ಟು ಗ್ರೇಸ್ ಮಾರ್ಕ್ಸ್..!!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮಾ.30 2022-23ನೇ ಸಾಲಿನ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿಯೂ ಕೊರೊನಾ ಬ್ಯಾಚ್ ಎಂದು ಪರಿಗಣಿಸಿ ಶೇ. 10 ರಷ್ಟು ಗ್ರೇಸ್ ಅಂಕ ನೀಡುವುದಾಗಿ ತಿಳಿಸಿದೆ. ಈ ಕುರಿತು ಮಾಹಿತಿ ನೀಡಿರುವ ಎಸ್‌ಎಸ್ ಎಲ್ ಸಿ ಬೊರ್ಡ್ ನಿರ್ದೇಶಕ ರಾಮಚಂದ್ರ, ಈ ಬಾರಿಯೂ ಕೊರೊನಾ ಬ್ಯಾಚ್ ಎಂದು ಪರಿಗಣಿಸಿ ಶೇ.10 ರಷ್ಟು ಗ್ರೇಸ್ ಅಂಕ ನೀಡಲಾಗುವುದು. ಮೂರು ವಿಷಯಗಳಿಗೆ ಮಾತ್ರ ಗ್ರೇಸ್

`SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್                       ➤ ಈ ಬಾರಿಯೂ ಸಿಗಲಿದೆ ಶೇ.10 ರಷ್ಟು ಗ್ರೇಸ್ ಮಾರ್ಕ್ಸ್..!! Read More »

ಕರ್ನಾಟಕ

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ➤7 `IAS’ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮಾ.30 ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಎಂದು ರಾಜ್ಯ ಸರ್ಕಾರ ಆದೇಶಿಸಿದೆ.ಈ ಸಂಬಂಧ ಆದೇಶ ಹೊರಡಿಸಿರುವಂತ ಸರ್ಕಾರವು, ಕೆಪಿಸಿಎಲ್ ಎಂ.ಡಿಯಾಗಿದ್ದಂತ ಎಂ ಎಸ್ ಶ್ರೀಖರ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸೆಕ್ರೇಟರಿಯಾಗಿ ನೇಮಕ ಮಾಡಲಾಗಿದೆ. ಆಯುಷ್ ಇಲಾಖೆಯ ಕಮೀಷನರ್ ಆಗಿದ್ದಂತ ಮಂಜುನಾಥ್ ಜೆ ಅವರನ್ನು ಎಡ್ಸ್ ನಿಯಂತ್ರಣ ಸೊಸೈಟಿಯ ಪ್ರೊಜೆಕ್ಟ್ ಡೈರೆಕ್ಟರ್ ಆಗಿ ನೇಮಿಸಿದೆ.ಶೈಖ್ ತನ್ವೀರ್ ಆಸಿಪ್ ಅವರನ್ನು ಅಬಕಾರಿ ಇಲಾಖೆಯ ಹೆಚ್ಚುವರಿ

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ➤7 `IAS’ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

ಮೊದಲ ದಿನದ 5, 8ನೇ ತರಗತಿ ಮೌಲ್ಯಾಂಕನ ಯಶಸ್ವಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29. ಖಾಸಗಿ ಶಾಲೆಗಳ ತೀವ್ರ ವಿರೋಧದ ನಡುವೆಯೂ ರಾಜ್ಯಾದ್ಯಂತ 5 ಮತ್ತು 8ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಮೊದಲ ದಿನ ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆದಿದ್ದು, 5ನೇ ತರಗತಿಗೆ 56,157 ಶಾಲೆಗಳಿಂದ 9,59,734 ವಿದ್ಯಾರ್ಥಿಗಳು ಹಾಗೂ 8ನೇ ತರಗತಿಗೆ 22,639 ಶಾಲೆಯ 9,43,919 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದತ್ತಾಂಶ ನೀಡಿದೆ.  

ಮೊದಲ ದಿನದ 5, 8ನೇ ತರಗತಿ ಮೌಲ್ಯಾಂಕನ ಯಶಸ್ವಿ Read More »

ಕರ್ನಾಟಕ

ಹಾಡಹಗಲೇ ಗಾಂಜಾ ಮಾರಾಟ​       ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29.  ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನ ಬಂಧಿಸಿ ಬರೋಬ್ಬರಿ 15 ಲಕ್ಷ ಮೌಲ್ಯದ 25 ಕೆಜಿ ಗಾಂಜಾವನ್ನ ವಶ ಪಡಿಸಿಕೊಳ್ಳುವಲ್ಲಿ ಆನೇಕಲ್ ಪೋಲೀಸರು ಯಶಸ್ವಿಯಾಗಿದ್ದಾರೆ. ಆನೇಕಲ್ ಪಟ್ಟಣದ ಸೋಮಶೇಖರ್ ಹಾಗೂ ರಾಘವೇಂದ್ರ ಬಂಧಿತ ಆರೋಪಿಗಳಾಗಿದ್ದಾರೆ.  

ಹಾಡಹಗಲೇ ಗಾಂಜಾ ಮಾರಾಟ​       ➤ ಆರೋಪಿಗಳು ಅರೆಸ್ಟ್ Read More »

ಕರ್ನಾಟಕ

ಬಿಎಂಟಿಸಿ ಚಾಲಕನ ಜೇಬಿನಲ್ಲಿದ್ದ ಹಣ ಸೀಜ್ ಮಾಡಿದ ಅಧಿಕಾರಿಗಳು.!   ➤ ಹೈಕೋರ್ಟ್ ಮೊರೆ ಹೋದ ಚಾಲಕ                        

(ನ್ಯೂಸ್ ಕಡಬ)Newskadaba.com ಬೆಂಗಳೂರು: ಮಾ.29 ನೌಕರರಿಗೆ ಬಿಎಂಟಿಸಿ ಅಧಿಕಾರಿಗಳ ಕಿರುಕುಳ ಮುಂದುವರಿದಿದ್ದು, ಮಗಳ ಕಾಲೇಜು ಫೀಸ್ ಕಟ್ಟಲು ಜೇಬಲ್ಲಿ ಇಟ್ಟುಕೊಂಡಿದ್ದ ಹಣವನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ. ನ್ಯಾಯ ನೀಡುವಂತೆ ಬಸ್ ಚಾಲಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಸಾರಿಗೆ ನೌಕರರು ಅಧಿಕಾರಿಗಳ ಕಿರುಕುಳ ತಾಳಲಾರದೆ ಪ್ರತಿವರ್ಷ ಮುಷ್ಕರಕ್ಕೆ ಮುಂದಾಗುತ್ತಾರೆ. ಸರ್ಕಾರ ಕೂಡ ಅಧಿಕಾರಿಗಳ ಕಿರುಕುಳವನ್ನು ತಪ್ಪಿಸುತ್ತೇವೆ ಅಂತ ಸಾಲು ಸಾಲು ಭರವಸೆಯನ್ನು ಕೊಡುತ್ತದೆ. ಆದರೆ ಎಷ್ಟೇ ಭರವಸೆ ನೀಡಿದರೂ ಬಿಎಂಟಿಸಿಯಲ್ಲಿ ಅಧಿಕಾರಿಗಳ ಕಿರುಕುಳ ತಪ್ಪುತ್ತಿಲ್ಲ ಎನ್ನುವುದಕ್ಕೆ ಈ ಪ್ರಕರಣ ಉದಾಹರಣೆಯಾಗಿ

ಬಿಎಂಟಿಸಿ ಚಾಲಕನ ಜೇಬಿನಲ್ಲಿದ್ದ ಹಣ ಸೀಜ್ ಮಾಡಿದ ಅಧಿಕಾರಿಗಳು.!   ➤ ಹೈಕೋರ್ಟ್ ಮೊರೆ ಹೋದ ಚಾಲಕ                         Read More »

ಕರ್ನಾಟಕ

ಅಕ್ರಮ ಚಟುವಟಿಕೆಗಳ ತಾಣವಾಯ್ತು ಬೆಂಗಳೂರಿನ ಹೃದಯ ಭಾಗದ ಸ್ಕೈವಾಕ್​​        ➤ ಕಾಂಡೋಮ್​ ಸೇರಿದಂತೆ ತರಹೇವಾರಿ ತ್ಯಾಜ್ಯ ಪತ್ತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29. ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಎಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತೆ ಅಂತ ಹೇಳುವುದು ಕಷ್ಟ. ಏಕೆಂದರೆ ಪುಂಡ‌ರು ಎಲ್ಲಿ ಬೇಕಿದ್ದರೂ ಮೋಜು ಮಸ್ತಿ ಮಾಡುತ್ತಾರೆ. ಸರ್ಕಾರಿ ಶಾಲೆ  ಆದರೂ ಆಗಬಹುದು, ಆಟದ ಮೈದಾನ ಆದರೂ ಸರಿಯೇ. ಆದರೆ ಇದೀಗ ಜನ ಓಡಾಡುವ ಸ್ಕೈವಾಕ್​ ಕೂಡ ಪುಂಡರ ತಾಣ ಆಗಿದೆ. ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಣಣೆಯಲ್ಲಿ ರಸ್ತೆದಾಟುವುದು ಅಷ್ಟು ಸುಲಭದ ಮಾತಲ್ಲ. ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಗೆ ಹೋಗಬೇಕು ಎಂದರೆ ಮೇಲ್ಸೇತುವೆಗಳು ಅನಿವಾರ್ಯ.

ಅಕ್ರಮ ಚಟುವಟಿಕೆಗಳ ತಾಣವಾಯ್ತು ಬೆಂಗಳೂರಿನ ಹೃದಯ ಭಾಗದ ಸ್ಕೈವಾಕ್​​        ➤ ಕಾಂಡೋಮ್​ ಸೇರಿದಂತೆ ತರಹೇವಾರಿ ತ್ಯಾಜ್ಯ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top