Bangalore

ರಾಜ್ಯದ ಹಲವು ಹೆದ್ದಾರಿ ಅಭಿವೃದ್ಧಿ       ➤ ನಿತಿನ್‌ ಗಡ್ಕರಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.23. ಹೊನ್ನಾವರ-ಚಿತ್ತೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಕರ್ನಾಟಕದ ಹಲವು ಹೆದ್ದಾರಿಗಳನ್ನು ಉನ್ನತೀಕರಣಗೊಳಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, 2022-23ನೇ ಸಾಲಿನಲ್ಲಿ ಅಭಿವೃದ್ಧಿಗೆ ಆಯ್ದುಕೊಂಡ ರಾಜ್ಯದ ಹೆದ್ದಾರಿ ವಿವರಗಳನ್ನು ನೀಡಿದ್ದಾರೆ.  

ರಾಜ್ಯದ ಹಲವು ಹೆದ್ದಾರಿ ಅಭಿವೃದ್ಧಿ       ➤ ನಿತಿನ್‌ ಗಡ್ಕರಿ Read More »

ಕರ್ನಾಟಕ

ಇಂದಿನಿಂದ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ      ➤ ಸಿಎಂ ಚಾಲನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.23. ಇಂದಿನಿಂದ ಮಾರ್ಚ್ 30ರವರೆಗೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಲನಚಿತ್ರ ಅಕಾಡೆಮಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜಂಟಿಯಾಗಿ ಫಿಲಂ ಫೆಸ್ಟಿವಲ್ ಆಯೋಜಿಸಿವೆ. ವಿಧಾನಸೌಧದ ಎದುರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫಿಲಂ ಫೆಸ್ಟಿವಲ್ ಉದ್ಘಾಟಿಸಲಿದ್ದಾರೆ. ಚಲನಚಿತ್ರೋತ್ಸವ ಸ್ಮರಣ ಸಂಚಿಕೆಯನ್ನು ವಿಜಯೇಂದ್ರ ಪ್ರಸಾದ್ ಬಿಡುಗಡೆ ಮಾಡಲಿದ್ದಾರೆ. ಅಶೋಕ್ ಕಶ್ಯಪ್ ಉಪಸ್ಥಿತರಿರುತ್ತಾರೆ.  

ಇಂದಿನಿಂದ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ      ➤ ಸಿಎಂ ಚಾಲನೆ Read More »

ಕರ್ನಾಟಕ

ಸೋನು ನಿಗಮ್ ತಂದೆ ಮನೆಯಿಂದ 72 ಲಕ್ಷ ರೂ. ಕಳವು ➤ ಮಾಜಿ ಕಾರು ಚಾಲಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ,23. ಖ್ಯಾತ ಗಾಯಕ ಸೋನು ನಿಗಮ್ ತಂದೆಯ ಮನೆಯಿಂದ 72 ಲಕ್ಷ ರೂಪಾಯಿ ಕಳ್ಳತನ ಮಾಡಿದ ಆರೋಪದಲ್ಲಿ ಅವರ ಮಾಜಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ. ಮಗಳಿಗೆ ಕರೆ ಮಾಡಿ, ಮರದ ಕಪಾಟಿಲ್ಲಿ ಇದ್ದ ಡಿಜಿಟಲ್ ಲಾಕರ್‌ನಿಂದ 40 ಲಕ್ಷ ರೂಪಾಯಿ ಕಾಣೆಯಾಗಿದೆ ಎಂದು ನಿಕಿತಾ ಪೊಲೀಸ್ ಠಾಣೆಗೆ ಆಗಮಿಸಿದ ದೂರು ನೀಡಿದ್ದಾರೆ.

ಸೋನು ನಿಗಮ್ ತಂದೆ ಮನೆಯಿಂದ 72 ಲಕ್ಷ ರೂ. ಕಳವು ➤ ಮಾಜಿ ಕಾರು ಚಾಲಕ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ನೌಕರರ ಸಂಘದ ಅಧ್ಯಕ್ಷ ವಶಕ್ಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.22. ಸಾರಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಶಾಂತಿನಗರದ ಕೆಎಸ್‌ಆರ್ಟಿಸಿ ಕಚೇರಿ ಮುಂದೆ ಸತ್ಯಾಗ್ರಹ ಕೈಗೊಂಡಿದ್ದ ಚಂದ್ರಶೇಖರ್ ಅವರನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದುಕೊಂಡಿದ್ದಕ್ಕೆ ಚಂದ್ರಶೇಖರ್ ವಿರೋಧ ವ್ಯಕ್ತಪಡಿಸಿದ್ದರು.

ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ನೌಕರರ ಸಂಘದ ಅಧ್ಯಕ್ಷ ವಶಕ್ಕೆ Read More »

ಕರ್ನಾಟಕ

ಮಧ್ಯರಾತ್ರಿ ವೇಳೆ ಅಪಾರ್ಟ್ ಮೆಂಟ್ ಗಳಿಗೆ ನುಗ್ಗಿದ ಶೂ ಕಳ್ಳರು ➤ಸಿಸಿಟಿವಿಯಲ್ಲಿ ದೃಶ್ಯ ಸೆರೆ

(ನ್ಯೂಸ್ ಕಡಬ)newskadaba.com ಬೆಂಗಳೂರು ಮಾ.22 ಸಿಲಿಕಾನ್​ ಸಿಟಿಯಲ್ಲಿ ಶೂ ಕಳ್ಳರ ಹಾವಳಿ ಹೆಚ್ಚಾಗಿದ್ದು, ಕಳ್ಳನೊಬ್ಬ ಮಧ್ಯರಾತ್ರಿ ಅಪಾರ್ಟ್​ಮೆಂಟ್​ಗಳಿಗೆ ನುಗ್ಗಿ ಕೃತ್ಯ ಎಸಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.ಹೆಚ್​ಎಸ್​​ಆರ್​ ಲೇಔಟ್​​ನ ಅಪಾರ್ಟ್​ಮೆಂಟ್​ನಿಂದ ಶೂ ಕದ್ದುಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ. ಮನೆ ಬಾಗಿಲವರೆಗೂ ಬಂದು ಕಳ್ಳತನ ನಡೆಸಿದ್ದು, ಯಾವಾಗ ಮನೆಗೆ ನುಗ್ಗಿ ಕನ್ನ ಹಾಕ್ತಾರೋ ಅಂತ ಜನರು ಭಯಭೀತರಾಗಿದ್ದಾರೆ. ಬೇರೆ ಬೇರೆ ರೀತಿಯ ಶೂಗಳು ಒಂದೇ ಕಡೆ ಸಿಗುತ್ತವೆ ಎಂದು ಕಳ್ಳರು ಅಪಾರ್ಟ್​ಮೆಂಟ್​​ಗಳನ್ನು ಗುರಿಯಾಗಿಸಿಕೊಂಡಿದ್ದಾರೆ.    

ಮಧ್ಯರಾತ್ರಿ ವೇಳೆ ಅಪಾರ್ಟ್ ಮೆಂಟ್ ಗಳಿಗೆ ನುಗ್ಗಿದ ಶೂ ಕಳ್ಳರು ➤ಸಿಸಿಟಿವಿಯಲ್ಲಿ ದೃಶ್ಯ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಲಸ್ಟರ್‌ ಹಂತದಲ್ಲೇ 5, 8ನೇ ತರಗತಿ ಮೌಲ್ಯಮಾಪನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.22. ರಾಜ್ಯ ಪಠ್ಯಕ್ರಮ ಬೋಧಿಸುವ 5 ಮತ್ತು 8ನೇ ತರಗತಿ ಮಕ್ಕಳಿಗೆ ನಡೆಸುತ್ತಿರುವ ಮೌಲ್ಯಾಂಕನ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಕ್ಲಸ್ಟರ್‌ ಮಟ್ಟದಲ್ಲಿ ನಿರ್ವಹಿಸುವುದಾಗಿ ತೀರ್ಮಾನಿಸಲಾಗಿದೆ. ಒಂದು ಬ್ಲಾಕ್‌ನಿಂದ ಮತ್ತೂಂದು ಬ್ಲಾಕ್‌ಗೆ ಪ್ರಶ್ನೆಪತ್ರಿಕೆಗಳ ಸಾಗಾಟ ಮಾಡಿ ಮೌಲ್ಯಮಾಪನ ನಡೆಸಿ ಫಲಿತಾಂಶ ಪ್ರಕಟಿಸಲು ಸಮಯ ಸಾಲದು, ಆದ್ದರಿಂದ ಅಂತರ್‌ ಕ್ಲಸ್ಟರ್‌ವಾರು ನಿರ್ವಹಿಸುವಂತೆ ಡಿಡಿಪಿಐ ಮತ್ತು ಬಿಇಒಗಳಿಗೆ ಸೂಚಿಸಲಾಗಿದೆ.  

ಕ್ಲಸ್ಟರ್‌ ಹಂತದಲ್ಲೇ 5, 8ನೇ ತರಗತಿ ಮೌಲ್ಯಮಾಪನ Read More »

ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ಢಿಕ್ಕಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.22. ವೇಗವಾಗಿ‌ ಬಂದ ಆಂಬ್ಯುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತರನ್ನು ಮೈಸೂರಿನ ಪ್ರಕಾಶ್ ಹಾಗೂ ಬನಶಂಕರಿ ಮೂಲದ ನಾಗೇಂದ್ರ ಎಂದು ಗುರುತಿಸಲಾಗಿದೆ. ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಅಂಬುಲೆನ್ಸ್ ಢಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಪ್ರಕಾಶ್, ನಾಗೇಂದ್ರ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.  

ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ಢಿಕ್ಕಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಪಾರ್ಕಿಂಗ್ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ➤ ಯುವಕನ ಬರ್ಬರ ಹತ್ಯೆ…!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.22. ಮನೆ ಮುಂದೆ ನಿಲ್ಲಿಸಿದ್ದ ಕಾರು ಪಾರ್ಕಿಂಗ್ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಜಗಳ ನಡೆದು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೇಡಿ ಮಲ್ಲಸಂದ್ರ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಯುವಕನ್ನು ಇಸ್ಮಾಯಿಲ್ ಖಾನ್ ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿಕೊಂಡು ಕಾರಿನಲ್ಲಿ ಬಂದಿದ್ದ ಇಸ್ಮಾಯಿಲ್ ಮನೆ ಮುಂದಿರುವ ಖಾಲಿ ಜಾಗದಲ್ಲಿ ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಕಾರು ನಿಲ್ಲಿಸಿದಕ್ಕೆ ಎದುರು ಮನೆಯ ಸೈಯದ್ ಅಕಿಲ್ ಶಾ ಕುಟುಂಬಸ್ಥರು ಕ್ಯಾತೆ ತೆಗೆದಿದ್ದು,

ಕಾರು ಪಾರ್ಕಿಂಗ್ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ➤ ಯುವಕನ ಬರ್ಬರ ಹತ್ಯೆ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸರ್ಕಾರಿ ಕೋಟಾದಡಿ ಓದಿ ವೈದ್ಯೆಯಾದ ಅಮೆರಿಕ ಪ್ರಜೆ ➤ ಹೈಕೋರ್ಟ್ ನಿಂದ ಹಿಗ್ಗಾಮುಗ್ಗಾ ತರಾಟೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 21. ಭಾರತದ ಪ್ರಜೆಯೆಂದು ಘೋಷಿಸಿಕೊಂಡು ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಪದವಿ ಪೂರ್ಣಗೊಳಿಸಿ ನಂತರ ಹುಟ್ಟೂರಾದ ಅಮೆರಿಕಾಕ್ಕೆ ತೆರಳಿ ಅಲ್ಲಿಯೇ ನೆಲೆಸಲು ಮುಂದಾಗಿದ್ದ ಮಹಿಳಾ ವೈದ್ಯರೊಬ್ಬರ ವೈಖರಿಯನ್ನು ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್, ಅನಿವಾಸಿ ಭಾರತೀಯ ಅಥವಾ ಭಾರತದ ಸಾಗರೋತ್ತರ ನಾಗರಿಕ ಕೋಟಾದಡಿ ವಿಧಿಸುವ ಎಂಬಿಬಿಎಸ್‌ ಪದವಿಯ ಶುಲ್ಕ ಪಡೆದು ವಾಪಸ್ಸಾಗಲು ಮಹಿಳೆಗೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ. ಅಮೆರಿಕಕ್ಕೆ ತೆರಳಲು ಎಕ್ಸಿಟ್‌ ಪರ್ಮಿಟ್‌ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರದ ವಲಸೆ

ಸರ್ಕಾರಿ ಕೋಟಾದಡಿ ಓದಿ ವೈದ್ಯೆಯಾದ ಅಮೆರಿಕ ಪ್ರಜೆ ➤ ಹೈಕೋರ್ಟ್ ನಿಂದ ಹಿಗ್ಗಾಮುಗ್ಗಾ ತರಾಟೆ Read More »

ಕರ್ನಾಟಕ

ರಾಜ್ಯದ 5 ನಗರಗಳಿಗೆ ಇ-ಬಸ್ ಸೇವೆ ವಿಸ್ತರಿಸಿದ KSRTC

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 21. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೊಸದಾಗಿ ಬೆಂಗಳೂರಿನಿಂದ ರಾಜ್ಯದ ಐದು ನಗರಗಳಿಗೆ ಇವಿ ಪವರ್‌ ಪ್ಲಸ್‌ ಎಂಬ ಎಲೆಕ್ಟ್ರಿಕ್‌ ಬಸ್‌ ಸೇವೆಯನ್ನ ಆರಂಭಿಸಿದೆ. ಈ ಮೂಲಕ ಬೆಂಗಳೂರು-ಮೈಸೂರು ಮಾತ್ರವಲ್ಲದೇ ರಾಜ್ಯದ ಇತರೆ ನಗರಗಳ ಪ್ರಯಾಣಿಕರು ಕೂಡಾ ಎಲೆಕ್ಟ್ರಿಕ್‌ ಬಸ್‌ ಸೇವೆಯನ್ನು ಪಡೆಯಬಹುದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್​ಆರ್​ಟಿಸಿ) ಅಂತರ್ ನಗರ ನೂತನ ಹವಾ ನಿಯಂತ್ರಿತ ಎಲೆಕ್ಟ್ರಿಕ್ ಚಾಲಿತ ಇ.ವಿ.

ರಾಜ್ಯದ 5 ನಗರಗಳಿಗೆ ಇ-ಬಸ್ ಸೇವೆ ವಿಸ್ತರಿಸಿದ KSRTC Read More »

ಕರ್ನಾಟಕ
Scroll to Top