Bangalore

ಫೆ.4 & 5 ರಂದು 37 ನೇ ಪತ್ರಕರ್ತರ ರಾಜ್ಯ ಸಮ್ಮೇಳನ

(ನ್ಯೂಸ್ ಕಡಬ)newskadaba.com ವಿಜಯಪುರ, ಜ.23. ಬಸವನಾಡು, ಗೊಮ್ಮಟ ಬೀಡು, ಶ್ರೀ ಸಿದ್ದೇಶ್ವರ ಸ್ವಾಮೀಜಿ ಕಾರ್ಯಕ್ಷೇತ್ರ ವಿಜಯಪುರದಲ್ಲಿ ಫೆಬ್ರವರಿ 4 & 5 ರಂದು ಎರಡು ದಿನ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ನಡೆಯಲಿದೆ. ನಗರದ ಪತ್ರಿಕಾ ಭವನದಲ್ಲಿ ಸಮ್ಮೇಳನದ ಸಿದ್ಧತೆಗಳನ್ನು ಪರಿಶೀಲಿಸಲು ಕರೆಯಲಾಗಿದ್ದ ವಿವಿಧ ಸಮಿತಿಗಳ ಸಭೆಯ ಸಂದರ್ಭದಲ್ಲಿ‌ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸಮ್ಮೇಳನ ಯಶಸ್ವಿಗೆ ಎಲ್ಲರ ಸಹಕಾರ ಕೋರಿದರು. ಐತಿಹಾಸಿಕ ವಿಜಯಪುರ ನಗರದಲ್ಲಿ ಪ್ರಪ್ರಥಮ […]

ಫೆ.4 & 5 ರಂದು 37 ನೇ ಪತ್ರಕರ್ತರ ರಾಜ್ಯ ಸಮ್ಮೇಳನ Read More »

ಕರ್ನಾಟಕ

ಕರ್ನಾಟಕದ ‘ಎ’ ವರ್ಗದ ದೇವಸ್ಥಾನಗಳಿಂದ ವರ್ಷಕ್ಕೆ 420 ಕೋಟಿ ರೂ. ಆದಾಯ ! 

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಕರ್ನಾಟಕ ದತ್ತಿ (ಮುಜರಾಯಿ) ಇಲಾಖೆಗೆ ಒಳಪಡುವ 400 ‘ಎ ಮತ್ತು ಬಿ’ ವರ್ಗದ ದೇವಸ್ಥಾನಗಳು 2021-22ರಲ್ಲಿ 450 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಗಳಿಸಿವೆ ಎಂದು ದೇವಸ್ಥಾನಗಳ ಲೆಕ್ಕ ಪರಿಶೋಧನೆಯಿಂದ ತಿಳಿದುಬಂದಿದೆ. ದೇವಾಲಯಗಳು ವಾರ್ಷಿಕ ಲೆಕ್ಕಪರಿಶೋಧನೆಯ ಖಾತೆಗಳನ್ನು ಸಲ್ಲಿಸಬೇಕು ಎಂದು ನಿಯಮಗಳಿದ್ದು ಸರ್ಕಾರ ಲೆಕ್ಕಪರಿಶೋಧನೆಗಳಿಗೆ ಗಡುವನ್ನು ನಿಗದಿಪಡಿಸಿತ್ತು. ಆ ಪ್ರಕಾರ ಮುಜರಾಯಿ ಇಲಾಖೆಗೆ ಒಳಪಡುವ 400 ‘ಎ ಮತ್ತು ಬಿ’ ವರ್ಗದ ದೇವಸ್ಥಾನಗಳು ಒಂದು ವರ್ಷದಲ್ಲಿ 450 ಕೋಟಿ ರೂ.ಗೂ ಹೆಚ್ಚು

ಕರ್ನಾಟಕದ ‘ಎ’ ವರ್ಗದ ದೇವಸ್ಥಾನಗಳಿಂದ ವರ್ಷಕ್ಕೆ 420 ಕೋಟಿ ರೂ. ಆದಾಯ !  Read More »

ಕರ್ನಾಟಕ

ಆಂಧ್ರದಿಂದ ಖೋಟಾ ನೋಟು ತಂದು ಚಲಾವಣೆಗೆ ಯತ್ನ   ➤ ಮಹಿಳೆ ಸೇರಿ ಇಬ್ಬರ ಬಂಧನ, 40 ಲಕ್ಷ ರೂ. ನಕಲಿ ನೋಟು ಜಪ್ತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಆಂಧ್ರಪ್ರದೇಶದಿಂದ ಖೋಟಾ ನೋಟು ತಂದು ಚಲಾವಣೆಗೆ ಪ್ರಯತ್ನಿಸುತ್ತಿದ್ದ ಮಹಿಳೆ ಸೇರಿ ಇಬ್ಬರನ್ನು ಸುಬ್ರಮಣ್ಯಪುರ ಪೊಲೀಸರು ಬಂಧಿಸಿ 40 ಲಕ್ಷ ರೂ. ನಕಲಿ ನೋಟು ಜಪ್ತಿ ಮಾಡಿದ್ದಾರೆ. ಆಂಧ್ರಪ್ರದೇಶದ ಕಡಪ ಜಿಲ್ಲೆಯ ಬಿ.ಚರಣ್ ಸಿಂಗ್ (47) ಮತ್ತು ರಜಪುತ್ರ ರಜನಿ (38) ಬಂಧಿತರು ಎಂದು ಗುರುತಿಸಲಾಗಿದೆ. 500 ರೂ. ಮುಖ ಬೆಲೆಯ 40 ಲಕ್ಷ ರೂ. ಮೌಲ್ಯದ ಖೋಟಾ ನೋಟು ಮತ್ತು ಕೃತ್ಯಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಂಧ್ರದಿಂದ ಖೋಟಾ ನೋಟು ತಂದು ಚಲಾವಣೆಗೆ ಯತ್ನ   ➤ ಮಹಿಳೆ ಸೇರಿ ಇಬ್ಬರ ಬಂಧನ, 40 ಲಕ್ಷ ರೂ. ನಕಲಿ ನೋಟು ಜಪ್ತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭಾರತೀಯ ಜೀವ ವಿಮಾ ನಿಗದಲ್ಲಿ 8000ಕ್ಕೂ ಅಧಿಕ ಹುದ್ದೆಗಳ ನೇಮಕಾತಿ…!!!  

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಭಾರತೀಯ ಜೀವ ವಿಮಾ ನಿಗಮದಲ್ಲಿ 8345 ಅಪ್ರೆಂಟಿಸ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಪದವಿ ವಿದ್ಯಾರ್ಹತೆ ಹೊಂದಿರುವ ಮತ್ತು ಜನವರಿ 1, 2023ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಅಪ್ರೆಂಟಿಸ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,650/- ರಿಂದ 90,205/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಸಾಮಾನ್ಯ

ಭಾರತೀಯ ಜೀವ ವಿಮಾ ನಿಗದಲ್ಲಿ 8000ಕ್ಕೂ ಅಧಿಕ ಹುದ್ದೆಗಳ ನೇಮಕಾತಿ…!!!   Read More »

ಕರ್ನಾಟಕ

ಪಡಿತರ ಚೀಟಿದಾರರಿಗೆ ಶಾಕ್…!!! ➤ ಸರ್ವರ್ ಸಮಸ್ಯೆಯಿಂದ ಬಿಪಿಎಲ್ ಕಾರ್ಡ್ ದಾರರ ಪರದಾಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಎಪಿಎಲ್ ಕಾರ್ಡ್ ದಾರರಿಗೆ ನೀಡಲಾಗುತ್ತಿದ್ದ ಅಕ್ಕಿ ವಿತರಣೆ ಸುಮಾರು ಆರು ತಿಂಗಳಿನಿಂದ ನಿಲ್ಲಿಸಲಾಗಿದೆ. ಕೆಲವೆಡೆ ಮಾತ್ರ ಪೂರೈಕೆಯಾಗುತ್ತಿದೆ ಎಂದು ಹೇಳಲಾಗಿದೆ. ಆಹಾರ ಇಲಾಖೆ ಎಪಿಎಲ್ ಕುಟುಂಬಗಳಿಗೆ ಕನಿಷ್ಠ 5 ಕೆಜಿ, ಗರಿಷ್ಠ 10 ಕೆಜಿ ಆಹಾರ ಧಾನ್ಯ ವಿತರಿಸುತ್ತಿದೆ. ಏಕ ಸದಸ್ಯ ಕುಟುಂಬಕ್ಕೆ 5 ಕೆಜಿ ಅಕ್ಕಿ ಮತ್ತು ಇಬ್ಬರು ಹಾಗೂ ಹೆಚ್ಚಿನ ಸದಸ್ಯರನ್ನು ಹೊಂದಿದ ಕುಟುಂಬಕ್ಕೆ 10 ಕೆಜಿ ಅಕ್ಕಿಯನ್ನು ಪ್ರತಿ ಕೆಜಿಗೆ 15 ರೂಪಾಯಿ ದರದಲ್ಲಿ ನೀಡಲಾಗುವುದು. ಇದಕ್ಕಾಗಿ

ಪಡಿತರ ಚೀಟಿದಾರರಿಗೆ ಶಾಕ್…!!! ➤ ಸರ್ವರ್ ಸಮಸ್ಯೆಯಿಂದ ಬಿಪಿಎಲ್ ಕಾರ್ಡ್ ದಾರರ ಪರದಾಟ Read More »

ಕರ್ನಾಟಕ

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ➤ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ ಇಲ್ಲಿದೆ. ಶೈಕ್ಷಣಿಕ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.28 ರವರೆಗೆ ವಿಸ್ತರಣೆ ಮಾಡಲಾಗಿದೆ. ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ 2022- 2023 ಸಾಲಿನ ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿ ಹಾಗೂ ವೈದ್ಯಕೀಯ /ಇಂಜಿನಿಯರಿಂಗ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದ್ದು. ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 28 ರವರೆಗೆ ವಿಸ್ತರಿಸಲಾಗಿದೆ.

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ➤ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ Read More »

ಕರ್ನಾಟಕ

ಕನ್ನಡದ ಖ್ಯಾತ ಖಳನಟ ಲಕ್ಷ್ಮಣ್ ವಿಧಿವಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಹಿರಿಯ ನಟ ಲಕ್ಷ್ಮಣ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಲಕ್ಷ್ಮಣ್ ಅವರಿಗೆ 74 ವರ್ಷವಾಗಿತ್ತು. ಲಕ್ಷ್ಮಣ್ ಅವರು ಅಂಬರೀಶ್ ಅವರ ಅನೇಕ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು. ಲಕ್ಷ್ಮಣ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಅವರನ್ನು ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಇಸಿಜಿ ಮಾಡಿ ಅವರನ್ನು ಮನೆಗೆ ಕರೆದುಕೊಂಡು ಬರಲಾಯಿತು. ಮುಂಜಾನೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಅವರ ಮನೆಯಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ ಎಂದು ತಿಳಿದುಬಂದಿದೆ. ಲಕ್ಷ್ಮಣ್ ಅವರು

ಕನ್ನಡದ ಖ್ಯಾತ ಖಳನಟ ಲಕ್ಷ್ಮಣ್ ವಿಧಿವಶ Read More »

ಕರ್ನಾಟಕ

ಬೆಂಗಳೂರಿನಲ್ಲಿ ಮತ್ತೊಂದು ಮೆಟ್ರೋ ಅಪಘಾತ ➤ ಕಾರಿನ ಮೇಲೆ ಬಿದ್ದ ಮೆಟ್ರೋ ಬ್ಯಾರಿಕೇಡ್ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಮೃತಟ್ಟ ಘಟನೆ ಹಸಿರಾಗಿರುವಂತೆಯೇ ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಮೆಟ್ರೋ ಅಪಘಾತ ಸಂಭವಿಸಿದ್ದು, ಕಾರಿನ ಮೇಲೆ ಬಿದ್ದ ಮೆಟ್ರೋ ಬ್ಯಾರಿಕೇಡ್ ಬಿದ್ದಿದೆ. ಬೆಂಗಳೂರಿನ ದೊಡ್ಡನೆಕ್ಕುಂದಿ ಜಂಕ್ಷನ್‌ನಲ್ಲಿ ಮೆಟ್ರೊ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ನಿಲ್ಲಿಸಿದ್ದ ಬ್ಯಾರಿಕೇಡ್‌ ಕಾರಿನ ಮೇಲೆ ಬಿದ್ದಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ದೊಡ್ಡನೆಕ್ಕುಂದಿಯಿಂದ ಮಹದೇವಪುರ ಕಡೆಗೆ ಹೋಗುವ ಮುಖ್ಯರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು, ಇಬ್ಬರು ಸ್ಥಳೀಯ ನಿವಾಸಿಗಳು ತಮ್ಮ

ಬೆಂಗಳೂರಿನಲ್ಲಿ ಮತ್ತೊಂದು ಮೆಟ್ರೋ ಅಪಘಾತ ➤ ಕಾರಿನ ಮೇಲೆ ಬಿದ್ದ ಮೆಟ್ರೋ ಬ್ಯಾರಿಕೇಡ್ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂಗ್ಲಿಷ್‌ ತೀರ್ಪುಗಳನ್ನು ಕನ್ನಡಕ್ಕೆ ಅನುವಾದಿಸಿವಂತೆ ಸೂಚನೆ ➤ ಸಿಎಂ ಬೊಮ್ಮಾಯಿ !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.23. ನ್ಯಾಯಾಂಗ ವ್ಯವಸ್ಥೆಯಲ್ಲಿ ನಿಜವಾಗಲೂ ಕನ್ನಡದ ಬಳಕೆಯಾಗಬೇಕಾದರೆ ಮೊದಲು ಕನ್ನಡದ ಕಾನೂನು ನಿಘಂಟು ತಯಾರಿಸುವ ಕೆಲಸ ಆಗಬೇಕು. ಇದಕ್ಕಾಗಿ ತಜ್ಞರ ಸಮಿತಿ ರಚಿಸಿ. ಜತೆಗೆ ಇಂಗ್ಲೀಷ್‌ನಲ್ಲಿ ಬರುವ ಎಲ್ಲ ಪ್ರಮುಖ ತೀರ್ಪುಗಳನ್ನು ಕನ್ನಡಕ್ಕೆ ತರ್ಜುಮೆ ಮಾಡಿ ಪ್ರಕಟಿಸುವ ಕೆಲಸ ಮಾಡುವಂತೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ‘ಕನ್ನಡ ಅಭಿವೃದ್ಧಿ ಪ್ರಾಧಿಕಾರ’ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ 2019-20 ಮತ್ತು 2020-21ನೇ ಸಾಲಿನಲ್ಲಿ ವಿವಿಧ ಪ್ರಕರಣಗಳಲ್ಲಿ

ಇಂಗ್ಲಿಷ್‌ ತೀರ್ಪುಗಳನ್ನು ಕನ್ನಡಕ್ಕೆ ಅನುವಾದಿಸಿವಂತೆ ಸೂಚನೆ ➤ ಸಿಎಂ ಬೊಮ್ಮಾಯಿ ! Read More »

ಕರ್ನಾಟಕ

ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕ್ ಯುವತಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ. 23. ನೇಪಾಳ ಮೂಲಕ ಭಾರತ ಗಡಿ ದಾಟಿ, ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕ್ ಯುವತಿ ಇಕ್ರಾ ಜೀವನಿ (19) ಎಂಬುವರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನದ ನಿವಾಸಿ ಇಕ್ರಾ, ಡೇಟಿಂಗ್ ಆ್ಯಪ್‌ ಮೂಲಕ ಉತ್ತರ ಪ್ರದೇಶದ ಮುಲಾಯಂ ಸಿಂಗ್‌ರನ್ನು ಪರಿಚಯಿಸಿಕೊಂಡು ವಿವಾಹವಾಗಿದ್ದರು. ಬಳಿಕ ಬೆಂಗಳೂರಿಗೆ ಬಂದು ಸರ್ಜಾಪುರ ರಸ್ತೆಯ ಜುನ್ನಸಂದ್ರದಲ್ಲಿ ವಾಸವಾಗಿದ್ದರು. ಈ ಮಧ್ಯೆ ತಾಯಿಯನ್ನ ಸಂಪರ್ಕ ಮಾಡಲು ಇಕ್ರಾ ಜೀವನಿ ಯತ್ನಿಸಿದ್ದು, ಈ ಸಂಗತಿಯನ್ನು ಪತ್ತೆ ಮಾಡಿದ್ದ ಕೇಂದ್ರ ಗುಪ್ತಚರ ಇಲಾಖೆ,

ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕ್ ಯುವತಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top