ಇಂದಿನ ಹವಮಾನ ವರದಿ
(ನ್ಯೂಸ್ ಕಡಬ) newskadaba.com, ನ.08: ರಾಜ್ಯದ ಬಹುತೇಕ ಕಡೆ ಶುಕ್ರವಾರ ಒಣ ಹವೆ ಕಂಡುಬಂದಿತ್ತು. ಇಂದು (ನ.8) ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. […]









