Bantwal news

ಕಾಂಗ್ರೆಸ್ ನಾಯಕ ಹರಿಕೃಷ್ಣ ಬಂಟ್ವಾಳ್ ನಾಳೆ ಬಿಜೆಪಿಗೆ ಸೇರ್ಪಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.10. ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಅವರ ಆಪ್ತ ಹರಿಕೃಷ್ಣ ಬಂಟ್ವಾಳ ಅವರು ಶನಿವಾರ ನೆಹರೂ ಮೈದಾನದಲ್ಲಿ ನಡೆಯಲಿರುವ ಬಿಜೆಪಿಯ ನವಕರ್ನಾಟಕ ಪರಿವರ್ತನಾ ಯಾತ್ರೆಯ ವೇಳೆ ಬಿಜೆಪಿ ಸೇರಲಿದ್ದು, ಇದರೊಂದಿಗೆ ಕಳೆದ ಕೆಲವು ದಿನಗಳಿಂದ ಉಂಟಾಗಿದ್ದ ಉಹಾಪೋಹಗಳಿಗೆ ತೆರೆ ಬಿದ್ದಿದೆ. ಈ ಬಗ್ಗೆ ಹರಿಕೃಷ್ಣ ಬಂಟ್ವಾಳ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಮಾಣಿಯಲ್ಲಿ ಸರ್ಕಾರದ ಜಮೀನನ್ನು ಅಕ್ರಮವಾಗಿ […]

ಕಾಂಗ್ರೆಸ್ ನಾಯಕ ಹರಿಕೃಷ್ಣ ಬಂಟ್ವಾಳ್ ನಾಳೆ ಬಿಜೆಪಿಗೆ ಸೇರ್ಪಡೆ Read More »

ಕರಾವಳಿ

ಗಡಿಯಾರ: ಸೌಹಾರ್ದಯುತ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದು- ಶ್ರೀಮತಿ ಶಕುಂತಲಾ ಶೆಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು,ಅ.12. ಇತ್ತಿಫಾಕ್ ಮೀಲಾದ್ ಕಮಿಟಿ ಜೋಗಿಬೆಟ್ಟು, ಗಡಿಯಾರ ಹಾಗೂ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ನಾಟೆಕಲ್, ಮಂಗಳೂರು ಇದರ ಸಹಯೋಗದೊಂದಿಗೆ  ಉಚಿತ ವೈದ್ಯಕೀಯ ಶಿಬಿರವು ಗಡಿಯಾರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ  ಇತ್ತೀಚೆಗೆ ನಡೆಯಿತು. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕಿ ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಶ್ರೀಮತಿ ಶಕುಂತಲಾ ಶೆಟ್ಟಿ ಉಚಿತ ವೈದ್ಯಕೀಯ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಮಾಜದಲ್ಲಿನ ಬಡ-ನಿರ್ಗತಿಕರ ಆರೋಗ್ಯವನ್ನು ಕಾಪಾಡುವಲ್ಲಿ ಯುವಕರು ಸಂಘಟಿತರಾಗಿ ಉಚಿತ ವೈದ್ಯಕೀಯ ಶಿಬಿರ ನಡೆಸುವುದರೊಂದಿಗೆ, ಸೌಹಾರ್ದಯುತ ಸಮಾಜ ನಿರ್ಮಾಣದಲ್ಲಿ

ಗಡಿಯಾರ: ಸೌಹಾರ್ದಯುತ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದು- ಶ್ರೀಮತಿ ಶಕುಂತಲಾ ಶೆಟ್ಟಿ Read More »

ಕರಾವಳಿ

ಸೈನೈಡ್‌ ಮೋಹನ್‌ ► 2003 ರಿಂದ 2009 ರ ವರೆಗೆ 20 ಯುವತಿಯರ ಹತ್ಯೆ….!!!

(ನ್ಯೂಸ್ ಕಡಬ) newskadaba.com ಬಂಟ್ವಾಳ,ಸೆ.14, 2003 ರಿಂದ 2009 ರ ವರೆಗೆ 20 ಯುವತಿಯರನ್ನು ಹತ್ಯೆ ಮಾಡಿದ ಸೈನೈಡ್‌‌ ಮೋಹನ್‌ನ ಆ ಕೊಲೆಗಳ ಹಿಂದಿನ ಹಿಸ್ಟರಿ ಕೇಳಿದರೆ ಒಂದು ಕ್ಷಣ ಉಸಿರೆ ನಿಂತು ಹೋಗುವಷ್ಟು ಭಯ ಹುಟ್ಟುತ್ತದೆ. ವೃತ್ತಿಯಲ್ಲಿ ಅಧ್ಯಾಪಕನಾಗಿದ್ದ ಮೋಹನ್‌ ಬಂಟ್ವಾಳ ತಾಲೂಕಿನ ಕನ್ಯಾನದ ನಿವಾಸಿ. ವಿವಾಹಿತನಾಗಿದ್ದ ಈತ ತನ್ನ ತಾಯಿಯ ಜೊತೆಗೆ ವಾಸವಾಗಿದ್ದ. ಅಧ್ಯಾಪಕನಾದ ಈತ ಹಲವಾರು ಸಭೆ, ಸಮಾರಂಭಗಳಲ್ಲಿ ಭಾಗವಹಿಸುತ್ತಿದ್ದ ಹಾಗೆ ಅಲ್ಲಿ ತನಗೆ ಪರಿಚಯವಾಗುವ ಯುವತಿಯರನ್ನು ತನ್ನ ಪ್ರೇಮದ ಬಲೆಯಲ್ಲಿ ಸಿಲುಕಿಸುತ್ತಿದ್ದ.

ಸೈನೈಡ್‌ ಮೋಹನ್‌ ► 2003 ರಿಂದ 2009 ರ ವರೆಗೆ 20 ಯುವತಿಯರ ಹತ್ಯೆ….!!! Read More »

ಕರಾವಳಿ

ಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟ ಪ್ರಕರಣ; ಎಫ್ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ .19, : ಜು.4ರಂದು ಬಿ. ಸಿ. ರೋಡ್‌‌ನಲ್ಲಿ ದುಷ್ಕರ್ಮಿಗಳ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಆರ್‌ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಜು. 7ರಂದು ಮೃತರಾಗಿದ್ದರು. ಇವರ ಶವಯಾತ್ರೆ ಸಂದರ್ಭ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ದಾಖಲಿಸಿದ್ದ ಎಫ್ಐಆರ್‌ಗೆ ಉಚ್ಛ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಡೆಯಾಜ್ಞೆ ಹಿನ್ನೆಲೆಯಲ್ಲಿ ಬಂಟ್ವಾಳ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ನಡೆಯಲಿರುವ ವಿಚಾರಣೆಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿ, ಆಗಸ್ಟ್ 26ಕ್ಕೆ ವಿಚಾರಣೆ ಮುಂದೂಡಿದೆ. ಸತ್ಯಜಿತ್

ಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟ ಪ್ರಕರಣ; ಎಫ್ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ Read More »

ಕರ್ನಾಟಕ

ಶರತ್ ಮಡಿವಾಳ ಹಂತಕರ ಸೆರೆ…? ► ಮಾಧ್ಯಮಗಳಿಗೆ ತಲುಪಿದ ರಹಸ್ಯ ಮಾಹಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.15. ಇತ್ತೀಚೆಗೆ ಬಿ.ಸಿ.ರೋಡ್‍ನಲ್ಲಿ ನಡೆದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಗೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ವಲಯ ಐಜಿಪಿ ಪಿ. ಹರಿಶೇಖರನ್ ನೇತೃತ್ವದಲ್ಲಿ ಆರು ತನಿಖಾ ತಂಡಗಳನ್ನು ರಚಿಸಲಾಗಿತ್ತು. ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಮಾಧ್ಯಮಗಳಿಗೆ ತಲುಪಿದೆ.  ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಲು

ಶರತ್ ಮಡಿವಾಳ ಹಂತಕರ ಸೆರೆ…? ► ಮಾಧ್ಯಮಗಳಿಗೆ ತಲುಪಿದ ರಹಸ್ಯ ಮಾಹಿತಿ Read More »

ಕರಾವಳಿ

ಕೋಮು ಭಂಗವುಂಟುಮಾಡುವವರಿಗೆ ಕಾದಿದೆ ಗಡಿಪಾರು ಶಿಕ್ಷೆ ► ಗೂಂಡಾ, ಕೋಕಾ ಕಾಯ್ದೆ ಹಾಕಲು ಸಿದ್ಧರಾಮಯ್ಯರಿಂದ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.10. ಕೋಮು ಸೌಹಾರ್ದತೆ ಹಾಳು ಮಾಡುವಂತಹ ಮತೀಯವಾದಿಗಳ ವಿರುದ್ಧ ಗೂಂಡಾ ಕಾಯ್ದೆ ಮತ್ತು ಕೋಕಾ ಕಾಯ್ದೆಯಡಿ ಕೇಸು ದಾಖಲಿಸಿ ಗಡಿಪಾರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸೋಮವಾರ ನಗರದ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಪರಿಶೀಲನಾ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರಲ್ಲಿ ಮತೀಯ ಭಾವನೆ ಕೆರಳಿಸಿ ಶಾಂತಿಗೆ ಭಂಗ ಉಂಟುಮಾಡುವವರು ಯಾರೇ ಆದರೂ, ಅವರು ಯಾವುದೇ ಸಂಘಟನೆಗೆ ಸೇರಿದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ

ಕೋಮು ಭಂಗವುಂಟುಮಾಡುವವರಿಗೆ ಕಾದಿದೆ ಗಡಿಪಾರು ಶಿಕ್ಷೆ ► ಗೂಂಡಾ, ಕೋಕಾ ಕಾಯ್ದೆ ಹಾಕಲು ಸಿದ್ಧರಾಮಯ್ಯರಿಂದ ಸೂಚನೆ Read More »

ಕರ್ನಾಟಕ

ಅಪಘಾತದ ಗಾಯಾಳು ಮುಸಲ್ಮಾನರನ್ನು ಆಸ್ಪತ್ರೆಗೆ ದಾಖಲಿಸಿದ ಹಿಂಜಾವೇ ಅಧ್ಯಕ್ಷ ► ಕರಾವಳಿಯ ಕೋಮು ಸಂಘರ್ಷದ ಮಧ್ಯೆಯೂ ಮಾನವೀಯತೆ ಜೀವಂತ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.10. ಕರಾವಳಿಯು ಕಳೆದ ಒಂದು ತಿಂಗಳಿನಿಂದ ಕೋಮು ದಳ್ಳುರಿಯಿಂದ ಹೊತ್ತಿ ಉರಿಯುತ್ತಿದ್ದು, ಕೋಮು ಸಂಘರ್ಷಕ್ಕೆ ಎರಡು ಹೆಣಗಳು ಉರುಳಿವೆ. ಎರಡೂ ಧರ್ಮಗಳ ನಡುವೆ ಸರಿಪಡಿಸಲಾಗದಷ್ಟು ದೊಡ್ಡ ಕಂದಕ ನಿರ್ಮಾಣವಾಗಿದೆ. ದಿನಂಪ್ರತಿ ಕೋಮು ಪ್ರಚೋದಿತ ಹಿಂಸಾಚಾರಗಳ ಬಗ್ಗೆ ಮಾಧ್ಯಮಗಳಲ್ಲಿ ಬರುವ ವರದಿಗಳು ಜಿಲ್ಲೆಯ ಶಾಂತಿಪ್ರಿಯ ನಾಗರೀಕರನ್ನು ಆತಂಕಕ್ಕೀಡುಮಾಡಿದೆ. ಇವೆಲ್ಲದರ ಮಧ್ಯೆ 5 ದಿನಗಳ ಹಿಂದೆ ಪುತ್ತೂರಿನ ಅರಿಯಡ್ಕದಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಗಾಯಾಳು ಯುವಕರನ್ನು ಹಿಂದೂ ಸಂಘಟನೆಯ ಪ್ರಮುಖರೊಬ್ಬರು ಆಸ್ಪತ್ರೆಗೆ

ಅಪಘಾತದ ಗಾಯಾಳು ಮುಸಲ್ಮಾನರನ್ನು ಆಸ್ಪತ್ರೆಗೆ ದಾಖಲಿಸಿದ ಹಿಂಜಾವೇ ಅಧ್ಯಕ್ಷ ► ಕರಾವಳಿಯ ಕೋಮು ಸಂಘರ್ಷದ ಮಧ್ಯೆಯೂ ಮಾನವೀಯತೆ ಜೀವಂತ Read More »

ಕರಾವಳಿ

ರಾಮಕುಂಜ: ಮಲೇರಿಯಾ ವಿರೋಧಿ ಮಾಸಾಚರಣೆ

(ನ್ಯೂಸ್ ಕಡಬ) newskadaba.com ರಾಮಕುಂಜ ಜು.10. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಛೇರಿ ದ.ಕ. ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಕೊೖಲ, ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ರೆಡ್ ಕ್ರಾಸ್ ಸಂಘ ಇದರ ಸಹಯೋಗದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆಯು ರಾಮಕುಂಜ ಪಂಚಾಯತ್ ಸಭಾಭವನದಲ್ಲಿ ಜರಗಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರವಿಚಂದ್ರ ಯು ಸ್ವಚ್ಛತೆ, ಆರೋಗ್ಯ

ರಾಮಕುಂಜ: ಮಲೇರಿಯಾ ವಿರೋಧಿ ಮಾಸಾಚರಣೆ Read More »

ಕರಾವಳಿ

ಬಂಟ್ವಾಳ ಗಲಭೆ ಹಿನ್ನೆಲೆಯಲ್ಲಿ ಪ್ರತ್ಯೇಕ ಸೈಬರ್‍ಸೆಲ್ ತಂಡ ರಚನೆ ► ವಾಟ್ಸ್ಅಪ್‍ಗಳಲ್ಲಿ ಪ್ರಚೋದನಕಾರಿ ಸಂದೇಶ ಕಳುಹಿಸಿದರೆ ಅಡ್ಮಿನ್‍ಗಳು ಜೈಲಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.09. ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ, ಸುಳ್ಳು ಮೆಸೇಜ್‌ಗಳನ್ನು ಕಳುಹಿಸುವವರ ಪತ್ತೆ ಹಚ್ಚಲು ಪ್ರತ್ಯೇಕ ಸೈಬರ್ ಸೆಲ್ ತಂಡ ರಚಿಸಲಾಗಿದೆ. ವಾಟ್ಸ್‌ಅಪ್‌ನಲ್ಲಿ ಪ್ರಚೋದನಕಾರಿ ಮೆಸೇಜ್ ಯಾರು ಕಳುಹಿಸಿದರೂ ಅಡಿಮಿನ್ ಹೊಣೆಯಾಗುತ್ತಾನೆ ಎಂದು ಎಂದು ಪಶ್ಚಿಮ ವಲಯ ಐಜಿಪಿ ಪಿ.ಹರಿಶೇಖರನ್ ಎಚ್ಚರಿಸಿದ್ದಾರೆ. ಅವರು ಭಾನುವಾರದಂದು ಬಂಟ್ವಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಂಟ್ವಾಳ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೀಗ ಪರಿಸ್ಥಿತಿ ಶಾಂತವಾಗಿದೆ. ಯಾವುದೇ ಅಹಿತಕರ ಕ್ರಮ ನಡೆಯದಂತೆ ಜಾಗ್ರತೆ ವಹಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ

ಬಂಟ್ವಾಳ ಗಲಭೆ ಹಿನ್ನೆಲೆಯಲ್ಲಿ ಪ್ರತ್ಯೇಕ ಸೈಬರ್‍ಸೆಲ್ ತಂಡ ರಚನೆ ► ವಾಟ್ಸ್ಅಪ್‍ಗಳಲ್ಲಿ ಪ್ರಚೋದನಕಾರಿ ಸಂದೇಶ ಕಳುಹಿಸಿದರೆ ಅಡ್ಮಿನ್‍ಗಳು ಜೈಲಿಗೆ Read More »

ಕರಾವಳಿ

ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣ ► ಆರೋಪಿಗಳ ಬಗ್ಗೆ ಮಹತ್ವದ ಸುಳಿವು ಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.09. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸ್ ಇಲಾಖೆ, ಆರೋಪಿಗಳ ಬಗ್ಗೆ ಸಾಕಷ್ಟು ಮಹತ್ವದ ಸುಳಿವು ದೊರೆತಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಪಶ್ಚಿಮ ವಲಯ ಐಜಿಪಿ ಪಿ.ಹರಿಶೇಖರನ್ ತಿಳಿಸಿದ್ದಾರೆ. ಬಂಟ್ವಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶರತ್ ಕೊಲೆ ವಿಚಾರದಲ್ಲಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳು ಯಾರೇ ಆಗಿರಲಿ. ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು. ಇದೀಗ ಬಂಟ್ವಾಳ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ಶಾಂತವಾಗಿದ್ದು,

ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣ ► ಆರೋಪಿಗಳ ಬಗ್ಗೆ ಮಹತ್ವದ ಸುಳಿವು ಪತ್ತೆ Read More »

ಕರಾವಳಿ
Scroll to Top