bantwala

ಬಂಟ್ವಾಳ: ಮಾನವ ಸರಪಳಿಯಲ್ಲಿ ಭಾಗವಹಿಸಲು ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಬಂಟ್ವಾಳ ತಾಲೂಕಿನ ಪರಂಗಿಪೇಟೆಯಿಂದ ಬಿ.ಸಿ ರೋಡ್- ಮಾಣಿ -ಕಬಕವರೆಗಿನ 22 ಕಿ.ಮೀ ವ್ಯಾಪ್ತಿಯಲ್ಲಿ ನಡೆಸಲಿರುವ ಮಾನವ ಸರಪಳಿ ಮತ್ತು ಸಂವಿಧಾನ ಪೀಠಿಕೆ ಪಠಣ ಕಾರ್ಯಕ್ರಮದಲ್ಲಿ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಫಲಾನುಭವಿಗಳು ಬೆಳಿಗ್ಗೆ 9 ಗಂಟೆಗೆ ತಮ್ಮ ಅನುಕೂಲಕರ ಸ್ಥಳದಲ್ಲಿ ಮಾನವ ಸರಪಳಿಯಲ್ಲಿ ಭಾಗವಹಿಸುವಂತೆ ಬಂಟ್ವಾಳ ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಪ್ರಕಟಣೆ ತಿಳಿಸಿದೆ.

ಬಂಟ್ವಾಳ: ಮಾನವ ಸರಪಳಿಯಲ್ಲಿ ಭಾಗವಹಿಸಲು ಕರೆ Read More »

ಕರಾವಳಿ

ಬಂಟ್ವಾಳ: ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 10.  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ ಇವರ ಜಂಟಿ ಸಹಯೋಗದೊಂದಿಗೆ ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟವು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದ ಬಾಲಕರ ಹಾಗೂ ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಪಡೆದಿದ್ದು, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ

ಬಂಟ್ವಾಳ: ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ Read More »

ಕರಾವಳಿ

ಐವನ್‌ ಡಿಸೋಜರವರ ದೇಶದ್ರೋಹ ಹೇಳಿಕೆ ಖಂಡಿಸಿ ಬಿಜೆಪಿ ಯುವಮೋರ್ಚ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 29. ಎಂಎಲ್ ಸಿ ಐವನ್‌ ಡಿ ಸೋಜರವರ ದೇಶದ್ರೋಹ ಹೇಳಿಕೆ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಎಫ್ ಐ ಆರ್ ದಾಖಲಿಸಲಿಸದಿರುವುದು ಹಾಗೂ ರಾಜ್ಯಪಾಲರ ವಿರುದ್ಧ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಖಂಡಿಸಿ ಬಿಜೆಪಿ ಯುವಮೋರ್ಚಾ ಬಂಟ್ವಾಳ ಮಂಡಲದ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರ ನೇತೃತ್ವದಲ್ಲಿ ಬಿ.ಸಿ.ರೋಡಿನಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು. ಇದಕ್ಕೂ ಮೊದಲು ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯ ನಾಯಕ ವಿಕಾಸ್

ಐವನ್‌ ಡಿಸೋಜರವರ ದೇಶದ್ರೋಹ ಹೇಳಿಕೆ ಖಂಡಿಸಿ ಬಿಜೆಪಿ ಯುವಮೋರ್ಚ ವತಿಯಿಂದ ಪ್ರತಿಭಟನೆ Read More »

ಕರಾವಳಿ

ಯಕ್ಷಗಾನ ಕಲೆಗೆ ಅಪಚಾರ   ದಂಧೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 28. ಯಕ್ಷಗಾನದ ವೇಷಭೂಷಣ ತೊಟ್ಟು, ಬಿಕ್ಷಾಟನೆಗೈದು ಯಕ್ಷಗಾನ ಕಲೆಗೆ ಅಪಚಾರವೆಸಗಲಾಗುತ್ತಿದ್ದು, ಈ ದಂಧೆಯನ್ನು ನಿಷೇಧಿಸುವಂತೆ ಆಗ್ರಹಿಸಿ ರಾಜ್ಯ ಪ್ರಶಸ್ತಿ ಪುರಸ್ಕೃತ, ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಆಶೋಕ್ ಶೆಟ್ಟಿ ನೇತೃತ್ವದ ನಿಯೋಗ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಿದೆ. ವಿಶ್ವವ್ಯಾಪಿ ಕಲೆಯಾಗಿ ಪ್ರಚಲಿತದಲ್ಲಿರುವ ಯಕ್ಷಗಾನ ಕಲೆಗೆ ಅದರದ್ದೇ ಆದ ಘನತೆ, ಗಾಂಭೀರ್ಯತೆ ಇದ್ದು, ಕರಾವಳಿ ಜಿಲ್ಲೆಯ ಶ್ರೇಷ್ಠ ಕಲೆಯಾಗಿದೆ. ಶ್ರೀಕೃಷ್ಣ ಜನ್ಮಾಷ್ಠಮಿ, ಶ್ರೀ ಗಣೇಶೋತ್ಸವ ಹಾಗೂ ನವರಾತ್ರಿಯ

ಯಕ್ಷಗಾನ ಕಲೆಗೆ ಅಪಚಾರ   ದಂಧೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ Read More »

ಕರಾವಳಿ

ವಿಪರೀತ ಮಳೆಗೆ ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಕುಸಿತ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 28.  ರಾತ್ರಿಯಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ವಿಟ್ಲ ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಮನೆಯಂಗಳಕ್ಕೆ ಕುಸಿದ ಘಟನೆ ವಿಟ್ಲದ ಪೊನ್ನೋಟ್ಟು ಎಂಬಲ್ಲಿ ಸೋಮವಾರ ನಡೆದಿದೆ. ಮನೆಗೆ ಹಾನಿಯಾಗಿದ್ದು, ಇನ್ನೂ ಮೇಲ್ಭಾಗದ ಮಣ್ಣು ಕುಸಿಯುವ ಸಾಧ್ಯತೆ ಇದೆ. ಪೊಲೀಸ್ ವಸತಿಗೃಹದ ಆವರಣದಲ್ಲಿ ಮುಟ್ಟುಗೋಲು ಹಾಕಲಾದ ವಾಹನಗಳನ್ನು ನಿಲ್ಲಿಸಲಾಗಿದ್ದು, ಅವುಗಳು ಕೂಡಾ ಮನೆ ಮೇಲೆ ಬೀಳುವ ಸಾಧ್ಯತೆಗಳಿವೆ. ಈ ಕುರಿತು ಈ ಹಿಂದೆಯೇ ಪಟ್ಟಣ ಪಂಚಾಯತ್ ಗೆ ಆಯಿಷಾ ಅವರು ಮನವಿ

ವಿಪರೀತ ಮಳೆಗೆ ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಕುಸಿತ Read More »

ಕರಾವಳಿ

ರಾಹುಲ್‌ ಗಾಂಧಿ ಬಗ್ಗೆ ಅಪಪ್ರಚಾರ..!   ಪೊಳಲಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಮಾನಾಥ ರೈ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಜು.23. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಹೇಳಿಕೆಯ ವಿಚಾರವಾಗಿ ಸುಳ್ಳು ಅಪಪ್ರಚಾರ ಮಾಡುವವರಿಗೆ ದೇವರು ಸರಿಯಾದ ಉತ್ತರವನ್ನು ಕೊಡುತ್ತಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಹೇಳಿದ್ದಾರೆ ಎಂದು ವರದಿಯಾಗಿದೆ. ಇಂದು ಬೆಳಿಗ್ಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಈ ಕುರಿತು ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವರು, ಬಳಿಕ  ಮಾಧ್ಯಮದವರ ಜೊತೆ ಮಾತನಾಡಿ, ಕೆಲ ದಿನಗಳ ಹಿಂದೆ ಹಿಂದೂ ಸಂಘಟನೆಯ ಪ್ರಮುಖರು ಪೊಳಲಿ ದೇವಸ್ಥಾನದಲ್ಲಿ ರಾಹುಲ್ ಗಾಂಧಿ

ರಾಹುಲ್‌ ಗಾಂಧಿ ಬಗ್ಗೆ ಅಪಪ್ರಚಾರ..!   ಪೊಳಲಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಮಾನಾಥ ರೈ Read More »

ಕರಾವಳಿ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.04. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಯುವಕನೋರ್ವನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಗ್ರಾಮ ಪಂಚಾಯತ್ ಸದಸ್ಯೆ ಜುಬೈದಾ ಅವರ ಮಗ ನರಿಕೊಂಬು ನಿವಾಸಿ ರಿಕ್ಷಾ ಚಾಲಕ ಅಬುಬಕ್ಕರ್ ಸಿದ್ದೀಕ್ ಎಂಬಾತ ಕಿರುಕುಳ ನೀಡಿದ್ದಾನೆ ಎಂದು ಬಾಲಕಿಯ ತಂದೆ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ ಎನ್ನಲಾಗಿದೆ. ಮೆಲ್ಕಾರ್ ಮಹಿಳಾ ಕಾಲೇಜಿನಿಂದ ಮನೆಗೆ ಹೋಗಲು ರಸ್ತೆ ಬದಿಯಲ್ಲಿ ಬಸ್ ಗಾಗಿ ಕಾಯುತ್ತಾ ನಿಂತಿದ್ದ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಗಾಂಜಾ ಸೇವನೆ – ಆರೋಪಿ ಸಹಿತ ಗಾಂಜಾ ವಶಕ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.02. ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿರುವ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಕಲೆಂಜಿಬೈಲು ನಿವಾಸಿ ಅಬ್ದುಲ್ ಸಲೀಂ (32) ಎಂದು ಗುರುತಿಸಲಾಗಿದೆ. ಮಾದಕ ವಸ್ತು ಸೇವಿಸಿದ ನಶೆಯಲ್ಲಿ ತೊಂದರೆ ನೀಡುತ್ತಿದ್ದ ವೇಳೆ ಅಲ್ಲಿನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇನ್ನು ಬಂಟ್ವಾಳ ನಗರ ಪೋಲೀಸ್ ಠಾಣಾ ಎಸ್.ಐ. ರಾಮಕೃಷ್ಣ ನೇತ್ರತ್ವದ ಪೋಲೀಸರ ತಂಡ ಆರೋಪಿಯನ್ನು ನಂದಾವರದಲ್ಲಿ ಬಂಧಿಸಿ

ಬಂಟ್ವಾಳ: ಗಾಂಜಾ ಸೇವನೆ – ಆರೋಪಿ ಸಹಿತ ಗಾಂಜಾ ವಶಕ್ಕೆ Read More »

ಕರಾವಳಿ

ಅನೈತಿಕ ಪೊಲೀಸ್ ಗಿರಿ – ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.29. ಪೊಲೀಸ್ ಸಿಬ್ಬಂದಿಯ ಮೇಲೆ ಸಂಘ ಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿ ಅನೈತಿಕ ಪೊಲೀಸ್ ಗಿರಿ ಮಾಡಿರುವ ಬಗ್ಗೆ ವರದಿಯಾಗಿದೆ‌. ಪ್ರಕರಣಕ್ಕೆ ಸಂಬಂಧಿಸಿ ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ ಮತ್ತು ಮಂಜುನಾಥ್ ಆಚಾರ್ಯ ಎಂಬವರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ. ಬಂಟ್ವಾಳ ಡಿ.ವೈ.ಎಸ್.ಪಿ.ಕಚೇರಿಯ ಪೊಲೀಸ್ ಸಿಬ್ಬಂದಿ ಕುಮಾರ್ ಹನಮಂತಪ್ಪ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದು, ಅದರಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿ.ಸಿ.ರೋಡಿನ ಹೊಟೇಲ್ ಒಂದರಲ್ಲಿ

ಅನೈತಿಕ ಪೊಲೀಸ್ ಗಿರಿ – ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಮಳೆ ದಾಖಲು! ➤ ಕರಾವಳಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 4. ಕರಾವಳಿ ಜಿಲ್ಲೆಯಲ್ಲಿ ಜು.7ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಂಟ್ವಾಳ ತಾಲ್ಲೂಕಿನ ಪಜೀರುವಿನಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆವರೆಗೆ 24 ಗಂಟೆಗಳಲ್ಲಿ 17.5 ಸೆಂ.ಮೀ ಮಳೆಯಾಗಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅತ್ಯಧಿಕ ಮಳೆಯಾದ ಗ್ರಾಮ.ಉಳಿದಂತ ಮುನ್ನೂರು ಗ್ರಾಮದಲ್ಲ 18.3 ಸಿ೦ಂ.ಮೀ., ಕೋಟಕಾರಿನಲ್ಲ 15.40 ಸೆಂ.ಮೀ, ಕಿನ್ಕದಲ್ಲಿ 13.55ಸೆಂ.ಮೀ., ನಗರದ ಪಾಂಡೇಶ್ವರದಲ್ಲಿ13.25 ಸೆಂ.ಮೀ, ಬಾಳದಲ್ಲಿ 12,25ಸೆಂ.ಮೀ, ಮಂಗಳೂರು ನಗರದಲ್ಲಿ 11.9 ಸೆಂ.ಮೀ, ಚೆಳ್ತಾರುವಿನಲ್ಲಿ 11.8 ಸೆಂ.ಮೀ, ಕೆಮ್ರಾಲ್ನಲ್ಲಿ 11.45 ಸೆಂ.ಮೀ,

ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಮಳೆ ದಾಖಲು! ➤ ಕರಾವಳಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ Read More »

ಕರಾವಳಿ, ಕರ್ನಾಟಕ
Scroll to Top