ವಿದ್ಯುತ್ ದರ ಏರಿಕೆಯನ್ನು ನಮ್ಮ ಸರಕಾರ ಒಪ್ಪಿರಲಿಲ್ಲ ➤ ಬೊಮ್ಮಾಯಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜೂ. 13. ಬಿಜೆಪಿ ಸರಕಾರ ವಿದ್ಯುತ್ ದರ ಏರಿಕೆಯ ಪ್ರಸ್ತಾಪವನ್ನು ಒಪ್ಪಿರಲಿಲ್ಲ‌. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಏರಿಕೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.   ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ ನಾವು ಇದನ್ನು ಒಪ್ಪಿರಲಿಲ್ಲ. ಆದರೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ವಿದ್ಯುತ್ ದರ ಏರಿಕೆಗೆ ಒಪ್ಪಿಗೆ ನೀಡಿದೆ ಎಂದರು.

ವಿದ್ಯುತ್ ದರ ಏರಿಕೆಯನ್ನು ನಮ್ಮ ಸರಕಾರ ಒಪ್ಪಿರಲಿಲ್ಲ ➤ ಬೊಮ್ಮಾಯಿ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್