belagavi

ಲಿಂಗಾಯತ ಪಂಚಮಸಾಲಿ ಲಾಠಿಚಾರ್ಜ್ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ

(ನ್ಯೂಸ್ ಕಡಬ) newskadaba.com .ಡಿ. 11. ಬೆಳಗಾವಿ: ಬೆಳಗಾವಿ  ಸುವರ್ಣಸೌಧದ  ಮುಂದೆ ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್‌ ಮಾಡಿದ್ದನ್ನು ಖಂಡಿಸಿ ಡಿಸೆಂಬರ್ 12ರಂದು ರಾಜ್ಯಾದ್ಯಂತ ಪ್ರತಿಭಟನೆ ಘೋಷಣೆ ಮಾಡಲಾಗಿದೆ. ಲಾಠಿಚಾರ್ಜ್‌ ಮಾಡಿದ ಸರ್ಕಾರದ ಕ್ರಮವನ್ನು ಖಂಡಿಸಿ ನಾಳೆ ರಾಜ್ಯದಾದ್ಯಂತ ಹೋರಾಟ ಮಾಡಲು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ನಿನ್ನೆ ಸುವರ್ಣಸೌಧದ ಮುಂದೆ ನಡೆಯುತ್ತಿದ್ದ ಹೋರಾಟ ಹಿಂಸಾಚಾರಕ್ಕೆ ತಿರುಗಿತ್ತು. ಮಂಗಳವಾರ ರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ‘ನಮ್ಮ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ. […]

ಲಿಂಗಾಯತ ಪಂಚಮಸಾಲಿ ಲಾಠಿಚಾರ್ಜ್ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ Read More »

ಕರ್ನಾಟಕ

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲು ಆಗ್ರಹ: ಪುಂಡಾಟಿಕೆ ಮಾಡಿದರೆ ಸುಮ್ಮನಿರಲ್ಲ ಸಿ.ಎಂ ಖಡಕ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com . 10. ಬೆಂಗಳೂರು:  ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎನ್ನುವ ಆದಿತ್ಯ ಠಾಕ್ರೆ ಅವರ ಹೇಳಿಕೆಯು ಅತ್ಯಂತ ಬಾಲಿಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕೆನ್ನುವ ಆದಿತ್ಯ ಠಾಕ್ರೆ ಅವರ ಹೇಳಿಕೆ ಅತ್ಯಂತ ಬಾಲಿಶವಾದದ್ದು. ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದ್ರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ? ಎಂ.ಇ.ಎಸ್

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲು ಆಗ್ರಹ: ಪುಂಡಾಟಿಕೆ ಮಾಡಿದರೆ ಸುಮ್ಮನಿರಲ್ಲ ಸಿ.ಎಂ ಖಡಕ್ ಎಚ್ಚರಿಕೆ Read More »

ಕರ್ನಾಟಕ

‘ಬಾಣಂತಿಯರ ಸಾವಿನ ಬಗ್ಗೆ ರಾಜಕೀಯ ಉದ್ದೇಶದಿಂದ ಮಾತನಾಡಬಾರದು’ – ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com , ಡಿ. 09.ಬೆಳಗಾವಿ: ಬಾಣಂತಿಯರ ಮರಣಗಳು ಆಗುತ್ತಿವೆ, ಪ್ರತಿ ವರ್ಷ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಇದ್ದೇ ಇರುತ್ತದೆ. ಅದನ್ನೆ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸುವುದಕ್ಕೂ ಮುನ್ನ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿದ ಅವರು, ಬಾಣಂತಿಯರ ಸಾವಿನ ವಿಚಾರವಾಗಿ ಅಧಿವೇಶನದಲ್ಲಿ ಗಂಭೀರವಾಗಿ ಚರ್ಚೆ ಆಗಬೇಕು. ಅದಕ್ಕೆ ನಾವು ಉತ್ತರ ನೀಡುತ್ತೇವೆ ಎಂದರು. ಬಾಣಂತಿಯರ ಸಾವಿನ ಬಗ್ಗೆ ನಿಜಾಂಶಗಳ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. ಬಾಣಂತಿಯರ

‘ಬಾಣಂತಿಯರ ಸಾವಿನ ಬಗ್ಗೆ ರಾಜಕೀಯ ಉದ್ದೇಶದಿಂದ ಮಾತನಾಡಬಾರದು’ – ದಿನೇಶ್ ಗುಂಡೂರಾವ್ Read More »

ಕರ್ನಾಟಕ

ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ: “ಗಾಂಧಿ ಭಾರತ” ಹೆಸರಲ್ಲಿ ವರ್ಷವಿಡೀ ಕಾರ್ಯಕ್ರಮಕ್ಕೆ ಸರ್ಕಾರ ನಿರ್ಧಾರ

(ನ್ಯೂಸ್ ಕಡಬ) newskadaba.com ಡಿ. 03 ಬೆಂಗಳೂರು: ಬೆಳಗಾವಿಯಲ್ಲಿ ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ 1924ರಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಸ್ಮರಣಾರ್ಥ “ಗಾಂಧಿ ಭಾರತ” ಹೆಸರಲ್ಲಿ ವರ್ಷವಿಡೀ ಅರ್ಥಪೂರ್ಣ ಕಾರ್ಯಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಆಚರಣೆ ಜಗತ್ತಿಗೆ ಗಾಂಧಿ ಸಂದೇಶ ಸಾರುವಂತಿರಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಮಹಾತ್ಮಾ ಗಾಂಧೀಜಿ ಭೇಟಿ ನೀಡಿದ ರಾಜ್ಯದ 120 ಸ್ಥಳಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಯೋಜಿಸಿದೆ. ಜೊತೆಗೆ ರಿಚರ್ಡ್ ಅಟೆನ್‌ಬರೋ ಅವರ ಗಾಂಧಿ ಸಿನಿಮಾ ಕೂಡ ಕನ್ನಡದಲ್ಲಿ ನಿರ್ಮಾಣವಾಗಲಿದೆ. ಸುವರ್ಣ

ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ: “ಗಾಂಧಿ ಭಾರತ” ಹೆಸರಲ್ಲಿ ವರ್ಷವಿಡೀ ಕಾರ್ಯಕ್ರಮಕ್ಕೆ ಸರ್ಕಾರ ನಿರ್ಧಾರ Read More »

ಕರ್ನಾಟಕ

ಉದ್ಘಾಟನೆಗೊಂಡ ಮೂರು ತಿಂಗಳಿಗೆ ಕುಸಿದ 6.5 ಕೋಟಿ ವೆಚ್ಚದ ಸೇತುವೆ!

(ನ್ಯೂಸ್ ಕಡಬ) newskadaba.com ನ. 16. ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕೃಷ್ಣಾ ನದಿಗೆ ಅಡ್ಡಲಾಗಿ 6.50 ಕೋಟಿ ರೂಪಾಯಿ ವೆಚ್ಚದ ಸಣ್ಣ ನೀರಾವರಿ ಇಲಾಖೆಯಿಂದ ಇತ್ತೀಚೆಗೆ ನಿರ್ಮಿಸಲಾದ ಮಾಂಜರಿ-ಬವನಸೌಂದತ್ತಿ ಸೇತುವೆ-ಕಮ್-ಬ್ಯಾರೇಜ್ ಉದ್ಘಾಟನೆಗೊಂಡು ಮೂರು ತಿಂಗಲಾಗುತ್ತಿದ್ದಂತೆ ಕುಸಿದಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಕಳಪೆ ಗುಣಮಟ್ಟದ ಕಾಮಗಾರಿಯಿಂದಾಗಿ ಪ್ರಬಲವಾದ ನದಿ ಪ್ರವಾಹ ತಡೆಯದ ಸೇತುವೆಗ ಕುಸಿದಿದೆ ಎಂದು ಆರೋಪಿಸಿದ್ದಾರೆ. ಸೇತುವೆ ಕುಸಿತದಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಹೀಗಾಗಿ ಸಂಪರ್ಕವನ್ನು ಮರುಸ್ಥಾಪಿಸಲು ತಕ್ಷಣ ದುರಸ್ತಿ ಮಾಡಬೇಕು ಎಂದು ಸಾಮಾಜಿಕ ಕಾರ್ಯಕರ್ತ

ಉದ್ಘಾಟನೆಗೊಂಡ ಮೂರು ತಿಂಗಳಿಗೆ ಕುಸಿದ 6.5 ಕೋಟಿ ವೆಚ್ಚದ ಸೇತುವೆ! Read More »

ಕರ್ನಾಟಕ

ಕಳಸಾ-ಬಂಡೂರಿ ಯೋಜನೆಗೆ ಅನುಮೋದನೆ ನೀಡಿ: ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಆಗ್ರಹ

(ನ್ಯೂಸ್ ಕಡಬ)newskadaba.com, ಅ. 11 ಬೆಳಾಗಾವಿ: ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಗೋವಾ ಸರ್ಕಾರ ಒಡ್ಡುತ್ತಿರುವ ಅಡೆತಡೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕರ್ನಾಟಕವು ಯಾವುದೇ ವಿಳಂಬವಿಲ್ಲದೆ ಯೋಜನೆಗೆ ಅಗತ್ಯ ಅನುಮೋದನೆ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದು, ಸುಪ್ರೀಂ ಕೋರ್ಟ್ ಅದಕ್ಕೆ ತಡೆಯಾಜ್ಞೆ ನೀಡಿಲ್ಲ ಎಂದು ತಿಳಿಸಿದೆ. ಅಕ್ಟೋಬರ್ 9 ರಂದು ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ (ಎನ್‌ಬಿಡಬ್ಲ್ಯು) 80 ನೇ ಸ್ಥಾಯಿ ಸಮಿತಿ ಸಭೆಯಲ್ಲಿ ಕಣಕುಂಬಿಯಲ್ಲಿ ಕಳಸಾ-ಬಂಡೂರಿ ಯೋಜನೆಯಡಿ ನೀರನ್ನು ತಿರುಗಿಸುವ ಬಗ್ಗೆ ಚರ್ಚಿಸಲಾಯಿತು. ಕಾಳಿ ಮತ್ತು

ಕಳಸಾ-ಬಂಡೂರಿ ಯೋಜನೆಗೆ ಅನುಮೋದನೆ ನೀಡಿ: ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಆಗ್ರಹ Read More »

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಕೇಸ್‌: ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಆರೋಪಿ ಪ್ರದೋಷ ಸ್ಥಳಾಂತರ

(ನ್ಯೂಸ್ ಕಡಬ)newskadaba.com, ಅ.10 ಬೆಳಗಾವಿ:  ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಚಿತ್ರನಟ ದರ್ಶನ್ ಸಹಚರ ಪ್ರದೋಷ್ ನನ್ನು ಹಿಂಡಲಗಾ ಕಾರಾಗೃಹದಿಂದ ಮರಳಿ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಗುರುವಾರ ಪೊಲೀಸ್ ಭದ್ರತೆಯಲ್ಲಿ ಸ್ಥಳಾಂತರಿಸಲಾಯಿತು. ಬೆಂಗಳೂರು ಕಾರಾಗೃಹದಿಂದ ಬೆಳಗಾವಿ ಜೈಲಿಗೆ ಸ್ಥಳಾಂತರ ಮಾಡಿದ್ದರ ಬಗ್ಗೆ ಪ್ರದೋಷ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ವಿಚಾರಣಾ ಕೈದಿ ಪ್ರದೋಷನನ್ನು ಮರಳಿ ಬೆಂಗಳೂರು ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ನಿರ್ದೇಶನ ನೀಡಿದ್ದರು. ಅದರಂತೆ ಆದೇಶ ಪ್ರತಿ ಬಂದ ಬಳಿಕ

ರೇಣುಕಾಸ್ವಾಮಿ ಕೊಲೆ ಕೇಸ್‌: ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಆರೋಪಿ ಪ್ರದೋಷ ಸ್ಥಳಾಂತರ Read More »

ಬ್ರೇಕಿಂಗ್ ನ್ಯೂಸ್

ಶೀಘ್ರವೇ 2 ತಿಂಗಳ ಗೃಹಲಕ್ಷ್ಮಿಬಾಕಿ ಪಾವತಿ:ಲಕ್ಷ್ಮಿ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಸೆ. 27 ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಇದು ನಿರಂತರ ಪ್ರಕ್ರಿಯೆ. ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಗೃಹಲಕ್ಷ್ಮಿ ಹಣವನ್ನು ಕಾಯುತ್ತಿರುವ ಲಕ್ಷಾಂತರ ಮಹಿಳೆಯರಿಗೆ ಈ ತಿಂಗಳು ಮುಗಿಯುವ ಮುನ್ನವೇ

ಶೀಘ್ರವೇ 2 ತಿಂಗಳ ಗೃಹಲಕ್ಷ್ಮಿಬಾಕಿ ಪಾವತಿ:ಲಕ್ಷ್ಮಿ ಹೆಬ್ಬಾಳ್ಕರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳಗಾವಿ ವಿಭಜನೆಯಾಗದೆ ಅಭಿವೃದ್ಧಿ ಸಾಧ್ಯವಿಲ್ಲ:ಲಕ್ಷ್ಮಿ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಸೆ. 27. ವಿಟ್ಲ: ಭೌಗೋಳಿಕವಾಗಿ ಮತ್ತು ಜನಸಂಖ್ಯೆ ದೃಷ್ಟಿಯಿಂದ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ವಿಭಜನೆಯಾಗದ ಹೊರತು, ಅಭಿವೃದ್ಧಿ ಸಾಧ್ಯವಿಲ್ಲ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರೊಂದಿಗೆ ಚರ್ಚಿಸಿ ದಸರಾ ಹಬ್ಬ ಮುಗಿದ ಬಳಿಕ ಸಿಎಂ ಹಾಗೂ ಕಂದಾಯ ಸಚಿವರಿಗೆ ಮನವಿ ಪತ್ರ ನೀಡುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವುದನ್ನು ಹೊಸ ಜಿಲ್ಲೆ ಮಾಡಬೇಕೆಂದು ನಾನು ಹೇಳುವುದಿಲ್ಲ. ಆದರೆ, ಬೆಳಗಾವಿಯನ್ನು ಎರಡು ಅಥವಾ ಮೂರು ಜಿಲ್ಲೆಗಳಾಗಿ

ಬೆಳಗಾವಿ ವಿಭಜನೆಯಾಗದೆ ಅಭಿವೃದ್ಧಿ ಸಾಧ್ಯವಿಲ್ಲ:ಲಕ್ಷ್ಮಿ ಹೆಬ್ಬಾಳ್ಕರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Crime

ಗಣೇಶ ವಿಸರ್ಜನೆಯ ವೇಳೆ ಮೂವರಿಗೆ ಚಾಕು ಇರಿತ

(ನ್ಯೂಸ್ ಕಡಬ) newskadaba.com ಬೆಳಗಾವಿ, ಸೆ. 18. ಗಣೇಶ ವಿಸರ್ಜನೆಯ ವೇಳೆ ನಡೆದ ಚಾಕು ಇರಿತದಿಂದಾಗಿ ಮೂವರು ಗಾಯಗೊಂಡ ಘಟನೆ ಚೆನ್ನಮ್ಮ ವೃತ್ತದ ಬಳಿ ನಡೆದಿದೆ. ಗಾಯಾಳುಗಳನ್ನು ಸಮಾಜ ಕಲ್ಯಾಣ ವಸತಿ ನಿಲಯದ ವಿದ್ಯಾರ್ಥಿಗಳಾದ ಪ್ರವೀಣ್ ಗುಂಡ್ಯಾಗೋಳ್, ದರ್ಶನ್ ಪಾಟೀಲ್ ಮತ್ತು ಸತೀಶ್ ಪೂಜಾರಿ ಎಂದು ಗುರುತಿಸಲಾಗಿದೆ. ಪ್ರವೀಣ್ ಗುಂಡ್ಯಾಗೋಳ್ ಎಂಬವರ ಸ್ಥಿತಿ ಗಂಭೀರವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಇಬ್ಬರಿಗೆ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿರುವುದಾಗಿ ಮೂಲಗಳು ತಿಳಿಸಿವೆ. ಡ್ಯಾನ್ಸ್ ಮಾಡುವಾಗ ಕಾಲು ತಾಕಿದ್ದಕ್ಕೆ ಹುಡುಗರು

ಗಣೇಶ ವಿಸರ್ಜನೆಯ ವೇಳೆ ಮೂವರಿಗೆ ಚಾಕು ಇರಿತ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top