ಬೆಳ್ತಂಗಡಿ: ಉಜಿರೆಯಲ್ಲಿ ಬೈಕ್‌ಗೆ ಲಾರಿ ಢಿಕ್ಕಿ; ಚಿಕಿತ್ಸೆ ಫಲಿಸದೆ ಸವಾರ ಸಾವು
(ನ್ಯೂಸ್ ಕಡಬ) newskadaba.com, ಸೆ.06 ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿಯ ಉಜಿರೆ-ಚಾರ್ಮಾಡಿ ರಸ್ತೆಯಲ್ಲಿ ಸೆ. ೩ರಂದು ಲಾರಿ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೆ. 4ರ ಸಂಜೆ ಮೃತಪಟ್ಟಿದ್ದಾರೆ. ಮೃತರನ್ನು ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಸಮೀಪದ ನಿವಾಸಿ ಪುರುಷೋತ್ತಮ ಅಲಿಯಾಸ್ ಬಾಲು (44) ಎಂದು ಗುರುತಿಸಲಾಗಿದೆ. ಮೃತರು ಕ್ವಾರಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಬೆಳ್ತಂಗಡಿ: ಉಜಿರೆಯಲ್ಲಿ ಬೈಕ್‌ಗೆ ಲಾರಿ ಢಿಕ್ಕಿ; ಚಿಕಿತ್ಸೆ ಫಲಿಸದೆ ಸವಾರ ಸಾವು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
