ಬೆಳ್ತಂಗಡಿ: ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ ಸರ ಕಳ್ಳತನ ಪ್ರಕರಣ; ಆರೋಪಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ
(ನ್ಯೂಸ್ ಕಡಬ) newskadaba.com, ಸೆ.20 ಬೆಳ್ತಂಗಡಿ: ಕೊಯ್ಯೂರು ಗ್ರಾಮದಲ್ಲಿ ಮಹಿಳೆಯ ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 3 ವರ್ಷಗಳ ಕಠಿಣ ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. 2024ರ ಡಿಸೆಂಬರ್ 9 ರಂದು ಕೊಯ್ಯೂರು ಗ್ರಾಮದಲ್ಲಿ ಮಹಿಳೆಯೊಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಉಮೇಶ್ ಗೌಡ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದನು. ಈ ಸಂಬಂಧ ಆರೋಪಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಅದೇ ದಿನ […]
