bengaluru

ಶಾಸಕ ಮುನಿರತ್ನ ಪ್ರಕರಣ: ತನಿಖೆಗೆ ಎಸ್‌ಐಟಿ ರಚಿಸುವಂತೆ ಒಕ್ಕಲಿಗ ನಾಯಕರ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.21. ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಒಕ್ಕಲಿಗ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಮನವಿ ಮಾಡಿದ್ದಾರೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ, ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್‌ ನೇತೃತ್ವದಲ್ಲಿ ತೆರಳಿದ್ದ ನಿಯೋಗ, ಮುನಿರತ್ನ ವಿರುದ್ಧ ಕಮಿಷನ್‌ ದಂಧೆ, ಅತ್ಯಾಚಾರ, ಹನಿಟ್ರ್ಯಾಪ್‌, ಎಚ್‌ಐವಿ ಹರಡುವಿಕೆ ಸೇರಿದಂತೆ ವಿವಿಧ ಆರೋಪಗಳು ಇವೆ. ಹಾಗಾಗಿ, ಎಲ್ಲಾ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಬೇಕು ಎಂದು […]

ಶಾಸಕ ಮುನಿರತ್ನ ಪ್ರಕರಣ: ತನಿಖೆಗೆ ಎಸ್‌ಐಟಿ ರಚಿಸುವಂತೆ ಒಕ್ಕಲಿಗ ನಾಯಕರ ಮನವಿ Read More »

ಕರ್ನಾಟಕ

ಸರ್ಕಾರಿ ಕೆಲಸ ನೀಡುವುದಾಗಿ ಆಮಿಷ- ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಯುವಕನಿಗೆ ಬೆಸ್ಕಾಂನಲ್ಲಿ ಕೆಲಸ ನೀಡುವುದಾಗಿ ಭರವಸೆ ನೀಡಿ ಹಣ ಪಡೆದು ನಕಲಿ ನೇಮಕಾತಿ ಆದೇಶ ನೀಡಿದ್ದ ಆರು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಕುರಿತು ವರದಿಯಾಗಿದೆ. ಘಟನೆಗೆ ಸಂಬಂಧಿಸಿ ಲಿಖಿತ್ ಎಂಬಾತ ಪ್ರವೀಣ್, ವಿಘ್ನೇಶ್ ಹೆಗ್ಡೆ, ವೆಂಕಟೇಶ್, ಶಿವಾನಂದ್, ಶ್ರೀನಿವಾಸ್ ಮತ್ತು ರಾಜಾ ವಿರುದ್ಧ ದೂರು ದಾಖಲಿಸಿದ್ದಾರೆ. ವರದಿಯ ಪ್ರಕಾರ, ಲಿಖಿತ್ ಎಂಬಾತ ವಿಘ್ನೇಶ್ ಹೆಗ್ಡೆ ಎಂಬಾತನೊಂದಿಗೆ ಸ್ನೇಹ ಬೆಳೆಸಿದ್ದನು. ಬೆಸ್ಕಾಂ ಹಾಗೂ ಇತರ ವಿವಿಧ ಸರ್ಕಾರಿ

ಸರ್ಕಾರಿ ಕೆಲಸ ನೀಡುವುದಾಗಿ ಆಮಿಷ- ದೂರು Read More »

ಕರ್ನಾಟಕ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19.  ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ (84) ಅವರು ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ ಶೇ.40 ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೃದಯಾಘಾತದಿಂದ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಡಿಯುವ ನೀರಿನ ಯೋಜನೆಗೆ ಅನುಮೋದನೆ ಒದಗಿಸಿಕೊಡುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19.  ಉತ್ತರ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ ಕಳಸಾ ಬಂಡೂರಿ ನಾಲಾ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡುವಂತೆ ಮಂಡಳಿಯ ಅಧ್ಯಕ್ಷರಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ನಿನ್ನೆ ಪ್ರಧಾನ ಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಸಿದ್ದರಾಮಯ್ಯಯನವರು ಜನ್ಮದಿನದ ಶುಭಾಶಯ ತಿಳಿಸಿ ನಾಲಾ ಯೋಜನೆಯ ಬಗ್ಗೆ ವಿವರವಾಗಿ ಬರೆದಿದ್ದಾರೆ. ಕರ್ನಾಟಕ ರಾಜ್ಯಕ್ಕೆ ಒಟ್ಟು 13.42 ಟಿಎಂಸಿ ಹಂಚಿಕೆಯಾಗಿದೆ. ಅದರಲ್ಲಿ 3.9 ಟಿಎಂಸಿ

ಕುಡಿಯುವ ನೀರಿನ ಯೋಜನೆಗೆ ಅನುಮೋದನೆ ಒದಗಿಸಿಕೊಡುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ನಕಲಿ ಆಧಾರ್ ಕಾರ್ಡ್‌ ಬಳಕೆಗೆ ಕಡಿವಾಣ-  ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಆಧಾರ್ ದೃಢೀಕರಣ ಪರಿಶೀಲನೆ ಕಡ್ಡಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ನಕಲಿ ಆಧಾರ್ ಕಾರ್ಡ್‌ಗಳ ಬಳಕೆಗೆ ಕಡಿವಾಣ ಹಾಕಲು ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಯಾವುದೇ ಆಸ್ತಿ ನೋಂದಣಿಗೂ ಮುನ್ನಾ ಕಾರ್ಡ್ ದೃಢೀಕರಣ ಪರಿಶೀಲನೆಯನ್ನು ಮುದ್ರಾಂಕ ಮತ್ತು ನೋಂದಣಿ ಇಲಾಖೆ ಕಡ್ಡಾಯಗೊಳಿಸಿದೆ. ಇದಕ್ಕಾಗಿ ಈಗ ಪ್ರತಿ ಕಚೇರಿಯಲ್ಲಿಯೂ ಐರಿಸ್ ಸ್ಕ್ಯಾನ್ ಯಂತ್ರ ಮತ್ತು ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಇಲಾಖೆ ತಿಳಿಸಿವೆ. ಎಲ್ಲಾ 256 ಸಬ್-ರಿಜಿಸ್ಟ್ರಾರ್ ಕಚೇರಿಗಳಲ್ಲಿ ಇದನ್ನು ಅಳವಡಿಸಿದ್ದೇವೆ. ಈ ಹಿಂದೆ ನಕಲಿ ಆಧಾರ್ ಕಾರ್ಡ್‌ ತಯಾರಿಸಿ

ನಕಲಿ ಆಧಾರ್ ಕಾರ್ಡ್‌ ಬಳಕೆಗೆ ಕಡಿವಾಣ-  ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಆಧಾರ್ ದೃಢೀಕರಣ ಪರಿಶೀಲನೆ ಕಡ್ಡಾಯ Read More »

ಕರ್ನಾಟಕ

ಸೈನಿಕ ಶಾಲೆಯಲ್ಲಿ ಹುಸಿ ಬಾಂಬ್ ಬೆದರಿಕೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ರಕ್ಷಣಾ ಸಚಿವಾಲಯದೊಂದಿಗೆ ಸಂಯೋಜಿತವಾಗಿರುವ ನಗರದ ಸೈನಿಕ ಶಾಲೆಯೊಂದಕ್ಕೆ ಬುಧವಾರ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ತದ ನಂತರ ಶಾಲಾ ಆವರಣವನ್ನು ಸಂಪೂರ್ಣವಾಗಿ ಪರಿಶೀಲಿಸಿದ ನಂತರ ಅದೊಂದು ಹುಸಿ ಬಾಂಬ್ ಬೆದರಿಕೆ ಎಂದು ದೃಢಪಡಿಸಲಾಯಿತು. ಮಧ್ಯಾಹ್ನ 12.30 ರ ಸುಮಾರಿಗೆ ಶಾಲಾ ಆವರಣದಲ್ಲಿ ಸ್ಪೋಟಕ ಇಡಲಾಗಿದೆ ಎಂದು ಶಾಲೆಗೆ ಅನಾಮಧೇಯ ಇಮೇಲ್ ಬಂದಿದೆ. ಇದರಿಂದ ಆತಂಕಕ್ಕೀಡಾದ ಶಾಲಾ ಆಡಳಿತ ಮಂಡಳಿ ಕೂಡಲೇ ಪೊಲೀಸರಿಗೆ ಮಾಹಿತಿ

ಸೈನಿಕ ಶಾಲೆಯಲ್ಲಿ ಹುಸಿ ಬಾಂಬ್ ಬೆದರಿಕೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ-  ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18.  ಪರಿಶಿಷ್ಟ ಜಾತಿ ನಿಂದನೆ, ಮಹಿಳೆಯರನ್ನು ಗುರಿಯಾಗಿಸಿ ಅವಾಚ್ಯ ಶಬ್ದಗಳಿಂದ ಬೈದ ಹಾಗೂ ಗುತ್ತಿಗೆದಾರರಿಗೆ ಲಂಚಕ್ಕೆ ಬೇಡಿಕೆ ಇರಿಸಿ ಕೊಲೆ ಬೆದರಿಕೆ ಹಾಕಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶವನ್ನು ಸೆ.19ಕ್ಕೆ ಕಾಯ್ದಿರಿಸಿದೆ. ಈ ಕುರಿತ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಇಂದು ವಿಚಾರಣೆ ನಡೆಸಿದರು. ವಿಚಾರಣೆ

ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ-  ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್ Read More »

ಕರ್ನಾಟಕ

ನ.20ರವರೆಗೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18.  ನಿಮ್ಮ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಇನ್ನೂ ಅಳವಡಿಕೆ ಮಾಡಿಲ್ಲವೇ ಹಾಗಾದರೆ ನಿಮಗಿದೋ ಗುಡ್ ನ್ಯೂಸ್. ಹೈಕೋರ್ಟ್‌ನಿಂದ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವುನ್ನು ನ.20ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದಿಂದ ಈಗಾಗಲೇ ಎಲ್ಲ ಮೋಟಾರು ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (High Security Registration Plate- HSRP)  ಅಳವಡಿಕೆ ಮಾಡಿಸಿಕೊಳ್ಳಲು ನಾಲ್ಕು ಬಾರಿ ಗಡುವು ನೀಡಿತ್ತು. ಕೊನೆಯ ಬಾರಿ ಸೆ.14ರಂದು ಈ ನಂಬರ್

ನ.20ರವರೆಗೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ Read More »

ಕರ್ನಾಟಕ

ರಾಜ್ಯದಲ್ಲಿ ಡ್ರಗ್ಸ್ ದಂಧೆ:  ಪೇನ್ ಕಿಲ್ಲರ್ ಮಾತ್ರೆಗಳಿಂದ ಆತಂಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18.  ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಕೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ‌ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ‌ ಮಾಡಿದ್ದೇವೆ.ಈಗ ಮೆಡಿಕಲ್‌ ಶಾಪ್‌ಗಳಲ್ಲಿ ಸಿಗುತ್ತಿರುವ ಪೇನ್ ಕಿಲ್ಲರ್ ಮಾತ್ರೆಗಳಿಂದ ನಮಗೆ ಆತಂಕವಿದೆ‌ ಎಂದರು. ಪೇನ್ ಕಿಲ್ಲರ್ ಮಾತ್ರೆಗಳನ್ನು ಬೇರೆಬೇರೆ ಕಂಪನಿಗಳು ತಯಾರಿಸುತ್ತಿವೆ. ಅದು ಈಗ ಸುಲಭವಾಗಿ ಕೈಗೆ ಸಿಗುತ್ತಿವೆ. ಯಾವ

ರಾಜ್ಯದಲ್ಲಿ ಡ್ರಗ್ಸ್ ದಂಧೆ:  ಪೇನ್ ಕಿಲ್ಲರ್ ಮಾತ್ರೆಗಳಿಂದ ಆತಂಕ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮದ್ಯ ಪ್ರಿಯರಿಗೆ ಮತ್ತೆ ಶಾಕ್ – ಅ.1ರಿಂದ ಪರಿಷ್ಕೃತ ದರ ಜಾರಿಗೆ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ಒಂದೇ ವರ್ಷದ ಅವಧಿಯಲ್ಲಿ ಎರಡು ಬಾರಿ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದ ಸರ್ಕಾರ ಈಗ ಮತ್ತೊಮ್ಮೆ ಶಾಕ್ ಕೊಡಲು ಮುಂದಾಗಿದೆ. ಅಕ್ಟೋಬರ್ ಮೊದಲ ವಾರದಿಂದಲೇ ಮತ್ತೆ ಪರಿಷ್ಕೃತ ದರ ಜಾರಿ ಮಾಡುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಈಗಾಗಲೇ ಒಂದು ವರ್ಷದ ಅವಧಿಯಲ್ಲಿ ಎರಡು ಬಾರಿ ಮದ್ಯ ದರ ಏರಿಕೆ ಮಾಡಿ ಸರ್ಕಾರ ಶಾಕ್ ನೀಡಿತ್ತು. ಇದೀಗ ಮತ್ತೆ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಇನ್ನೂ ಸರ್ಕಾರದ

ಮದ್ಯ ಪ್ರಿಯರಿಗೆ ಮತ್ತೆ ಶಾಕ್ – ಅ.1ರಿಂದ ಪರಿಷ್ಕೃತ ದರ ಜಾರಿಗೆ ಸಾಧ್ಯತೆ..! Read More »

ಕರ್ನಾಟಕ
Scroll to Top