ರೇಣುಕಾಸ್ವಾಮಿ ಕೊಲೆ ಪ್ರಕರಣ- ಇಂದು ದರ್ಶನ್ ನ್ಯಾಯಾಂಗ ಬಂಧನ ಅವಧಿ ಮುಕ್ತಾಯ ಎಸಿಎಂಎಂ ಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 09. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು (ಸೆ.9) ಮುಕ್ತಾಯವಾಗಲಿದೆ. ದರ್ಶನ್ ಸೇರಿ ಎಲ್ಲಾ 17 ಆರೋಪಿಗಳು ವಿವಿಧ ಜೈಲಲ್ಲಿರುವ ಕಾರಣ ಎಲ್ಲರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ. ವಿಚಾರಣೆ ಬಳಿಕ ನಟ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಲಿದ್ದಾರೆ ಎಂದು ವರದಿ ತಿಳಿದುಬಂದಿದೆ. ಬಳ್ಳಾರಿ ಜೈಲಲ್ಲಿರುವ ನಟ ದರ್ಶನ್ ಮಾತ್ರವಲ್ಲ ಡಿ ಗ್ಯಾಂಗ್‌ನ ಉಳಿದ ಸದಸ್ಯರು ಜಾಮೀನು ಪಡೆಯಲು ಕಸರತ್ತು ನಡೆಸಿದ್ದಾರೆ. […]



