bengaluru

2026ರ ಡಿಸೆಂಬರ್‌ಗೆ ನಮ್ಮ ಮೆಟ್ರೋ ಪಿಂಕ್ ಲೈನ್ ಆರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 31.  ಅತಿ ಉದ್ದದ ಭೂಗತ ಮೆಟ್ರೋ ಮಾರ್ಗವನ್ನು ಹೊಂದಿರುವ ಪಿಂಕ್ ಲೈನ್ 2026 ರ ಡಿಸೆಂಬರ್ ವೇಳೆಗೆ ಸಂಪೂರ್ಣವಾಗಿ ತೆರೆಯುವ ನಿರೀಕ್ಷೆಯಿದೆ. ನಮ್ಮ ಮೆಟ್ರೋ ಅಧಿಕಾರಿ ತಿಳಿಸಿದ್ದಾರೆ. 21.26 ಕಿ.ಮೀ ಉದ್ದದ ಈ ಮಾರ್ಗವು ಕಾಳೇನ ಅಗ್ರಹಾರ ಮತ್ತು ನಾಗವಾರವನ್ನು ಸಂಪರ್ಕಿಸುತ್ತದೆ. ಮಧ್ಯೆ 12 ಭೂಗತ ಮತ್ತು ಆರು ಎತ್ತರಿಸಿದ ನಿಲ್ದಾಣಗಳಿವೆ. ಪಿಂಕ್ ಲೈನ್ ಎರಡು ಹಂತಗಳಲ್ಲಿ ತೆರೆಯುತ್ತದೆ. 2025ರ ಡಿಸೆಂಬರ್ ವೇಳೆಗೆ 7.5 ಕಿ.ಮೀ ಎತ್ತರಿಸಿದ ವಿಭಾಗ (ಕಾಳೇನ ಅಗ್ರಹಾರ-ತಾವರೆಕೆರೆ) […]

2026ರ ಡಿಸೆಂಬರ್‌ಗೆ ನಮ್ಮ ಮೆಟ್ರೋ ಪಿಂಕ್ ಲೈನ್ ಆರಂಭ Read More »

ಕರ್ನಾಟಕ

ಇಂದಿನಿಂದಲೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟ ದರ್ಶನ್‌ಗೆ ಚಿಕಿತ್ಸೆ ಆರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 31.  ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಅವರು ನಿನ್ನೆ ಸಂಜೆಯಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಲಿದ್ದಾರೆ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಇಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಲಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ದರ್ಶನ್‌ ಕುಟುಂಬದವರು ಹಾಗೂ ಮಿತ್ರರು ಆಸ್ಪತ್ರೆಯ ಆಡಳಿತಾಧಿಕಾರಿಗಳು ಹಾಗೂ ವೈದ್ಯರನ್ನು ಕನ್‌ಸಲ್ಟ್‌

ಇಂದಿನಿಂದಲೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟ ದರ್ಶನ್‌ಗೆ ಚಿಕಿತ್ಸೆ ಆರಂಭ Read More »

ಕರ್ನಾಟಕ

ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ – ಸಿಎಂ ಸ್ಪಷ್ಟನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 31. ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಡಿಸಿಎಂ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಕುರಿತು ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ನಾನು ಮಂತ್ರಿಗಳ ಜೊತೆ ಮಾತಾಡುತ್ತೇನೆ. ಪರಿಷ್ಕರಣೆಯ ಯಾವುದೇ ಉದ್ದೇಶವಿಲ್ಲ.

ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ – ಸಿಎಂ ಸ್ಪಷ್ಟನೆ Read More »

ಕರ್ನಾಟಕ

ರಾಜ್ಯದಲ್ಲಿ 230 ಗೋಲ್‌ಗಪ್ಪ ತಯಾರಿಕಾ ಘಟಕಗಳ ಮೇಲೆ ಅಧಿಕಾರಿಗಳ ದಾಳಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 30. ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳು ರಾಜ್ಯಾದ್ಯಂತ 230 ಗೋಲ್‌ಗಪ್ಪಾ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೀದಿಯಲ್ಲಿ ಮಾರಲಾಗುವ ಪಾನಿಪುರಿ, ಗೋಲ್‌ಗಪ್ಪದ ಸ್ವಚ್ಛತೆ, ಶುದ್ಧತೆಯ ಬಗ್ಗೆ ಅನುಮಾನದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. 165 ಘಟಕಗಳ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಗೋಲ್‌ಗಪ್ಪಾ ರುಚಿ ಹೆಚ್ಚಳಕ್ಕೆ ಯೂರಿಯಾ ಗೊಬ್ಬರ, ಹಾರ್ಪಿಕ್ ಬಳಕೆ ಮಾಡಲಾಗುತ್ತಿರುವ ಕುರಿತಂತೆ ಇತ್ತೀಚೆಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆ ವರದಿ ಆಧರಿಸಿ, ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ

ರಾಜ್ಯದಲ್ಲಿ 230 ಗೋಲ್‌ಗಪ್ಪ ತಯಾರಿಕಾ ಘಟಕಗಳ ಮೇಲೆ ಅಧಿಕಾರಿಗಳ ದಾಳಿ Read More »

ಕರ್ನಾಟಕ

ವಿಧಾನಪರಿಷತ್ತಿನ ನೂತನ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 30. ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಪರಿಷತ್‍ನ ನೂತನ ಸದಸ್ಯರಾಗಿ ಪ್ರಮಾಣವಚನ ಪ್ರಮಾಣವಚನ ಸ್ವೀಕರಿಸಿದರು. ಇಂದು ವಿಧಾನಪರಿಷತ್‌ನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಿಶೋರ್ ಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ವಿಧಾನ ಪರಿಷತ್‍ನ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮೀ ಸೇರಿದಂತೆ ಶಾಸಕರು, ವಿಧಾನ ಪರಿಷತ್‍ನ ಸದಸ್ಯರು ಉಪಸ್ಥಿತರಿದ್ದರು.      

ವಿಧಾನಪರಿಷತ್ತಿನ ನೂತನ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ Read More »

ಕರ್ನಾಟಕ

5 ತಿಂಗಳ ಬಳಿಕ ಜೈಲಿಂದ ದರ್ಶನ್ ರಿಲೀಸ್ – ಹೈಕೋರ್ಟ್‌ನಿಂದ ಜಾಮೀನು ಮಂಜೂರು

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 30. ದೀಪಾವಳಿ ಹಬ್ಬಕ್ಕೆ ದರ್ಶನ್‌ಗೆ ಬಿಗ್‌ ಗಿಫ್ಟ್‌ ಸಿಕ್ಕಿದ್ದು 140 ದಿನಗಳ ಬಳಿಕ ದರ್ಶನ್‌ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಟ ದರ್ಶನ್‌ಗೆ ಹೈಕೋರ್ಟ್‌ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ದರ್ಶನ್‌ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

5 ತಿಂಗಳ ಬಳಿಕ ಜೈಲಿಂದ ದರ್ಶನ್ ರಿಲೀಸ್ – ಹೈಕೋರ್ಟ್‌ನಿಂದ ಜಾಮೀನು ಮಂಜೂರು Read More »

ಕರ್ನಾಟಕ

ನ.1ರೊಳಗೆ ರಾಜ್ಯ ಸರ್ಕಾರಿ ನೌಕರರಿಗೆ ಕೆಂಪು-ಹಳದಿ ಬಣ್ಣದ ಐಡಿ ಕಾರ್ಡ್‌ ಟ್ಯಾಗ್‌ ಕಡ್ಡಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 29. ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ನವೆಂಬರ್ 1 ರೊಳಗೆ ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರ (ಟ್ಯಾಗ್) ಹಾಕಿಕೊಳ್ಳುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದೆ. ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ ʼಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡʼ ಅಭಿಯಾನದಡಿ

ನ.1ರೊಳಗೆ ರಾಜ್ಯ ಸರ್ಕಾರಿ ನೌಕರರಿಗೆ ಕೆಂಪು-ಹಳದಿ ಬಣ್ಣದ ಐಡಿ ಕಾರ್ಡ್‌ ಟ್ಯಾಗ್‌ ಕಡ್ಡಾಯ Read More »

ಕರ್ನಾಟಕ

ಅಪ್ಪು ಅಗಲಿಕೆಗೆ 3 ವರ್ಷ- ರಾಜ್ಯಾದ್ಯಂತ ಪುಣ್ಯಸ್ಮರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 29. ನಗುವಿನ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿಕೆಗೆ ಭರ್ತಿ ಮೂರು ವರ್ಷ. 3 ವರ್ಷವಲ್ಲ, ಇನ್ನೂ ನೂರು ವರ್ಷ ಕಳೆದರೂ ಅಪ್ಪು  ಮರೆಯಲಾಗದ ಮಾಣಿಕ್ಯ. ಪುಣ್ಯಸ್ಮರಣೆಯಲ್ಲಿ ಪತ್ನಿ ಅಶ್ವಿನಿ, ರಾಘವೇಂದ್ರ ರಾಜ್‌ಕುಮಾರ್, ವಿನಯ್  ರಾಜ್‌ಕುಮಾರ್, ಯುವರಾಜ್ ಕುಮಾರ್, ಅಪ್ಪು ಪುತ್ರಿಯರು ಭಾಗಿಯಾಗಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ಬಳಿ ಇಷ್ಟದ ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಸಮಾಧಿಯನ್ನ ವಿಶೇಷವಾಗಿ ಹೂವುಗಳಿಂದ, ದೀಪಗಳಿಂದ ಅಲಂಕಾರ ಮಾಡಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳ

ಅಪ್ಪು ಅಗಲಿಕೆಗೆ 3 ವರ್ಷ- ರಾಜ್ಯಾದ್ಯಂತ ಪುಣ್ಯಸ್ಮರಣೆ Read More »

ಕರ್ನಾಟಕ, ಸಿನಿಮಾ

ದೀಪಾವಳಿ ಹಬ್ಬ-  ರಾಜ್ಯದಲ್ಲಿ ಪಟಾಕಿ ಸಿಡಿಸಲು ಬಿಬಿಎಂಪಿ ಮಾರ್ಗಸೂಚಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.29.  ದೀಪಾವಳಿ ಹಬ್ಬದ ಹಿನ್ನೆಲೆ ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ಮೇರೆಗೆ ಬಿಬಿಎಂಪಿ ಮಾರ್ಗಸೂಚಿ ಪ್ರಕಟಿಸಿದೆ. ಸ್ಫೋಟಕ ಪಟಾಕಿಗಳನ್ನು ಸಿಡಿಸುವುದು ಸಂಪೂರ್ಣ ನಿಷೇಧಿಸಿದ್ದು, ಹಸಿರು ಪಟಾಕಿ ಮಾತ್ರ ಸಿಡಿಸುವಂತೆ ಸಾರ್ವಜನಿಕರಿಗೆ ಮಾಲಿನ್ಯ ಮಂಡಳಿ ಮನವಿ ಮಾಡಿದೆ. ಅಕ್ಟೋಬರ್ 31ರಿಂದ ನವೆಂಬರ್ 2ರ ವರೆಗೆ ಮೂರು ದಿನ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ    

ದೀಪಾವಳಿ ಹಬ್ಬ-  ರಾಜ್ಯದಲ್ಲಿ ಪಟಾಕಿ ಸಿಡಿಸಲು ಬಿಬಿಎಂಪಿ ಮಾರ್ಗಸೂಚಿ Read More »

ಕರ್ನಾಟಕ

ವಾಹನ ಡಿಕ್ಕಿ ಹೊಡೆದು ಕಾಡಾನೆ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.29.  ಅಪರಿಚಿತ ವಾಹನ ಡಿಕ್ಕಿ ಹೊಡೆದು ಕಾಡಾನೆ ಮೃತಪಟ್ಟ ಘಟನೆ ಬನ್ನೇರುಘಟ್ಟ ತಟ್ಟೆಕೆರೆ ಅರಣ್ಯ ವ್ಯಾಪ್ತಿಯಲ್ಲಿ ಬರುವ ಹುರುಗನ ದೊಡ್ಡಿಯಲ್ಲಿ ನಡೆದಿದೆ. ಬೆಳಗ್ಗೆ ಕಾಡಾನೆ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದು, ರಸ್ತೆಯಲ್ಲೇ ಮೃತಪಟ್ಟಿದೆ. ಸ್ಥಳಕ್ಕೆ ಬನ್ನೇರುಘಟ್ಟ ವೈದ್ಯರ ತಂಡ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.  

ವಾಹನ ಡಿಕ್ಕಿ ಹೊಡೆದು ಕಾಡಾನೆ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top