bengaluru

ಮುಡಾ ಹಗರಣ: ಇಡಿ ದಾಳಿ ಬೆನ್ನಲ್ಲೇ ವಾಕಿಂಗ್‌ ಮಾಡುತ್ತಿದ್ದ ಮಾಜಿ ಆಯುಕ್ತ ಪರಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.28. ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಸಂಬಂಧಿಸಿದಂತೆ ಸೋಮವಾರ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ ಬೆನ್ನಲ್ಲೇ ಮುಡಾದ ಮಾಜಿ ಆಯುಕ್ತ , ಐಎಎಸ್‌ ಅಧಿಕಾರಿ ದಿನೇಶ್‌ಕುಮಾರ್‌ ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ ದಿನೇಶ್‌ ಕುಮಾರ್‌ ನೆಲೆಸಿದ್ದ ಬಾಣಸವಾಡಿಯ ದೀಪಿಕಾ ರಾಯಲ್ ಅಪಾರ್ಟ್‌ಮೆಂಟ್‌ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಡಿ ಅಧಿಕಾರಿಗಳ ದಾಳಿಯ ವೇಳೆ ದಿನೇಶ್‌ ಕುಮಾರ್‌ ವಾಕಿಂಗ್‌ ಮಾಡುತ್ತಿದ್ದರು. ಮನೆ ಮೇಲೆ ದಾಳಿ ನಡೆದ ವಿಚಾರ ತಿಳಿದು ವಾಕಿಂಗ್‌ ಮಾಡುತ್ತಿದ್ದ […]

ಮುಡಾ ಹಗರಣ: ಇಡಿ ದಾಳಿ ಬೆನ್ನಲ್ಲೇ ವಾಕಿಂಗ್‌ ಮಾಡುತ್ತಿದ್ದ ಮಾಜಿ ಆಯುಕ್ತ ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆ, ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಯೊಳಗೆ ಪರಿಹಾರ ಒದಗಿಸುವಂತೆ ಸಿಎಂ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. 2024 ರ ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದರು. ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರವನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಮಳೆ ಹಾನಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಅತಿವೃಷ್ಟಿ, ಪ್ರವಾಹ, ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ

ಮನೆ, ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಯೊಳಗೆ ಪರಿಹಾರ ಒದಗಿಸುವಂತೆ ಸಿಎಂ ಸೂಚನೆ Read More »

ಕರ್ನಾಟಕ

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ನಿವಾಸಕ್ಕೆ ಉಪ‌ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. ಇಂದು ಉಪ‌ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ನಿವಾಸಕ್ಕೆ ಆಗಮಿಸಿದರು ಎಂದು ವರದಿಯಾಗಿದೆ. ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಹೂಗುಚ್ಛ ನೀಡಿ ಸ್ವಾಗತಿಸಿದರು. ಉಪರಾಷ್ಟ್ರಪತಿ, ಹೆಚ್​ಡಿ ದೇವೇಗೌಡ ಮತ್ತು ಹೆಚ್​ಡಿ ಕುಮಾರಸ್ವಾಮಿ ಅವರ ಜೊತೆಗೆ ಸ್ವಲ್ಪ ಸಮಯ ಮಾತನಾಡಿ ತೆರಳಿದ್ದಾರೆ ಎಂಬುವುದಾಗಿ ಮಾಹಿತಿ ಲಭ್ಯವಾಗಿದೆ.

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ನಿವಾಸಕ್ಕೆ ಉಪ‌ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ Read More »

ಕರ್ನಾಟಕ

ಅ.28ರಂದು ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. ಕರ್ನಾಟಕ ಸಂಗೀತ ನೃತ್ಯ ಅಕಾಡಮಿಯ ವತಿಯಿಂದ ಅ.28ರಂದು ಸಂಜೆ 6ಗಂಟೆಗೆ ನಗರದ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ 2023-24 ಮತ್ತು 2024-25ನೇ ಸಾಲಿನ ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್.ಎಸ್ ತಂಗಡಗಿ ಸಮಾರಂಭದ ಉದ್ಘಾಟನೆ ನೆರವೇರಿಸಿ, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಂಸದ ಪಿ.ಸಿ. ಮೋಹನ್ ಅವರು ಪ್ರಶಸ್ತಿ ಪುರಸ್ಕೃತರ ಪರಿಚಯ ಪುಸ್ತಕವನ್ನು ಬಿಡುಗಡೆ ಮಾಡಲಿದ್ದು, ಕನ್ನಡ

ಅ.28ರಂದು ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿ ಪ್ರದಾನ Read More »

ಕರ್ನಾಟಕ

ಹಬ್ಬಕ್ಕೆ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಿಸಿದರೆ ಲೈಸೆನ್ಸ್ ರದ್ದು- ಸಾರಿಗೆ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಹಬ್ಬಕ್ಕೆ ಬೆಂಗಳೂರಿನಿಂದ ಊರಿಗೆ ತೆರಳುವವರು ಹಾಗೂ ನಂತರ ಮರಳುವವರ ಸಂಖ್ಯೆಯಲ್ಲಿ ಅಗಾಧ ಏರಿಕೆಯಾಗಲಿದೆ. ದೀಪಾವಳಿ ಹಬ್ಬದ ಒಂದು ವಾರ ಮೊದಲು ಎಚ್ಚೆತ್ತುಕೊಂಡಿರುವ ಸಾರಿಗೆ ಇಲಾಖೆ, ಹೀಗೆ ಮಿತಿ ಮೀರಿ ದರ ಹೆಚ್ಚಿಸುವ ಖಾಸಗಿ ಬಸ್ಸುಗಳ ಮೇಲೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ನಿಯಮ ಮೀರಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಬಸ್ಸಿನ ಲೈಸೆನ್ಸ್ ಕೂಡ ರದ್ದುಗೊಳಿಸುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಜನರು ಖಾಸಗಿ ಬಸ್

ಹಬ್ಬಕ್ಕೆ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಿಸಿದರೆ ಲೈಸೆನ್ಸ್ ರದ್ದು- ಸಾರಿಗೆ ಇಲಾಖೆ ಎಚ್ಚರಿಕೆ Read More »

ಕರ್ನಾಟಕ

ನ.15ರೊಳಗೆ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಬಿಬಿಎಂಪಿ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. ನವೆಂಬರ್‌ 15ರೊಳಗೆ ನಗರದಲ್ಲಿನ ರಾಜಕಾಲುವೆಗಳ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ ನೀಡಿದೆ. ಬೃಹತ್ ಮಳೆನೀರು ಕಾಲುವೆ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ತಹಶೀಲ್ದಾರ್‌ಗಳು ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆಸಿದ ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಎಲ್ಲಾ ವಲಯ ಆಯುಕ್ತರಿಗೆ ಸೂಚನೆ ನೀಡಿ, ಈ ಗಡುವು ನೀಡಿದರು. ರಾಜಕಾಲುವೆ ಒತ್ತುವರಿ ತೆರವು ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ

ನ.15ರೊಳಗೆ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಬಿಬಿಎಂಪಿ ಸೂಚನೆ Read More »

ಕರ್ನಾಟಕ

ಗಾಳಿಪಟ ಹಾರಾಟಕ್ಕೆ ಹತ್ತಿಯಿಂದ ತಯಾರಿಸಿದ ದಾರವನ್ನು ಮಾತ್ರ ಬಳಸಬೇಕು- ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.25. ಗಾಳಿಪಟ ಹಾರಿಸಲು ಚೀನಿ ದಾರ ಅಥವಾ ಮಾಂಜಾ ದಾರವನ್ನು ಬಳಸುವುದನ್ನು ಸರ್ಕಾರ ನಿಷೇಧಿಸಿದೆ. ಕೇವಲ ಹತ್ತಿಯಿಂದ ತಯಾರಿಸಿದ ದಾರವನ್ನು ಮಾತ್ರ ಬಳಸುವಂತೆ ಸೂಚನೆ ನೀಡಲಾಗಿದೆ. ರಾಜ್ಯ ಸರ್ಕಾರ 2016ರ ಅಧಿಸೂಚನೆಗೆ ಕೆಲ ತಿದ್ದುಪಡಿಯನ್ನು ಮಾಡಿ ಆದೇಶವನ್ನು ಹೊರಡಿಸಿದೆ. ಯಾವುದೇ ವ್ಯಕ್ತಿ, ನೈಲಾನ್​ ಮತ್ತು ಗಾಜು ಮತ್ತಿತರ ಅಪಾಯಕಾರಿ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ. ಚೀನಿ ದಾರ ಅಥವಾ ಮಾಂಜಾ ದಾರ ತಯಾರು, ದಾಸ್ತಾನು ಮಾಡುವುದವುದನ್ನೂ ನಿಷೇಧಿಸಲಾಗಿದೆ. ಒಂದು ವೇಳೆ ಬಳಸಿದ್ದು, ತಯಾರು

ಗಾಳಿಪಟ ಹಾರಾಟಕ್ಕೆ ಹತ್ತಿಯಿಂದ ತಯಾರಿಸಿದ ದಾರವನ್ನು ಮಾತ್ರ ಬಳಸಬೇಕು- ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

ಸರಣಿ ಅಪಘಾತ: 7 ಕಾರು ಜಖಂ, ಮಗುವಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 24. ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆ ಕುರಿತ ಅವಘಡಗಳ ನಡುವೆಯೇ ಇತ್ತ ಯಲಹಂಕದಲ್ಲಿ ಇಂದು ಮುಂಜಾನೆ ಸರಣಿ ಅಪಘಾತ ಸಂಭವಿಸಿದೆ. ಯಲಹಂಕ ಮೇಲ್ಸೇತುವೆ ಮೇಲೆ ಇಂದು ಬೆಳಗ್ಗೆ 6 ರಿಂದ 6.30ರ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 7 ಕಾರುಗಳು ಅಪಘಾತಕ್ಕೀಡಾಗಿವೆ. ಪರಿಣಾಮ 7 ಕಾರುಗಳೂ ಒಂದರ ಹಿಂದೆ ಒಂದು ಗುದ್ದುಕೊಂಡು ಜಖಂ ಆಗಿದ್ದು, ಈ ಪೈಕಿ ಒಂದು ಕಾರಿನಲ್ಲಿದ್ದ ಮಗುವಿನ ಕೈಗೆ ಗಂಭೀರ ಗಾಯವಾಗಿದೆ. ಸದ್ಯ ಹೆಚ್ಚಿನ

ಸರಣಿ ಅಪಘಾತ: 7 ಕಾರು ಜಖಂ, ಮಗುವಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಟ್ಟಡ ಕುಸಿತ ಅವಘಡ: ಮೃತರ ಸಂಖ್ಯೆ 5ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23. ಕಮ್ಮನಹಳ್ಳಿ ಬಳಿಯ ಬಾಬು ಸಾಹೇಬ್ ಪಾಳ್ಯದಲ್ಲಿ ಮಂಗಳವಾರ ಕುಸಿತ ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿತ ಅವಘಡದಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಇದುವರೆಗೂ ಐದು ಕಾರ್ಮಿಕರ ಮೃತದೇಹ ಹೊರಕ್ಕೆ ತೆಗೆಯಲಾಗಿದೆ. ಹರ್ಮನ್(26), ತ್ರಿಪಾಲ್(35) ಮತ್ತು ಮುಹಮ್ಮದ್ ಸಾಹಿಲ್(19) ಎಂಬವರ ಮೃತದೇಹಗಳನ್ನು ಕಟ್ಟಡಗಳ ಅವಶೇಷಗಳಡಿಯಿಂದ ರಕ್ಷಣಾ ತಂಡ ಹೊರತೆಗೆದಿದೆ. ಸತ್ಯರಾಜು ಮತ್ತು ಶಂಕರ್ ಎಂಬರ ಮೃತದೇಹಗಳನ್ನು ಮಂಗಳವಾರ ಹೊರತೆಗೆಯಲಾಗಿತ್ತು. ಅಗ್ನಿಶಾಮಕ ದಳ ಹಾಗೂ ಎನ್ಡಿಆರ್ಎಫ್ ಸಿಬ್ಬಂದಿ ರಾತ್ರಿ ಇಡೀ

ಕಟ್ಟಡ ಕುಸಿತ ಅವಘಡ: ಮೃತರ ಸಂಖ್ಯೆ 5ಕ್ಕೆ ಏರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಂಬಳ ವಿರುದ್ಧ ಪೇಟಾ ಸಲ್ಲಿಸಿದ್ದ ಅರ್ಜಿ ವಿಚಾರಣೆ: ಅ. 23ಕ್ಕೆ ಮುಂದೂಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22. ರಾಜಧಾನಿಯಲ್ಲಿ ಅ.26ರಂದು ಆಯೋಜಿಸಲು ಉದ್ದೇಶಿಸಿದ್ದ ಕಂಬಳಕ್ಕೆ ಅನುಮತಿ ನೀಡಿದಂತೆ ಪೇಟಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ(23ಕ್ಕೆ) ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕಂಬಳ ಕರಾವಳಿ ಕರ್ನಾಟಕದ ಜನಪದ ಕ್ರೀಡೆ. ದ.ಕ ಹಾಗೂ ಉಡುಪಿ ಜಿಲ್ಲೆಯಲ್ಲಿ ಸಂಪ್ರದಾಯಿಕವಾಗಿ ಆಚರಣೆ ಮಾಡುವ ಪದ್ಧತಿ ಶತಮಾನಗಳಿಂದ ನಡೆದು ಬಂದಿದೆ. 2023ರಲ್ಲಿ ಮೊದಲ ಬಾರಿಗೆ ರಾಜಧಾನಿಯಲ್ಲಿ ಕಂಬಳ ಆಯೋಜನೆ ಮಾಡಲಾಯಿತು. ಈ ಬಾರಿ ಅ.26ಕ್ಕೆ ಕಂಬಳ ಆಯೋಜನೆಗೆ

ಕಂಬಳ ವಿರುದ್ಧ ಪೇಟಾ ಸಲ್ಲಿಸಿದ್ದ ಅರ್ಜಿ ವಿಚಾರಣೆ: ಅ. 23ಕ್ಕೆ ಮುಂದೂಡಿದ ಹೈಕೋರ್ಟ್ Read More »

ಕರ್ನಾಟಕ
Scroll to Top