ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ-2024 – ದಕ್ಷಿಣ ಕನ್ನಡ ಜಿಲ್ಲೆಯಿಂದ ಪೃಥ್ವಿರಾಜ್ ಪಿ.ಶೆಟ್ಟಿ ಆಯ್ಕೆ
(ನ್ಯೂಸ್ ಕಡಬ) newskadaba.com ಸೆ. 26. ರಾಜ್ಯ ಸರಕಾರದಿಂದ ಕೊಡಮಾಡುವ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪೃಥ್ವಿರಾಜ್ ಪಿ. ಶೆಟ್ಟಿ ಆಯ್ಕೆಯಾಗಿದ್ದಾರೆ. ಈ ಕುರಿತು ರಾಜ್ಯ ಸರಕಾರವು ಆದೇಶವನ್ನು ಹೊರಡಿಸಿದೆ. ಈ ಪ್ರಶಸ್ತಿಯನ್ನು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅಚ್ಚುಕಟ್ಟಾಗಿ ಒದಗಿಸಿರುವ ಅಧಿಕಾರಿಗಳ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರಗಳಿಗೆ ಹಾಗೂ ಗ್ರಾಮಾಡಳಿತ ಅಧಿಕಾರಿಗಳಿಗೆ ಕೊಡಲಾಗುತ್ತದೆ. ಹೀಗಾಗಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಸೇವೆಯನ್ನು ನೀಡಿರುವ ಅಧಿಕಾರಿಗಳ […]

