bike accident

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ➤ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 21. ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಸಂಭವಿಸಿದೆ. ಮೃತ ಯುವಕನನ್ನು ಓಡೀಲು ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಇಂದು ದೀಕ್ಷಿತ್ ಹುಟ್ಟುಹಬ್ಬವಾಗಿದ್ದರಿಂದ ಈತ ದು ಬೆಳಗ್ಗೆ ವೇಣೂರಿನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಈ ಅವಘಢ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ➤ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 17.  ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ವಿಟ್ಲ ಸಮೀಪ ನಡೆದಿದೆ. ಗಾಯಗೊಂಡವರನ್ನು ಧ್ಯಾನ್ ಹಾಗೂ ರಮೇಶ್ ಎಂದು ಅವರಿಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ವಿಟ್ಲ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಹಾಗೂ ಬಸ್ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ, ಜೂ. 09. ಬೈಕ್ ಹಾಗೂ ಬಸ್ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಕಾರ್ಕಳ ಮುಖ್ಯರಸ್ತೆಯ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದಿದೆ.   ಮೃತ ವ್ಯಕ್ತಿಯನ್ನು ಜಾರ್ಕಳ ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್(23) ಎಂದು ಗುರುತಿಸಲಾಗಿದೆ. ಕಾರ್ತಿಕ್ ಬೈಲೂರಿನಿಂದ ಜಾರ್ಕಳದ ಕಡೆಗೆ ಹೋಗುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಸ್ಥಳದಲ್ಲಿ ಮೃತಪಟ್ಟರೆ, ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಸಂಬಂಧ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಬೈಕ್ ಹಾಗೂ ಬಸ್ ನಡುವೆ ಅಪಘಾತ ➤ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಬೈಕೊಂದು ಮಾರ್ಗಮಧ್ಯೆ ಪುಟ್ ಪಾತ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತರನ್ನು ಬಿಬಿಎಂಪಿ ಹೆಲ್ತ್ ಇನ್ ಸ್ಪೆಕ್ಟರ್ ಪ್ರಶಾಂತ್ (27) ಎಂದು ಗುರುತಿಸಲಾಗಿದೆ. ಜೆ.ಪಿ.ನಗರದಲ್ಲಿ ವಾಸವಿದ್ದ ಪ್ರಶಾಂತ್ ನಾಯ್ಕ್ ಬೈಕ್ ನಲ್ಲಿ ಸದಾಶಿವನಗರದಿಂದ ಜೆ.ಪಿ.ನಗರಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.    

ರಸ್ತೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಣಿ: ಕಾರು – ಬೈಕ್ ಢಿಕ್ಕಿ ► ಬೈಕ್ ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜು.30. ಠಾಣಾ ವ್ಯಾಪ್ತಿಯ ಮಾಣಿ ಶಾಲಾ ಬಳಿ ಕಾರು ಮತ್ತು ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಅಪರಾಹ್ನ ನಡೆದಿದೆ. ಮಾಣಿಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬೈಕಿಗೆ ಎದುರಿನಿಂದ ಬಂದ ಕೇರಳ ನೋದಣಿಯ ಕಾರು ಡಿಕ್ಕಿ ಹೊಡೆದುದರ ಪರಿಣಾಮ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಕರಾಯ ಬದಿಯಾರು ನಿವಾಸಿ ಜಾಫರ್ ಶರೀಫ್ ಹಾಗೂ ಸಹ ಸವಾರ ಕಕ್ಕೆಪದವು ನಿವಾಸಿ ಮಹಮ್ಮದ್ ಇರ್ಷಾದ್ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಣಿ: ಕಾರು – ಬೈಕ್ ಢಿಕ್ಕಿ ► ಬೈಕ್ ಸವಾರರಿಬ್ಬರು ಗಂಭೀರ Read More »

ಕರಾವಳಿ
Scroll to Top