bjp

ಮಂಗಳೂರಿನಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಅ.4. ಕೇರಳದ ಕಣ್ಣೂರಿನಲ್ಲಿ ನಡೆಯುವ ಬಿಜೆಪಿ ಜನರಕ್ಷಾ ಯಾತ್ರೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಮಂಗಳೂರಿಗೆ ಆಗಮಿಸಿದ್ದು, ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಗತಿಸಲಾಯಿತು. ಸಿಎಂ ಆದ ನಂತರ ಇದೇ ಮೊದಲ ಬಾರಿಗೆ ಕರಾವಳಿಗೆ ಆಗಮಿಸಿದ ಇವರು ಕೇರಳದಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್. ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಬಿಜೆಪಿ ಆಯೋಜಿಸಿರುವ ಬೃಹತ್ ಜನರಕ್ಷಾ ಯಾತ್ರೆಯ ನೇತೃತ್ವವನ್ನು ವಹಿಸಲಿದ್ದಾರೆ. ಜನರಕ್ಷಾ ಯಾತ್ರೆಗೆ ಈಗಾಗಲೆ […]

ಮಂಗಳೂರಿನಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್..!!! Read More »

ಕರಾವಳಿ

ನಾಳೆ (ಅ.05 ರಂದು) ಆಲಂಕಾರಿನಲ್ಲಿ ► ಎಸ್ಸಿ ಮೋರ್ಚಾದ “ಸಮರ್ಥನಾ ಸಮಾವೇಶ”

(ನ್ಯೂಸ್ ಕಡಬ) newskadaba.com ಕಡಬ,ಅ.3.  ಸುಳ್ಯ ಮಂಡಲ ಎಸ್ಸಿ ಮೋರ್ಚಾದ ವತಿಯಿಂದ ಅ.05 ರಂದು(ಗುರುವಾರ) ಆಲಂಕಾರಿನಲ್ಲಿ ನಡೆಯಲಿರುವ ಸಮರ್ಥನಾ ಸಮಾವೇಶದ ಹಿನ್ನೆಲೆಯಲ್ಲಿ ಸಮಲೋಚನ ಸಭೆಯು ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಮರ್ದಾಳ ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆಯಿತು. ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯ ಕೃಷ್ಣ ಶೆಟ್ಟಿ ಕಡಬ ಮಾತನಾಡಿ, ಪ್ರದಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ ಯೋಜನೆಗಳ ಮಾಹಿತಿ ಹಾಗೂ ಈ ಹಿಂದೆ ರಾಜ್ಯವನ್ನಾಳಿದ ಬಿಜೆಪಿ ಸರಕಾರದ ಅವಧಿಯಲ್ಲಿನ ಜನಪರ ಯೋಜನೆಗಳನ್ನು ಜನರ ಮುಂದಿಡುವ ಮೂಲಕ

ನಾಳೆ (ಅ.05 ರಂದು) ಆಲಂಕಾರಿನಲ್ಲಿ ► ಎಸ್ಸಿ ಮೋರ್ಚಾದ “ಸಮರ್ಥನಾ ಸಮಾವೇಶ” Read More »

ಕರಾವಳಿ

ಅ.05: ಬಿಜೆಪಿ ಎಸ್ಸಿ ಮೋರ್ಛಾ ವತಿಯಿಂದ ಬೃಹತ್ ಸಮರ್ಥನಾ ಸಮಾವೇಶ ► ಮರ್ಧಾಳ ಅಂಬೇಡ್ಕರ್ ಭವನದಲ್ಲಿ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಅ.03. ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಎಸ್ಸಿ ಮೋರ್ಚಾ ವತಿಯಿಂದ ಅಕ್ಟೋಬರ್ 05 ರಂದು ಆಲಂಕಾರು ರೈತ ಭವನದಲ್ಲಿ ನಡೆಯಲಿರುವ ಬೃಹತ್ ಸಮರ್ಥನಾ ಸಮಾವೇಶದ ಪೂರ್ವ ಭಾವಿ ಸಭೆಯು ಮರ್ಧಾಳ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಸದಸ್ಯರಾದ ಶ್ರೀಕೃಷ್ಣ ಶೆಟ್ಟಿ, ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಕಿಶೋರ್ ಶಿರಾಡಿ, ಸುಳ್ಯ ಮಂಡಲದ ಉಪಾಧ್ಯಕ್ಷರಾದ ಪುಲಸ್ತ್ಯಾ ರೈ, ಕಡಬ ಶಕ್ತಿ ಕೇಂದ್ರದ ಅಧ್ಯಕ್ಷರಾದ ವಾಡ್ಯಪ್ಪ ಗೌಡ

ಅ.05: ಬಿಜೆಪಿ ಎಸ್ಸಿ ಮೋರ್ಛಾ ವತಿಯಿಂದ ಬೃಹತ್ ಸಮರ್ಥನಾ ಸಮಾವೇಶ ► ಮರ್ಧಾಳ ಅಂಬೇಡ್ಕರ್ ಭವನದಲ್ಲಿ ಪೂರ್ವಭಾವಿ ಸಭೆ Read More »

ಕರಾವಳಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ► ಇಂದು ಮಂಗಳೂರಿಗೆ ಭೇಟಿ

 (ನ್ಯೂಸ್ ಕಡಬ) newskadaba.com  ಮಂಗಳೂರು,ಅ.02. ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ. ಹೀಗಾಗಿ ಈ ಕ್ಷೇತ್ರಗಳನ್ನು ಹೊಡೆದುರುಳಿಸಲು ಬಿಜೆಪಿ ಚಾಣಾಕ್ಷ ಅಮಿತ್ ಶಾ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆ ಮಾತ್ರವಲ್ಲ, ಆರ್‍ಎಸ್‍ಎಸ್, ಹಿಂದೂ ಸಂಘಟನೆಗಳಿಂದ ಬಲಶಾಲಿಯಾಗಿದೆ. ಜಿಲ್ಲೆಯ 8 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯು ಅತೀ ಹೆಚ್ಚು ಶಾಸಕ ಸ್ಥಾನಗಳನ್ನು ಪಡೆಯಬೇಕೆಂದು ಬಿಜೆಪಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ► ಇಂದು ಮಂಗಳೂರಿಗೆ ಭೇಟಿ Read More »

ಕರಾವಳಿ

ಬಿಜೆಪಿ ಕಾರ್ಯಕರ್ತರಿಂದ ಮರ್ದಾಳ, ಬಜಕೆರೆ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ,ಸೆ.23. ಪುತ್ತೂರು ತಾಲೂಕಿನ 102 ನೇ ನೆಕ್ಕಿಲಾಡಿ ಗ್ರಾಮದ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರಿಂದ ಮರ್ದಾಳ ಪರಿಸರ, ಬಜಕೆರೆ ರೈಲ್ವೆ ನಿಲ್ದಾಣ ಮೊದಲಾದೆಡೆ ಸ್ವಚ್ಚತಾ ಕಾರ್ಯ ನಡೆಯಿತು. ಬಿಜೆಪಿ ಮುಖಂಡರಾದ ಕಿಶೋರ್ ಶಿರಾಡಿ, ಉಮೇಶ್ ಶೆಟ್ಟಿ ಸಾಯಿರಾಂ, ಎನ್ ಕೆ ಪ್ರಕಾಶ್, ಎಪಿಎಂಸಿ ನಿರ್ದೇಶಕ ಮೇದಪ್ಪ ಡೆಪ್ಪುಣಿ ಮೊದಲಾದವರು ಭಾಗವಹಿಸಿದ್ದರು.  

ಬಿಜೆಪಿ ಕಾರ್ಯಕರ್ತರಿಂದ ಮರ್ದಾಳ, ಬಜಕೆರೆ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ರಾಜ್ಯ ರಾಜಕಾರಣಕ್ಕೆ ಹಿಂತಿರುಗಿದ ಡಿ.ವಿ.ಸದಾನಂದ ಗೌಡ…!!!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಸೆ.23. ಕರ್ನಾಟಕ ರಾಜ್ಯದಲ್ಲಿ 2018 ರಲ್ಲಿ ನಡೆಯಲಿರುವ ಮುಂದಿನ ವಿಧಾನ ಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆಯನ್ನು ಆರಂಭಿಸಿದ್ದು, ರಾಜ್ಯ ಬಿಜೆಪಿ ಸಾಂಪ್ರದಾಯಿಕ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯ ಮಂತ್ರಿ ಡಿ.ವಿ.ಸದಾನಂದ ಗೌಡ ನೇಮಕಗೊಂಡಿದ್ದಾರೆ. 28 ಮಂದಿ ಸದಸ್ಯರ ಸಾಂಪ್ರದಾಯಿಕ ಪ್ರಚಾರ ಸಮಿತಿಗೆ ಡಿ.ವಿ. ಸದಾನಂದ ಗೌಡ ಅವರನ್ನು ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಡಿವಿಎಸ್ ಅವರು ರಾಜ್ಯ

ರಾಜ್ಯ ರಾಜಕಾರಣಕ್ಕೆ ಹಿಂತಿರುಗಿದ ಡಿ.ವಿ.ಸದಾನಂದ ಗೌಡ…!!! Read More »

ಕರ್ನಾಟಕ

ಬಿಜೆಪಿ ಚುನಾಯಿತ ಸದಸ್ಯರ ಹಾಗೂ ಪಕ್ಷದ ಕಾರ್ಯಕರ್ತರ ಅಭ್ಯಾಸ ವರ್ಗ

(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಸೆ.23. ಕಡಬ ಬಿಜೆಪಿ ನೆಲ್ಯಾಡಿ ಶಕ್ತಿಕೇಂದ್ರ ವ್ಯಾಪ್ತಿಯ ಚುನಾಯಿತ ಸದಸ್ಯರ ಹಾಗೂ ಪಕ್ಷದ ಕಾರ್ಯಕರ್ತರ ಅಭ್ಯಾಸ ವರ್ಗ ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ಸಭಾಭವನದಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಎ.ವಿ.ತೀರ್ಥರಾಮ ಉದ್ಘಾಟಿಸಿದರು. ಜಿ.ಪಂ.ಮಾಜಿ ಸದಸ್ಯ ವೆಂಕಟ್ ದಂಬೆಕೋಡಿ, ಜಿಲ್ಲಾ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಎಪಿಎಂಸಿ ನಿರ್ದೇಶಕಿ ಪುಲಸ್ತ್ಯ ರೈ, ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಕಿಶೋರ್ ಶಿರಾಡಿ, ಕಾರ್ಯದರ್ಶಿ ಲಕ್ಷ್ಮೀನಾರಾಯಣ ರಾವ್ ಉಪಸ್ಥಿತರಿದ್ದರು. ಬಿಜೆಪಿ ನೆಲ್ಯಾಡಿ ಶಕ್ತಿಕೇಂದ್ರದ ಅಧ್ಯಕ್ಷ

ಬಿಜೆಪಿ ಚುನಾಯಿತ ಸದಸ್ಯರ ಹಾಗೂ ಪಕ್ಷದ ಕಾರ್ಯಕರ್ತರ ಅಭ್ಯಾಸ ವರ್ಗ Read More »

ಕರಾವಳಿ

ಕಡಬ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ ► ಬಿಜೆಪಿ ಶಕ್ತಿ ಕೇಂದ್ರದಿಂದ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ.18. ಭಾರತೀಯ ಜನತಾ ಪಾರ್ಟಿಯ ಕಡಬ ಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಪ್ರಯುಕ್ತ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮವು ಭಾನುವಾರದಂದು ನಡೆಯಿತು. ಬಿಜೆಪಿ ಜಿಲ್ಲಾ ಸಮಿತಿ ಸದಸ್ಯರಾದ ಕೃಷ್ಣ ಶೆಟ್ಟಿ, ಎಪಿಎಂಸಿ ಸದಸ್ಯರಾದ ಪುಲಸ್ತ್ಯಾ ರೈ, ಮೇದಪ್ಪ ಗೌಡ ಡೆಪ್ಪುಣಿ, ಕಡಬ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಎನ್.ಕೆ., ಉದಯಕುಮಾರ್, ಫಯಾಜ್ ಕೆನರಾ, ತ್ಯಾಗರಾಜ ನಂದುಗುರಿ, ಶ್ರೀಧರ, ನಿತಿನ್, ಉಮೇಶ್

ಕಡಬ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ ► ಬಿಜೆಪಿ ಶಕ್ತಿ ಕೇಂದ್ರದಿಂದ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಕಾನೂನು ಉಲ್ಲಂಘಿಸಿ ಜ್ಯೋತಿ ವೃತ್ತದಲ್ಲಿ ಸಮಾವೇಶ ► ಯಡಿಯೂರಪ್ಪ ಸೇರಿ 50 ಮಂದಿಯ ವಿರುದ್ಧ ಕೇಸು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಬಿಜೆಪಿ ಯುವಮೋರ್ಚಾ ವತಿಯಿಂದ ನಡೆದ‌ ಮಂಗಳೂರು ಚಲೋ ಕಾರ್ಯಕ್ರಮವನ್ನು ನಗರದ ನೆಹರೂ ಮೈದಾನದಲ್ಲಿ ಮಾಡುವ ಬದಲು ಜ್ಯೋತಿ ಸಮೀಪದ ಅಂಬೇಡ್ಕರ್ ವೃತ್ತದ ಬಳಿ ಸಮಾವೇಶ ಮಾಡಿ ಕಾನೂನನ್ನು ಉಲ್ಲಂಘಿಸಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ 50 ಮಂದಿಯ ವಿರುದ್ಧ ಬಂದರ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಬಿಜೆಪಿ ಯುವಮೋರ್ಚಾ ಸಮಾವೇಶಕ್ಕೆ ಪೊಲೀಸರು ನೆಹರು ಮೈದಾನದಲ್ಲಿ ಮಾತ್ರ ಅನುಮತಿ ನೀಡಿದ್ದು, ಆದರೆ ಬಿಜೆಪಿಯ ನಾಯಕರು, ಕಾರ್ಯಕರ್ತರು ಈ ಆದೇಶವನ್ನು ಉಲ್ಲಂಘಿಸಿ

ಕಾನೂನು ಉಲ್ಲಂಘಿಸಿ ಜ್ಯೋತಿ ವೃತ್ತದಲ್ಲಿ ಸಮಾವೇಶ ► ಯಡಿಯೂರಪ್ಪ ಸೇರಿ 50 ಮಂದಿಯ ವಿರುದ್ಧ ಕೇಸು ದಾಖಲು Read More »

ಕರಾವಳಿ

‘ಮಂಗಳೂರು ಚಲೋ’ ಬೈಕ್ ರ್ಯಾಲಿ ತಡೆದ ಪೊಲೀಸರು ► ಸಂಸದ ಕಟೀಲ್ ಹಾಗೂ ಪೊಲೀಸರ ನಡುವೆ ವಾಗ್ವಾದ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಬಿಜೆಪಿ ಯುವ ಮೋರ್ಛಾ ಹಮ್ಮಿಕೊಂಡಿರುವ ‘ಮಂಗಳೂರು ಚಲೋ’ ಬೈಕ್ ರ್ಯಾಲಿಯನ್ನು ಪೊಲೀಸರು ಮಂಗಳೂರಿನ ಜ್ಯೋತಿ ವೃತ್ದ ಬಳಿ ತಡೆದ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಪೊಲೀಸರು ತಡೆದ ಕಾರಣ ಕೆರಳಿದ ಸಂಸದ ನಳಿನ್ ಕುಮಾರ್ ಕಟೀಲ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದು, ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಹೊರ ಜಿಲ್ಲೆಗಳಿಂದ ಬಿಜೆಪಿ ಕಾರ್ಯಕರ್ತರು ಮಂಗಳೂರಿಗೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ

‘ಮಂಗಳೂರು ಚಲೋ’ ಬೈಕ್ ರ್ಯಾಲಿ ತಡೆದ ಪೊಲೀಸರು ► ಸಂಸದ ಕಟೀಲ್ ಹಾಗೂ ಪೊಲೀಸರ ನಡುವೆ ವಾಗ್ವಾದ Read More »

ಕರಾವಳಿ
Scroll to Top