ಆಕಸ್ಮಿಕವಾಗಿ ಕೊಳವೆಬಾವಿಗೆ ಬಿದ್ದಿದ್ದ ಬಾಲಕ ಮೃತ್ಯು
(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಡಿ. 10. ಕೊಳವೆಬಾವಿಗೆ ಬಿದ್ದಿದ್ದ ಎಂಟು ವರ್ಷದ ಬಾಲಕ ಮೃತಪಟ್ಟ ಘಟನೆ ಶನಿವಾರದಂದು ಮಧ್ಯಪ್ರದೇಶದ ಬೇತುಲ್ ನಲ್ಲಿ ನಡೆದಿದೆ. ಮೃತ ಬಾಲಕನನ್ನು ತನ್ಮಯ್ ಎಂದು ಗುರುತಿಸಲಾಗಿದೆ. ಈತ ಡಿ. 06ರಂದು ಸಂಜೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ತೆರೆದಿಟ್ಟಿದ್ದ ಕೊಳವೆಬಾವಿಗೆ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿ ಹೊರತೆಗೆದರೂ ಪ್ರಯೋಜನವಾಗಲಿಲ್ಲ ಎನ್ನಲಾಗಿದೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಆಕಸ್ಮಿಕವಾಗಿ ಕೊಳವೆಬಾವಿಗೆ ಬಿದ್ದಿದ್ದ ಬಾಲಕ ಮೃತ್ಯು Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್