bus accident

ಹಳ್ಳಕ್ಕೆ ಬಿದ್ದ ಖಾಸಗಿ ಬಸ್ 13 ಮಂದಿ ಪ್ರಯಾಣಿಕರಿಗೆ ಗಾಯ..!

(ನ್ಯೂಸ್ ಕಡಬ) newskadaba.com ಜು. 21. ಖಾಸಗಿ ಬಸ್ಸೊಂದು ಸೇತುವೆಯಿಂದ ಹಳ್ಳಕ್ಕೆ ಬಿದ್ದ ಪರಿಣಾಮ ಪ್ರಯಾಣಿಕರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಅಂಕೋಲಾ ತಾಲೂಕು ವ್ಯಾಪ್ತಿಯ ಅಗಸೂರು ಬಳಿ ನಡೆದಿದೆ. ಯಲ್ಲಾಪುರದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಈ‌ ಅವಘಡ ನಡೆದಿದೆ.   ಘಟನೆಯಲ್ಲಿ ಐವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು, ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದ ಗಾಯಾಳುಗಳನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಅಂಕೋಲಾ ಪೊಲೀಸರು ಆಗಮಿಸಿ ಪರಿಶೀಲನೆ […]

ಹಳ್ಳಕ್ಕೆ ಬಿದ್ದ ಖಾಸಗಿ ಬಸ್ 13 ಮಂದಿ ಪ್ರಯಾಣಿಕರಿಗೆ ಗಾಯ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಖಾಸಗಿ ಬಸ್ ಡಿವೈಡರ್ ಗೆ ಢಿಕ್ಕಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 22. ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಹೆದ್ದಾರಿ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದ ಘಟನೆ ರಾ.ಹೆ.75ರ ನೆಲ್ಯಾಡಿ ಸಮೀಪದ ಪೆರಿಯಶಾಂತಿಯ ಎಂಬಲ್ಲಿ ನಡೆದಿದೆ‌. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಡಿವೈಡರ್‌ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬಸ್‌ ನ ಮುಂಭಾಗ ಜಖಂಗೊಂಡಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೆಲ್ಯಾಡಿ: ಖಾಸಗಿ ಬಸ್ ಡಿವೈಡರ್ ಗೆ ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

2 ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಚೆನ್ನೈ, ಜೂ. 19. ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟು, ಕನಿಷ್ಠ 30 ಮಂದಿ ಗಾಯಗೊಂಡ ಘಟನೆ ಕಡಲೂರು ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತ ಸಂಭವಿಸಿದ ತಕ್ಷಣ ಸಾರ್ವಜನಿಕರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ. ಘಟನೆಗೆ ನಿಖರ ಕಾರಣ ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2 ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಇಬ್ಬರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಸ್ ಢಿಕ್ಕಿ- ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ 12. ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ತ್ರಾಸಿ ರಾ.ಹೆ. 66ರಲ್ಲಿ ಭಾನುವಾರದಂದು ರಾತ್ರಿ ನಡೆದಿದೆ. ಮೃತರನ್ನು ಸಾಸ್ತಾನ ಮೂಲದ ರಾಜು ಪೋಜಾರಿ ಎಂದು ಗುರುತಿಸಲಾಗಿದೆ. ಇವರು ತ್ರಾಸಿಯ ಪೆಟ್ರೋಲ್ ಬಂಕ್ ಸಮೀಪ ರಾ.ಹೆ.66ರ ರಸ್ತೆಯ ಡಿವೈಡರ್ ಬಳಿ ರಸ್ತೆಯ ಅಂಚಿನಲ್ಲಿ ರಸ್ತೆ ದಾಟಲು ನಿಂತಿದ್ದ ವೇಳೆ ಕುಂದಾಪುರ ಕಡೆಯಿಂದ ಬಂದ ಬಸ್ ಢಿಕ್ಕಿ

ಬಸ್ ಢಿಕ್ಕಿ- ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ಬಸ್ ಡಿಕ್ಕಿಯಾಗಿ ಬಾಲಕ ಮೃತ್ಯು..!           

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 02. ನಡೆದುಕೊಂಡು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಬಾಲಕ ಮೃತಪಟ್ಟ ಘಟನೆ ಕಾಸರಗೋಡಿನ ಚೆರ್ಕಳದಲ್ಲಿ ನಡೆದಿದೆ. ಮೃತ ಬಾಲಕನನ್ನು ಆಶಿಕ್ ಮತ್ತು ಝುಬೈದಾ ದಂಪತಿ ಪುತ್ರ ಅಬ್ದುಲ್ ವಾಹಿದ್ (3) ಎಂದು ಗುರುತಿಸಲಾಗಿದೆ. ಚೆರ್ಕಳ ಬಸ್ ನಿಲ್ದಾಣದಲ್ಲಿ ಬಸ್ ಹಿಂದಕ್ಕೆ ಚಲಿಸುವಾಗ ಈ ಘಟನೆ ಸಂಭವಿಸಿದೆನ್ನಲಾಗಿದೆ. ಬಸ್ ಡಿಕ್ಕಿಯಾದ ವೇಳೆ ಮಗುವಿನ ಜೊತೆಗಿದ್ದ ತಾಯಿಯು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.  

ಖಾಸಗಿ ಬಸ್ ಡಿಕ್ಕಿಯಾಗಿ ಬಾಲಕ ಮೃತ್ಯು..!            Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಾಲಾ ಪ್ರವಾಸದ ಬಸ್ ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಡಿ. 27. ಸರಕಾರಿ ಬಸ್ ಮತ್ತು ಮಕ್ಕಳು ಪ್ರವಾಸ ಹೋಗುತ್ತಿದ್ದ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಹಲವರು ಗಾಯಗೊಂಡ ಘಟನೆ ಬೆಳ್ತಂಗಡಿಯ ನಿಡ್ಲೆ ಸಮೀಪದ ಬೂಡುಜಾಲು ಎಂಬಲ್ಲಿ ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ಹೋಗುತ್ತಿದ್ದ ಸರಕಾರಿ ಬಸ್ ಹಾಗೂ ರಾಯಚೂರಿನಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಟೂರಿಸ್ಟ್ ಬಸ್ ನಡುವೆ ಢಿಕ್ಕಿ ಸಂಭವಿಸಿ ಈ ಘಟನೆ ನಡೆದಿದೆ. ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸಂಚಾರಕ್ಕೆ

ಶಾಲಾ ಪ್ರವಾಸದ ಬಸ್ ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ➤ ಹಲವರಿಗೆ ಗಾಯ Read More »

ಕರ್ನಾಟಕ

ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಖಾಸಗಿ ಬಸ್…! ➤ 22 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಕೊಲ್ಲೂರು, ಜ. 12. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಉರುಳಿಬಿದ್ದು, 22 ಮಂದಿ ಗಾಯಗೊಂಡ ಘಟನೆ ಕೊಲ್ಲೂರುನಲ್ಲಿ ನಡೆದಿದೆ. 22 ಮಂದಿಯ ಪೈಕಿ ಸಂಕ್ರಪ್ಪ, ರೂಪಾ, ಶ್ಯಾಮಲಮ್ಮ, ರತ್ನಮ್ಮ, ವೆಂಕಟರಮಣ ಹಾಗೂ ಚಂದ್ರಕಲಾ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.  

ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಖಾಸಗಿ ಬಸ್…! ➤ 22 ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top