ಬಸ್ ಸೌಲಭ್ಯಕ್ಕೆ ಒತ್ತಾಯಿಸಿ-ಹುಬ್ಬಳ್ಳಿ-ವಿಜಯಪುರ ಗ್ರಾಮಸ್ಥರಿಂದ ಪ್ರತಿಭಟನೆ ➤ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು
(ನ್ಯೂಸ್ ಕಡಬ) newskadaba.com ಧಾರವಾಡ, ಡಿ.12 ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ಬಸ್ ನಿಲ್ದಾಣದ ಮುಂದೆ ನವಲಗುಂದ ತಾಲೂಕಿನ ಬಲ್ಲರವಾಡ, ಮೊರಬ,ಶಿರಕೋಳ ಹಾಗೂ ಮುಂತಾದ ಗ್ರಾಮೀಣ ಪ್ರದೇಶಗಳಿಗೆ ಬಸ್ ಸೌಕರ್ಯ ಸಿಗದಿರುವುದಕ್ಕೆ ಗ್ರಾಮಸ್ಥರು ಸೋಮವಾರದಂದು ಹುಬ್ಬಳ್ಳಿ- ವಿಜಯಪುರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಿದರು ಎನ್ನಲಾಗಿದೆ. ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಮಾಜಿ ರಾಜಕೀಯ ಕಾರ್ಯದರ್ಶಿ ಎನ್.ಎಚ್.ಕೋನರಡ್ಡಿ ಅವರು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದ್ದು, ಕಳೆದ ಹಲವಾರು ವರ್ಷಗಳಿಂದ ಸರಿಯಾಗಿ ಬಸ್ ಇಲ್ಲದೇ ಸಾಕಷ್ಟು ತೊಂದರೆ […]









