‘ಸಿ.ಟಿ ರವಿಗೆ ಶಿಕ್ಷೆ ಆಗುವವರೆಗೂ ಬಿಡುವುದಿಲ್ಲ, ಕಾನೂನು ಹೋರಾಟ ಮಾಡುತ್ತೇನೆ ‘- ಲಕ್ಷ್ಮಿ ಹೆಬ್ಬಾಳ್ಕರ್
(ನ್ಯೂಸ್ ಕಡಬ) newskadaba.com ಡಿ. 23 ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ಬಿಜೆಪಿ ನಾಯಕ ಸಿ.ಟಿ ರವಿ ನಿಂದಿಸಿದ ಆರೋಪ ವ್ಯಾಪಕವಾಗಿ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಸಿ.ಟಿ ರವಿ ಪದ ಬಳಸಿದ್ದಾರೆ ಎನ್ನಲಾದ ವೀಡಿಯೋವೊಂದನ್ನ ಲಕ್ಷ್ಮಿ ಹೆಬ್ಬಾಳ್ಕರ್ ಬಿಡುಗಡೆ ಮಾಡಿದ್ದಾರೆ. ಪರಿಷತ್ ಕಲಾಪದ ವೇಳೆ ಸಿ.ಟಿ ರವಿ ಆ ಪದ ಬಳಸಿ ನಿಂದಿಸಿದ್ದಾರೆ ಎನ್ನಲಾದ ವೀಡಿಯೋವನ್ನ ಪ್ರಸಾರ ಮಾಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಯಾವುದೇ ಕಾರಣಕ್ಕೂ ಸಿ.ಟಿ ರವಿ […]

