ರೆಫ್ರಿಜರೇಟರ್ ಸ್ಪೋಟ- ಯುವತಿಯರಿಬ್ಬರು ಸ್ಥಳದಲ್ಲೇ ಮೃತ್ಯು..!
(ನ್ಯೂಸ್ ಕಡಬ) newskadaba.com ಚೆನ್ನೈ, ಸೆ. 12. ಹಾಸ್ಟೆಲ್ ನಲ್ಲಿ ಫ್ರಿಡ್ಜ್ ಸ್ಪೋಟಗೊಂಡು ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಮಧುರೈ ಜಿಲ್ಲೆಯ ಕಟ್ರಂಪಾಳ್ಯಂ ಪ್ರದೇಶದಲ್ಲಿನ ವಿಶಾಕಾ ಖಾಸಗಿ ಮಹಿಳಾ ಹಾಸ್ಟೆಲ್ ನಲ್ಲಿ ಇಂದು ಮುಂಜಾನೆ 4:30ರ ಸುಮಾರಿಗೆ ಫ್ರಿಡ್ಜ್ ಸ್ಫೋಟಗೊಂಡಿದ್ದು, ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿಯಲಾರಂಭಿಸಿದೆ. ಘಟನೆಯಲ್ಲಿ ಮಲಗಿದ್ದ ಇಬ್ಬರು ಯುವತಿಯರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ರೆಫ್ರಿಜರೇಟರ್ ಸ್ಪೋಟ- ಯುವತಿಯರಿಬ್ಬರು ಸ್ಥಳದಲ್ಲೇ ಮೃತ್ಯು..! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್






