ಚಿಕ್ಕಮಗಳೂರು: ಬಾಲ್ಯ ವಿವಾಹದ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಅಂಗನವಾಡಿ ಶಿಕ್ಷಕಿ ಕುಟುಂಬಕ್ಕೆ ಗ್ರಾಮಸ್ಥರಿಂದ ಬಹಿಷ್ಕಾರ..!
(ನ್ಯೂಸ್ ಕಡಬ) newskadaba.com ಜು.23: ಚಿಕ್ಕಮಗಳೂರು: ಬಾಲ್ಯ ವಿವಾಹದ ಕುರಿತು ಮಾಹಿತಿ ನೀಡಿದ್ದಕ್ಕೆ ಅಂಗನವಾಡಿ ಶಿಕ್ಷಕಿಯ ಕುಟುಂಬವನ್ನು ಗ್ರಾಮಸ್ಥರು ಬಹಿಷ್ಕಾರ ಹಾಕಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಯರೇಹಳ್ಳಿಯಲ್ಲಿ ನಡೆದಿದೆ. ಯರೇಹಳ್ಳಿ ಗ್ರಾಮದಲ್ಲಿ ವಾಸವಾಗಿರುವ ತೇಜಸ್ವಿನಿ ಎಂಬ ಅಂಗನವಾಡಿ ಶಿಕ್ಷಕಿ ಕೆಲ ದಿನಗಳ ಹಿಂದೆ ತಮ್ಮ ಗ್ರಾಮ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳ ವಿವಾಹದ ಬಗ್ಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಅಂಗನವಾಡಿ ಶಿಕ್ಷಕಿಯಿಂದಾಗಿ ವಿವಾಹ ನಿಂತು ಹೋಗಿದ್ದಲ್ಲದೆ, ಬಾಲ್ಯ […]

