chitradurga

ಸರ್ವರ್ ಸ್ಥಳಾಂತರ: ರಾಜ್ಯದಾದ್ಯಂತ ಪಡಿತರ ವಿತರಣೆಯಲ್ಲಿ ಸಮಸ್ಯೆ

(ನ್ಯೂಸ್ ಕಡಬ) newskadaba.com ಅ.19 ಚಿತ್ರದುರ್ಗ:  ಎನ್‌ಐಸಿ ದಿಂದ ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರಕ್ಕೆ(ಕೆಎಸ್‌ಡಿಸಿ) ಸರ್ವರ್‌ ಸ್ಥಳಾಂತರಗೊಂಡಿರುವುದರಿಂದ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ತಿಂಗಳ ಪಡಿತರ ವಿತರಣೆಯಲ್ಲಿ ತೊಂದರೆ ಉಂಟಾಗಿದೆ. ಅವಳಿ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಮತ್ತು ರಾಜ್ಯದ ಇತರ ಭಾಗಗಳಲ್ಲಿನ ಪಿಡಿಎಸ್ ಅಂಗಡಿಗಳ ಮುಂದೆ ಫಲಾನುಭವಿಗಳು ದೊಡ್ಡ ಕ್ಯೂಗಳಲ್ಲಿ ಗಂಟೆಗಟ್ಟಲೆ ನಿಲ್ಲಬೇಕಾಯಿತು. ಹೊಸ ಸರ್ವರ್‌ನಲ್ಲಿ ಡೇಟಾ ಲಭ್ಯವಿಲ್ಲದ ಕಾರಣ ಅವರಲ್ಲಿ ಕೆಲವರು ಬರಿಗೈಯಲ್ಲಿ ಹಿಂತಿರುಗಿದರು. ಇನ್ನು ಕೆಲವರು ಸರ್ವರ್ ವೈಫಲ್ಯದಿಂದ ಪಡಿತರ ಸಿಗದೆ ವಾಪಸ್ಸಾಗಬೇಕಾಯಿತು.ರಾಷ್ಟ್ರೀಯ ಮಾಹಿತಿ ಕೇಂದ್ರದ […]

ಸರ್ವರ್ ಸ್ಥಳಾಂತರ: ರಾಜ್ಯದಾದ್ಯಂತ ಪಡಿತರ ವಿತರಣೆಯಲ್ಲಿ ಸಮಸ್ಯೆ Read More »

ಕರ್ನಾಟಕ

ಪೋಕ್ಸೋ ಪ್ರಕರಣ: ಮುರುಘಾಶ್ರೀಗೆ ಜಾಮೀನು ಮಂಜೂರು ಮಾಡಿದ ಕೋರ್ಟ್

(ನ್ಯೂಸ್ ಕಡಬ)newskadaba.com,ಚಿತ್ರದುರ್ಗ ಅ. 07. ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾಶ್ರೀ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮುರುಘಾಶ್ರೀಗೆ ಕೋರ್ಟ್ ಜಾಮೀನು ನೀಡಿದೆ. ಈ ಹಿಂದೆ ಮುರುಘಾಶ್ರೀಗೆ ಹೈಕೋರ್ಟ್ ಜಾಮೀನು ನೀಡಿತ್ತು. ಹೈಕೋರ್ಟ್ ಮುರುಘಾಶ್ರೀಗೆ ಮಂಜೂರು ಮಾಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಲಾಗಿತ್ತು. ಆರೋಪಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ

ಪೋಕ್ಸೋ ಪ್ರಕರಣ: ಮುರುಘಾಶ್ರೀಗೆ ಜಾಮೀನು ಮಂಜೂರು ಮಾಡಿದ ಕೋರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೃತದೇಹಗಳನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ ➤ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 08. ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಒಂದು ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಮೃತಪಟ್ಟವರನ್ನು ಆಂಬ್ಯುಲೆನ್ಸ್ ನಲ್ಲಿದ್ದ ಕನಕಮಣಿ(72), ಆಕಾಶ್ (17) ಮತ್ತು ಚಾಲಕ ಎಂದು ಗುರುತಿಸಲಾಗಿದೆ. ಅಹ್ಮದಾಬಾದ್​ನಿಂದ ತಮಿಳುನಾಡಿನ ತಿರುನಾಳವೇಲಿಗೆ ಹೋಗುತ್ತಿದ್ದ ಆಂಬ್ಯುಲೆನ್ಸ್, ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ಲಾರಿಗೆ ಡಿಕ್ಕಿ ಹೊಡೆದು, ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡವರನ್ನ ಜಿಲ್ಲಾಸ್ಪತ್ರೆಗೆ

ಮೃತದೇಹಗಳನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ ➤ ಮೂವರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ಬಸ್- ಲಾರಿ ಢಿಕ್ಕಿ ► ಇಬ್ಬರ ಮೃತ್ಯು

(ನ್ಯೂಸ್ ಕಡಬ) newskadaba.com. ಚಿತ್ರದುರ್ಗ, ಸೆ.14, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ನಿಂತಿದ್ದ ಲಾ ರಿಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ ಮೂವರು ಗಾಯಗೊಂಡ ಘಟನೆ ಹಿರಿಯೂರು ತಾಲೂಕಿನ ಐಮಂಗಲ ಬಳಿ ಗುರುವಾರ ಮುಂಜಾನೆ ನಡೆದಿದೆ. ಸೂರತ್ ಮೂಲದ 30 ವರ್ಷದ ಅರುಣ್ ಹಾಗೂ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಣೇಕಲ್ ಗ್ರಾಮದ ನಿವಾಸಿ 30 ವರ್ಷದ ಪ್ರಶಾಂತ ಮೃತಪಟ್ಟ ದುರ್ದೈವಿಗಳು. ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಸಮೀಪ

ಖಾಸಗಿ ಬಸ್- ಲಾರಿ ಢಿಕ್ಕಿ ► ಇಬ್ಬರ ಮೃತ್ಯು Read More »

ಕರ್ನಾಟಕ

ಮೊಬೈಲ್‍ ಆವಾಂತರ ► ಹಾಸ್ಟೆಲ್ ಮಹಡಿಯಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಆ.21, ವಿದ್ಯಾರ್ಥಿನಿಯೊಬ್ಬಳು ಮೊಬೈಲ್‍ನಲ್ಲಿ ಮಾತನಾಡುತ್ತ ಹಾಸ್ಟೆಲ್ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗದ ಬಿಡಿ ರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಕೇರಳ ಮೂಲದವಳಾದ ಮೃದುಲಗ, ಚಿತ್ರದುರ್ಗದ ಬಿಡಿ ರಸ್ತೆಯಲ್ಲಿರುವ ಹಾಸ್ಟೆಲ್‍ನಲ್ಲಿದ್ದುಕೊಂಡು ಜೆಎಂಐಡಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಎಂದಿನಂತೆ ಆದಿತ್ಯವಾರ ರಾತ್ರಿ ಹಾಸ್ಟೆಲ್‍ನ 2ನೇ ಮಹಡಿಯಲ್ಲಿ ಮೊಬೈಲ್‍ನಲ್ಲಿ ಮಾತನಾಡುತ್ತಿರುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ. ಗಂಭೀರ ಗಾಯಗೊಂಡಿರುವ ವಿದ್ಯಾರ್ಥಿನಿಯನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೊಬೈಲ್‍ ಆವಾಂತರ ► ಹಾಸ್ಟೆಲ್ ಮಹಡಿಯಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ Read More »

ಕರಾವಳಿ
Scroll to Top