cm bommai

ಅಮಿತ್‌ ಶಾ ಭೇಟಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 08. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಂಗಳವಾರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿ ರಾಜ್ಯದ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು. ವಿಧಾನಸಭೆ ಹಾಗೂ ವಿಪಕ್ಷ ನಾಯಕರ ಹೆಸರನ್ನು ಅಂತಿಮಗೊಳಿಸಲು ವರಿಷ್ಠರ ಕರೆಯ ಮೇರೆಗೆ ದೆಹಲಿಗೆ ತೆರಳಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೋಮವಾರದಂದು ವರಿಷ್ಠರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಅಮಿತ್ ಶಾ ಅವರನ್ನು ಭೇಟಿಯಾಗಿ ಬೊಮ್ಮಾಯಿ ಅವರು ಕೆಲ […]

ಅಮಿತ್‌ ಶಾ ಭೇಟಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Read More »

ಕರ್ನಾಟಕ

ನಾಳೆ ಸಿಎಂ ಬೊಮ್ಮಾಯಿ ಮಂಗಳೂರಿಗೆ

(ನ್ಯೂಸ್ ಕಡಬ) newskadaba.comಮಂಗಳೂರು, ಮಾ. 15. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಾಳೆ ಮಂಗಳೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಗ್ಗೆ 10:30ಕ್ಕೆ ಮೇರಿ ಹಿಲ್ ಹೆಲಿಪ್ಯಾಡ್ ನಲ್ಲಿ ಬಂದು ಇಳಿಯಲಿದ್ದಾರೆ. ಬಳಿಕ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಳ್ಳಲಾಗುವ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಉದ್ಘಾಟಿಸಲಿದ್ದಾರೆ. ನಂತರ ತುಮಕೂರು ಜಿಲ್ಲೆಗೆ ತೆರಳಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ನಾಳೆ ಸಿಎಂ ಬೊಮ್ಮಾಯಿ ಮಂಗಳೂರಿಗೆ Read More »

ಕರ್ನಾಟಕ

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಹಾವೇರಿ, ಮಾ. 14.  ಆಗಸ್ಟ್ 15ರೊಳಗೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಹಾವೇರಿ ಜಿಲ್ಲೆ ಸ್ವಕ್ಷೇತ್ರ ಶಿಗ್ಗಾವಿ ವ್ಯಾಪ್ತಿಯ ಕೋಣನಕೇರಿಯಲ್ಲಿ ಕರ್ನಾಟಕ ಮಾದರಿ ಶಾಲೆಗಳ ಮಾರ್ಗದರ್ಶಿ ಕಾರ್ಯಕ್ರಮದಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಪ್ರಯೋಗಾಲಯವನ್ನು ಅವರು ಉದ್ಘಾಟಿಸಿ, ಬಳಿಕ ವಿವೇಕ ಯೋಜನೆಯಡಿ ಶಾಲಾ ಕೊಠಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಬೊಮ್ಮಾಯಿ ಅವರು ಮಾತನಾಡಿದರು.

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಹೊಸ ಯೋಜನೆಗಳಿಂದ ಹೊಸ ಗುರಿ !     ➤  ಸಿಎಂ ಬೊಮ್ಮಾಯಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು,ಫೆ.06. ಹೊಸ ಯೋಜನೆಗಳಿಂದ ಹೊಸ ಹೆಜ್ಜೆ , ಹೊಸ ಗುರಿಯೊಂದಿಗೆ ಮುಂದೆ ಕೇಂದ್ರ ಸರ್ಕಾರ ಮುಂದೆ ಸಾಗುತ್ತಿದ್ದು, ದೇಶವು ಗುರಿ ಮುಟ್ಟಲು ಕರ್ನಾಟಕವು ತನ್ನ ಕೊಡುಗೆ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಮಾದಾವರದಲ್ಲಿರುವ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಇಂಧನ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್ ನಂತರ ಬದುಕಿನ ಹಲವು ಮುಖಗಳು ಬದಲಾಗಿವೆ. ಇದನ್ನು ಗಮನಿಸಿದ ಪ್ರಧಾನಿ ಮೋದಿ ಹೊಸ ಗುರಿಗಳನ್ನು ಕೊಟ್ಟಿದ್ದಾರೆ ಎಂದು ವರದಿ ತಿಳಿಸಿದೆ.  

ಹೊಸ ಯೋಜನೆಗಳಿಂದ ಹೊಸ ಗುರಿ !     ➤  ಸಿಎಂ ಬೊಮ್ಮಾಯಿ..! Read More »

ಕರಾವಳಿ, ಕರ್ನಾಟಕ

ನಂಜನಗೂಡಿಗೆ ಜ.29 ರಂದು ಸಿ.ಎಂ ಭೇಟಿ

(ನ್ಯೂಸ್ ಕಡಬ)newskadaba.com  ಮೈಸೂರು, ಜ.17. ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ವತಿಯಿಂದ ಆಯೋಜಿಸಿರುವ ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣಾ ಸಮಾರಂಭದ ಉದ್ಘಾಟನೆಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದಾರೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀನಿವಾಸ್ ಪ್ರಸಾದ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಾರ್ಯಕ್ರಮವನ್ನು ತಾಲ್ಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ನಾಲ್ಕು ವಿಧಾನ ಸಭಾ ಕ್ಷೇತ್ರಗಳಾದ ವರುಣಾ,

ನಂಜನಗೂಡಿಗೆ ಜ.29 ರಂದು ಸಿ.ಎಂ ಭೇಟಿ Read More »

ಕರ್ನಾಟಕ

ಫೆಬ್ರವರಿಯಲ್ಲಿ ಸಿಎಂ ಬೊಮ್ಮಾಯಿ ಕಡಬ,ಸುಬ್ರಹ್ಮಣ್ಯಕ್ಕೆ ಆಗಮನ ➤  ಸಚಿವ ಎಸ್.ಅಂಗಾರ

(ನ್ಯೂಸ್ ಕಡಬ)newskadaba.com ಕಡಬ, ಜ.17. ಅಭಿವೃದ್ಧಿ ಕಾಮಗಾರಿಗಳ ಚಾಲನೆ ನೀಡಲು ಹಾಗೂ ಉದ್ಘಾಟನೆ ನೆರವೇರಿಸಲು ರಾಜ್ಯದ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಫೆಬ್ರವರಿ ತಿಂಗಳ 28ರ ಮೊದಲು ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕಡಬಕ್ಕೆ ಆಗಮಿಸಲಿದ್ದಾರೆ ಎಂದು  ಸಚಿವ ಎಸ್.ಅಂಗಾರ ಅವರು ಸುಬ್ರಹ್ಮಣ್ಯದಲ್ಲಿ  ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 300 ಕೋಟಿ ವೆಚ್ಚದ ಮಾಸ್ಟರ್ ಪ್ಲಾನ್ ಕಾಮಗಾರಿಗೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಫೆಬ್ರವರಿ 28ರಂದು ಅಥವಾ ಅದಕ್ಕಿಂತ ಮೊದಲು ಸಿಎಂ ಕಾರ್ಯಕ್ರಮ ನಡೆಯಲಿದೆ. ಕಡಬ ತಾಲೂಕಿನಲ್ಲಿ ನಿರ್ಮಾಣಗೊಂಡಿರುವ ಕಡಬ ತಾಲೂಕು ಪಂಚಾಯತ್ ಕಟ್ಟಡ, ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಮಿನಿ ವಿಧಾನ ಸೌಧ, ಪಶುಪಾಲನಾ ಇಲಾಖೆಯ ಡಿಪ್ಲೊಮಾ ಕಾಲೇಜು ಇವುಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದಾರೆ ಎನ್ನಲಾಗಿದೆ.  ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದೆ. ಅವರು ದಿನಾಂಕ ನಿಗದಿ ಮಾಡಿದ ಕೂಡಲೇ ಪೂರ್ವಭಾವಿ ಸಭೆ, ಸಿದ್ಧತೆಗಳನ್ನು ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.    

ಫೆಬ್ರವರಿಯಲ್ಲಿ ಸಿಎಂ ಬೊಮ್ಮಾಯಿ ಕಡಬ,ಸುಬ್ರಹ್ಮಣ್ಯಕ್ಕೆ ಆಗಮನ ➤  ಸಚಿವ ಎಸ್.ಅಂಗಾರ Read More »

ಕರಾವಳಿ, ಕರ್ನಾಟಕ

ಮೂರನೇ ಹಂತದ “ನಮ್ಮ ಮೆಟ್ರೋ”  ಕಾಮಗಾರಿಗೆ ಒಪ್ಪಿಗೆ ➤  ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.07. ರಾಜಧಾನಿಯ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ 27 ಸಾವಿರ ಕೋಟಿ ರೂಪಾಯಿ ಮೊತ್ತದ ಮೂರನೇ ಹಂತದ “ನಮ್ಮ ಮೆಟ್ರೋ”  ಕಾಮಗಾರಿ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದ ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸಲು ರಸ್ತೆಗಳ ಅಗಲೀಕರಣ ಮಾಡುವ ಜೊತೆಗೆ ನಮ್ಮ ಮೆಟ್ರೋ ಮಾರ್ಗಗಳನ್ನು ವಿಸ್ತರಿಸಲಾಗುವುದು. ಇದರ ಜೊತೆಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಬೆಂಗಳೂರು 2040 ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,

ಮೂರನೇ ಹಂತದ “ನಮ್ಮ ಮೆಟ್ರೋ”  ಕಾಮಗಾರಿಗೆ ಒಪ್ಪಿಗೆ ➤  ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಶಿರಾಡಿ ಘಾಟಿ ನಿರ್ಮಾಣ ಕಾಮಗಾರಿ ಮಾರ್ಚ್ ನಲ್ಲಿ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ರಾಜಧಾನಿಯಿಂದ ಕರಾವಳಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯು ಬರುವ ಮಾರ್ಚ್ ನಲ್ಲಿ ಆರಂಭಗೊಳ್ಳಲಿದೆ ಎಂದು ಕೇಂದ್ರ ಭೂ ಸಾರಿಗೆ ಮತ್ತು  ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.   ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಘಾಟಿ ಬಳಿ ಚತುಷ್ಪದ ರಸ್ತೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮಾರ್ಚ್

ಶಿರಾಡಿ ಘಾಟಿ ನಿರ್ಮಾಣ ಕಾಮಗಾರಿ ಮಾರ್ಚ್ ನಲ್ಲಿ ಆರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್ ವೇ’ಗೆ ಒಡೆಯರ್ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಪತ್ರ  ➤ ಮಾಜಿ ಸಿಎಂ ಎಸ್.ಎಂ.ಕೃಷ್ಣ                                                                           

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ. 02. ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್ ವೇ ಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡುವಂತೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಎಸ್.ಎಂ.ಕೃಷ್ಣ ಅವರು ಪತ್ರ ಬರೆದಿದ್ದು, ಒಡೆಯರ್ ಹೆಸರು ಇಡುವಂತೆ ಒತ್ತಾಯಿಸಿದ್ದಾರೆ.  ಈ ಹಿಂದೆ ಸಂಸದ ಪ್ರತಾಪ್ ಸಿಂಹ ಅವರು ಇದೇ ಹೆದ್ದಾರಿಗೆ ಕಾವೇರಿ ನದಿ ಹೆಸರು ಇಡುವಂತೆ ನಿತಿನ್ ಗಡ್ಕರಿ ಅವರಿಗೆ

ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್ ವೇ’ಗೆ ಒಡೆಯರ್ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಪತ್ರ  ➤ ಮಾಜಿ ಸಿಎಂ ಎಸ್.ಎಂ.ಕೃಷ್ಣ                                                                            Read More »

ಕರ್ನಾಟಕ

ಸರ್ಕಾರ ತೆಗೆದುಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳಿಂದ ಸಾಮಾನ್ಯ ಬದುಕಿಗೆ ತೊಂದರೆಯಾಗುವುದಿಲ್ಲ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಕೊರೋನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ತೆಗೆದುಕೊಳ್ಳುವ ಮುನ್ನೆಚ್ಚರಿಕಾ ಕ್ರಮಗಳಲ್ಲಿ ಸಾಮಾನ್ಯ ಜನಜೀವನಕ್ಕೆ ಯಾವುದೇ ಧಕ್ಕೆಯುಂಟಾಗದಂತೆ ಮತ್ತು ಆರ್ಥಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಹಂತಹಂತವಾಗಿ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ಮತ್ತು ಅದರ ಹರಡುವಿಕೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಕೋವಿಡ್ ಮುನ್ನೆಚ್ಚರಿಕೆಯ ಡೋಸ್ ನ್ನು ಹೆಚ್ಚಿಸುವುದು, ಕೊರೋನಾ ಪರೀಕ್ಷೆಯನ್ನು ತ್ವರಿತಗೊಳಿಸುವುದು,

ಸರ್ಕಾರ ತೆಗೆದುಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳಿಂದ ಸಾಮಾನ್ಯ ಬದುಕಿಗೆ ತೊಂದರೆಯಾಗುವುದಿಲ್ಲ ➤ ಸಿಎಂ ಬೊಮ್ಮಾಯಿ Read More »

ಕರಾವಳಿ
Scroll to Top