ಇಡಿ ದಾಳಿಯಿಂದ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ನಿಜ ಬಣ್ಣ ಬಯಲು- ಸಂಸದ ಕ್ಯಾ. ಬ್ರಿಜೇಶ್ ಚೌಟ
(ನ್ಯೂಸ್ ಕಡಬ) newskadaba.com ಅ. 21. ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ನಡೆಸಿರುವ ದಾಳಿಯಿಂದ ಕಾಂಗ್ರೆಸ್ ನೇತೃತ್ವದ ರಾಜ್ಯದ ಭ್ರಷ್ಟ ಸರ್ಕಾರದ ನಿಜಬಣ್ಣ ಬಯಲಾಗಿದ್ದು, ಈ ಲೂಟಿಕೋರ ಸಿದ್ದರಾಮಯ್ಯನವರ ಸರಕಾರವನ್ನು ಕಟಕಟೆಗೆ ತಂದು ನಿಲ್ಲಿಸುವ ಕಾಲ ಹತ್ತಿರವಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಮುಡಾ ಭೂಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಹಲವೆಡೆ ಇಡಿ ನಡೆಸಿರುವ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದರು, ಈ ಮುಡಾ ನಿವೇಶನ ಹಂಚಿಕೆ ಭೂಹಗರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯ ಸರ್ಕಾರದ ಅಧೀನದಲ್ಲಿರುವ ಯಾವುದೇ ತನಿಖಾ ಸಂಸ್ಥೆಯು ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ.ಈ ಮೂಲಕ ತನ್ನ ಉತ್ತರದಾಯಿತ್ವವನ್ನು ಮರೆಮಾಚಿ […]
ಇಡಿ ದಾಳಿಯಿಂದ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ನಿಜ ಬಣ್ಣ ಬಯಲು- ಸಂಸದ ಕ್ಯಾ. ಬ್ರಿಜೇಶ್ ಚೌಟ Read More »
ಕರಾವಳಿ, ಕರ್ನಾಟಕ
