ಜೆಡಿಎಸ್ – ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿಗಳೇ ಉತ್ತರ: ಸಾಧನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಘರ್ಜನೆ
(ನ್ಯೂಸ್ ಕಡಬ) newskadaba.com ಜು.19: ಜೆಡಿಎಸ್ – ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರವನ್ನು ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು. ಸರ್ಕರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2,578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಸರಣಿ ಸುಳ್ಳುಗಳ ಮೂಲಕ ರಾಜ್ಯದ ಜನರ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ […]

