ಬೈಕ್ ಹಾಗೂ ಪಿಕಪ್ ನಡುವೆ ಢಿಕ್ಕಿ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 19. ಬೈಕ್‌ ಮತ್ತು ಪಿಕಪ್‌ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ನಡೆದಿದೆ.   ಮೃತಪಟ್ಟವರನ್ನು ವೃತ್ತಿಯಲ್ಲಿ ಕ್ಷೌರಿಕರಾಗಿದ್ದ ಮಾಟ್ನೂರು ಗ್ರಾಮದ ಕಾವು ಬಜಕುಡೇಲು ಸುರೇಶ್‌ ಭಂಡಾರಿ(45) ಎಂದು ಗುರುತಿಸಲಾಗಿದೆ. ಸುರೇಶ್ ರವರು ಬೈಕಿನಲ್ಲಿ ಅಮ್ಚಿನಡ್ಕದ ಸೆಲೂನ್‌ ಅಂಗಡಿಗೆ ತೆರಳುತ್ತಿದ್ದ ವೇಳೆ ಸುಳ್ಯ ಕಡೆಯಿಂದ ಬರುತ್ತಿದ್ದ ಪಿಕಪ್‌ ನಡುವೆ ಅಪಾಘಾತ ನಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಬೈಕ್ ಹಾಗೂ ಪಿಕಪ್ ನಡುವೆ ಢಿಕ್ಕಿ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್