ಜನವರಿಯಲ್ಲಿ ಶಿರಾಡಿ ಘಾಟ್ ಕಾಂಕ್ರೀಟ್ ರಸ್ತೆ ಕಾಮಗಾರಿ ಆರಂಭ ► ಜನವರಿ ಎರಡನೇ ವಾರದಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21. ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡನೇ ಹಂತದ ಕಾಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಯು ಜನವರಿಯಲ್ಲಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜನವರಿ 2ನೇ ವಾರದಿಂದ ಐದು ತಿಂಗಳ ಕಾಲ ಈ ಮಾರ್ಗದಲ್ಲಿ ಸಂಪೂರ್ಣವಾಗಿ ವಾಹನ ಸಂಚಾರ ನಿಷೇಧಿಸಲು ಲೋಕೋಪಯೋಗಿ ಇಲಾಖೆ ನಿರ್ಧರಿಸಿದೆ. ಶಿರಾಡಿ ಘಾಟಿಯಲ್ಲಿ ಬಾಕಿ ಉಳಿದಿರುವ 12.38 ಕಿ.ಮೀ. ಉದ್ದದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಆರಂಭಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು, ಬಹುಶಃ ಜನವರಿ […]

