ಕಲುಷಿತ ನೀರು ಸೇವನೆ: ಓರ್ವ ಮೃತ್ಯು..! 12 ಮಂದಿ ಅಸ್ವಸ್ಥ..!
(ನ್ಯೂಸ್ ಕಡಬ) newskadaba.com ಮೈಸೂರು, ಸೆ. 11. ಕಲುಷಿತ ನೀರು ಸೇವನೆಯಿಂದ ಓರ್ವ ಸಾವನ್ನಪ್ಪಿದ್ದು, 12 ಜನ ವಾಂತಿಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ಸಾಲಿಗ್ರಾಮ ತಾಲೂಕಿನ ಗಡಿ ಗ್ರಾಮ ಬೆಟ್ಟಹಳ್ಳಿಯಲ್ಲಿ ನಡೆದಿದೆ. ಗೋವಿಂದೇಗೌಡ (65) ಮೃತಪಟ್ಟ ವ್ಯಕ್ತಿ. ಗ್ರಾಮದ ಟ್ಯಾಂಕ್‌ನಿಂದ ಸರಬರಾಜಾಗಿದ್ದ ನೀರನ್ನು ಸೇವಿಸಿ ಕೆಲವರಿಗೆ ವಾಂತಿ ಭೇದಿ ಆಗಿದೆ ಎಂದು ಶಂಕಿಸಲಾಗಿದೆ. ಅಸ್ವಸ್ಥರನ್ನು ತಕ್ಷಣವೇ ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಗೋವಿಂದೇಗೌಡ ಎಂಬುವವರು ತೀವ್ರ ಅಸ್ವಸ್ಥಗೊಂಡ ಹಿನ್ನೆಲೆ ಹಾಸನ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ […]
ಕಲುಷಿತ ನೀರು ಸೇವನೆ: ಓರ್ವ ಮೃತ್ಯು..! 12 ಮಂದಿ ಅಸ್ವಸ್ಥ..! Read More »
ಕರ್ನಾಟಕ, ಕ್ರೈಮ್ ನ್ಯೂಸ್