crime news

ಭಾರತೀಯ ಕ್ರಿಕೆಟರ್ ರಿಷಬ್ ಪಂತ್ ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ…!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಡಿ. 31. ಉತ್ತರಾಖಂಡ್‌ ನ ರೂರ್ಕಿ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಭಾರತೀಯ ಕ್ರಿಕೆಟರ್ ರಿಷಬ್ ಪಂತ್ ಅವರ ಮೆದುಳು ಹಾಗೂ ಬೆನ್ನುಮೂಳೆಯ ಎಂಆರ್‌ಐ ಫಲಿತಾಂಶಗಳು ಸಾಮಾನ್ಯವಾಗಿದ್ದು, ಅವರ ಅವರ ಮುಖಕ್ಕೆ ಆದ ಗಾಯಗಳು ಹಾಗೂ ಸವೆತಗಳಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿರುವುದಾಗಿ ಮಾಧ್ಯಮ ವರದಿಯೊಂದು ತಿಳಿಸಿದೆ. ಭಾರತದ ಸ್ಟಾರ್ ವಿಕೆಟ್‌ ಕೀಪರ್ ರಿಷಬ್ ಪಂತ್ ಅವರು, ಚಲಾಯಿಸುತ್ತಿದ್ದ ಕಾರು ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಕೆಲವೇ ನಿಮಿಷಗಳಲ್ಲಿ […]

ಭಾರತೀಯ ಕ್ರಿಕೆಟರ್ ರಿಷಬ್ ಪಂತ್ ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಮೇರಿಕಾದಲ್ಲಿ ರಸ್ತೆ ಅಪಘಾತ ➤ ಭಾರತೀಯ ಮೂಲದ ಮಗು ಮೃತ್ಯು.!

(ನ್ಯೂಸ್ ಕಡಬ) newskadaba.com ನ್ಯೂಯಾರ್ಕ್, ಡಿ. 31. ರಸ್ತೆ ಅಪಘಾತದಲ್ಲಿ ಭಾರತೀಯ ಮೂಲದ ಎರಡು ವರ್ಷದ ಮಗು ಮೃತಪಟ್ಟ ಘಟನೆ ಅಮೇರಿಕಾದ ನೆವಡಾ ರಾಜ್ಯದಿಂದ ವರದಿಯಾಗಿದೆ‌. ಮೃತ ಬಾಲಕನನ್ನು ಕ್ಯಾಲಿಫೋರ್ನಿಯಾದ ಐರ್ವಿನ್ ನಲ್ಲಿ ವಾಸವಾಗಿದ್ದ ಆರವ್ ಮುತ್ಯಾಲ ಎಂದು ಗುರುತಿಸಲಾಗಿದೆ. ರಸ್ತೆ ಅಪಘಾತದಲ್ಲಿ ಈತನ ತಲೆಗೆ ಗಂಭೀರ ಗಾಯವಾಗಿದ್ದರಿಂದ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಅಮೇರಿಕಾದಲ್ಲಿ ರಸ್ತೆ ಅಪಘಾತ ➤ ಭಾರತೀಯ ಮೂಲದ ಮಗು ಮೃತ್ಯು.! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಚಾಲಕನಿಗೆ ಹೃದಯಾಘಾತವಾಗಿ ಕಾರಿಗೆ ಢಿಕ್ಕಿ ಹೊಡೆದ ಬಸ್ ➤ 9 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಗುಜರಾತ್, ಡಿ. 31. ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತವಾದ ಪರಿಣಾಮ 9 ಮಂದಿ ದಾರುಣ ಅಂತ್ಯ ಕಂಡ ಘಟನೆ ಗುಜರಾತ್ ನಲ್ಲಿ ವರದಿಯಾಗಿದೆ. 28 ಮಂದಿಗೆ ಗಾಯಗಳಾಗಿದ್ದು, ಇದರಲ್ಲಿ 11 ಮಂದಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಬಸ್ಸಿನಲ್ಲಿದ್ದವರು ಸೂರತ್ ನಲ್ಲಿನ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಾಸ್ ಆಗುತ್ತಿದ್ದ ವೇಳೆ ಬಸ್ಸಿನ ಚಾಲಕನಿಗೆ ಹೃದಯಾಘಾತ ಸಂಭವಿಸಿ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಚಾಲಕನಿಗೆ ಹೃದಯಾಘಾತವಾಗಿ ಕಾರಿಗೆ ಢಿಕ್ಕಿ ಹೊಡೆದ ಬಸ್ ➤ 9 ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ ➤ ಮಂಗಳೂರಿನ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಸೌದಿ ಅರೇಬಿಯಾ, ಡಿ. 29. ಕಾರು ಮತ್ತು ಲಾರಿ‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮಂಗಳೂರಿನ ಸುರತ್ಕಲ್‌ ನ ಯುವಕ ಮೃತಪಟ್ಟ ಘಟನೆ ಸೌದಿ ಅರೇಬಿಯಾದಿಂದ ವರದಿಯಾಗಿದೆ. ಮೃತ ಯುವಕನನ್ನು ತಡಂಬೈಲ್‌ ನಿವಾಸಿ ಫಾಝಿಲ್ ಎಂದು ಗುರುತಿಸಲಾಗಿದೆ. ಫಾಝಿಲ್ ಗೆ ಕಳೆದ ವರ್ಷ ವಿವಾಹವಾಗಿತ್ತು. ಸೌದಿ ಅರೆಬಿಯಾದ ಅಲ್ ಅಸ ಎಂಬಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಫಾಝಿಲ್ ಸ್ಥಳದಲ್ಲೇ

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ ➤ ಮಂಗಳೂರಿನ ಯುವಕ ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಬೊಲೆರೋ ಹಾಗೂ ರಿಕ್ಷಾ ನಡುವೆ ಅಪಘಾತ ➤ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 29. ಓವರ್ ಟೇಕ್ ಮಾಡುವ ಭರದಲ್ಲಿ ಬೊಲೆರೋ‌ ವಾಹನ ಹಾಗೂ ಆಟೋ ನಡುವೆ ಡಿಕ್ಕಿ ಸಂಭವಿಸಿ, ಆಟೋದಲ್ಲಿದ್ದ ನಾಲ್ವರು ಗಾಯಗೊಂಡ ಘಟನೆ ಉಜಿರೆಯ ಓಡಲ ಕ್ರಾಸ್ ನಲ್ಲಿ ನಡೆದಿದೆ. ಗಾಯಗೊಂಡವರನ್ನು ರಿಕ್ಷಾ ಚಾಲಕ ಗುರಿಪಳ್ಳ ನಿವಾಸಿ ಪ್ರವೀಣ್(42), ಕುಪ್ಪೆಟ್ಟಿ ನಿವಾಸಿ ರಫೀಕ್(55) ಕೊಟ್ಟಿಗೆಹಾರ ನಿವಾಸಿ ಸುಹೈಲ್ (30) ಹಾಗೂ ಕೊಟ್ಟಿಗೆಹಾರ ನಿವಾಸಿ ಚೇತನ್ (27) ಎಂದು ಗುರತಿಸಲಾಗಿದೆ. ಈ ಪೈಕಿ ಸುಹೈಲ್ ತಲೆಯ ಭಾಗಕ್ಕೆ ಹೆಚ್ಚು ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ

ಬೆಳ್ತಂಗಡಿ: ಬೊಲೆರೋ ಹಾಗೂ ರಿಕ್ಷಾ ನಡುವೆ ಅಪಘಾತ ➤ ನಾಲ್ವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಕೃಷಿ ಜಾಗಕ್ಕೆ ಪ್ರವೇಶಿಸಿ ಹಲ್ಲೆ ಆರೋಪ ➤ ಮಹಿಳೆ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 28. ಕೃಷಿ ಜಾಗಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವುದಾಗಿ ಆರೋಪಿಸಿ ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಆಶಾಎಂದು ಗುರುತಿಸಲಾಗಿದೆ. ಅರುಣ್ ಕುಮಾರ್ ರೈ ಮತ್ತು ಕೆಲಸಗಾರರಾದ ವಿನಯ್ ಮತ್ತು ಸುಂದರರವರು ಅಕ್ರಮವಾಗಿ ತಂತಿ ಬೀಲಿ ಹಾಕುತ್ತಿದ್ದು, ಈ ಕುರಿತು ಪ್ರಶ್ನಿಸಿದಾಗ ನನಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂಧಿಸಿ ಮಾನಭಂಗಕ್ಕೆ ಯತ್ನಿಸಿದ್ದಾರಲ್ಲದೆ ಕೊಲೆ ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಬಗ್ಗೆ

ಪುತ್ತೂರು: ಕೃಷಿ ಜಾಗಕ್ಕೆ ಪ್ರವೇಶಿಸಿ ಹಲ್ಲೆ ಆರೋಪ ➤ ಮಹಿಳೆ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಾರಿಗೆ ಬಸ್ ಹಾಗೂ ಮಿನಿಬಸ್ ನಡುವೆ ಮುಖಾಮುಖಿ ಢಿಕ್ಕಿ ➤ 12 ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಬೇಲೂರು, ಡಿ. 28. ಪ್ರವಾಸಕ್ಕೆಂದು ತೆರಳಿದ್ದ ಸಾರಿಗೆ ಬಸ್ ಗೆ ಹಾಗೂ ಮಿನಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಹನ್ನೆರಡು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬೇಲೂರು ತಾಲೂಕಿನ ಸೂಲದೇವನಹಳ್ಳಿಯಲ್ಲಿ ನಡೆದಿದೆ. ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಸಮೀಪದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಬೇಲೂರು ತಾಲೂಕಿನ ಸೂಲದೇವನಹಳ್ಳಿ ಬಳಿಯಿಂದ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೊರಟ್ಟಿದ್ದರು. ಈ ವೇಳೆ ಎದುರಿನಿಂದ ಬಂದ ಮಿನಿ ಬಸ್ ವಿದ್ಯಾರ್ಥಿಗಳಿದ್ದ ಬಸ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆ

ಸಾರಿಗೆ ಬಸ್ ಹಾಗೂ ಮಿನಿಬಸ್ ನಡುವೆ ಮುಖಾಮುಖಿ ಢಿಕ್ಕಿ ➤ 12 ವಿದ್ಯಾರ್ಥಿಗಳಿಗೆ ಗಾಯ Read More »

ಕರಾವಳಿ

ವಿಟ್ಲ: ರಿಕ್ಷಾದಲ್ಲಿ ಅಕ್ರಮ ದನದ ಮಾಂಸ ಸಾಗಾಟ ➤ ಪೊಲೀಸ್ ದಾಳಿ ವೇಳೆ ಆರೋಪಿ ಪರಾರಿ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 28. ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಘಟನೆ ಇಲ್ಲಿನ ಮೇಗಿನಪೇಟೆಯಲ್ಲಿ ಬುಧವಾರದಂದು ನಡೆದಿದೆ. ಆಟೋ ರಿಕ್ಷಾದಲ್ಲಿ 25 ಕೆ.ಜಿ ಯಷ್ಟು ದನದ ಮಾಂಸ ಸಾಗಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ವಿಟ್ಲ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಹೆಚ್.ಇ. ನಾಗರಾಜ್ ಆದೇಶದ ಮೇರೆಗೆ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಸಂದೇಶ್ ಶೆಟ್ಟಿ ದಾಳಿ ನಡೆಸಿದ್ದು, ಈ ವೇಳೆ ರಿಕ್ಷಾ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ವಿಟ್ಲ: ರಿಕ್ಷಾದಲ್ಲಿ ಅಕ್ರಮ ದನದ ಮಾಂಸ ಸಾಗಾಟ ➤ ಪೊಲೀಸ್ ದಾಳಿ ವೇಳೆ ಆರೋಪಿ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ➤ ದಂಪತಿ ಮೃತ್ಯು

(ನ್ಯೂಸ್ ಕಡಬ) newskadaba.com ಹಾವೇರಿ, ಡಿ. 28. ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಹಾವೇರಿಯ ಹಾನಗಲ್ ತಾಲೂಕಿನ ಬೆಳಗಲಪೇಟೆ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ಕಾಸರಗೋಡು ತಳಂಗರೆಯ ನಿವಾಸಿಗಳಾದ ಮುಹಮ್ಮದ್ ಹಾಗೂ ಪತ್ನಿ ಆಯಿಷಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೃತರ ಪುತ್ರ ಝಿಯಾದ್, ಸೊಸೆ ಹಾಗೂ ಮೊಮ್ಮಕ್ಕಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿ‌ನ ಮಾಹಿತಿ ನಿರೀಕ್ಷಿಸಲಾಗಿದೆ.

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ➤ ದಂಪತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಓವರ್ ಟೇಕ್ ಭರದಲ್ಲಿ ವಿದ್ಯಾರ್ಥಿ ಮೇಲೆ ಹರಿದ ಕಾರು ➤ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 27. ನಿಂತಿದ್ದ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿದ್ದ ಕಾರೊಂದು ಸ್ಕೂಟರ್, ರಿಕ್ಷಾಕ್ಕೆ ಡಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿ ಮೇಲೆ ಹರಿದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮುಡಿಪು ಜಂಕ್ಷನ್‌ನಲ್ಲಿ ನಡೆದಿದೆ. ಮೃತ ಬಾಲಕನನ್ನು ಬೋಳಿಯಾರು ಗ್ರಾಮದ ಬಟ್ರಬೈಲು ನಿವಾಸಿ ಹರಿಶ್ಚಂದ್ರ ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಎಂದು ಗುರುತಿಸಲಾಗಿದೆ. ಮೃತ ಕಾರ್ತಿಕ್ ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದು, ಶಾಲೆ ಬಿಟ್ಟು ಮನೆಗೆ

ಉಳ್ಳಾಲ: ಓವರ್ ಟೇಕ್ ಭರದಲ್ಲಿ ವಿದ್ಯಾರ್ಥಿ ಮೇಲೆ ಹರಿದ ಕಾರು ➤ ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top