crime news

ಮಂಗಳೂರು: ಜಲೀಲ್ ಕೊಲೆ ಪ್ರಕರಣ ➤ ಮತ್ತೋರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಸುರತ್ಕಲ್‌, ಡಿ. 27. ಕಾಟಿಪಳ್ಳ ಜಲೀಲ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕನೇ ಆರೋಪಿಯನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಾಟಿಪಳ್ಳ 4ನೇ ಬ್ಲಾಕ್‌ ನಿವಾಸಿ ಲಕ್ಷ್ಮೀಶ ದೇವಾಡಿಗ (28) ಎಂದು ಗುರುತಿಸಲಾಗಿದೆ. ಕಳೆದ ಶನಿವಾರದಂದು ರಾತ್ರಿ ಜಲೀಲ್‌ ಅವರನ್ನು ಕಾಟಿಪಳ್ಳ 4ನೇ ಬ್ಲಾಕ್‌ ನ ನೈತಂಗಡಿ ಎಂಬಲ್ಲಿರುವ ಅವರ ಫ್ಯಾನ್ಸಿ ಮತ್ತು ಚಪ್ಪಲಿಯ ಅಂಗಡಿಯ ಮುಂಭಾಗ ಚೂರಿಯಿಂದ ಇರಿದು ಕೊಲೆ ಮಾಡಲಾಗಿತ್ತು.

ಮಂಗಳೂರು: ಜಲೀಲ್ ಕೊಲೆ ಪ್ರಕರಣ ➤ ಮತ್ತೋರ್ವ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ತೆಂಗಿನಕಾಯಿ ಹೆಕ್ಕಲು ಹೋದ ವೃದ್ದೆ ಬಾವಿಗೆ ಬಿದ್ದು ಮೃತ್ಯು…!

(ನ್ಯೂಸ್ ಕಡಬ) newskadaba.com ಕೋಟ, ಡಿ. 27. ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಲೆಂದು ತೆರಳಿದ್ದ ವೃದ್ಧೆ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಹಳ್ಳಾಡಿ-ಹರ್ಕಾಡಿ ಗ್ರಾಮದ ಗಾವಳಿ ಎಂಬಲ್ಲಿ ನಡೆದಿದೆ. ಮೃತರನ್ನು ಗಾವಳಿ ನಿವಾಸಿ ಚಿಕ್ಕು ಎಂದು ಗುರುತಿಸಲಾಗಿದೆ. ಇವರು ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೆಂಗಿನಕಾಯಿ ಹೆಕ್ಕಲು ಹೋದ ವೃದ್ದೆ ಬಾವಿಗೆ ಬಿದ್ದು ಮೃತ್ಯು…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾಲಾ ಪ್ರವಾಸದ ಬಸ್ ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಡಿ. 27. ಸರಕಾರಿ ಬಸ್ ಮತ್ತು ಮಕ್ಕಳು ಪ್ರವಾಸ ಹೋಗುತ್ತಿದ್ದ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಹಲವರು ಗಾಯಗೊಂಡ ಘಟನೆ ಬೆಳ್ತಂಗಡಿಯ ನಿಡ್ಲೆ ಸಮೀಪದ ಬೂಡುಜಾಲು ಎಂಬಲ್ಲಿ ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ಹೋಗುತ್ತಿದ್ದ ಸರಕಾರಿ ಬಸ್ ಹಾಗೂ ರಾಯಚೂರಿನಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಟೂರಿಸ್ಟ್ ಬಸ್ ನಡುವೆ ಢಿಕ್ಕಿ ಸಂಭವಿಸಿ ಈ ಘಟನೆ ನಡೆದಿದೆ. ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸಂಚಾರಕ್ಕೆ

ಶಾಲಾ ಪ್ರವಾಸದ ಬಸ್ ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ➤ ಹಲವರಿಗೆ ಗಾಯ Read More »

ಕರ್ನಾಟಕ

ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಸಿಪಿಐಎಂ ಕಾರ್ಯಕರ್ತರಿಂದ ಹಲ್ಲೆ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬದಿಯಡ್ಕ, ಡಿ. 27. ಸಿಪಿಐಎಂ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಬಿಜೆಪಿ ಕಾರ್ಯಕರ್ತರು ಗಾಯಗೊಂಡ ಘಟನೆ ಎಣ್ಮಕಜೆ ಪಂಚಾಯತ್ ವ್ಯಾಪ್ತಿಯ ಮಣಿಯಂಪಾರೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಮಣಿಯಂಪಾರೆ ಜಯಂತ ನಾಯ್ಕರ ಮಗ ಸೂರ್ಯೋದಯ ಸಂಟನಡ್ಕ, ಐತಪ್ಪ ನಾಯ್ಕರ ಮಗ ರೂಪೇಶ್ ಎಂದು ಗುರುತಿಸಲಾಗಿದೆ. 6 ಮಂದಿ ಸಿಪಿಐಎಂ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಆಕ್ರಮಿಸಿ ಗಾಯಗೊಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗಾಯಾಳುಗಳನ್ನು ಕಾಸರಗೋಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಸಿಪಿಐಎಂ ಕಾರ್ಯಕರ್ತರಿಂದ ಹಲ್ಲೆ ➤ ಇಬ್ಬರಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
snowfall

ಭಾರೀ ಹಿಮಪಾತ- 17 ಮಂದಿ ಮೃತ್ಯು

(ನ್ಯೂಸ್ ಕಡಬ) bewskadaba.com ಟೋಕಿಯೊ, ಡಿ. 27. ಭಾರೀ ಹಿಮಪಾತದಿಂದಾಗಿ 17 ಮಂದಿ ಮೃತಪಟ್ಟು, 90ಕ್ಕೂ ಹೆಚ್ಚು ಮಂದಿ ಗಾಯಗೊಂಡ ಕುರಿತು ಜಪಾನ್ ನಲ್ಲಿ ವರದಿಯಾಗಿದೆ. ಈ ಕುರಿತು ಮಾಹಿತಿ ನೀಡಿದ ಅಲ್ಲಿನ ವಿಪತ್ತು ನಿರ್ವಹಣಾ ಅಧಿಕಾರಿಗಳು, ಹಿಮದಿಂದಾಗಿ 17 ಮಂದಿ ಜೀವ ಕಳೆದುಕೊಂಡಿದ್ದು, ಹಲವು ಮನೆಗಳ ವಿದ್ಯುತ್ ಸಂಪರ್ಕವೂ ಕಳೆದುಕೊಂಡಿದೆ ಎಂದರು. ಕಳೆದ ವಾರ ಜಪಾನ್‌ನ ಉತ್ತರ ಭಾಗದಲ್ಲಿ ಹಿಮಪಾತವಾಗಿ 11 ಮಂದಿ ಮೃತಪಟ್ಟಿದ್ದರು. ಅಲ್ಲದೆ ಮನೆ ಮೇಲೆ ಬಿದ್ದ ಹಿಮ ಸ್ವಚ್ಚಗೊಳಿಸುವ ವೇಳೆ ಜಾರಿ

ಭಾರೀ ಹಿಮಪಾತ- 17 ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೈಕಲ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) bewskadaba.com ಕಾರ್ಕಳ, ಡಿ. 27. ಸೈಕಲ್‌ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕೂಲಿ ಕಾರ್ಮಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ಸುಜಿತ್ (23) ಎಂದು ಗುರುತಿಸಲಾಗಿದೆ. ಸಚ್ಚರಿಪೇಟೆಯ ತೋಟವೊಂದರಲ್ಲಿ ಕೂಲಿ ಕಾರ್ಮಿಕರಾಗಿದ್ದ ಇವರು, ಕಳೆದ ಡಿ. 12ರಂದು ಸಚ್ಚರಿಪೇಟೆ ಪೆಟ್ರೋಲ್ ಪಂಪ್ ಬಳಿಯ ಇಳಿಜಾರಿನ ರಸ್ತೆಯಲ್ಲಿ ಸೈಕಲ್‌ನಲ್ಲಿ ಹೋಗುತ್ತಿದ್ದಾಗ ಸೈಕಲ್ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಬಿದ್ದು, ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಮಂಗಳೂರಿನ ವೆನ್ಲಾಕ್

ಸೈಕಲ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕಾರ್ಮಿಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಬೈಕೊಂದು ಮಾರ್ಗಮಧ್ಯೆ ಪುಟ್ ಪಾತ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತರನ್ನು ಬಿಬಿಎಂಪಿ ಹೆಲ್ತ್ ಇನ್ ಸ್ಪೆಕ್ಟರ್ ಪ್ರಶಾಂತ್ (27) ಎಂದು ಗುರುತಿಸಲಾಗಿದೆ. ಜೆ.ಪಿ.ನಗರದಲ್ಲಿ ವಾಸವಿದ್ದ ಪ್ರಶಾಂತ್ ನಾಯ್ಕ್ ಬೈಕ್ ನಲ್ಲಿ ಸದಾಶಿವನಗರದಿಂದ ಜೆ.ಪಿ.ನಗರಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.    

ರಸ್ತೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ. 27. ಮೀನು ಹಿಡಿಯಲೆಂದು ಹೋಗಿ ನೇತ್ರಾವತಿ ನದಿಯಲ್ಲಿ ಡಿ. 26ರಂದು ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹವು ಇಂದು ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೃತರನ್ನು ಮೊಗ್ರು ದಂಡುಗ ನಿವಾಸಿ ಜನಾರ್ಧನ ಎಂದು ಗುರುತಿಸಲಾಗಿದೆ. ಜನಾರ್ಧನ ಹಾಗೂ ಮಹೇಶ್ ಎಂಬವರು ಮುಗೇರಡ್ಕದ ಕಾಮಗಾರಿ ಹಂತದ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲೆಂದು ಹೋಗಿದ್ದ ಸಂದರ್ಭ ಜನಾರ್ಧನ ರವರು ನೀರುಪಾಲಾಗಿದ್ದರು. ಆದರೆ ಜೊತೆಗಿದ್ದ ಮಹೇಶ್ ವಿಷಯ ಯಾರಿಗೂ ತಿಳಿಸದೇ ತನ್ನ ಪಾಡಿಗೆ ವಾಪಸ್ ಬಂದಿದ್ದರು.

ನೆಲ್ಯಾಡಿ: ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳದ ವಿವಿಧೆಡೆ ಕಳ್ಳತನ ➤ ಕಡಬದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 27. ಬಂಟ್ವಾಳ ನಗರ ಠಾಣಾ ವ್ಯಾಪ್ತಿ ಸೇರಿದಂತೆ ವಿವಿಧೆಡೆ ಕಳ್ಳತನ ನಡೆಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಗೋಳಿತೊಟ್ಟು ಗ್ರಾಮದ ನಿವಾಸಿ ಮೊಹಮ್ಮದ್‌ ಇರ್ಫಾನ್‌ ಎಂದು ಗುರುತಿಸಲಾಗಿದೆ. ಬಿ.ಸಿ.ರೋಡ್ ಸಮೀಪದ ಗಾಣದಪಡುವಿನಲ್ಲಿ ಹೋಲ್‌ಸೇಲ್ ಅಂಗಡಿಯೊಂದರ ಶಟರ್ ಬೀಗ ಮುರಿದು 20 ಸಾವಿರ ರೂ. ಮೌಲ್ಯದ 2 ಮೊಬೈಲ್‌ಗ‌ಳು ಹಾಗೂ 10 ಸಾವಿರ ರೂ. ನಗದನ್ನು ಕಳವುಗೈದಿದ್ದ ಕುರಿತು

ಬಂಟ್ವಾಳದ ವಿವಿಧೆಡೆ ಕಳ್ಳತನ ➤ ಕಡಬದ ಆರೋಪಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲು ➤ ಜೊತೆಗಿದ್ದವನಿಗೆ ಸಾರ್ವಜನಿಕರಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 26. ಮೀನು ಹಿಡಿಯಲೆಂದು ಹೋದ ವ್ಯಕ್ತಿಯೋರ್ವರು ನೇತ್ರಾವತಿ ನದಿಯಲ್ಲಿ ನೀರುಪಾಲಾದ ಘಟನೆ ಮುಗೇರಡ್ಕದಲ್ಲಿ ಸೋಮವಾರ ಸಂಜೆ ನಡೆದಿದೆ. ನೀರುಪಾಲಾದವರನ್ನು ಮೊಗ್ರು ಗ್ರಾಮದ ದಂಡುಗ ನಿವಾಸಿ ಜನಾರ್ದನ (40) ಎಂದು ಗುರುತಿಸಲಾಗಿದೆ. ಜನಾರ್ದನ ಹಾಗೂ ಮೊಗ್ರು ಗ್ರಾಮದ ಬೋಲೋಡಿ ನಿವಾಸಿ ಮಹೇಶ್ ಎಂಬವರು ಇಂದು ಮುಗೇರಡ್ಕದ ಕಾಮಗಾರಿ ಹಂತದಲ್ಲಿರುವ ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದರು. ಈ ಸಂದರ್ಭ ಜನಾರ್ದನ ಅವರು ನೀರು ಪಾಲಾಗಿದ್ದು, ಆದರೆ ಇವರ ಜೊತೆಗಿದ್ದ

ನೆಲ್ಯಾಡಿ: ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲು ➤ ಜೊತೆಗಿದ್ದವನಿಗೆ ಸಾರ್ವಜನಿಕರಿಂದ ಹಲ್ಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top