crime

Death, deadbody, Waterfall

ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಆ. 30. ಕಳೆದೆರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಆಲೆಟ್ಟಿ ಗ್ರಾಮದ ಕುದ್ಕುಳಿಯ ನಿವಾಸಿ ಗಿರೀಶ್ ಎಂಬವರ ಮೃತದೇಹವು ಇಂದು(ಭಾನುವಾರದಂದು) ಪಯಸ್ವಿನಿ ನದಿಯಲ್ಲಿ ಪತ್ತೆಯಾಗಿದೆ.   ಮನೆಯಿಂದ ಹುಲ್ಲು ತರಲೆಂದು ಹೋಗಿದ್ದ ಗಿರೀಶ್ ಬಳಿಕ ನಾಪತ್ತೆಯಾಗಿದ್ದರು. ಹುಡುಕಾಟದ ವೇಳೆ ಬಪಯಸ್ವಿನಿ ನದಿ ತಟದಲ್ಲಿಅವರ ಕೊಡೆ ಮತ್ತು ಕತ್ತಿ ಪತ್ತೆಯಾಗಿದ್ದು, ಬಳಿಕ ಪೊಲೀಸ್ ದೂರು ನೀಡಲಾಗಿತ್ತು.   ಸುಳ್ಯ ಪೋಲಿಸ್ ಇಲಾಖೆಯವರ ನೇತೃತ್ವದಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಯವರು ಕಳೆದ ಎರಡು ದಿನಗಳಿಂದ ಹುಡುಕಾಟದಲ್ಲಿ ನಿರತರಾಗಿದ್ದರು. […]

ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಮಾನ ಅಪಘಾತದಲ್ಲಿ ಉಡುಪಿ ಮೂಲದ ತರಬೇತಿ ಪೈಲಟ್ ಮೃತ್ಯು!!

(ನ್ಯೂಸ್ ಕಡಬ) newskadaba.com ಆ. 28. ಖಾಸಗಿ ತರಬೇತಿ ವಿಮಾನ ಅಪಘಾತ ಸಂಭವಿಸಿದ ಪರಿಣಾಮ ಉಡುಪಿ ಮೂಲದ ತರಬೇತಿ ಪೈಲಟ್ ಓರ್ವ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.   ಮೃತ ಯುವಕನನ್ನು ಅಭಿಷೇಕ್ ಪೂಜಾರಿ(22) ಎಂದು ಗುರುತಿಸಲಾಗಿದೆ. ಅಭಿಷೇಕ್ ಪೂಜಾರಿಯವರು ಮೂಲತಃ ಉಡುಪಿ ಜಿಲ್ಲೆಯ ಕಣಜಾರು ಗ್ರಾಮದ ಕಾಡೆಬರ್ಕೆ ನಿವಾಸಿ. ವರದಿಯ ಪ್ರಕಾರ, ಅವರು ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ಪೈಲಟ್ ಆಗಿ ತರಬೇತಿ ಪಡೆಯುತ್ತಿದ್ದರು. ಅಭಿಷೇಕ್

ವಿಮಾನ ಅಪಘಾತದಲ್ಲಿ ಉಡುಪಿ ಮೂಲದ ತರಬೇತಿ ಪೈಲಟ್ ಮೃತ್ಯು!! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ನಿಲ್ಲಿಸಿದ್ದ ಟಿಟಿ ಮೇಲೆ ಲಾರಿ ಪಲ್ಟಿ- ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಆ. 27. ಲಾರಿಯೊಂದು ನಿಯಂತ್ರಣ ತಪ್ಪಿ ನಿಂತಿದ್ದ ಟೆಂಪೋ ಟ್ರಾವೆಲರ್ (ಟಿಟಿ) ಮೇಲೆ ಉರುಳಿ ಬಿದ್ದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಅರಂತೋಡಿನ ದೇವರಕೊಲ್ಲಿ ಬಳಿ ಬುಧವಾರ ಸಂಜೆ ನಡೆದಿದೆ. ಮೂಲಗಳ ಪ್ರಕಾರ, ಗುಜರಾತ್‌ ಅಹಮದಾಬಾದ್‌ನ ಪ್ರವಾಸಿಗರ ಗುಂಪೊಂದು ಮಡಿಕೇರಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ದೇವರಕೊಲ್ಲಿ ಅಬ್ಬಿ ಜಲಪಾತದ ಬಳಿ ರಸ್ತೆಬದಿಯಲ್ಲಿ ತಮ್ಮ ಟಿಟಿ ವಾಹನವನ್ನು ನಿಲ್ಲಿಸಿದ್ದಾಗ ಈ ಅಪಘಾತ ಸಂಭವಿಸಿದೆನ್ನಲಾಗಿದೆ. ಸುಳ್ಯದ ಕಡೆಗೆ ಚಲಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ

ನಿಲ್ಲಿಸಿದ್ದ ಟಿಟಿ ಮೇಲೆ ಲಾರಿ ಪಲ್ಟಿ- ಮೂವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ ಮಗು ಸಹಿತ ಮೂವರು ದುರಂತ ಅಂತ್ಯ

(ನ್ಯೂಸ್ ಕಡಬ) newskadaba.com ಆ. 02. ತೀವ್ರ ಮಳೆಯಿಂದಾಗಿ ಗುಡ್ಡ ಕುಸಿದು ಮೂವರು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ರವಿವಾರದಂದು ಬೆಳಗಿನ ಜಾವ 2:30ರ ವೇಳೆ ನಡೆದಿದೆ. ಮೃತಪಟ್ಟವರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿಯ ಕೊಕ್ಕರೆಗಾರು ಗ್ರಾಮದ ಮೂಲದ ಮಲ್ಲಿಕಾರ್ಜುನ, ನಾಗವೇಣಿ ಮತ್ತು ಸಂತೋಷ (3) ಎಂದು ಗುರುತಿಸಲಾಗಿದೆ. ಮಳೆಯ ತೀವ್ರತೆ ಹೆಚ್ಚಿದ್ದದರಿಂದ ಗುಡ್ಡ ಕುಸಿದಿದ್ದು, ಕೆಳಭಾಗದಲ್ಲಿ ಶೆಡ್ ನಿರ್ಮಾಣ ಮಾಡಿಕೊಂಡು ವಾಸ ಮಾಡುತ್ತಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೂವರ ಮೃತದೇಹಗಳು

ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ ಮಗು ಸಹಿತ ಮೂವರು ದುರಂತ ಅಂತ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಕಡಬ: ಅಡಿಕೆ ಮರಬಿದ್ದು ಕೂಲಿಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು. 31. ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಜೋರಾಗಿ ಬೀಸಿದ ಗಾಳಿಗೆ ಅಡಿಕೆ ಮರ ಮುರಿದು ಮೈಮೇಲೆ ಬಿದ್ದ ಪರಿಣಾಮ ಕೂಲಿ ಕಾರ್ಮಿಕರೋರ್ವರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಗುತ್ತುಪಾಲು ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೃತ ವ್ಯಕ್ತಿಯನ್ನು ಕುಂತೂರು ಕೇವಳ ನಿವಾಸಿ ಯಾದವ ಗೌಡ (66ವ) ಎಂದು ಗುರುತಿಸಲಾಗಿದೆ. ಇವರು ಗುತ್ತುಪಾಲು ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜೋರಾಗಿ ಬೀಸಿದ ಗಾಳಿಗೆ ಅಡಿಕೆ

ಕಡಬ: ಅಡಿಕೆ ಮರಬಿದ್ದು ಕೂಲಿಕಾರ್ಮಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Crime

ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ

(ನ್ಯೂಸ್ ಕಡಬ) newskadaba.com ಜು. 25. ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ ಶನಿವಾರ ಮಧ್ಯಾಹ್ನದ ವೇಳೆ ನಡೆದಿದೆ. ದಾಳಿಗೊಳಗಾದವರನ್ನು ವಿಕ್ಕಿ ಬಪ್ಪಲ್ ಎಂದು ಗುರುತಿಸಲಾಗಿದೆ. ರೌಡಿ ಶೀಟರ್ ಆಗಿದ್ದ ಈತ, ಪೊಲೀಸ್ ಕಣ್ಗಾವಲಿನಲ್ಲಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಲಾಲ್ ಬಾಗ್ ಸಿಗ್ನಲ್ ಬಳಿ ಬೈಕಿನಲ್ಲಿ ಸಂಚರಿಸುತ್ತಿದ್ದ ವಿಕ್ಕಿ ಬಪ್ಪಲ್ ನನ್ನು ಬೇರೊಂದು ಬೈಕಿನಲ್ಲಿ ಹಿಂಬಾಳಿಸಿಕೊಂಡ ಬಂದ ದುಷ್ಕರ್ಮಿಯೋರ್ವ ತಲವಾರಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.

ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬಾವಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ ಕೊಲೆ ಶಂಕೆಯಡಿ ಸಹೋದರನ ಬಂಧನ

(ನ್ಯೂಸ್ ಕಡಬ) newskadaba.com ಜು. 20. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟುವಿನ ಕೃಷ್ಣಾಪುರ ಮಠ ಸಮೀಪದ ಬಾವಿಯಲ್ಲಿ 20 ವರ್ಷದ ಯುವಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತನನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ. ಇವರು ಉದ್ಯೋಗ ನಿಮಿತ್ತ ಮಂಗಳೂರಿಗೆ ಬಂದು ಬಾಡಿಗೆ ಮನೆಯಲ್ಲಿದ್ದುಕೊಂಡು ಕೂಲಿ ಕೆಲಸ ಮಾಡುತ್ತಿದ್ದರು. ಮೃತನೊಂದಿಗೆ ವಾಸವಿದ್ದ ಆತನ ಅಣ್ಣ ಸೋಮನಾಥ್ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆತನೇ ಪ್ರಮುಖ ಶಂಕಿತನೆಂದು

ಬಾವಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ ಕೊಲೆ ಶಂಕೆಯಡಿ ಸಹೋದರನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಚಲಿಸುತ್ತಿದ್ದ BMW ಕಾರಿನಲ್ಲಿ ಭೀಕರ ಅಗ್ನಿ ದುರಂತ – ನಾಲ್ವರು ಪವಾಡಸದೃಶ ಪಾರು

(ನ್ಯೂಸ್ ಕಡಬ) newskadaba.com ಜು. 18. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ಶುಕ್ರವಾರ ಸಂಜೆ ಬಿಎಂಡಬ್ಲ್ಯು ಕಾರೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಇಡೀ ಕಾರು ಹೆದ್ದಾರಿಯಲ್ಲೇ ಧಗಧಗನೆ ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದ ಈ ಐಷಾರಾಮಿ ಕಾರು ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ತಲುಪಿದಾಗ, ಇಂಜಿನ್‌ನಲ್ಲಿ ದಿಢೀರನೆ ತಾಂತ್ರಿಕ ದೋಷ ಕಾಣಿಸಿಕೊಂಡು ಹೊಗೆ ಬರಲಾರಂಭಿಸಿದೆ. ಇದನ್ನು

ಚಲಿಸುತ್ತಿದ್ದ BMW ಕಾರಿನಲ್ಲಿ ಭೀಕರ ಅಗ್ನಿ ದುರಂತ – ನಾಲ್ವರು ಪವಾಡಸದೃಶ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಬಿ.ಸಿ ರೋಡ್ ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಬಿ.ಸಿ ರೋಡ್‌ ಬಸ್‌ ನಿಲ್ದಾಣದ ಬಳಿ ಗುರುವಾರದಂದು ಸಂಜೆ ಕೆಲಸ ಮುಗಿಸಿ ಮನೆಗೆ ವಾಪಾಸ್‌ ಆಗುತ್ತಿದ್ದ ಲಾವಣ್ಯ ಎಂಬ ಯುವತಿಯನ್ನು ಯುವಕನೊಬ್ಬ ಹಾಡಹಗಲೇ ಸಾರ್ವಜನಿಕವಾಗಿ ಭೀಕರ ಹತ್ಯೆ ಮಾಡಿರುವ ಘಟನೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಂಸದರು, ದಕ್ಷಿಣ ಕನ್ನಡದಂತಹ ಸುಶಿಕ್ಷಿತ ಜಿಲ್ಲೆಯಲ್ಲಿ ನಾಗರಿಕ ಸಮಾಜ ಬೆಚ್ಚಿ ಬೀಳಿಸುವಂಥ ಹೇಯ ಕೃತ್ಯ

ಬಿ.ಸಿ ರೋಡ್ ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಆಗ್ರಹ Read More »

ಕರಾವಳಿ

ಸೌಜನ್ಯ ಕೇಸ್: ಎಸ್ಐಟಿಯಿಂದ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಜು. 15. ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತಂಡವು ಜುಲೈ 15ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದೆ. ​ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ಮುಂದೆ ಇಂದು ಮಧ್ಯಾಹ್ನ 3 ಗಂಟೆಗೆ ವರದಿಯನ್ನು ಸಲ್ಲಿಕೆ ಮಾಡಿದರು. 7,000ಕ್ಕೂ ಅಧಿಕ ಪುಟಗಳಿರುವ ಈ ವರದಿಯು ಒಟ್ಟು 12 ಪ್ರತ್ಯೇಕ ಕಡತಗಳನ್ನು ಒಳಗೊಂಡಿದೆ. ​ ತನಿಖೆಯ ವೇಳೆ ದಾಖಲಾದ 255 ಸಾಕ್ಷಿಗಳ ಹೇಳಿಕೆಗಳು, ವಿಧಿ ವಿಜ್ಞಾನ ಪ್ರಯೋಗಾಲಯದ (FSL)

ಸೌಜನ್ಯ ಕೇಸ್: ಎಸ್ಐಟಿಯಿಂದ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ Read More »

ಕರಾವಳಿ, ಕರ್ನಾಟಕ
Scroll to Top